ಕನ್ನಡ ಚಿತ್ರರಂಗದ ಹಿರಿಯ ನಟಿ ಬೆಳ್ತಂಗಡಿ ಮೂಲದ ಲೀಲಾವತಿ ನಿಧನ

Friday, December 8th, 2023
Leelavathi

ಮಂಗಳೂರು : ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ (85) ಅವರು ವಯೋಸಹಜ ಅನಾರೋಗ್ಯದಿಂದ ಇಂದು ನೆಲಮಂಗಲದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಪುತ್ರ ವಿನೋದ್​ ರಾಜ್ ಅವರನ್ನು ಲೀಲಾವತಿ ಅಗಲಿದ್ದಾರೆ. ನೆಲಮಂಗಲದ ಜ್ಯೂನಿಯರ್ ಕಾಲೇಜು ಎದುರಿನ ಅಂಬೇಡ್ಕರ್ ಮೈದಾನದಲ್ಲಿ ನಾಳೆ ಮಧ್ಯಾಹ್ನದವರೆಗೂ ಸಾರ್ವಜನಿಕರ ದರ್ಶನಕ್ಕೆ ಸಿದ್ದತೆ ಮಾಡಲಾಗುತ್ತಿದೆ. 1938ರಲ್ಲಿ ದಕ್ಷಿಣ ಕನ್ನಡದ ಬೆಳ್ತಂಗಡಿಯಲ್ಲಿ ಜನಿಸಿದ್ದ ಲೀಲಾವತಿ ಅವರು 50 ವರ್ಷಗಳ ಕಾಲ ಚಿತ್ರರಂಗದಲ್ಲಿ ಸೇವೆ ಸಲ್ಲಿಸಿದ್ದರು. ಕನ್ನಡ ದಿಗ್ಗಜ ನಟರಾಟ ರಾಜ್​ಕುಮಾರ್​, ವಿಷ್ಣುವರ್ಧನ್​ ಮುಂತಾದವರ ಜೊತೆ ಅಭಿನಯಿಸಿ […]

ಕನ್ನಡದ ಹಿರಿಯ ನಟಿ ‘ಅಭಿನವ ಶಾರದೆ’ ಜಯಂತಿ ನಿಧನ

Monday, July 26th, 2021
Jayanthi died

ಬೆಂಗಳೂರು : ಕನ್ನಡ ಸೇರಿದಂತೆ ಹಲವು ಭಾಷೆಗಳಲ್ಲಿ ನಟಿಸಿದ್ದ ಹಿರಿಯ ನಟಿ, ಅಭಿನಯ ಶಾರದೆ ಎಂದು ಪ್ರೀತಿಯಿಂದ ಅಭಿಮಾನಿಗಳಿಂದ ಕರೆಸಿಕೊಳ್ಳುತ್ತಿದ್ದ ಜಯಂತಿ ನಿಧನರಾಗಿದ್ದಾರೆ. ಬೆಂಗಳೂರಿನ ತಮ್ಮ ನಿವಾಸದಲ್ಲಿ ಅವರು ಸೋಮವಾರ ನಸುಕಿನ ಜಾವ ಕೊನೆಯುಸಿರೆಳೆದಿದ್ದಾರೆ. ಅವರಿಗೆ 76 ವರ್ಷ ವಯಸ್ಸಾಗಿತ್ತು. ಕಳೆದ ಕೆಲ ವರ್ಷಗಳಿಂದ ಅಸ್ತಮಾ, ಉಸಿರಾಟ ಸಮಸ್ಯೆಯಿಂದ ಬಳಲುತ್ತಿದ್ದ ಹಿರಿಯ ನಟಿ ಕಳೆದ ವರ್ಷ ಕೋವಿಡ್-19 ಸಮಯದಲ್ಲಿ ಅನಾರೋಗ್ಯಕ್ಕೆ ತುತ್ತಾಗಿ ಆಸ್ಪತ್ರೆಯಲ್ಲಿ 40 ದಿನಗಳ ಕಾಲ ಇದ್ದು ಚೇತರಿಸಿಕೊಂಡು ಮನೆಗೆ ಹಿಂತಿರುಗಿದ್ದರು. ಆದರೆ ಇಂದು ಕೊನೆಯುಸಿರೆಳೆದಿದ್ದಾರೆ. ಕನ್ನಡ […]

