ಹ್ಯಾಕರ್‌ಗಳ ಮೋಸಕ್ಕೆ ಸಿಲುಕಿ ಸೌದಿ ಅರೇಬಿಯಾದ ಜೈಲಿನಲ್ಲಿದ್ದ ಕಡಬ ನಿವಾಸಿ ಸ್ವದೇಶಕ್ಕೆ ವಾಪಾಸ್

Sunday, November 19th, 2023
sudi-hacker

ಕಡಬ: ಸೌದಿ ಅರೇಬಿಯಾದ ರಿಯಾದ್‌ನ ಜೈಲಿನಲ್ಲಿ ಕಳೆದ 11 ತಿಂಗಳಿನಿಂದ ಬಂಧಿಯಾಗಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಐತ್ತೂರು ಗ್ರಾಮದ ಮೂಜೂರು ನಿವಾಸಿ ಚಂದ್ರಶೇಖರ್‌ ನವೆಂಬರ್ 20ರಂದು ಸ್ವದೇಶಕ್ಕೆ ಆಗಮಿಸಿದ್ದಾರೆ. ನವೆಂಬರ್ 20ರಂದು ಬೆಳಗ್ಗೆ ರಿಯಾದ್‌ನಿಂದ ಅಲ್ಲಿನ ಪೊಲೀಸರು ಚಂದ್ರಶೇಖರ್‌ ಅವರನ್ನು ವಿಮಾನದಲ್ಲಿ ಮುಂಬಯಿಗೆ ಕಳುಹಿಸಿಕೊಡಲಿದ್ದು, ಅವರು ಮುಂಬಯಿನಿಂದ ಸಂಜೆ ಮಂಗಳೂರು ವಿಮಾನ ನಿಲ್ದಾಣಕ್ಕೆ ತಲುಪಲಿದ್ದಾರೆ ಎಂದು ತಿಳಿದುಬಂದಿದೆ. ಚಂದ್ರಶೇಖರ್‌ 2022ರಲ್ಲಿ ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದು ಅದೇ ಕಂಪೆನಿಯ ಮೂಲಕ ಸೌದಿ ಅರೇಬಿಯಾಕ್ಕೆ ತೆರಳಿದ್ದರು. ಅಲ್ಲಿಅಲ್ಪಾನರ್‌ […]

ಯುವತಿಯ ಫೇಸ್ ಬುಕ್ ನಕಲಿ ಖಾತೆ, ಕಡಬದ ಯುವಕನ ಬಂಧನ

Saturday, September 4th, 2021
cyber Crime

ಕಡಬ : ಯುವತಿ ಯೊಬ್ಬಳ ಫೇಸ್ ಬುಕ್ ಖಾತೆ ನಕಲಿ ಮಾಡಿದ್ದಕ್ಕೆ ಸೈಬರ್‌ ಕ್ರೈಂ ಪ್ರಕರಣಕ್ಕೆ ಸಂಬಂಧಿಸಿ ಪಶ್ಚಿಮ ಬಂಗಾಳ ಪೊಲೀಸರು ಕಡಬದ ಯುವಕನೋರ್ವನನ್ನು ಶನಿವಾರ ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಕಡಬ ತಾಲೂಕಿನ ನೂಜಿಬಾಳ್ತಿಲ ನಿವಾಸಿ, ಮಂಗಳೂರಿನಲ್ಲಿ ಟ್ರೇಡಿಂಗ್‌ ವ್ಯವಹಾರ ನಡೆಸುತ್ತಿರುವ ಸಂಜಯ್‌ ಕೃಷ್ಣ ಎಂದು ಗುರುತಿಸಲಾಗಿದೆ. ಬೆಂಗಳೂರಿನಲ್ಲಿ ವ್ಯಾಸಂಗ ಮಾಡುತ್ತಿರುವ ಪಶ್ಚಿಮ ಬಂಗಾಳದ ಯುವತಿಯೋರ್ವಳ ಹೆಸರಿನ ನಕಲಿ ಸಾಮಾಜಿಕ ಜಾಲತಾಣ ಖಾತೆ ತೆರೆದ ಆರೋಪದ ಮೇರೆಗೆ ಸಂಜಯ್‌ ಕೃಷ್ಣನನ್ನು ಬಂಧಿಸಲಾಗಿದೆ. ತನ್ನ ಹೆಸರಿನ ನಕಲಿ ಸಾಮಾಜಿಕ […]

