Blog Archive

ಕರಾವಳಿಯಲ್ಲಿ ಬಿಜೆಪಿ ಗೆಲುವು ಮೃತ ಹಿಂದೂ ಕಾರ್ಯಕರ್ತರಿಗೆ ಸಮರ್ಪಣೆ’

Wednesday, May 16th, 2018
nalin-kumar

ಮಂಗಳೂರು: ಕರಾವಳಿಯಲ್ಲಿಕಾಂಗ್ರೆಸ್ ಧೂಳಿಪಟವಾಗಿದೆ. ಬಿಜೆಪಿಯ ದಿಗ್ವಿಜಯವನ್ನು ದುಷ್ಕರ್ಮಿಗಳ ದಾಳಿಗೆ ಬಲಿಯಾದ ಪ್ರಶಾಂತ್ ಪೂಜಾರಿ, ಶರತ್ ಮಡಿವಾಳ್ , ದೀಪಕ್ ರಾವ್ ಮಡಿಲಿಗೆ ಅರ್ಪಣೆ ಮಾಡುವುದಾಗಿ ಸಂಸದ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ. ಮಂಗಳೂರಿನಲ್ಲಿ ಮಂಗಳವಾರ ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು ಕರಾವಳಿಯಲ್ಲಿ ಜನಾಶೀರ್ವಾದ ಬಿಜೆಪಿಗೆ ದೊರೆತಿದೆ. ಜಿಲ್ಲೆಯ 8 ಕ್ಷೇತ್ರಗಳ ಪೈಕಿ 7 ರಲ್ಲಿ ಬಿಜೆಪಿ ಆಭ್ಯರ್ಥಿಗಳು ಜಯಗಳಿಸಿದ್ದಾರೆ. ದುರಾಡಳಿತ, ಭ್ರಷ್ಟಾಚಾರ, ಕೋಮುಭಾವನೆ ಕೆರಳಿಸುವ ಗೂಂಡಾಗಿರಿ ರಾಜಕಾರಣದಿಂದ ಜನರು ಬೇಸತ್ತಿದ್ದರು. ಈ ಹಿನ್ನೆಲೆಯಲ್ಲಿ ಕರಾವಳಿಯ ಜನರು ಕಾಂಗ್ರೆಸ್ […]

ಕರಾವಳಿಯಲ್ಲಿ ಅರಳಿದ ಕಮಲ… ಮೂರು ಕ್ಷೇತ್ರಗಳು ಬಿಜೆಪಿ ತೆಕ್ಕೆಗೆ

Tuesday, May 15th, 2018
srinivas-shetty

ಉಡುಪಿ: ಕರಾವಳಿ ಭಾಗದಲ್ಲಿ ಕಮಲ ಮುನ್ನಡೆ ಪಡೆದುಕೊಂಡಿದ್ದು, ಈಗಾಗಲೇ ಮೂರು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ. ಮೂಡುಬಿದರೆಯಲ್ಲಿ ಉಮಾನಾಥ್ ಕೋಟ್ಯಾನ್‌, ಉಡುಪಿಯ ಕಾಪು ಕ್ಷೇತ್ರದ ಲಾಲಾಜಿ ಆರ್‌. ಮೆಂಡನ್‌ ಮತ್ತು ಕುಂದಾಪುರ ಕ್ಷೇತ್ರದಲ್ಲಿ ಹಾಲಾಡಿ ಶ್ರೀನಿವಾಸ್ ಗೆಲುವು ಪಡೆದಿದ್ದಾರೆ. ಹಾಲಾಡಿ ಶ್ರೀನಿವಾಸ್ ಸುಮಾರು 1 ಲಕ್ಷ ಮತಗಳ ಅಂತರದಲ್ಲು ಜೈಭೇರಿ ಬಾರಿಸುವುದರ ಮೂಲಕ ಕಾಂಗ್ರೆಸ್‌ ಅಭ್ಯರ್ಥಿಗೆ ಸೋಲುಣಿಸಿದ್ದಾರೆ.

ಕರಾವಳಿಯಲ್ಲಿ ಬಿಜೆಪಿ ಗೆಲ್ಲುವ ಸೀಟೆಷ್ಟು ?

