ಸಮುದ್ರ ಮದ್ಯದಲ್ಲಿ ಸಿಲಿಂಡರ್‌ ಸ್ಫೋಟ, ದೋಣಿಯಲ್ಲಿದ್ದ 11 ಮೀನುಗಾರರ ರಕ್ಷಣೆ

Sunday, January 10th, 2021
cylinder blast

ಮಂಗಳೂರು: ಮೀನುಗಾರಿಕೆಗೆಂದು ತೆರಳಿದ್ದ ತಮಿಳುನಾಡು ಮೂಲದ ಈ ಮೀನುಗಾರಿಕಾ ದೋಣಿಯೊಂದರಲ್ಲಿ ಅರಬ್ಬಿ ಸಮುದ್ರ  ಮದ್ಯದಲ್ಲಿ ಸಿಲಿಂಡರ್‌ ಸ್ಫೋಟಗೊಂಡಿದ್ದು, ತಕ್ಷಣ ಬೋಟ್ನಲ್ಲಿದ್ದ 11 ಮೀನುಗಾರರನ್ನು ಕರಾವಳಿ ರಕ್ಷಣಾ ಪಡೆಯವರು  ರಕ್ಷಿಸಿದ್ದಾರೆ. ಮಂಗಳೂರಿನಿಂದ ಸುಮಾರು 140 ನಾಟಿಕಲ್ ಮೈಲಿ ದೂರದಲ್ಲಿ ಮೀನುಗಾರಿಕೆಯಲ್ಲಿ ತೊಡಗಿತ್ತು. ಈ ಸಂದರ್ಭ ಬೋಟ್ನಲ್ಲಿದ್ದ ಗ್ಯಾಸ್ ಸಿಲಿಂಡರ್ ಏಕಾಏಕಿ ಸ್ಫೋಟಗೊಂಡ ಪರಿಣಾಮ ದೋಣಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಗಾಯಗೊಂಡಿರುವ ಓರ್ವ ಮೀನುಗಾರ ಹಾಗೂ ಇತರ ಮೀನುಗಾರರನ್ನು ನವಮಂಗಳೂರು ಬಂದರಿಗೆ ಕರೆತರಲಾಗಿದೆ. ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ನಗರದ ಜಿಲ್ಲಾ ವೆನ್ಲಾಕ್ ಆಸ್ಪತ್ರೆಗೆ […]

ಕರಾವಳಿ ರಕ್ಷಣಾ ಪಡೆಯ ವಾಯುನೆಲೆ ಆರಂಭ

Monday, September 12th, 2016
vayunele

ಮಂಗಳೂರು: ಕರಾವಳಿ ರಕ್ಷಣಾ ಪಡೆಯ ವಾಯುನೆಲೆ(ಏರ್ ಎನ್‍ಕ್ಲೇವ್)ಯನ್ನು ಕೋಸ್ಟ್‌‌ಗಾರ್ಡ್ ಮಹಾನಿರ್ದೇಶಕ ರಾಜೇಂದ್ರ ಸಿಂಗ್ ಬಜ್ಪೆಯಲ್ಲಿ ಉದ್ಘಾಟಿಸಿದರು. ಬಜ್ಪೆಯ ಹಳೆ ವಿಮಾನ ನಿಲ್ದಾಣದಲ್ಲಿ ಸುಮಾರು 15 ಎಕರೆ ಜಾಗದಲ್ಲಿ ಈ ವಾಯುನೆಲೆ ನಿರ್ಮಿಸಲಾಗಿದೆ. ಈ ವಾಯುನೆಲೆಯ ಮೊದಲ ಕಮಾಂಡಿಂಗ್ ಅಧಿಕಾರಿಯಾಗಿ ಕಮಾಂಡೆಂಟ್ ಪಿ.ಕೆ. ಜಸ್ವಾಲ್‌‌ ಅವರನ್ನು ನೇಮಿಸಲಾಗಿದೆ. ಈ ವೇಳೆ ರಾಜೇಂದ್ರ ಸಿಂಗ್, ಕೋಸ್ಟ್ ಗಾರ್ಡ್ ಪತ್ನಿಯರ ಕಲ್ಯಾಣ ಸಂಘದ ಅಧ್ಯಕ್ಷೆ ಉರ್ಮಿಳಾ ಸಿಂಗ್, ಹೆಚ್ಚುವರಿ ಮಹಾನಿರ್ದೇಶಕ ಕೆ.ನಟರಾಜನ್ ಉಪಸ್ಥಿತರಿದ್ದರು. ಮಂಗಳೂರು ವಾಯುನೆಲೆಯ ಮೂಲಕ ವಿವಿಧ ತಟರಕ್ಷಣಾ ಸಂಬಂಧಿ […]