ಭಾರತೀಯ ಸೇನೆಯ ಗಡಿಭದ್ರತಾ ಪಡೆಗೆ ಕರಾವಳಿಯ ಇಬ್ಬರು ಯುವತಿಯರ ಸರ್ಪಡೆ

Tuesday, March 30th, 2021
Military

ಮಂಗಳೂರು :  ಭಾರತೀಯ ಸೇನೆಯ ಗಡಿಭದ್ರತಾ ಪಡೆ ( ಬಾರ್ಡರ್ ಸೆಕ್ಯುರಿಟಿ ಫೋರ್ಸ್) ಗೆ  ಕರಾವಳಿಯ ಇಬ್ಬರು ವನಿತೆಯರು, ದೇಶ ಸೇವೆಗೆ ಆಯ್ಕೆಯಾಗಿದ್ದು, ಇದೇ ಏಪ್ರಿಲ್ 1ರಿಂದ ಭಾರತೀಯ ಸೇನೆಗೆ ಸೇರ್ಪಡೆಯಾಗಲಿದ್ದಾರೆ. ಭಾರತೀಯ ಸೇನೆಯ ಗಡಿಭದ್ರತಾ ಪಡೆ ( ಬಾರ್ಡರ್ ಸೆಕ್ಯುರಿಟಿ ಫೋರ್ಸ್) ಗೆ ಆಯ್ಕೆಯಾಗಿರುವ ಪುತ್ತೂರು ತಾಲೂಕಿನ ಬಲ್ನಾಡಿನ ರಮ್ಯಾ ಹಾಗೂ ಕಡಬ ತಾಲೂಕಿನ ಕಾಣಿಯೂರಿನ ಯೋಗಿತಾ ಇನ್ನೆರಡು ದಿನದಲ್ಲಿ ಕರ್ತವ್ಯಕ್ಕೆ ಹಾಜರಾಗಲಿದ್ದಾರೆ. ಪುತ್ತೂರು ಬಲ್ನಾಡು ಗ್ರಾಮದ ಪದ್ಮಯ್ಯ ಗೌಡ ಹಾಗೂ ತೇಜಾವತಿ ದಂಪತಿಯ ಪುತ್ರಿಯಾಗಿರುವ […]

ರೆಂಜಿಲಾಡಿಯಲ್ಲಿ ಪತಿ, ಪತ್ನಿ ಮೇಲೆ ಚಿರತೆ ದಾಳಿ

Friday, February 12th, 2021
chita

ಕಡಬ : ಕುಟ್ರುಪ್ಪಾಡಿ ಗ್ರಾಮದ ರೆಂಜಿಲಾಡಿ ಎಂಬಲ್ಲಿ ಚಿರತೆ ದಾಳಿಯಿಂದ ಪತಿ, ಪತ್ನಿ ಗಾಯಗೊಂಡ ಘಟನೆ ಕಡಬ ತಾಲೂಕಿನ  ಶುಕ್ರವಾರ ಬೆಳಗಿನ ಜಾವ ನಡೆದಿದೆ. ರೆಂಜಿಲಾಡಿಯ ಹೇರ ನಿವಾಸಿಗಳಾದ ಚಂದ್ರಶೇಖರ್ ಕಾಮತ್ ಹಾಗೂ ಅವರ ಪತ್ನಿ ಸೌಮ್ಯಾ ಕಾಮತ್ ಎಂಬವರು ಗಾಯಗೊಂಡಿದ್ದಾರೆ. ಇವರಿಬ್ಬರು ತೋಟದಲ್ಲಿ ಸ್ಪಿಂಕ್ಲರ್ ಬದಲಾಯಿಸಲೆಂದು ಶುಕ್ರವಾರ ಮುಂಜಾವ 1:304 ಸುಮಾರಿಗೆ ತೆರಳಿದ್ದ ವೇಳೆ ಚಿರತೆ ದಾಳಿ ನಡೆಸಿದೆಯೆನ್ನಲಾಗಿದೆ. ಚಿರತೆ ಮೊದಲು ಚಂದ್ರಶೇಖರ್ ಅವರ ಮೇಲೆ ದಾಳಿ ನಡೆಸಿದೆ. ಈ ವೇಳೆ ಅವರ ರಕ್ಷಣೆಗೆ ಧಾವಿಸಿದ ಸೌಮ್ಯಾರ […]

