Blog Archive

‘ಕಲ್ಲಡ್ಕ ಕೆಟಿ’ಯಿಂದಲೇ ರಾಹುಲ್‌ ಯಾತ್ರೆ ಶುರು

Monday, February 19th, 2018
rahul-gandhi

ಮಂಗಳೂರು: ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ಅವರ ಮೂರನೇ ಹಂತದ ಜನಾಶೀರ್ವಾದ ಯಾತ್ರೆ ಕರಾವಳಿ ಭಾಗದಲ್ಲಿ ಮಾರ್ಚ್‌ ಮೊದಲ ವಾರದಲ್ಲಿ ಆರಂಭವಾಗಲಿದ್ದು, ಬಂಟ್ವಾಳ ವಿಧಾನಸಭಾ ಕ್ಷೇತ್ರದ ‘ಕಲ್ಲಡ್ಕ ಕೆಟಿ’ಯಿಂದಲೇ ಶುರುವಾಗುವುದು ಬಹುತೇಕ ನಿಶ್ಚಿತವಾಗಿದೆ. ಈಗಾಗಲೇ ಹೈದರಾಬಾದ್ ಕರ್ನಾ ಟಕದಲ್ಲಿ ಜನಾಶೀರ್ವಾದ ಯಾತ್ರೆಯ ಯಶಸ್ಸಿನಿಂದ ಬೀಗುತ್ತಿರುವ ರಾಜ್ಯ ಕಾಂಗ್ರೆಸ್‌ ನಾಯಕರು, ಕರಾವಳಿ ಭಾಗದಲ್ಲಿಯೂ ಅದೇ ರೀತಿಯ ಯಾತ್ರೆ ಆಯೋಜಿಸಲು ಭರದ ಸಿದ್ಧತೆ ನಡೆಸಿದ್ದಾರೆ. ಇತ್ತೀಚಿನ ದಿನಗಳಲ್ಲಿ ಹೆಚ್ಚು ಗಮನ ಸೆಳೆದಿದ್ದ ಕಲ್ಲಡ್ಕದಿಂದಲೇ ರಾಹುಲ್‌ ಯಾತ್ರೆ ಆರಂಭಿಸಲು ಕಾಂಗ್ರೆಸ್‌ ನಾಯಕರು […]

ಕರಾವಳಿಯಲ್ಲಿ ರಂಗೇರಿದ ಚುನಾವಣಾ ಕದನ: ಕೈ-ಕಮಲದಿಂದ ಭರ್ಜರಿ ತಯಾರಿ

Saturday, February 17th, 2018
election

ಮಂಗಳೂರು: ಕರಾವಳಿಯಲ್ಲಿ ವಿಧಾನಸಭಾ ಚುನಾವಣೆ ರಂಗೇರುತ್ತಿದೆ. ಒಂದು ಕಡೆ ಪಕ್ಷೇತರ ಅಭ್ಯರ್ಥಿಗಳು ವೈಯಕ್ತಿಕವಾಗಿ ಈಗಾಗಲೇ ಪ್ರಚಾರದಲ್ಲಿ ತೊಡಗಿದರೆ, ಮತ್ತೊಂದಡೆ ಬಿಜೆಪಿ ಮತ್ತು ಕಾಂಗ್ರೆಸ್‌‌ ಪಕ್ಷಗಳು ತಮ್ಮ ರಾಷ್ಟ್ರಮಟ್ಟದ ನಾಯಕರನ್ನು ಇಲ್ಲಿಗೆ ಬರಮಾಡಿಕೊಳ್ಳುತ್ತಿದ್ದಾರೆ. ಬಿಜೆಪಿ ಪರವಾಗಿ ಈಗಾಗಲೇ ಪ್ರಧಾನಿ ನರೇಂದ್ರ ಮೋದಿ ಎರಡು ಬಾರಿ ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಿದರೆ, ಇದೀಗ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್‌‌‌‌ ಶಾ ಅವರ ಸರದಿಯಾಗಿದೆ. ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಲಿರುವ ಅಮಿತ್‌‌‌ ಶಾ, ಫೆ. 19ರಿಂದ ಮೂರು ದಿನಗಳ ಕಾಲ ಕರಾವಳಿ […]

