ರಾಜ್ಯದ ಸಾಂಸ್ಕೃತಿಕ ಪರಂಪರೆಗಳ ಪ್ರಾತಿನಿಧಿಕ ಕೇಂದ್ರವಾಗಿ ಜಾನಪದ ವಿವಿ. ಬೆಳೆಯಬೇಕು : ಹೆಗ್ಗಡೆ ಸಲಹೆ.
Sunday, November 15th, 2015ಉಜಿರೆ: ಮೂಲಭೂತ ಸೌಕರ್ಯ, ಸೌಲಭ್ಯಗಳನ್ನು ಒದಗಿಸುವುದರ ಜೊತೆಗೆ ಸರ್ಕಾರ ಹಾಗೂ ದಾನಿಗಳ ಸಹಕಾರದೊಂದಿಗೆ ಕರ್ನಾಟಕ ಜಾನಪದ ವಿಶ್ವವಿದ್ಯಾಲಯವನ್ನು ರಾಜ್ಯದ ಸಾಂಸ್ಕೃತಿಕ ಪರಂಪರೆಗಳ ಪ್ರಾತಿನಿಧಿಕ ಕೇಂದ್ರವಾಗಿ ಬೆಳೆಸಬೇಕು. ಜನರ ವಿಶ್ವವಿದ್ಯಾಲಯವಾಗಿ ಬೆಳೆಯಬೇಕು, ಬೆಳಗಬೇಕು ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಸಲಹೆ ನೀಡಿದರು. ಹಾವೇರಿಯ ಶಿಗ್ಗಾವಿ ತಾಲ್ಲೂಕಿನ ಗೊಟಗೋಡಿಯಲ್ಲಿರುವ ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ಕುಲಪತಿಯಾಗಿ ಇತ್ತೀಚೆಗೆ ಅಧಿಕಾರ ವಹಿಸಿಕೊಂಡ ಡಾ. ಕೆ. ಚಿನ್ನಪ್ಪಗೌಡ ಭಾನುವಾರ ಧರ್ಮಸ್ಥಳದಲ್ಲಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಆಶೀರ್ವಾದ ಹಾಗೂ ಮಾರ್ಗದರ್ಶನ ಪಡೆದರು. […]