ಸುರಿಯುತ್ತಿರುವ ಭಾರೀ ಮಳೆಗೆ ಒಮ್ನಿ ಕಾರಿನ ಮೇಲೆ ಮುರಿದು ಬಿದ್ದ ಮರ

Saturday, September 12th, 2020
omni car

ಕಡಬ :  ಉಪ್ಪಿನಂಗಡಿ-ಕಡಬ ರಾಜ್ಯ ಹೆದ್ದಾರಿಯ ಕೊಯಿಲ ಸಮೀಪದ ನೀರಾಜೆ ಎಂಬಲ್ಲಿ ಚಲಿಸುತ್ತಿದ್ದ ಒಮ್ನಿ ಕಾರಿನ ಮೇಲೆ ಮರ ಮುರಿದು ಬಿದ್ದ ಪರಿಣಾಮ ಕಾರು ಸಂಪೂರ್ಣ ಜಖಂಗೊಂಡ ಘಟನೆ ನಡೆದಿದ್ದು, ಚಾಲಕ ಅಪಾಯದಿಂದ ಪಾರಾಗಿದ್ದಾನೆ. ಎಡೆಬಿಡದೆ ಸುರಿಯುತ್ತಿರುವ ಮಳೆಗೆ ಕೊಯಿಲ ನೀರಾಜೆ ಸಮೀಪ ರಸ್ತೆ ಬದಿಯಲ್ಲಿದ್ದ ಹಲಸಿನ ಮರವೊಂದು ಮುರಿದುಬಿದ್ದಿದೆ. ಕೊಯಿಲದಿಂದ ಆತೂರಿಗೆ ಯೋಗೀಶ್ ಎಂಬ‌ುವರು ಕಾರು ಚಲಾಯಿಸಿಕೊಂಡು ಹೋಗುತ್ತಿದ್ದಾಗ ಕಾರಿನ ಮೇಲೆ ಮರ ಮುರಿದು ಬಿದ್ದಿದೆ. ಮರ ರಸ್ತೆಗೆ ಮುರಿದು ಬಿದ್ದ ಪರಿಣಾಮ ಸುಮಾರು ಅರ್ಧತಾಸು […]