ಕರಾವಳಿಯ ಶಿವನ ದೇವಸ್ಥಾನಗಳಲ್ಲಿ ಶಿವರಾಧನೆ

Wednesday, February 14th, 2018
shivrathri

ಮಂಗಳೂರು: ಮಹಾಶಿವರಾತ್ರಿ ಪ್ರಯುಕ್ತ ಕರಾವಳಿಯ ಶಿವನ ದೇವಸ್ಥಾನಗಳಲ್ಲಿ ಶಿವರಾಧನೆ ಶ್ರದ್ಧಾ-ಭಕ್ತಿಯಿಂದ ನಡೆಯುತ್ತಿದೆ. ಜಿಲ್ಲೆಯ ಬಹುತೇಕ ಶಿವನ ದೇವಸ್ಥಾನಗಳಲ್ಲಿ ಜಾತ್ರೆ, ರುದ್ರಾಭಿಷೇಕ, ವಿಶೇಷ ಪೂಜೆಯ ಸಂಭ್ರಮ ನಡೆಯುತ್ತಿದೆ. ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಶಿವರಾತ್ರಿ ಮಹೋತ್ಸವ, ಬೆಳ್ಳಿ ರಥೋತ್ಸವ, ಮಹಾರುದ್ರಾಭಿಷೇಕ, ವಿಷ್ಣು ಬಲಿ ಉತ್ಸವ, ರಥೋತ್ಸವ, ಶಿವಬಲಿ, ಜಾಗರಣೆ ಬಲಿ, ಕಟ್ಟೆಪೂಜೆ, ಕೆರೆದೀಪ, ಮಂಟಪ ಪೂಜೆ ನೆರವೇರಿದೆ. ಶ್ರೀ ಕ್ಷೇತ್ರ ಕದ್ರಿ ಮಂಜುನಾಥ ದೇವಸ್ಥಾನದಲ್ಲಿ ವಿಶೇಷವಾಗಿ ರುದ್ರಾಭಿಷೇಕ, ಶಿವಪೂಜೆ, ರಾತ್ರಿ ರಂಗಪೂಜೆ, ಬಂಡಿ ಉತ್ಸವ, ಬೆಳ್ಳಿ ರಥೋತ್ಸವ, ಇದೇ […]

ಅಮಿತ್ ಶಾ ಕರಾವಳಿ ಭೇಟಿ… ಸಚಿವ ಯು ಟಿ ಖಾದರ್‌ ಹೇಳಿದ್ದೇನು?

Friday, February 9th, 2018
amit-shah

ಮಂಗಳೂರು: ಬಿಜೆಪಿ ರಾಷ್ಟ್ರಾಧ್ಯಕ್ಷರು ಕರಾವಳಿಗೆ ಭೇಟಿ ನೀಡುವುದು ಸಂತೋಷದ ವಿಷಯ. ಇಲ್ಲಿ ಕಾಂಗ್ರೆಸ್ ಎಷ್ಟು ಬಲಿಷ್ಟವಾಗಿದೆ ಎಂಬುದನ್ನು ಅವರೇ ಕಣ್ಣಾರೆ ನೋಡಿ ಹೋಗಲಿ ಎಂದು ಸಚಿವ ಯು.ಟಿ. ಖಾದರ್ ಅವರು ಅಮಿತ್‌ ಶಾ ಕರಾವಳಿ ಪ್ರವಾಸ ಕುರಿತು ವ್ಯಂಗ್ಯವಾಡಿದ್ದಾರೆ. ಮಂಗಳೂರಿನಲ್ಲಿ ಮಾತನಾಡಿದ ಅವರು, ಅಮಿತ್ ಶಾ ಕರಾವಳಿಗೆ ಬಂದು ಮತಪ್ರಚಾರ ಮಾಡಿಹೋಗಲಿ. ಆದರೆ, ಜಿಲ್ಲೆಯಲ್ಲಿ ಎಲ್ಲಾ ಧರ್ಮದವರು ಪ್ರೀತಿ, ವಿಶ್ವಾಸ, ಸಹೋದರತ್ವದಿಂದ ಬಾಳುತ್ತಿದ್ದೇವೆ. ಅದನ್ನು‌ ಒಡೆಯುವ ಕೆಲಸ ಮಾಡದಿರಲಿ ಎಂಬುದೇ ನನ್ನ ಕಳಕಳಿಯ ಮನವಿ ಎಂದರು. ಇಲ್ಲಿ […]

