ಕನಕದಾಸರ ಚಿಂತನೆಗಳು ಇಂದಿಗೆ ಪ್ರಸ್ತುತ : ಎಂ.ಆರ್.ಸತ್ಯನಾರಾಯಣ

Friday, October 8th, 2021
Satyaanarayana

ಮಂಗಳೂರು: ಕನಕದಾಸರ ಸಾಮಾಜಿಕ ಮತ್ತು ಅಧ್ಯಾತ್ಮಿಕ ಚಿಂತನೆಗಳು ಇಂದಿಗೂ ಪ್ರಸ್ತುತವಾಗಿವೆ. ಕೀರ್ತನೆಯ ಮೂಲಕ ಕನಕದಾಸರನ್ನು ಜನರ ಬಳಿ ತಲುಪಿಸುವ ಕಾರ್ಯ ಆಗಬೇಕು, ಎಂದು ಕರ್ನಾಟಕ ಸರಕಾರದ ರಾಷ್ಟ್ರೀಯ ಸಂತಕವಿ ಕನಕದಾಸ ಅಧ್ಯಯನ ಮತ್ತು ಸಂಶೋಧನ ಕೇಂದ್ರದ ಸಮನ್ವಯಾಧಿಕಾರಿ, ಗಮಕಿ ಎಂ.ಆರ್. ಸತ್ಯನಾರಾಯಣ ಅವರು ಹೇಳಿದರು. ಅವರು ಶುಕ್ರವಾರ ಮಂಗಳೂರು ವಿವಿಯ ಮಂಗಳ ಸಭಾಂಗಣದಲ್ಲಿ ನಡೆದ ಮಂಗಳೂರು ವಿಶ್ವವಿದ್ಯಾನಿಲಯದ ಕನಕದಾಸ ಅಧ್ಯಯನ ಪೀಠ ಹಾಗೂ ಕನಕದಾಸ ಸಂಶೋಧನಾ ಕೇಂದ್ರದ ಕನಕ ಕೀರ್ತನ ಗಂಗೋತ್ರಿ’ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಮಾತನಾಡಿದರು. […]

ರಾಷ್ಟ್ರೀಯ ಸಂತ ಕವಿ ಕನಕ ಸಂಶೋಧನ ಕೆಂದ್ರಕ್ಕೆ ಧನಂಜಯ ಕುಂಬ್ಳೆ ಸಹಿತ ಐವರ ನೇಮಕ

Thursday, September 23rd, 2021
Dhananjaya Kumble

ಮಂಗಳೂರು : ಮಂಗಳೂರು ವಿಶ್ವವಿದ್ಯಾನಿಲಯದ ಎಸ್ ವಿ ಪಿ ಕನ್ನಡ ಅಧ್ಯಯನ ಸಂಸ್ಥೆಯ ಸಹಾಯಕ ಪ್ರಾಧ್ಯಾಪಕ ಡಾ. ಧನಂಜಯ ಕುಂಬ್ಳೆ ಸೇರಿದಂತೆ ಐದು ಮಂದಿಯನ್ನು ಕರ್ನಾಟಕ ಸರಕಾರದ ರಾಷ್ಟ್ರೀಯ ಸಂತಕವಿ ಕನಕದಾಸರ ಅಧ್ಯಯನ ಮತ್ತು ಸಂಶೋಧನಾ ಕೇಂದ್ರದ ಕಾರ್ಯಾನುಷ್ಠಾನ ಮಂಡಳಿಗೆ ನಾಮನಿರ್ದೇಶಿತ ಸದಸ್ಯರನ್ನಾಗಿ ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಕುರಿತು ಆದೇಶ ಹೊರಡಿಸಿರುವ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸರ್ಕಾರದ ಅಧೀನ ಕಾರ್ಯದರ್ಶಿ ಕೆ. ವೆಂಕಟೇಶಪ್ಪ, ರಾಷ್ಟ್ರೀಯ ಸಂತಕವಿ ಕನಕದಾಸರ ಅಧ್ಯಯನ ಮತ್ತು ಸಂಶೋಧನಾ […]