ಕ್ಯಾನ್ಸರ್ ಚಿಕಿತ್ಸೆಗೆ ಲಯನ್ ಪ್ರಶಾಂತ್ ಭಟ್ ಕಡಬ ಅವರಿಂದ ಸಹಾಯ

Thursday, August 20th, 2020
Lion prashanth Bhat

ಮಂಗಳೂರು : ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿರುವ ಅಡ್ಯಾರ್ ನಿವಾಸಿ ಸುಗಂಧಿ ಅವರ ಚಿಕಿತ್ಸೆಗೆ ತನ್ನ ವಯ್ಯಕ್ತಿಕ ನೆಲೆಯಲ್ಲಿ ಲಯನ್ ಪ್ರಶಾಂತ್ ಭಟ್ ಕಡಬ ಅವರು ಹತ್ತು ಸಾವಿರ ರೂಪಾಯಿಗಳ ಚೆಕ್ ಹಸ್ತಾಂತರಿಸಿದ್ದಾರೆ. ಮಂಗಳೂರಿನ ಲಯನ್ಸ್ ಕ್ಲಬ್ 317ಡಿ ಮಲ್ಲಿಕಟ್ಟೆ ಯಲ್ಲಿ ನಡೆದ 74ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ನಿವೃತ್ತ ಸೈನಿಕ ಲಯನ್ ರಾಘವೇಂದ್ರ ಭಟ್ ಅವರು ಸುಗಂಧಿಯವರ ಪುತ್ರ ಅಜಿತ್ ಪೂಜಾರಿಗೆ ಚೆಕ್ ಹಸ್ತಾಂತರಿಸಿದರು. ಈ ಸಂದರ್ಭ ಲಯನ್ಸ್ ಕ್ಲಬ್ ಉಪಾಧ್ಯಕ್ಷ ಸತೀಶ್ ರೈ, ಮಾಜಿ ಅಧ್ಯಕ್ಷ ಶೇಖರ್ […]

ಕಡಬ ತಾಲೂಕು ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ನಾರಾಯಣ ಭಟ್ ಟಿ.

Wednesday, January 22nd, 2020
narayanaT

ಕಡಬ : ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಕಡಬ ತಾಲೂಕು ಘಟಕದ ಆಶ್ರಯದಲ್ಲಿ ಫೆ. 28 ಹಾಗೂ 29ರಂದು ರಾಮ ಕುಂಜ ಪದವಿ ಪೂರ್ವ ಕಾಲೇಜಿನಲ್ಲಿ ಜರಗಲಿರುವ ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಮ್ಮೇಳನಾಧ್ಯಕ್ಷರಾಗಿ ನಾರಾಯಣ ಭಟ್ ಟಿ. ರಾಮ ಕುಂಜ ಆಯ್ಕೆಗೊಂಡಿದ್ದಾರೆ . ಸಾಹಿತ್ಯ ಕ್ಷೇತ್ರದಲ್ಲಿ ಬಹಳಷ್ಟು ಕೆಲಸ ಮಾಡಿರುವ ಶ್ರೀಯುತರು ’ಜೀವನ ಶಿಕ್ಷಣ’ ’ಉತ್ತಮ ಶಾಲೆಗೊಂದು ಮಾರ್ಗದರ್ಶಿ’ ’ನಮ್ಮ ಮಕ್ಕಳು ಹೇಗಿರಬೇಕು’ ಸಹಿತ ಸುಮಾರು 25ಕೃತಿಗಳನ್ನು ರಚಿಸಿರುವರು, ಅನೇಕ ಕೃತಿಗಳು ಎಳೆಂಟು […]

ಕಡಬ : ರೈಲಿನಡಿಗೆ ಬಿದ್ದು ಯುವಕ ಮೃತ್ಯು

Tuesday, December 31st, 2019
kadaba

ಕಡಬ : ರೈಲಿನಡಿಗೆ ಬಿದ್ದು ಯುವಕನೋರ್ವ ಮೃತಪಟ್ಟ ಘಟನೆ ಕಡಬ ಸಮೀಪದ ಕೋಡಿಂಬಾಳ ಎಂಬಲ್ಲಿ ಮಂಗಳವಾರ ಬೆಳಿಗ್ಗೆ ನಡೆದಿದೆ. ಮೃತ ಯುವಕನನ್ನು ಸುಳ್ಯ ತಾಲೂಕಿನ ಪಂಜ ಸಮೀಪದ ನೇಲ್ಯಡ್ಕ ನಿವಾಸಿ ವಿನೀತ್ ಎಂದು ಗುರುತಿಸಲಾಗಿದೆ. ಮಂಗಳವಾರ ಬೆಳಿಗ್ಗೆ ಕೋಡಿಂಬಾಳ ರೈಲ್ವೇ ನಿಲ್ದಾಣದ ಪ್ಲಾಟ್ ಫಾರಂ ಬಳಿ ರೈಲು ಢಿಕ್ಕಿ ಹೊಡೆದು ಹಳಿಗೆ ಬಿದ್ದ ಸ್ಥಿತಿಯಲ್ಲಿ ವಿನೀತ್ ನ ಮೃತದೇಹವು ಕಂಡುಬಂದಿದೆ. ಪಕ್ಕದಲ್ಲೇ ಮದ್ಯದ ಬಾಟಲ್ ಕಂಡುಬಂದಿದ್ದು, ಪ್ಲಾಟ್ ಫಾರಂ ನಲ್ಲಿ ಕುಳಿತಿದ್ದ ವೇಳೆ ಆಕಸ್ಮಿಕವಾಗಿ ಕೆಳಗಡೆ ಬಿದ್ದಿದ್ದು, […]