Monday, April 30th, 2018
bjp Candidate

ಮಂಗಳೂರು  : ಭಾರತೀಯ ಜನತಾ ಪಾರ್ಟಿ ವಿಧಾನಸಭಾ ಚುನಾವಣೆಯಲ್ಲಿ ಗೆಲ್ಲುವುದಕ್ಕಿಂತಲೂ ಹೆಚ್ಚು ಚರ್ಚಾ ವಿಚಾರ ಕರಾವಳಿಯಲ್ಲಿ, ಅದರಲ್ಲೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಜೆಪಿ ಗೆಲ್ಲುವ ಸೀಟೆಷ್ಟು ಎಂಬ ಬಗ್ಗೆ ಭಾರೀ ಚರ್ಚೆ ನಡೆದಿದೆ. ಕಳೆದ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾಂಗ್ರೆಸ್ ಏಳು ಸ್ಥಾನ ಗೆದ್ದರೆ, ಬಿಜೆಪಿ ಗೆದ್ದಿರುವುದು ಕೇವಲ ಒಂದೇ. ಅಂದೂ 1300 ಮತಗಳ ಕಡಿಮೆ ಅಂತರದಿಂದ. ಉಡುಪಿಯಲ್ಲಿ ಕೂಡ ಬಿಜೆಪಿ ಗೆದ್ದಿರುವುದು ಒಂದೇ ಸ್ಥಾನ. ಕಾಂಗ್ರೆಸ್ ಮೂರು ಮತ್ತು ಒಬ್ಬ ಪಕ್ಷೇತರ  […]

ಮತದಾನಕ್ಕೆ ಕೆಲವೇ ದಿನ ಮೊದಲು ಮಂಗಳೂರಿನಲ್ಲಿ ಮೋದಿ ಅಬ್ಬರದ ಪ್ರಚಾರ

Wednesday, April 18th, 2018
narendra-modi

ಮಂಗಳೂರು: ರಾಜ್ಯದಲ್ಲಿ ಚುನಾವಣಾ ಕಣ ರಂಗೇರತೊಡಗಿದೆ .ಈಗಾಗಲೇ ರಾಜಕೀಯ ಪಕ್ಷಗಳು ತಮ್ಮ ಕದನ ಕಲಿಗಳನ್ನು ಅಖಾಡಕ್ಕೆ ಇಳಿಸಿವೆ.ರಾಜ್ಯದಾದ್ಯಂತ ಚುನಾವಣಾ ಪ್ರಚಾರ ಭರದಿಂದ ಸಾಗಿದ್ದು ಮುಂಬರುವ ದಿನಗಳಲ್ಲಿ ರಾಜಕೀಯ ಪಕ್ಷಗಳ ಸ್ಟಾರ್ ಪ್ರಚಾರಕರ ಕಲರವ ಮುಗಿಲು ಮುಟ್ಟಲಿದೆ. ಕಾಂಗ್ರೆಸ್ ಅಭ್ಯರ್ಥಿಗಳ ಘೋಷಣೆಗೂ ಮೊದಲೇ ಜನಾಶೀರ್ವಾದ ಯಾತ್ರೆ ಹೆಸರಿನಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ರಾಜ್ಯದಲ್ಲಿ ಪ್ರವಾಸ ಕೈಗೊಂಡು ಚುನಾವಣಾ ಪ್ರಚಾರ ನಡೆಸಿ ತೆರಳಿದ್ದಾರೆ. ಅಂತೆಯೇ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ರಾಜ್ಯದೆಲ್ಲೆಡೆ ಪ್ರವಾಸ ಕೈಗೊಂಡು ಚುನಾವಣಾ ಪ್ರಚಾರ […]

