ರಾಜ್ಯದ ಮುನ್ನಡೆಯ ಬಗ್ಗೆ ಸರ್ಕಾರದ ಚಿಂತನೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Sunday, August 15th, 2021
basavaraja Bommai

ಬೆಂಗಳೂರು :  “75ನೇ ಸ್ವಾತಂತ್ರ್ಯೋತ್ಸವ ಆಚರಿಸುವ ಸೌಭಾಗ್ಯ ಒದಗಿಬಂದಿದೆ. ಕನ್ನಡ ನಾಡು, ನುಡಿ, ಸಾಹಿತ್ಯ, ಆಡಳಿತ ಸೇರಿದಂತೆ ಹಲವಾರು ಕ್ಷೇತ್ರಗಳಲ್ಲಿ ದೇಶದಲ್ಲೇ ಮಾದರಿಯಾಗಿದೆ. 75 ವರ್ಷ ನಡೆದು ಬಂದ ದಾರಿ, ಇನ್ನೂ ನಡೆಯಬೇಕಾದ ದಾರಿಯ ಬಗ್ಗೆ ಚಿಂತನೆ ಮಾಡಬೇಕಿದೆ. ನಮ್ಮ ಸರ್ಕಾರ ಕೂಡ ಅದೇ ದಿಕ್ಕಿನಲ್ಲಿ ಚಿಂತನೆ ಮಾಡುತ್ತಿದೆ”- ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಅವರು “ಕೋವಿಡ್ ಮಾರ್ಗಸೂಚಿ ಪ್ರಕಾರ, ಅಂತರ ಕಾಪಾಡಿಕೊಂಡು ಸ್ವಾತಂತ್ರ್ಯ ದಿನ […]

ಕನ್ನಡ ನಾಡು, ನುಡಿ, ಜಲ ಸಂರಕ್ಷಣೆಗೆ ಕರವೇ ಮುಖಂಡ ಸಂತೋಷ ಸುಬ್ಬಣ್ಣವರ ಕರೆ

Monday, January 25th, 2021
Subbannanavaru

ಧಾರವಾಡ : ರಾಜ್ಯದ ನುಡಿ, ಜಲ ಸಂರಕ್ಷಣೆಗೆ ಧಾರವಾಡ ಜಿಲ್ಲಾದ್ಯಂತ ಕರ್ನಾಟಕ ರಕ್ಷಣಾ ವೇದಿಕೆ ( ಪ್ರವೀಣ ಶೆಟ್ಟಿ ಬಣ) ಯು ಸದಸ್ಯತ್ವ ಅಭಿಯಾನ ಆರಂಭಿಸಿದೆ ಎಂದು ಕರವೇ ಜಿಲ್ಲಾ ಮುಖಂಡ ಸಂತೋಷ ಸುಬ್ಬಣ್ಣವರ ತಿಳಿಸಿದ್ದಾರೆ. ಜಿಲ್ಲೆಯ ಕಲಘಟಗಿ, ಅಳ್ನಾವರ, ಅಣ್ಣಿಗೇರಿ, ನವಲಗುಂದ, ಕುಂದಗೋಳ, ಹುಬ್ಬಳ್ಳಿ ಹಾಗೂ ಧಾರವಾಡ ತಾಲೂಕಿನಾದ್ಯಂತ ನಮ್ಮ ಸಂಘಟನೆಯ ಕಾರ್ಯಕರ್ತರು ಸದಸ್ಯತ್ವ ಅಭಿಯಾನ ಆರಂಭಿಸಲಿದ್ದಾರೆ ಎಂದು ಸಂತೋಷ ಸುಬ್ಬಣ್ಣವರ ತಿಳಿಸಿದ್ದಾರೆ. ವರದಿ :  ಶಂಭು ಹಬ್ಬಳ್ಳಿ

ಪೊಳಲಿಯಲ್ಲಿ ನಡೆಯಲಿರುವ ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆಲಾಂಛನ ಆಹ್ವಾನ

Monday, July 7th, 2014
Pradeep Kalkura

ಮಂಗಳೂರು : ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ಆವರಣದಲ್ಲಿ2014, ಆಗಸ್ಟ್ 2 ಮತ್ತು 3ರಂದು ನಡೆಯಲಿರುವ 19ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕಲಾವಿದರಿಂದ ಸೂಕ್ತ ಲಾಂಛನವನ್ನು ಆಹ್ವಾನಿಸಲಾಗಿದೆ. ಕನ್ನಡ ನಾಡು ನುಡಿಯ ಸಾಂಸ್ಕೃತಿಕ ಉತ್ಸವಕ್ಕೆ ಸರಿಹೊಂದುವ ‘ಲಾಂಛನ’ವನ್ನು ರಚಿಸಿ ಸ್ವವಿಳಾಸ, ದೂರವಾಣಿ ಸಂಖ್ಯೆ ಸಹಿತ ಜುಲೈ 13ರೊಳಗಾಗಿ ಅಧ್ಯಕ್ಷರು, ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕಲ್ಕೂರ ಪ್ರತಿಷ್ಠಾನ, ಶ್ರೀ ಕೃಷ್ಣ ಸಂಕೀರ್ಣ, ಮಹಾತ್ಮಾಗಾಂಧಿ ರಸ್ತೆ, ಕೊಡಿಯಾಲ್ಬೈಲ್, ಮಂಗಳೂರು ಇಲ್ಲಿಗೆ ಕಳುಹಿಸಿಕೊಡುವಂತೆ ಕೋರಲಾಗಿದೆ. ಆಯ್ಕೆಗೊಂಡ ಲಾಂಛನ […]