ಕಂದಾಯ ಅಧಿಕಾರಿಗಳ ಕರ್ತವ್ಯ ಲೋಪ : ವೀರನಾಡು ರಕ್ಷಣಾ ವೇದಿಕೆ ಆರೋಪ
Wednesday, October 30th, 2019ಮಡಿಕೇರಿ : ಜಿಲ್ಲೆಯ ಕಂದಾಯ ಇಲಾಖೆ ಸಿಬ್ಬಂದಿಗಳು ಕರ್ತವ್ಯದ ವೇಳೆಯಲ್ಲಿ ಕಚೇರಿಯಲ್ಲಿ ಹಾಜರಿರದೆ ಇರುವುದರಿಂದ ಸಾರ್ವಜನಿಕರ ಅರ್ಜಿಗಳು ಸಕಾಲದಲ್ಲಿ ವಿಲೇವಾರಿಗುತ್ತಿಲ್ಲವೆಂದು ಆರೋಪಿಸಿರುವ ವೀರನಾಡು ರಕ್ಷಣಾ ವೇದಿಕೆ, ಎಲ್ಲಾ ಸರಕಾರಿ ಕಚೇರಿಗಳ ಪಂಚಿಂಗ್ ಯಂತ್ರವನ್ನು ದುರಸ್ತಿ ಪಡಿಸಲು ಜಿಲ್ಲಾಡಳಿತ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವೇದಿಕೆಯ ಜಿಲ್ಲಾಧ್ಯಕ್ಷ ಹರೀಶ್ ಜಿ.ಆಚಾರ್ಯ ಅವರು, ಕಂದಾಯ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುವ ಆರ್ಐ ಹಾಗೂ ಬಹುತೇಕ ಸಿಬ್ಬಂದಿಗಳು ಕರ್ತವ್ಯದ ವೇಳೆಯಲ್ಲಿ ಕಚೇರಿಯಲ್ಲಿ ಹಾಜರಿರುವುದಿಲ್ಲ. ಅರ್ಜಿದಾರರು ಯಾವಾಗ ಕಚೇರಿಗೆ ಹೋದರು ಸಿಬ್ಬಂದಿಗಳು ಸಭೆಗಳಿಗೆ […]