ಪ್ರಧಾನಿ ಮೋದಿ ನನ್ನ ಪ್ರತಿಸ್ಪರ್ಧಿ: ಹುಚ್ಚ ವೆಂಕಟ್

Wednesday, April 11th, 2018
huccha-venkat

ಮಂಗಳೂರು: ಬೆಂಗಳೂರಿನ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದಿಂದ ಈ ಬಾರಿ ಸ್ವತಂತ್ರ ಅಭ್ಯರ್ಥಿಯಾಗಿ ಚುನಾವಣೆಗೆ ಸ್ಪರ್ಧಿಸುತ್ತಿದ್ದು, ಪ್ರಧಾನ ಮಂತ್ರಿಯಾಗೋದು ನನ್ನ ಗುರಿ. ಪ್ರಧಾನಿ ನರೇಂದ್ರ ಮೋದಿ ನನ್ನ ಪ್ರತಿಸ್ಪರ್ಧಿ ಎಂದು ಹುಚ್ಚ ವೆಂಕಟ್ ಹೇಳಿಕೊಂಡಿದ್ದಾರೆ. ಅವರು ಇಂದು ನಗರದ ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದರು. ಮತ ಹಾಕುವಂತೆ ಮನೆ ಮನೆಗೆ ಭೇಟಿ ನೀಡಿ ಪ್ರಚಾರ ಮಾಡಲ್ಲ, ಡ್ರಿಂಕ್ಸ್, ಸೀರೆ ಹಂಚಲ್ಲ ಎಂದರು. ನಾನು ಸ್ಪರ್ಧಿಸುತ್ತಿರುವ ಕ್ಷೇತ್ರದ ಜನತೆಯ ಕಷ್ಟ ಅರಿತುಕೊಂಡು ಏನು ಮಾಡಬೇಕಾಗಿತ್ತು. ಏನು ಮಾಡಬಹುದು ಎಂದು ತಿಳಿದುಕೊಂಡು […]

ಕರಾವಳಿಯಾ ವಿಧಾನಸಭೆ ಚುನಾವಣೆಗೆ ಮೊದಲ ಹಂತದ ಅಭ್ಯರ್ಥಿಗಳ ಆಯ್ಕೆಯನ್ನು ಅಂತಿಮಗೊಳಿಸಿರುವ ಬಿಜೆಪಿ

Tuesday, April 10th, 2018
srinivas-shetty

ಮಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಗೆ ಮೊದಲ ಹಂತದ ಅಭ್ಯರ್ಥಿಗಳ ಆಯ್ಕೆಯನ್ನು ಅಂತಿಮಗೊಳಿಸಿರುವ ಬಿಜೆಪಿ, 72 ಕ್ಷೇತ್ರಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಕರಾವಳಿ ಜಿಲ್ಲೆಯ ಸುಳ್ಯ ಕ್ಷೇತ್ರದ ಎಸ್‌. ಅಂಗಾರ, ಕಾರ್ಕಳದ ಸುನೀಲ್‌ಕುಮಾರ್‌, ಕುಂದಾಪುರಕ್ಕೆ ಹಾಲಾಡಿ ಶ್ರೀನಿವಾಸ್‌ ಶೆಟ್ಟಿ ಅವರಿಗೆ ಮಾತ್ರ ಮೊದಲ ಪಟ್ಟಿಯಲ್ಲಿ ಅವಕಾಶ ನೀಡಲಾಗಿದೆ. ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಒಟ್ಟು 13 ವಿಧಾನಸಭಾ ಕ್ಷೇತ್ರಗಳ ಪೈಕಿ, ಸದ್ಯಕ್ಕೆ ಕಾರ್ಕಳ ಮತ್ತು ಸುಳ್ಯ ಕ್ಷೇತ್ರಗಳಲ್ಲಿ ಮಾತ್ರ ಬಿಜೆಪಿ ಶಾಸಕರಿದ್ದಾರೆ. ಇನ್ನು ಹಾಲಾಡಿ ಪಕ್ಷೇತರರಾಗಿ ಆಯ್ಕೆಗೊಂಡು […]

ದೇಶದ ಸಂಸ್ಕೃತಿ ಗೊತ್ತಿಲ್ಲದವರು ಮಾತ್ರ ಅಂತಹ ಹೇಳಿಕೆ ನೀಡ್ತಾರೆ: ಕಲ್ಲಡ್ಕ ಭಟ್ ರಿಗೆ ಖಾದರ್ ತಿರುಗೇಟು