ಕಡಬ : ಯುವತಿಯೊಬ್ಬಳು ವಿಷ ಸೇವಿಸಿ ಆತ್ಮಹತ್ಯೆ

Wednesday, November 27th, 2019
Kadaba

ಕಡಬ : ಕಡಬದ ಖಾಸಗಿ ಸಂಸ್ಥೆಯೊಂದರಲ್ಲಿ ಉದ್ಯೋಗದಲ್ಲಿದ್ದ ಯುವತಿಯೊಬ್ಬಳು ಮಂಗಳವಾರ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಚಿಕಿತ್ಸೆ ಫಲಕಾರಿಯಾಗದೆ ಇಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ. ಕಡಬ ತಾಲೂಕಿನ ನೂಜಿಬಾಳ್ತಿಲ ಗ್ರಾಮದ ಹರಿಮಜಲು ನಿವಾಸಿ ಸವಿತ ಆತ್ಮಹತ್ಯೆ ಮಾಡಿಕೊಂಡ ಯುವತಿ. ಈಕೆ ಮಂಗಳವಾರ ವಿಷ ಸೇವಿಸಿದ್ದಳು. ನಂತರ ಈಕೆಯನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ,ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ. ಇನ್ನು, ಈ ಬಗ್ಗೆ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆತ್ಮಹತ್ಯೆಗೆ ಕಾರಣ […]

ಹೆಲ್ಮೆಟ್ ಧರಿಸದೇ ಬಂದ ಬೈಕ್​ ಸವಾರ ಪೊಲೀಸರನ್ನು ಕಂಡು ಪರಾರಿ

Friday, September 27th, 2019
kadaba

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಚಿತ್ರ ಪ್ರಕರಣವೊಂದು ಜರುಗಿದೆ. ಹೆಲ್ಮೆಟ್ ಧರಿಸದೇ ಬಂದ ಬೈಕ್ ಸವಾರನೋರ್ವ ತನ್ನೊಂದಿಗೆ ಬಂದಿದ್ದವನನ್ನು ಇಕ್ಕಟ್ಟಿಗೆ ಸಿಲುಕಿಸಿ ಪರಾರಿಯಾಗಿರುವ ಈ ಘಟನೆ ಕಡಬದಲ್ಲಿ ನಡೆದಿದೆ. ಹೆಲ್ಮೆಟ್ ಧರಿಸದ ಬೈಕ್ ಸವಾರನು ಪೊಲೀಸರನ್ನು ಕಂಡೊಡನೆ ಹಿಂಬದಿ ಸವಾರನನ್ನು ಕೆಳಗಿಳಿಸಿ ಬಂದ ದಾರಿಯಲ್ಲೇ ಹಿಂತಿರುಗಿ ಹೋಗಿದ್ದಾನೆ. ಆಗ ನಡೆದುಕೊಂಡು ಹೋಗುತ್ತಿದ್ದ ಹಿಂಬದಿ ಸವಾರ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ. ಆತನಿಗೆ ಪೊಲೀಸರು 500 ರೂ. ದಂಡ ವಿಧಿಸಿದ್ದಾರೆ. ಕಡಬಕ್ಕೆ ಗುರುವಾರ ಗೃಹಪ್ರವೇಶಕ್ಕೆಂದು ಕಾಸರಗೋಡಿನಿಂದ ಆಗಮಿಸಿದ್ದ ಯುವಕನನ್ನು […]