ರಾತ್ರಿ ಕರ್ಫ್ಯೂ : ಕಟೀಲು ಯಕ್ಷಗಾನ ಮೇಳಗಳ ಪ್ರದರ್ಶನ ಸಮಯ ಬದಲಾವಣೆ

Thursday, December 24th, 2020
Kateelu Mela

ಮಂಗಳೂರು : ಕಟೀಲು‌ ದೇವಸ್ಥಾನದ ಎಲ್ಲಾ ಆರು ಯಕ್ಷಗಾನ ಮೇಳಗಳು ಡಿ.24 ರಿಂದ ರಾತ್ರಿ ಕರ್ಫ್ಯೂ ಜಾರಿಯಲ್ಲಿರುವುದರಿಂದ ಕಟೀಲು ಯಕ್ಷಗಾನ ಮೇಳ ಕಾಲಮಿತಿ ಯಕ್ಷಗಾನವನ್ನು ಪ್ರದರ್ಶಿಸಲಿದೆ ಎಂದು ಮೇಳದ ವ್ಯವಸ್ಥಾಪಕರು ತಿಳಿಸಿದ್ದಾರೆ. ಕಟೀಲು‌ ದೇವಸ್ಥಾನದ ಆರು ಯಕ್ಷಗಾನ ಮೇಳಗಳು ಡಿಸೆಂಬರ್ ‌24ರ ಗುರುವಾರದಿಂದ ಸಂಜೆ 4 ಗಂಟೆಗೆ ಚೌಕಿ ಪೂಜೆ ನಡೆದು ಬಳಿಕ ಯಕ್ಷಗಾನ ಪ್ರಸಂಗ ಆರಂಭಿಸಲಿದೆ. ರಾತ್ರಿ 9:45 ಕ್ಕೆ ಮಂಗಳ ಹಾಡುವುದರ ಮೂಲಕ ಯಕ್ಷಗಾನ‌ ಕೊನೆಗೊಳ್ಳಲಿದೆ. ಎಲ್ಲ ಕಲಾವಿದರು ಮಧ್ಯಾಹ್ನ 2:30ಕ್ಕೆ ಚೌಕಿಯಲ್ಲಿ ಹಾಜರಿರಲು […]

ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಬ್ರಹ್ಮಕಲಶೋತ್ಸವ ನೇರಪ್ರಸಾರ

Thursday, January 30th, 2020
ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಬ್ರಹ್ಮಕಲಶೋತ್ಸವ ನೇರಪ್ರಸಾರ

ಕಟೀಲು : ಜನವರಿ 30 ರಂದು ಬೆಳಿಗ್ಗೆ 9.37 ಕ್ಕೆ ಅಷ್ಟಬಂಧ ಬ್ರಹ್ಮಕಲಶೋತ್ಸವ

Friday, January 24th, 2020
Kateelu

ಮಂಗಳೂರು : ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವದ ಕಾರ್ಯಕ್ರಮ ಗಳು ಆರಂಭಗೊಂಡಿದ್ದು, ಜನವರಿ 30 ರಂದು ಬೆಳಿಗ್ಗೆ 9.37 ಕ್ಕೆ ಅಷ್ಟಬಂಧ ಬ್ರಹ್ಮಕಲಶೋತ್ಸವ ನಡೆಯಲಿದೆ.  ಫೆ. 3ರ ವರೆಗೆ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳು ನೆರವೇರಲಿವೆ. ಸುಮಾರು 25 ಲಕ್ಷಕ್ಕೂ ಅಧಿಕ ಭಕ್ತರು ಕಾರ್ಯಕ್ರಮದಲ್ಲಿ ಭಾಗವಹಿಸುವ ನಿರೀಕ್ಷೆ ಇದೆ ಎಂದು ಸಂಸದ, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ನಳಿನ್‌ ಕುಮಾರ್‌ ಕಟೀಲು ಹೇಳಿದರು. ಸದ್ಯ ಸುತ್ತು ಪೌಳಿಯ ಸುಂದರೀಕರಣ ನಡೆಯುತ್ತಿದೆ. ದೇವಸ್ಥಾನದ ಸುತ್ತ ವಿಸ್ತರಣೆ ಮಾಡಲಾಗಿದೆ ಎಂದರು. ದೇವಸ್ಥಾನದ ಎದುರಿನ ರಸ್ತೆಯ ಅಗಲೀಕರಣಕ್ಕೆ […]

