ಖ್ಯಾತ ನಟ ಇರ್ಫಾನ್ ಖಾನ್ (54) ನಿಧನ

Wednesday, April 29th, 2020
irfan-khan

ಮುಂಬೈ :  ಭಾರತೀಯ ಚಿತ್ರರಂಗದ ಖ್ಯಾತ ನಟ ಇರ್ಫಾನ್ ಖಾನ್ (54) ಕರುಳಿನ ಸೋಂಕು ಕಾಣಿಸಿಕೊಂಡು ಮುಂಬೈ ಆಸ್ಪತ್ರೆಗೆ ದಾಖಲಾಗಿದ್ದು ಚಿಕಿತ್ಸೆ  ಫಲಕಾರಿಯಾಗದೆ ಏಪ್ರಿಲ್ 29, 2020 ರಂದು ಬುಧವಾರ ಬೆಳಿಗ್ಗೆ ನಿಧನರಾಗಿದ್ದಾರೆ. ಕೊಲೊನ್ ಇನ್‌ಫೆಕ್ಷನ್‌(ಕರುಳಿನ ಸೋಂಕು)ನಿಂದಾಗಿ ಕೋಕಿಲಬೆನ್‌ ಆಸ್ಪತ್ರೆಗೆ ದಾಖಲಾಗಿದ್ದ ಇರ್ಫಾನ್‌ ತುರ್ತು ನಿಗಾ ಘಟಕ (ಐಸಿಯು)ದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಮೂರು ದಿನಗಳ ಹಿಂದಷ್ಟೇ ಜೈಪುರದಲ್ಲಿ ಇರ್ಫಾನ್‌ ತಾಯಿ ಸಯೀದಾ ಬೇಗಂ (95) ನಿಧನರಾಗಿದ್ದರು. ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಅವರು ಅಂತ್ಯಕ್ರಿಯೆಗೆ ಹೋಗಿರಲಿಲ್ಲ. ಈ ವಿಚಾರದಿಂದ ಇರ್ಫಾನ್ ಬಹಳಷ್ಟು ನೊಂದಿದ್ದರು. […]