Monday, April 9th, 2018
prabhakar

ಮಂಗಳೂರು: ಕರಾವಳಿ ಬಹುಸಂಸ್ಕೃತಿಯುಳ್ಳ ಪ್ರದೇಶ. ಆದರೆ ದೇಶದ ಸಂಸ್ಕೃತಿ ಗೊತ್ತಿಲ್ಲದವರು ಮಾತ್ರ ಅಂತಹ ಹೇಳಿಕೆ ನೀಡ್ತಾರೆ ಎಂದು ಕಲ್ಲಡ್ಕ ಪ್ರಭಾಕರ್ ಭಟ್ ಅವರಿಗೆ ಸಚಿವ ಯು.ಟಿ. ಖಾದರ್ ತಿರುಗೇಟು ನೀಡಿದ್ದಾರೆ. ಸಚಿವ ಯು.ಟಿ. ಖಾದರ್ ಅವರು ಹೋದ ದೇವಾಲಯಗಳಿಗೆಲ್ಲ ಮತ್ತೆ ಬ್ರಹ್ಮಕಲಶವಾಗಬೇಕು ಎಂದು ಕಲ್ಲಡ್ಕ ಪ್ರಭಾಕರ್ ಭಟ್ ನೀಡಿದ್ದ ಹೇಳಿಕೆಯ ಬಗ್ಗೆ ಪ್ರತಿಕ್ರಿಯೆ ನೀಡಿದ ಖಾದರ್, ಕರಾವಳಿ ಬಹುಸಂಸ್ಕೃತಿಯುಳ್ಳ ಪ್ರದೇಶ. ನಾನು ಯಾವ ಕ್ಷೇತ್ರಗಳಿಗೆ ಹೋಗಬೇಕು, ಬೇಡ ಎನ್ನುವುದನ್ನು ಕ್ಷೇತ್ರದ ಜನತೆ, ಸಮಾಜದ ಮುಖಂಡರು ಆ ಬಗ್ಗೆ […]

ಬೆಳಿಗ್ಗೆ ಕಾಂಗ್ರೆಸ್, ಮಧ್ಯಾಹ್ನ ಬಿಜೆಪಿ, ಸಂಜೆ ಮತ್ತೆ ಕಾಂಗ್ರೆಸ್ ಗೆ ವಾಪಸ್!

Monday, April 9th, 2018
congress

ಮಂಗಳೂರು: ಹೀಗೊಂದು ಪಕ್ಷಾಂತರ ನಾಟಕಕ್ಕೆ ಕರಾವಳಿ ಕರ್ನಾಟಕದ ರಾಜಕೀಯ ಶನಿವಾರ ಸಾಕ್ಷಿಯಾಗಿತ್ತು. ಹೀಗೆ ಗಂಟೆಗೊಂದು ಪಕ್ಷ ಬದಲಿಸಿದವರು ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ಸುಂದರ ದೇವಿನಗರ. ಭಾನುವಾರ ಬೆಳಿಗ್ಗೆ ಸುಂದರ ದೇವಿನಗರ ಕಾಂಗ್ರೆಸ್ ಗೆ ರಾಜೀನಾಮೆ ನೀಡಿದ್ದರು. ತದ ನಂತರ ಅವರು ಸಮಾರಂಭವೊಂದರಲ್ಲಿ ಬಿಜೆಪಿಗೆ ಸೇರ್ಪಡೆಯಾಗಿದ್ದರು. ಬಂಟ್ವಾಳದಲ್ಲಿ ಕಾಂಗ್ರೆಸ್ ಪ್ರಭಾವಿ ನಾಯಕ ರಮಾನಾಥ ರೈ ವಿರುದ್ಧ ಕಣಕ್ಕಿಳಿಯಲಿರುವ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರನ್ನು ಬಿಜೆಪಿ ಧ್ವಜ ನೀಡಿ ಪಕ್ಷಕ್ಕೂ ಬರ ಮಾಡಿಕೊಂಡಿದ್ದರು. ಆದರೆ ಮತ್ತೆ ನಡೆದ ಮಿಂಚಿನ […]