ಸಹ್ಯಾದ್ರಿ ಸಂಚಯದಿಂದ ಅಭ್ಯರ್ಥಿಗಳು ಕಣಕ್ಕೆ: ದಿನೇಶ್‌ ಹೊಳ್ಳ

Wednesday, January 24th, 2018
Nethravathi

ಮಂಗಳೂರು: ಕರಾವಳಿಗರ ಜೀವನದಿ ನೇತ್ರಾವತಿಯನ್ನು ಬರಿದುಗೊಳಿಸುವ ಎತ್ತಿನಹೊಳೆಯಂತಹ ಮಾರಕ ಯೋಜನೆಗಳನ್ನು ಭವಿಷ್ಯದಲ್ಲಿ ಜಾರಿಗೊಳಿಸುವ ಜನಪ್ರತಿನಿಧಿಗಳಿಗೆ ಪಾಠ ಕಲಿಸಬೇಕು. ಅದಕ್ಕಾಗಿ ಜನಪ್ರತಿನಿಧಿಗಳಿಗೆ ತಕ್ಕ ಪಾಠ ಕಲಿಸಲು ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಸಹ್ಯಾದ್ರಿ ಸಂಚಯ ಮುಂದಾಗಿದೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಂಚಯದ ಸಂಚಾಲಕ ದಿನೇಶ್ ಹೊಳ್ಳ, ಸೂಕ್ತ ಅಭ್ಯರ್ಥಿ ದೊರೆಯದಿದ್ದಲ್ಲಿ ನೋಟಾ ಅಭಿಯಾನದ ಮೂಲಕ ಪ್ರತಿರೋಧ ಒಡ್ಡಲಾಗುವುದು. ನಮ್ಮ ಅಭಿಯಾನದ ಫಲವಾಗಿ ಕಳೆದ ಸಂಸತ್ ಚುನಾವಣೆಯಲ್ಲಿ 7800 ನೋಟಾ ಮತಗಳು ಚಲಾವಣೆಯಾಗಿದ್ದವು. ಕಳೆದ ಪಂಚಾಯತ್ ಚುನಾವಣೆಯಲ್ಲಿ 28 […]

ಆಳ ಸಮುದ್ರದಲ್ಲಿ ಅಪಾಯದಲ್ಲಿದ್ದ 10 ಮೀನುಗಾರರ ರಕ್ಷಣೆ

Tuesday, January 23rd, 2018
mangaluru

ಮಂಗಳೂರು: ಆಳ ಸಮುದ್ರದಲ್ಲಿ ಅಪಾಯಕ್ಕೆ ಸಿಲುಕಿದ್ದ ಕೇರಳದ ಕಣ್ಣೂರಿನ 10 ಮಂದಿ ಮೀನುಗಾರರನ್ನು ಕರಾವಳಿ ತಟ ರಕ್ಷಣಾ ಪಡೆ ಭಾನುವಾರ ತಡರಾತ್ರಿ ರಕ್ಷಿಸಿದೆ. ಅರಬ್ಬಿ ಸಮುದ್ರದಲ್ಲಿ ಮಲ್ಪೆಯ ಪಶ್ಚಿಮಕ್ಕೆ 100 ನಾಟಿಕಲ್ ಮೈಲ್ಸ್ ದೂರದಲ್ಲಿ ಈ ಘಟನೆ ನಡೆದಿದೆ. ಆಳ ಸಮುದ್ರಕ್ಕೆ ಮೀನುಗಾರಿಕೆಗೆ ತೆರಳಿದ್ದ ದೋಣಿಯಲ್ಲಿ ಯಾಂತ್ರಿಕ ತೊಂದರೆ ಕಾಣಿಸಿಕೊಂಡು ದೋಣಿಯೊಳಕ್ಕೆ ನೀರು ನುಗ್ಗಲಾರಂಭಿಸಿತ್ತು. ಈ ಹಿನ್ನೆಲೆಯಲ್ಲಿ ದೋಣಿಯಲ್ಲಿದ್ದ 10 ಮಂದಿ ಮೀನುಗಾರರು ಅಪಾಯಕ್ಕೆ ಸಿಲುಕಿದ್ದರು. ಈ ಕುರಿತು ಭಾರತೀಯ ತಟ ರಕ್ಷಣಾ ಪಡೆಯ ಮಂಗಳೂರು ಕೇಂದ್ರಕ್ಕೆ […]