ಕಟೀಲು : ಲಲಿತಾ ಪಂಚಮಿ ಪ್ರಯುಕ್ತ 18 ಸಾವಿರ ಶೇಷವಸ್ತ್ರ ವಿತರಣೆ

Friday, October 4th, 2019
kateel

ಕಟೀಲು : ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಲಲಿತಾ ಪಂಚಮಿ ಪ್ರಯುಕ್ತ ಗುರುವಾರ ರಾತ್ರಿ ಅನ್ನಪ್ರಸಾದ ಸ್ವೀಕರಿಸಿದ ಮಹಿಳಾ ಭಕ್ತರಿಗೆ ದೇವರ ಶೇಷ ವಸ್ತ್ರ ನೀಡಲಾಯಿತು. ಸಂಜೆ 6.30ಕ್ಕೆ ಅನ್ನಪ್ರಸಾದ ವಿತರಣೆ ಪ್ರಾರಂಭವಾಗಿದ್ದು, ಭಕ್ತರಿಗೆ ಸೂಕ್ತ ವ್ಯವಸ್ಥೆ ಕಲ್ಪಿಸಲಾಗಿತ್ತು. ಸುಮಾರು 18 ಸಾವಿರ ಶೇಷವಸ್ತ್ರ ಸಿದ್ಧಪಡಿಸಲಾಗಿದ್ದು, ತಡರಾತ್ರಿಯವರೆಗೂ ವಿತರಣೆ ಕಾರ್ಯ ನಡೆಯಿತು. ಮಧ್ಯಾಹ್ನ ಮತ್ತು ರಾತ್ರಿ ಸುಮಾರು 30 ಸಾವಿರ ಮಂದಿಗೆ ಊಟದ ವ್ಯವಸ್ಥೆ ಮಾಡಲಾಗಿತ್ತು. ದೇವಸ್ಥಾನ ಆಡಳಿತ ಮಂಡಳಿ ಅಧ್ಯಕ್ಷ ಸನತ್ ಕುಮಾರ್ ಶೆಟ್ಟಿ […]

ಮಂಗಳೂರು : ಶ್ರೀ ಕಟೀಲು ದೇವಾಲಯಕ್ಕೆ ಭೇಟಿ ನೀಡಿದ ನಟಿ ಶಿಲ್ಪಾ ಶೆಟ್ಟಿ

Friday, September 27th, 2019
kateel

ಮಂಗಳೂರು : ಇತಿಹಾಸ ಪ್ರಸಿದ್ಧ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಳಕ್ಕೆ ಬಾಲಿವುಡ್ ಕ್ವೀನ್ ಚಲನಚಿತ್ರ ನಟಿ ಶಿಲ್ಪಾಶೆಟ್ಟಿ ಭೇಟಿ ನೀಡಿದ್ದಾರೆ. ಕ್ಷೇತ್ರದಲ್ಲಿ ಶ್ರೀ ದುರ್ಗಾಪರಮೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ಅವರು ಪ್ರಸಾದ ಸ್ವೀಕರಿಸಿದರು. ಈ ಸಂದರ್ಭ ಕಟೀಲು ದೇವಳದ ವತಿಯಿಂದ ಅರ್ಚಕ‌ ಅನಂತ ಪದ್ಮನಾಭ ಅಸ್ರಣ್ಣ ಶೇಷವಸ್ತ್ರ ನೀಡಿ ಗೌರವಿಸಿದರು. ಅರ್ಚಕ ಹರಿನಾರಾಯಣ ದಾಸ ಅಸ್ರಣ್ಣ ಶಿಲ್ಪ ಶೆಟ್ತಿಯವರನ್ನು ಸ್ವಾಗತಿಸಿದರು. ಇನ್ನು ಇದಕ್ಕೂ ಮುನ್ನ ನಗರದ ಟಿಎಂಎ ಪೈ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೆಎಂಸಿ ಆಸ್ಪತ್ರೆಯ ಮಾತೃತ್ವ […]

ರಾತ್ರಿ ಹೊತ್ತು ನಿಲ್ಲಿಸಿದ್ದ ಬಸ್ಸಿಗೆ ಕಲ್ಲು : ಮೂವರ ಬಂಧನ

Wednesday, September 18th, 2019
Mulky

ಮಂಗಳೂರು : ನಗರದ ಹೊರವಲಯದ ಕಿನ್ನಿಗೋಳಿ ಹಾಗೂ ಕಟೀಲು ಪರಿಸರದಲ್ಲಿ ರಾತ್ರಿ ಹೊತ್ತು ನಿಲ್ಲಿಸಿದ್ದ ಒಟ್ಟು 5 ಬಸ್ಸುಗಳಿಗೆ ಕಳೆದ ಸೆ.4ರ ಮುಂಜಾನೆ ಕಲ್ಲು ತೂರಾಟ ನಡೆಸಿದ ಆರೋಪದಲ್ಲಿ ಮೂವರು ಆರೋಪಿಗಳನ್ನು ಮುಲ್ಕಿ ಹಾಗೂ ಬಜ್ಪೆ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಬಂಟ್ವಾಳ ತಾಲ್ಲೂಕಿನ ಬುಡೋಳಿ ಪೆರಾಜೆ ನಿವಾಸಿಗಳಾದ ಶಂಶೀರ್(27), ಅಬ್ದುಲ್ ಸತ್ತಾರ್(21) ನರಿಕೊಂಬು ನೆಹ್ರೂ ನಗರ ನಿವಾಸಿ ಮಹಮ್ಮದ್ ರಿಯಾಝ್(28) ಬಂಧಿತ ಆರೋಪಿಗಳು. ಬಂಧಿತರಿಂದ ಕಲ್ಲು ತೂರಾಟಕ್ಕೆ ಬಳಸಿದ್ದರೆನ್ನಲಾದ ಕಾರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಸೆ.4ರಂದು […]

