ಶಾಸಕ ಯು.ಟಿ.ಖಾದರ್ ಸಂಚರಿಸುತ್ತಿದ್ದ ಕಾರು ಅಪಘಾತ, ಖಾದರ್ ಹಾಗೂ ಕಾರು ಚಾಲಕನಿಗೆ ಗಾಯ

Wednesday, April 14th, 2021
UT Khader

ಮಂಗಳೂರು : ಮಾಜಿ ಸಚಿವ, ಶಾಸಕ ಯು.ಟಿ.ಖಾದರ್ ಅವರು ಸಂಚರಿಸುತ್ತಿದ್ದ ಕಾರು  ಬುಧವಾರ ಬೆಳಗ್ಗೆ 8:45ರ ಸುಮಾರಿಗೆ ರಾಷ್ಟ್ರೀಯ ಹೆದ್ದಾರಿ ದಾವಣಗೆರೆ ಸಮೀಪದ ಒಲಾಲ್ ಕ್ರಾಸ್ ಎಂಬಲ್ಲಿ ಅಪಘಾತಕ್ಕೀಡಾಗಿದೆ. ಘಟನೆಯಲ್ಲಿ ಖಾದರ್ ಅವರು ಸಣ್ಣಪುಟ್ಟ ಗಾಯದೊಂದಿಗೆ ಪಾರಾಗಿದ್ದಾರೆ. ಕಾರು ಚಾಲಕ ಕೂಡಾ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಬೆಳಗಾವಿ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಪರ ಪ್ರಚಾರಕ್ಕಾಗಿ ಬೆಂಗಳೂರಿನಿಂದ ಬೆಳಗಾವಿಗೆ ಪ್ರಯಾಣಿಸುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ದಾವಣಗೆರೆ-ಆನಗೋಡು ಮಧ್ಯೆ ರಾಷ್ಟ್ರೀಯ ಹೆದ್ದಾರಿ 4ರ ಒಲಾಲ್ ಕ್ರಾಸ್ ಬಳಿ ಖಾದರ್ […]