ಬದಿಯಡ್ಕ-ಬೊಳ್ಳೂರು ಶ್ರೀ ಸದಾಶಿವ ದೇವಸ್ಥಾನಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ 5 ಲಕ್ಷ ಅನುದಾನ

Wednesday, February 3rd, 2016
DD

ಬದಿಯಡ್ಕ: ಕಾಸರಗೋಡು ಜಿಲ್ಲೆಯ ಅನೇಕ ಜನರು ಅನಾದಿ ಕಾಲದಿಂದಲೇ ಶ್ರೀ ಕ್ಷೇತ್ರ ಧರ್ಮಸ್ಥಳದ ಭಕ್ತರಾಗಿದ್ದಾರೆ. ಹಾಗಾಗಿ ಕಾಸರಗೋಡು ಜಿಲ್ಲೆಗೂ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೂ ಅವಿನಾಭಾವ ಸಂಬಂಧವಿದೆ ಎಂದು ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ಯೋಜನಾಧಿಕಾರಿ ಸಂಧ್ಯಾ ವಿ.ಶೆಟ್ಟಿ ಅಭಿಪ್ರಾಯಪಟ್ಟರು. ಅವರು ಸೋಮವಾರ ಬದಿಯಡ್ಕ ಸಮೀಪದ ಮುನಿಯೂರಿನ ಬೊಳ್ಳೂರು ಶ್ರೀ ಸದಾಶಿವ ದೇವಸ್ಥಾನಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಲಭಿಸಿದ ಅನುದಾನ ರೂಪಾಯಿ 5 ಲಕ್ಷ ಮೌಲ್ಯದ ಡಿಡಿಯನ್ನು ಶ್ರೀ ಕ್ಷೇತ್ರದ ಮೊಕ್ತೇಸರ ಗೋಪಾಲಕೃಷ್ಣ ನಡುವಂತಿಲ್ಲಾಯ ಮುನಿಯೂರು ಅವರಿಗೆ […]

ರಾಜ್ಯದ ಸಾಂಸ್ಕೃತಿಕ ಪರಂಪರೆಗಳ ಪ್ರಾತಿನಿಧಿಕ ಕೇಂದ್ರವಾಗಿ ಜಾನಪದ ವಿವಿ. ಬೆಳೆಯಬೇಕು : ಹೆಗ್ಗಡೆ ಸಲಹೆ.

Sunday, November 15th, 2015
Veerendra Hegde

ಉಜಿರೆ: ಮೂಲಭೂತ ಸೌಕರ್ಯ, ಸೌಲಭ್ಯಗಳನ್ನು ಒದಗಿಸುವುದರ ಜೊತೆಗೆ ಸರ್ಕಾರ ಹಾಗೂ ದಾನಿಗಳ ಸಹಕಾರದೊಂದಿಗೆ ಕರ್ನಾಟಕ ಜಾನಪದ ವಿಶ್ವವಿದ್ಯಾಲಯವನ್ನು ರಾಜ್ಯದ ಸಾಂಸ್ಕೃತಿಕ ಪರಂಪರೆಗಳ ಪ್ರಾತಿನಿಧಿಕ ಕೇಂದ್ರವಾಗಿ ಬೆಳೆಸಬೇಕು. ಜನರ ವಿಶ್ವವಿದ್ಯಾಲಯವಾಗಿ ಬೆಳೆಯಬೇಕು, ಬೆಳಗಬೇಕು ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಸಲಹೆ ನೀಡಿದರು. ಹಾವೇರಿಯ ಶಿಗ್ಗಾವಿ ತಾಲ್ಲೂಕಿನ ಗೊಟಗೋಡಿಯಲ್ಲಿರುವ ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ಕುಲಪತಿಯಾಗಿ ಇತ್ತೀಚೆಗೆ ಅಧಿಕಾರ ವಹಿಸಿಕೊಂಡ ಡಾ. ಕೆ. ಚಿನ್ನಪ್ಪಗೌಡ ಭಾನುವಾರ ಧರ್ಮಸ್ಥಳದಲ್ಲಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಆಶೀರ್ವಾದ ಹಾಗೂ ಮಾರ್ಗದರ್ಶನ ಪಡೆದರು. […]