ಕನ್ನಡ ಚಿತ್ರರಂಗದ ಕಾರ್ಮಿಕರಿಗೆ ಫುಡ್ ಕಿಟ್ ವಿತರಣೆ

Saturday, July 10th, 2021
BC-Pateel

ಬೆಂಗಳೂರು  : ಚಿತ್ರನಟರೂ ಆಗಿರುವ ಕೃಷಿ ಸಚಿವ ಬಿ.ಸಿ.ಪಾಟೀಲ್ ಅವರಿಂದು ಬೆಂಗಳೂರಿನ ಸರ್ಕಾರಿ ನಿವಾಸದಲ್ಲಿ ಕನ್ನಡ ಚಿತ್ರರಂಗದ ಕಾರ್ಮಿಕರಿಗೆ ಫುಡ್ ಕಿಟ್ ವಿತರಿಸಿದರು. ಲೈಟ್ ಬಾಯ್ಸ್,ಕ್ಯಾಮೆರಾಮನ್,ಮೇಕಪ್ ಕಲಾವಿದರಿಗೆ ಆಹಾರದ ಕಿಟ್ ವಿತರಿಸಿ ಬಳಿಕ‌ ಮಾತನಾಡಿದ ಬಿ.ಸಿ.ಪಾಟೀಲ್, ನಾನು ಚಿತ್ರರಂಗದಿಂದಲೇ ಬಂದವನಾದ್ದರಿಂದ‌ ಚಿತ್ರರಂಗದಲ್ಲಿರುವ ಕಾರ್ಮಿಕರ ಕಷ್ಟದ ಅರಿವು ಅನುಭವವಿದೆ. ಕೋವಿಡ್‌ನಿಂದಾಗಿ ಎಲ್ಲರೂ ಸಂಕಷ್ಟದಲ್ಲಿದ್ದಾರೆ.ಚಿತ್ರರಂಗದ ಕೆಲವು ಗೆಳೆಯರು ನನ್ನನ್ನು ಭೇಟಿ ಮಾಡಿ ಸಹಾಯ ಕೋರಿದ್ದರು.ಅದರಂತೆಕಾರ್ಮಿಕ ಕಲ್ಯಾಣ ಇಲಾಖೆಗೆ ನಾನು ಮನವಿ ಮಾಡಿದ್ದು,ಅವರು ಫುಡ್ ಕಿಟ್ ಕಳಿಸಿದ್ದರು. ಹೀಗಾಗಿ ಇವತ್ತು ಒಂದು ಸಾವಿರ […]

