ಕೊರಗರು ತಮ್ಮ ಕೀಳರಿಮೆ ಬಿಟ್ಟು ಸಮಾಜದ ಮುಖ್ಯ ವಾಹಿನಿಯಲ್ಲಿ ತೊಡಗಿಸಿಕೊಳ್ಳಬೇಕು : ಸಚಿವ ಎಸ್.ಅಂಗಾರ

Sunday, September 12th, 2021
Angara

ಪುತ್ತೂರು  : ಸರಕಾರದ ಸೌಲ್ಯಭ್ಯಗಳಿಂದ ಇಂದಿಗೂ ವಂಚಿತರಾಗಿರುವ ಕೊರಗ ಸಮುದಾಯದ ಸಮಸ್ಯೆಗಳ ಪರಿಹಾರಕ್ಕೆ ಸರಕಾರ ಸೂಕ್ತ ಕ್ರಮ ಕೈಗೊಳ್ಳಲಿದ್ದು, ಈ ಕುರಿತು ಆಯಾಯ ತಾಲೂಕುಗಳಲ್ಲೇ ಸಮಸ್ಯೆಗಳ ಇತ್ಯರ್ಥಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ದಕ್ಷಿಣಕನ್ನಡ ಜಿಲ್ಲಾ ಉಸ್ತುವಾರಿ ಹಾಗೂ ರಾಜ್ಯ ಬಂದರು, ಮೀನುಗಾರಿಕೆ, ಒಳನಾಡು ಮತ್ತು ಜಲಸಾರಿಗೆ ಸಚಿವ ಎಸ್.ಅಂಗಾರ ಮಾಹಿತಿ ನೀಡಿದರು. ಪುತ್ತೂರಿನಲ್ಲಿ ನಡೆದ ಕೊರಗ ಸಮುದಾಯದ ಮುಖಂಡರ ಜೊತೆ ನಡೆದ ಸಂವಾದ ಕಾರ್ಯಕ್ರಮದಲ್ಲಿ ಸಚಿವರು ಈ ಮಾಹಿತಿ ನೀಡಿದರು. ಕೊರಗ ಸಮುದಾಯಗಳು ಜಮೀನು ಹಕ್ಕು ಪತ್ರ, […]

ಸೋಂಕು ಹೆಚ್ಚಿರುವ ಪ್ರದೇಶಗಳಲ್ಲಿ ಹೆಚ್ಚಿನ ತಪಾಸಣೆಗೆ ಸಚಿವರ ಸೂಚನೆ ತಪ್ಪಿದ್ದಲ್ಲೀ ತಾಲೂಕು ಆರೋಗ್ಯಾಧಿಕಾರಿಗಳ ವಿರುದ್ಧ ಕ್ರಮದ ಎಚ್ಚರಿಕೆ

Monday, September 6th, 2021
Angara

ಮಂಗಳೂರು :  ಕೋವಿಡ್-19 ಸೋಂಕು ಹೆಚ್ಚು ಕಂಡುಬರುವ ಪ್ರದೇಶಗಳಲ್ಲಿ ಸಂಬಂಧಿಸಿದ ಆಯಾ ತಾಲೂಕುಗಳ ಆರೋಗ್ಯಾಧಿಕಾರಿಗಳು ಹೆಚ್ಚಿನ ತಪಾಸಣೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು, ಈ ನಿರ್ದೇಶನವನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಎಂದು ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವರಾದ ಎಸ್.ಅಂಗಾರ ಅವರು ತಿಳಿಸಿದರು. ಸೆ. 6ರ ಸೋಮವಾರ ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಕೋವಿಡ್-19 ಸೋಂಕಿಗೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಈಗಾಗಲೇ ಜಾರಿಯಲ್ಲಿರುವ ನಿರ್ಬಂಧಗಳ ಕುರಿತು ಚರ್ಚಿಸುವ ಸಲುವಾಗಿ ಹಮ್ಮಿಕೊಳ್ಳಲಾಗಿದ್ದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ […]

ಸಮುದ್ರದ ನೀರು, ಸಿಹಿ ನೀರಾಗಿಸುವ ಯಂತ್ರ ಅತ್ಯಂತ ಉಪಯುಕ್ತ: ಎಸ್. ಅಂಗಾರ

Friday, September 3rd, 2021
S Angara

ಮಂಗಳೂರು : ಸಮುದ್ರದಲ್ಲಿ ಆಳ ಹಾಗೂ ಒಳ ಮೀನುಗಾರಿಕೆ ಮಾಡುವ ಮೀನುಗಾರರಿಗೆ ಸಮುದ್ರದಲ್ಲಿಯೇ ಉಪ್ಪು ನೀರನ್ನು ಸಿಹಿ ನೀರನ್ನಾಗಿ ಪರಿವರ್ತಿಸಿಕೊಡುವ ಯಂತ್ರವು ಅತ್ಯಂತ ಉಪಯುಕ್ತವಾಗಿದೆ ಹಾಗೂ ಈ ಯತ್ನ ಯಶಸ್ವಿಯಾಗಿದೆ ಎಂದು ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವರಾದ ಎಸ್. ಅಂಗಾರ ಅವರು ಬಣ್ಣಿಸಿದರು. ಅವರು ಸೆ.3ರ ಶುಕ್ರವಾರ ಸಮುದ್ರದ ಹಳೆ ಬಂದರು ಮಾರ್ಗದ ಮೂಲಕ ಬೆಂಗರೆಗೆ ತೆರಳುವ ಸಂದರ್ಭದಲ್ಲಿ ಸಮುದ್ರದ ಉಪ್ಪು ನೀರನ್ನು ಸಿಹಿ ನೀರನ್ನಾಗಿ ಪರಿವರ್ತಿಸುವ ಯಂತ್ರದ ಪ್ರಾತ್ಯಕ್ಷಿಕೆ ವೀಕ್ಷಿಸಿ ಮಾತನಾಡಿದರು. ಆಸ್ಟ್ರೇಲಿಯಾ […]