ಕರಾವಳಿಯಲ್ಲಿ ಪ್ರಪ್ರಥಮ ಲಿವರ್ ಕಸಿ.. ಎ ಜೆ ಆಸ್ಪತ್ರೆ ಸಾಧನೆ

Tuesday, January 23rd, 2018
AJ-hospital

ಮಂಗಳೂರು: ಬೆಂಗಳೂರಿನ ಬಿಜಿಎಸ್ ಗ್ಲೆನಿಗಲ್ಸ್ ಗ್ಲೋಬಲ್ ಹಾಸ್ಪಿಟಲ್ಸ್‌ ಸಹಭಾಗಿತ್ವದಲ್ಲಿ ನಗರದ ಕುಂಟಿಕಾನದಲ್ಲಿರುವ ಎ.ಜೆ. ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದಲ್ಲಿ ಮೃತ ದಾನಿಯಿಂದ (ಮೆದುಳು ನಿಷ್ಕ್ರಿಯಗೊಂಡ) ಪಡೆದ ಲಿವರ್‌ನ್ನು (ಯಕೃತ್ತು) ಬೆಂಗಳೂರಿನ ಸಾಫ್ಟ್‌‌ವೇರ್ ಉದ್ಯೋಗಿಯೊಬ್ಬರಿಗೆ ಯಶಸ್ವಿಯಾಗಿ ಕಸಿ ಮಾಡಲಾಗಿದೆ. ಇದೇ ಮೊದಲ ಬಾರಿ ಮಂಗಳೂರಿನಲ್ಲಿ ಕೈಗೊಂಡ ಈ ಪ್ರಯತ್ನದಲ್ಲಿ ಎ. ಜೆ. ಆಸ್ಪತ್ರೆ ಯಶಸ್ವಿಯಾಗಿದೆ. ಎ. ಜೆ. ವೈದ್ಯರ ತಂಡ ಮತ್ತು ಗ್ಲೆನಿಗಲ್ಸ್ ಗ್ಲೋಬಲ್ ಹಾಸ್ಪಿಟಲ್ಸ್‌ನ ಕನ್ಸಲ್ಟೆಂಟ್ ಹೆಪಟೋಬಿಲಿಯರಿ ಮತ್ತು ಮಲ್ಟಿ ಆರ್ಗನ್ ಟ್ರಾನ್ಸ್ಪ್ಲಾಂಟ್ ಶಸ್ತ್ರಚಿಕಿತ್ಸಕರಾದ ಡಾ. ರಾಘವೇಂದ್ರ […]

ಎಡಪಕ್ಷಗಳ ಜತೆ ಸೀಟು ಹೊಂದಾಣಿಕೆ ಜೆಡಿಎಸ್ ಸಿದ್ಧ: ದೇವೇಗೌಡ

Monday, January 22nd, 2018
JDS-Devegowda

ಮಂಗಳೂರು: ಒಂದು ವೇಳೆ ಸಿಪಿಎಂ ಮತ್ತು ಸಿಪಿಐ ಪಕ್ಷಗಳು ಮೈತ್ರಿಗೆ ಮುಂದಾದರೆ ಅವರಿಗೆ ಕೆಲ ಸ್ಥಾನಗಳನ್ನು ಬಿಟ್ಟುಕೊಡಲು ಜೆಡಿಎಸ್ ಸಿದ್ಧವಿದೆ ಎಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಹೇಳಿದರು. ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂಬರುವ ಚುನಾವಣೆಯಲ್ಲಿ ರಾಜ್ಯದ ಎಲ್ಲಾ 224 ಕ್ಷೇತ್ರಗಳಲ್ಲೂ ಜೆಡಿಎಸ್ ಸ್ಪರ್ಧೆ ಮಾಡಲಿದೆ. ಫೆಬ್ರವರಿ ಮೂರನೇ ವಾರದಲ್ಲಿ ಜೆಡಿಎಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಗುವುದು. ಒಂದು ವೇಳೆ ವಿಧಾನಸಭೆಯ ಚುನಾವಣೆಯ ನಂತರ ಅತಂತ್ರ ಸ್ಥಿತಿ ನಿರ್ಮಾಣವಾದರೆ, ಯಾವುದೇ ಪಕ್ಷಗಳ ಜತೆ […]