ಕಚಡಾ ನನ್ ಮಕ್ಳು..” ಎಂದು ಪತ್ರಕರ್ತರನ್ನು ನಿಂದಿಸಿದ ಎಚ್.ಡಿ.ರೇವಣ್ಣ

Monday, July 15th, 2019
HD-Revanna

ಮಂಗಳೂರು  : ಎಚ್.ಡಿ.ಕುಮಾರಸ್ವಾಮಿ ನೇತೃತ್ವದ ದೋಸ್ತಿ ಸರಕಾರ ಉಳಿಸಿಕೊಳ್ಳಲು ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಅವರು  ದೇವಸ್ಥಾನ ಸುತ್ತುವುದನ್ನು ಕವರೇಜ್ ಮಾಡಲು ಹೋದ  ಪತ್ರಕರ್ತರನ್ನು ಮತ್ತು ಛಾಯಾಗ್ರಾಹಕರನ್ನು ಕಚಡಾ ನನ್ ಮಕ್ಳು..”  ಎಂದು ನಿಂದಿಸಿ ಪತ್ರಕರ್ತರಲ್ಲಿದ್ದ ಆ ಫೋಟೋ ಹಾಗೂ ವಿಡಿಯೋಗಳನ್ನು ತಮ್ಮ ಭದ್ರತಾ ಸಿಬ್ಬಂದಿಗಳ ಮೂಲಕ ಡಿಲೀಟ್ ಮಾಡಿಸಿದ  ಘಟನೆ  ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ  ಭಾನುವಾರ ನಡೆದಿದೆ ಭಾನುವಾರ ಕೊಲ್ಲೂರು, ಆನೆಗುಡ್ಡೆ, ಹಟ್ಟಿಯಂಗಡಿ ಸೇರಿದಂತೆ ಕಟೀಲು ದೇವಳಗಳಿಗೆ ಭೇಟಿ ನೀಡಿದ್ದಾರೆ.  ಸಂಜೆ 03.20 ಕ್ಕೆ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ […]

ಕಟೀಲು ಶ್ರೀನಿಧಿ ಅಸ್ರಣ್ಣ ಮತ್ತು ಇನ್ನೋರ್ವ ರಸ್ತೆ ಅಪಘಾತದಲ್ಲಿ ಸಾವು..!

Wednesday, July 25th, 2018
srinidi-asranna

ಮಂಗಳೂರು: ಮಂಗಳವಾರ ತಡರಾತ್ರಿ ತುಮಕೂರು ರಸ್ತೆಯ ನೆಲಮಂಗಲದ ತಾವರೆಕೆರೆ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಕಟೀಲು ದುರ್ಗಾಪರಮೇಶ್ವರಿ ದೇವಾಲಯದ ಅನುವಂಶಿಕ ಅರ್ಚಕರಾದ ಹರಿನಾರಾಯಣ ಅಸ್ರಣ್ಣ ಅವರ ಪುತ್ರ ಸೇರಿದಂತೆ ಇಬ್ಬರು ದಾರುಣವಾಗಿ ಸಾವನ್ನಪ್ಪಿದ್ದಾರೆ. ಮೃತರು ಶ್ರೀನಿಧಿ ಅಸ್ರಣ್ಣ(21) ಮತ್ತು ಪ್ರಜ್ವಲ್‌(20)ಎನ್ನುವವರಾಗಿದ್ದಾರೆ. ಇಂಜಿನಿಯರಿಂಗ್‌ ವಿದ್ಯಾರ್ಥಿಗಳಾದ ಇವರು ಇನ್ನಿಬ್ಬರು ಸ್ನೇಹಿತರೊಂದಿಗೆ ಪ್ರಾಜೆಕ್ಟ್ ವಿಚಾರಕ್ಕೆ ಸಂಬಂಧಿಸಿ ಬೆಂಗಳೂರಿಗೆ ತೆರಳಿದ್ದರು ಎಂದು ತಿಳಿದು ಬಂದಿದೆ. ನಿಟ್ಟೆಯಲ್ಲಿ ಎಂಜಿನಿಯರಿಂಗ್ ಕಲಿಯುತ್ತಿರುವ ಪ್ರತಿಭಾವಂತ ಹುಡುಗ ಶ್ರೀನಿಧಿ. ಯಕ್ಷಗಾನ ಕಲೆಯೂ ಸಿದ್ಧಿಸಿತ್ತು. ಚೆಂಡೆ ಬಾರಿಸುವುದರಲ್ಲಿ ಮೇಳದ ಕಲಾವಿದರಿಗೆ […]