ಕರಾವಳಿಯಲ್ಲಿ ಕುಡಿಯುವ ನೀರಿಗಾಗಿ ಹಾಹಾಕಾರ.. ನಿವಾಸಿಗಳ ಆಕ್ರೋಶ

Wednesday, March 28th, 2018
water-problem

ಮಂಗಳೂರು: ಸಮರ್ಪಕವಾಗಿ ಕುಡಿಯುವ ನೀರು ಸರಬರಾಜು ಮಾಡುವಂತೆ ಆಗ್ರಹಿಸಿ ಅಚಾರಿ ಜೋರ, ದೊಡ್ಡಳಿಕೆ ಹಾಗೂ ಎಮರಾಳು ಬಡಾವಣೆಯ ನಾಗರಿಕರು ಖಾಲಿ ಕೊಡ ಹಿಡಿದು ಕುಕ್ಕೆಪದವು ಗ್ರಾಮ ಪಂಚಾಯಿತಿ ಎದುರು ಧರಣಿ ನಡೆಸಿದರು. ಧರಣಿ ನಿರತರು ಮಾತನಾಡಿ, ಈ ಹಿಂದೆ ಕುಡಿಯವ ನೀರಿಗಾಗಿ ಪ್ರತಿಭಟನೆ ನಡೆಸಿದ್ದರಿಂದ ನಮ್ಮ ಪ್ರದೇಶಗಳಿಗೆ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲಾಗಿತ್ತು. ಆದರೆ ಈಗ ಎಂಟು ದಿನಗಳಿಂದ ಟ್ಯಾಂಕರ್ ನೀರು ಇಲ್ಲ. ನೀರಿಗಾಗಿ ಹಾಹಾಕಾರ ಎದ್ದಿದ್ದು, ಮತ್ತೆ ಅತಂತ್ರ ಸ್ಥಿತಿ ಎದುರಾಗಿದೆ ಎಂದು ಅಳಲು […]

ಕರಾವಳಿಗೆ ರಾಹುಲ್‌ ಗಾಂಧಿ ಆಗಮನ: ಸಿಎಂ ಸೇರಿ ಮುಖಂಡರಿಂದ ಅದ್ದೂರಿ ಸ್ವಾಗತ

Tuesday, March 20th, 2018
siddaramaih

ಉಡುಪಿ: ಎರಡು ದಿನಗಳ ಕಾಲ ರಾಜ್ಯ ಪ್ರವಾಸ ಕೈಗೊಂಡಿರುವ ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ಮಂಗಳೂರಿನ ವಿಮಾನ ನಿಲ್ದಾಣಕ್ಕೆ ಬಂದಿಳಿದು, ಅಲ್ಲಿಂದ ಹೆಲಿಕಾಪ್ಟರ್‌ನಲ್ಲಿ ಉಡುಪಿಗೆ ಆಗಮಿಸಿದ್ದಾರೆ. ಮಂಗಳೂರು ವಿಮಾನ ನಿಲ್ದಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಲ್ಲಿಕಾರ್ಜುನ ಖರ್ಗೆ, ಡಾ. ಜಿ.ಪರಮೇಶ್ವರ್, ಕೆ.ಸಿ.ವೇಣುಗೋಪಾಲ್, ರಮಾನಾಥ ರೈ ಮತ್ತಿತರರು ರಾಹುಲ್‌ ಗಾಂಧಿ ಅವರನ್ನು ಸ್ವಾಗತಿಸಿದರು. ಅಲ್ಲಿಂದ ಮತ್ತೆ ಹೆಲಿಕಾಪ್ಟರ್‌ನಲ್ಲಿ ಉಡುಪಿಗೆ ತೆರಳಿದ ರಾಹುಲ್, ಎರ್ಮಾಳಿನ ಹೆಲಿಪ್ಯಾಡ್‌ನಲ್ಲಿ ಬಂದಿಳಿದರು. ಈ ವೇಳೆ ಹೆಲಿಪ್ಯಾಡ್‌ನಲ್ಲಿ ರಾಹುಲ್‌ ಗಾಂಧಿ ಅವರನ್ನು ಮಾಜಿ ಸಿಎಂ ವೀರಪ್ಪ ಮೊಯ್ಲಿ, […]