ಸಾಮಾಜಿಕ ಅಂತರ ಕಾಯ್ದುಕೊಂಡು ಸ್ವಾತಂತ್ರ್ಯ ದಿನಾಚರಣೆ, ಆಗಸ್ಟ್ 5ರಿಂದ ರಾತ್ರಿ ಕರ್ಫ್ಯೂ ತೆರವು

Wednesday, July 29th, 2020
modi

ನವದೆಹಲಿ: ಕಂಟೈನ್ಮೆಂಟ್ ಝೋನ್ ಗಳನ್ನು ಹೊರತುಪಡಿಸಿ, ಉಳಿದ ಪ್ರದೇಶಗಳಲ್ಲಿ ಆಗಸ್ಟ್ 5ರಿಂದ ಜಿಮ್, ಯೋಗ ಕೇಂದ್ರ ತೆರೆಯಲು ಅನುಮತಿ ನೀಡಲಾಗಿದೆ. ಅಲ್ಲದೆ ರಾತ್ರಿ ಕರ್ಫ್ಯೂ ಅನ್ನು ಸಹ ತೆರವುಗೊಳಿಸಲಾಗಿದೆ ಎಂದು ಕೇಂದ್ರ ಸರ್ಕಾರ ಬುಧವಾರ ಅನ್ ಲಾಕ್-3 ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿ ಹೇಳಿಕೆ ನೀಡಿದೆ. ಸಾಮಾಜಿಕ ಅಂತರ ಕಾಯ್ದುಕೊಂಡು ಸ್ವಾತಂತ್ರ್ಯ ದಿನಾಚರಣೆ ಆಚರಿಸಲು ಅನುಮತಿ ನೀಡಿರುವ ಕೇಂದ್ರ ಸರ್ಕಾರ, ಮೆಟ್ರೋ, ಶಾಲಾ, ಕಾಲೇಜ್ ಗಳು, ಕೋಚಿಂಗ್ ಸೆಂಟರ್ ಗಳು ಮತ್ತು ಚಿತ್ರ ಮಂದಿರಗಳ ಮೇಲಿನ ನಿರ್ಬಂಧವನ್ನು ಆಗಸ್ಟ್ 31ರ ವರೆಗೆ ಮುಂದುವರೆಸಿದೆ. […]