ಸಂಕಷ್ಟದಲ್ಲಿದ್ದ ಚಿತ್ರರಂಗದ ಕಾರ್ಮಿಕರಿಗೆ ಸಿಎಂ ಪ್ಯಾಕೇಜ್ ಘೋಷಣೆ

Thursday, June 3rd, 2021
NM Suresh

ಬೆಂಗಳೂರು : ಲಾಕ್ ಡೌನ್ ಹಿನ್ನೆಲೆಯಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಕನ್ನಡ ಚಿತ್ರರಂಗದ ಸಾವಿರಾರು ಕಾರ್ಮಿಕರಿಗೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಪ್ಯಾಕೇಜ್ ಘೋಷಿಸಿದ್ದಾರೆ. ಸರ್ಕಾರದ ಈ ನಿರ್ಧಾರಕ್ಕೆ ವಾಣಿಜ್ಯ ಮಂಡಳಿ ಹಾಗೂ ಕಾರ್ಮಿಕ ಒಕ್ಕೂಟ ಮುಖ್ಯಮಂತ್ರಿಗಳಿಗೆ ಧನ್ಯವಾದಗಳನ್ನ ತಿಳಿಸಿದೆ. ಈಗಾಗಲೇ ಹಲವು ವೃತ್ತಿ ಹಾಗೂ ವಲಯಗಳ ಕಾರ್ಮಿಕರಿಗೆ ಪ್ಯಾಕೇಜ್ ಘೋಷಣೆ ಮಾಡಿದ್ದ ಮುಖ್ಯಮಂತ್ರಿಗಳನ್ನ ಚಲನಚಿತ್ರ ಕಾರ್ಮಿಕ ಒಕ್ಕೂಟದ ಗೌರವಾಧ್ಯಕ್ಷ ಹಾಗೂ ಚಲನಚಿತ್ರ ವಾಣಿಜ್ಯ ಮಂಡಳಿಯ ಮಾಜಿ ಅಧ್ಯಕ್ಷ ಸಾ ರಾ ಗೋವಿಂದು, ವಾಣಿಜ್ಯ ಮಂಡಳಿಯ ಗೌರವ […]

ನಮಗೆ ಡಬ್ಬಿಂಗ್ ಬೇಡ.. ಎಂದು ಸಿಡಿದೆದ್ದಿರುವ ಕನ್ನಡ ಚಿತ್ರೋದ್ಯಮದಿಂದ ಇಂದು -ಬಂದ್-ಬೃಹತ್ ಮೆರವಣಿಗೆ

Monday, January 27th, 2014
Strike

ಬೆಂಗಳೂರು : ಕನ್ನಡ ಚಿತ್ರರಂಗದಲ್ಲಿ ಮತ್ತೆ ತಲ್ಲಣದ ಬಿರುಗಾಳಿ ಎದ್ದಿದೆ. ಈಗ ಮತ್ತೆ ಡಬ್ಬಿಂಗ್ ಬಗ್ಗೆ ಆಕ್ರೋಶ ಗರಿಗೆದರಿದೆ. ಈ ವಿಷಯಕ್ಕೆ ಸಂಬಂಧಿಸಿದಂತೆ ಡಬ್ಬಿಂಗ್ ವಿರೋಧಿಸಿ ರಾಜ್ಯಾದ್ಯಂತ ಕನ್ನಡ ಚಿತ್ರರಂಗ ಇಂದು ಬಂದ್ ಘೋಷಣೆ ಮಾಡಿದೆ. ಕನ್ನಡ ಚಿತ್ರಗಳಿಗೆ ಥಿಯೇಟರ್ಸ್ ಗಳೇ ಸಿಗುತ್ತಿಲ್ಲ, ಅಂತಹುದರಲ್ಲಿ ಮತ್ಯಾರದೋ ಸ್ವಾರ್ಥ ಸಾಧನೆಗಾಗಿ ಈಗ ಡಬ್ಬಿಂಗ್ ಬಗ್ಗೆ ಕಾಳಜಿ ತೋರುತ್ತಿರುವುದು ಅತ್ಯಂತ ಖೇದಕರ ಎಂದಿದ್ದಾರೆ ನಟ ರವಿಚಂದ್ರನ್. ಈ ಹೋರಾಟದ ಸಾರಥ್ಯವನ್ನು ಕನ್ನಡದ ಸೆಂಚುರಿ ಸ್ಟಾರ್ ಶಿವರಾಜ್ ಕುಮಾರ್ ಅವರು ವಹಿಸಿಕೊಂಡಿದ್ದಾರೆ. […]