ಕಟೀಲು ದುರ್ಗಾಪರಮೇಶ್ವರಿಯ ಯಕ್ಷಗಾನ ಕಲಾವಿದರಿಗೆ ಈ ಬಾರಿಯೂ ಬಾಗಿಲು ಬಂದ್!

Wednesday, June 27th, 2018
kateelu

ಮಂಗಳೂರು: ಮಂಗಳೂರಿನ ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದ ಯಕ್ಷಗಾನ ಮೇಳದಿಂದ ಕಳೆದ ಬಾರಿ ಕೈಬಿಡಲಾದ ಏಳು ಮಂದಿಗೆ ಈ ಬಾರಿಯೂ ಅವಕಾಶ ಸಿಕ್ಕಿಲ್ಲ. ಕಟೀಲು ದೇವಸ್ಥಾನದಲ್ಲಿ ಆರು ಮೇಳಗಳಿದ್ದು, ಇದರಲ್ಲಿ ಐದನೇ ಮೇಳದಲ್ಲಿ ಪ್ರಸಿದ್ಧ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರನ್ನು ಒಂದನೇ ಮೇಳಕ್ಕೆ ವರ್ಗಾಯಿಸಲಾಗಿತ್ತು. ಇದರಿಂದ ಅಸಮಾಧಾನಗೊಂಡಿದ್ದ ಐದನೇ ಮೇಳದ ಕಲಾವಿದರು ಮೇಳಕ್ಕೆ ರಾಜೀನಾಮೆ ನೀಡಿದ್ದರು. ನಂತರ ನಡೆದ ಬೆಳವಣಿಗೆಯಲ್ಲಿ ಏಳು ಕಲಾವಿದರನ್ನು ಹೊರತುಪಡಿಸಿ ಇತರ ಕಲಾವಿದರನ್ನು ಮೇಳಕ್ಕೆ ಸೇರಿಸಲಾಗಿತ್ತು. ಆದರೆ ಏಳು ಮಂದಿ ಕಲಾವಿದರನ್ನು ಮೇಳಕ್ಕೆ ಸೇರಿಸಿಕೊಂಡಿರಲಿಲ್ಲ. […]

ಕಟೀಲು ಸಿತ್ಲದಲ್ಲಿ ಯಕ್ಷಗಾನ ಕಲಾವಿದರಿಗೆ ಸಮ್ಮಾನ

Friday, April 27th, 2018
yakshagana

ಕಟೀಲು : ಯಕ್ಷಗಾನ ನಶಿಸಿಹೋಗುವ ಕಲೆಯಲ್ಲ ಅದು ಶಿಷ್ಟ ಪರಂಪರೆಯ ಕಲೆ, ಈ ಕಲೆಯ ಮೂಲಕ ವಾಗಿ ಜನರಲ್ಲಿ ಧಾರ್ಮಿಕತೆ, ಪುರಾಣ ಜ್ಞಾನ, ಸನ್ನಡೆತೆ, ಸನ್ಮಾರ್ಗದಲ್ಲಿ ಸುಸಂಸ್ಕೃತರನ್ನಾಗಿಸಲು ಸಾಧ್ಯವಿದೆ ಎಂದು ಕಟೀಲು ದೇವಸ್ಥಾನದ ಅರ್ಚಕ ಕೆ. ಲಕ್ಷ್ಮೀ ನಾರಾಯಣ ಆಸ್ರಣ್ಣ ಹೇಳಿದರು. ಎ. 25 ರಂದು ಕಟೀಲು ಸಿತ್ಲ ಬೈಲಿನಲ್ಲಿ ಕೀರ್ತಿ ಶೇಷ ಗೋಪಾಲಕೃಷ್ಣ ಆಸ್ರಣ್ಣ ಸಂಸ್ಮರಣ ಸಮಿತಿ ಮುಂಬಯಿ ಹಾಗೂ ದುಬೈ ಇದರ ಆಶ್ರಯದಲ್ಲಿ ಶ್ರೀಧರ್ಮಸ್ಥಳ ಮಂಜುನಾಥ ಕೃಪಾಪೋಷಿತ ಯಕ್ಷಗಾನ ಬಯಲಾಟ ಸಂದರ್ಭ ನಡೆದ ಧಾರ್ಮಿಕ […]