ಶಾಂಭವಿ ನದಿಯಲ್ಲಿ ಮುಳುಗಿ ಓರ್ವ ಯುವತಿ ಸಮೇತ ನಾಲ್ವರ ದುರ್ಮರಣ

Tuesday, November 24th, 2020
shambhavi river

ಮೂಡುಬಿದಿರೆ: ಮದುವೆ ಸಮಾರಂಭಕ್ಕೆ ಬಂದಿದ್ದ ಮೂವರು ಯುವಕರು ಹಾಗೂ ಯುವತಿ ಕಡಂದಲೆಯ ತುಲೆಮುಗೇರ್ ಎಂಬಲ್ಲಿ ಶಾಂಭವಿ ನದಿಯಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಮಂಗಳವಾರ ವರದಿಯಾಗಿದೆ. ಪಾಲಡ್ಕ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ  ಕಡಂದಲೆ ಶ್ರೀಧರ ಆಚಾರ್ಯ ಅವರ ಮನೆಗೆ ಮದುವೆ ಸಮಾರಂಭಕ್ಕೆ ಬಂದಿದ್ದ ಮೂವರು ಯುವಕರು ಹಾಗೂ ಯುವತಿ ಶಾಂಭವಿ ನದಿಯ ತುಲೆಮುಗೇರ್ ಎಂಬಲ್ಲಿ ನದಿಯಲ್ಲಿ ಈಜಲು ಹೋದಾಗ ಈ ಘಟನೆ ನಡೆದಿದೆ ಎನ್ನಲಾಗಿದೆ. ವಾಮಂಜೂರು ಮೂಡುಶೆಡ್ಡೆಯ ನಿಖಿಲ್ (18) ಹಾಗೂ ಅರ್ಶಿತಾ( 20), ವೇಣೂರಿನ ಸುಬಾಸ್(19), ಬಜ್ಪೆ ಪೆರಾರದ ರವಿ […]

ಕಡಂದಲೆಯಲ್ಲಿ ದಲಿತ ಮಹಿಳಾ ಪೊಲೀಸ್ ಸಿಬ್ಬಂದಿಯನ್ನು ದೇವಸ್ಥಾನದಿಂದ ಹೊರಹಾಕಿದ ಸಿಬ್ಬಂದಿ

Monday, December 9th, 2019
kadandale

ಮಂಗಳೂರು :  ಷಷ್ಠಿ ಉತ್ಸವದ ಸಂದರ್ಭದಲ್ಲಿ ಕರ್ತವ್ಯ ನಿರತ ದಲಿತ ಮಹಿಳಾ ಪೊಲೀಸ್ ಸಿಬ್ಬಂದಿಯನ್ನು ದೇವಸ್ಥಾನದಿಂದ ಹೊರಹಾಕಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಂದಲೆಯಲ್ಲಿ ನಡೆದಿದೆ. ಮುಜರಾಯಿ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಮೂಡುಬಿದಿರೆ ತಾಲ್ಲೂಕಿನ ಕಡಂದಲೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ದಲಿತ ಮಹಿಳಾ ಪೊಲೀಸ್ ಪೇದೆಯನ್ನು ದೇವಸ್ಥಾನದಿಂದ ಹೊರ ಕಳುಹಿಸಿದ್ದಾರೆ. ಕಳೆದ ಸೋಮವಾರ ಈ ದೇವಸ್ಥಾನದಲ್ಲಿ ಷಷ್ಠಿ ಮಹೋತ್ಸವ ನಡೆದಿತ್ತು. ಈ ಕ್ಷೇತ್ರಕ್ಕೆ ಸಾವಿರಾರು ಭಕ್ತರು ಆಗಮಿಸುತ್ತಿದ್ದರಿಂದ ಶಾಂತಿ ಸುವ್ಯವಸ್ಥೆ ಕಾಪಾಡಲೆಂದು ಪೊಲೀಸ್ ಇಲಾಖೆ ದೇವಸ್ಥಾನಕ್ಕೆ ಭದ್ರತೆ ಬಿಗಿ ಭದ್ರತೆ […]