ಕೋಮು ಸೌಹಾರ್ದ ಕಾಪಾಡಿ: ಡಾ. ವೀರೇಂದ್ರ ಹೆಗ್ಗಡೆ ಮನವಿ

Tuesday, January 9th, 2018
virendra-hegde

ಬೆಳ್ತಂಗಡಿ: ಕರಾವಳಿಯಲ್ಲಿ ಕೋಮು ಸೌಹಾರ್ದ, ಶಾಂತಿ ಕಾಪಾಡುವ ಅಗತ್ಯವಿದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ ಡಿ. ವೀರೇಂದ್ರ ಹೆಗ್ಗಡೆ ಜನತೆಯಲ್ಲಿ ಮನವಿ ಮಾಡಿದ್ದಾರೆ. ಈ ಬಗ್ಗೆ ಹೇಳಿಕೆ ನೀಡಿರುವ ಅವರು, ಕರಾವಳಿಯಲ್ಲಿ ಕಳೆದ ಸ್ವಲ್ಪ ಸಮಯದಿಂದ ಅವಿರತವಾಗಿ ಅಶಾಂತಿಯ ವಾತಾವರಣ ಕಂಡುಬರುತ್ತಿದೆ. ಅನೇಕ ಸಾವು-ನೋವುಗಳು ಸಂಭವಿಸಿವೆ. ಎರಡೂ ಧರ್ಮಗಳ ವ್ಯಕ್ತಿಗಳು ಬಲಿಯಾಗುತ್ತಿದ್ದಾರೆ. ಘಟನಾವಳಿಗಳನ್ನು ಸೂಕ್ಷ್ಮವಾಗಿ ಪರಿಶೀಲಿಸಿದರೆ, ಒಂದು ಧರ್ಮದ ವ್ಯಕ್ತಿಯ ಕೊಲೆಯಾದ ಬಳಿಕ ಪ್ರತೀಕಾರವೆಂಬಂತೆ ಇನ್ನೊಂದು ಧರ್ಮದ ವ್ಯಕ್ತಿಯ ಹತ್ಯೆ ನಡೆಯುವುದು ಕಂಡುಬರುತ್ತದೆ. ಕರಾವಳಿ ಭಾಗದ ಜನರು […]

ನಾಳೆಯಿಂದ ಎರಡು ದಿನ ಕರಾವಳಿಯಲ್ಲಿ ಸಿಎಂ

Saturday, January 6th, 2018
siddaramiah

ಮಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಜ.7ರಿಂದ 2 ದಿನ ದ. ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಳ್ಳಲಿದ್ದು, 200ಕ್ಕೂ ಹೆಚ್ಚು ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಮುಂಬರುವ ವಿಧಾನಸಭೆ ಚುನಾವಣೆ ದೃಷ್ಟಿಯಿಂದ ಈ ಭಾಗದಲ್ಲಿ ಮುಖ್ಯಮಂತ್ರಿಗಳ ಮಹತ್ವದ ಪ್ರವಾಸ ಇದು. ದಕ್ಷಿಣ ಕನ್ನಡ ಕಾರ್ಯಕ್ರಮ: ಪುತ್ತೂರು, ಬಂಟ್ವಾಳ ಹಾಗೂ ಮೂಡ ಬಿದಿರೆ ವಿ.ಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಸುಮಾರು 200 ಕೋ. ರೂ. ವೆಚ್ಚದ ಕಾಮಗಾರಿ ಉದ್ಘಾಟನೆ, ಶಿಲಾನ್ಯಾಸ ಮಾಡಲಿದ್ದಾರೆ. ಪುತ್ತೂರು ವಿ. ಸಭಾ […]