ಬಾಲಿವುಡ್ ಅದೃಷ್ಟ ಪರೀಕ್ಷೆ ಕಾಣೆಯಾದ ನಿಧಿ

Friday, January 4th, 2013
Nidhi subbaiah

ಬೆಂಗಳೂರು : ಕನ್ನಡ ಚಿತ್ರರಂಗದ ಹೊಸ ಪ್ರತಿಭೆಯಾದ ನಿಧಿ ಸುಬ್ಬಯ್ಯ ಬಾಲಿವುಡ್ ಚಿತ್ರ ಜಗತ್ತಿಗೆ ಎಂಟ್ರಿ ಕೊಟ್ಟಾಗ ಇಡೀ ಚಿತ್ರೋದ್ಯಮವೇ ಸಂಭ್ರಮ ಪಟ್ಟಿತ್ತು. ಓ ಮೈ ಗಾಡ್, ಅಜಬ್ ಗಜಬ್ ಲವ್ ಮೊದಲಾದ ಹಿಂದಿ ಚಿತ್ರಗಳಲ್ಲಿ ಕಾಣಿಸಿಕೊಂಡ ಈಕೆ ಈ ಚಿತ್ರಗಳ ಮೇಲೆ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದರು ಆದರೆ ಬಾಲಿವುಡ್‌ನಲ್ಲಿ ತೆರೆಕಂಡ ಎರಡೂ ಚಿತ್ರಗಳೂ ಬಾಕ್ಸ್ ಆಫೀಸಿನಲ್ಲಿ ಸೋತ್ತಿದ್ದರಿಂದ ಕಂಗಾಲಾಗಿದ್ದಾರೆ . ಇವರಿಗೆ, ಓ ಮೈ ಗಾಡ್ ಚಿತ್ರಕ್ಕಿಂತ ಅಜಬ್ ಗಜಬ್ ಲವ್ ಚಿತ್ರದ ಮೇಲೆ ಸಾಕಷ್ಟು […]

ಗೃಹಸ್ಥಾಶ್ರಮಕ್ಕೆ ಕಾಲಿಟ್ಟ ಯುವ ಗಾಯಕ ರಾಜೇಶ್‌ಕೃಷ್ಣನ್‌

Tuesday, November 8th, 2011
Rajesh Krishnan Wedding

ಕೊಲ್ಲೂರು : ಕನ್ನಡ ಹಾಗೂ ತಮಿಳು, ಹಿಂದಿ ತೆಲುಗು ಮೊದಲಾದ 15ಕ್ಕೂ ಹೆಚ್ಚು ಭಾಷೆಗಳಲ್ಲಿ ಹಾಡಿರುವ ಯುವ ಗಾಯಕ ರಾಜೇಶ್‌ಕೃಷ್ಣನ್‌ ಅವರು ಸೋಮವಾರ ಕೊಲ್ಲೂರಿನ ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ಕಿರುತೆರೆ ಅಭಿನೇತ್ರಿ ರಮ್ಯಾ ವಸಿಷ್ಠ ಅವರನ್ನು ವರಿಸಿ ಗೃಹಸ್ಥಾಶ್ರಮಕ್ಕೆ ಕಾಲಿಟ್ಟರು. ಕೆಲವೇ ಅಭಿಮಾನಿಗಳು ಹಾಗೂ ಬಂಧು ಮಿತ್ರರು, ಆಪ್ತರ ಸಮ್ಮುಖದಲ್ಲಿ ಮದುವೆ ನೆರವೇರಿತು. ರಾಜೇಶ್‌ಕೃಷ್ಣನ್‌ ಕನ್ನಡ ಚಿತ್ರರಂಗದ ಸಂಗೀತ ಲೋಕದಲ್ಲಿ ತನ್ನದೇ ಶೈಲಿಯಲ್ಲಿ ಹೊಸ ಛಾಪನ್ನು ಮೂಡಿಸಿದ್ದಾರೆ. ಹಲವಾರು ಭಕ್ತಿಗೀತೆಗಳ ಅಲ್ಬಂಗಳಲ್ಲೂ ಹಾಡಿದ್ದಾರೆ. ಇತ್ತೀಚಿನ ದಿನಗಳಲ್ಲಿ ಸಂಗೀತ […]