Blog Archive

ಕರ್ನಾಟಕದಲ್ಲಿ ಪ್ರಧಾನಿ ಮೋದಿ ಅಲೆ ಇಲ್ಲ: ಸಿದ್ದರಾಮಯ್ಯ

Monday, March 5th, 2018
narendra-modi

ಬೆಂಗಳೂರು: ರಾಜ್ಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಅಲೆ ಇಲ್ಲ ಹಾಗೂ ತ್ರಿಪುರಾ ಚುನಾವಣಾ ಫಲಿತಾಂಶ ಇಲ್ಲಿ ಪರಿಣಾಮ ಬೀರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಒಂದು ವೇಳೆ ಕೇಸರಿ ಪಕ್ಷ ರಾಜ್ಯದ ಚುನಾವಣೆಯಲ್ಲಿ ಜಯಸಿದ್ದೇ ಆದರೆ, ಅಕ್ರಮ ಭೂ ಡಿನೋಟಿಫಿಕೇಷನ್ ಹಗರಣದಲ್ಲಿ ಜೈಲು ಶಿಕ್ಷೆ ಅನುಭವಿಸಿದ್ದ ಬಿ.ಎಸ್. ಯಡಿಯೂರಪ್ಪ ಅವರು ಸ್ಥಿರ ಮತ್ತು ಭ್ರಷ್ಟಾಚಾರ ಮುಕ್ತ ಸರ್ಕಾರ ನೀಡುವ ಬಗ್ಗೆ ಜನರಿಗೆ ಹೇಗೆ ಮನವರಿಕೆ ಮಾಡಿಕೊಡುತ್ತಾರೆ ಎಂಬ ಬಗ್ಗೆ ಬಿಜೆಪಿ ಚಿಂತಿಸಬೇಕಾಗಿದೆ ಎಂದು ಸಿಎಂ ಟ್ವಿಟ್ಟರ್‌‌ನಲ್ಲಿ […]

‘ರಾಹುಲ್ ಗೆ ಕೊನೆ ದಿಕ್ಕು ಕರ್ನಾಟಕ, ಉಳಿದೆಡೆ ಮಾತನಾಡೋರು ಗತಿಯಿಲ್ಲ’

Wednesday, February 21st, 2018
yedeyurappa

ಮಂಗಳೂರು : ರಾಹುಲ್ ಗಾಂಧಿ ಅವರು ಬಂದರೆ ಕರ್ನಾಟಕಕ್ಕೆ, ಬೆಂಗಳೂರಿಗೆ ಬರಬೇಕು. ಏಕೆಂದರೆ ಬೇರೆಲ್ಲೂ ಕಾಂಗ್ರೆಸ್ ಅಧಿಕಾರದಲ್ಲಿಲ್ಲ. ಇವರು ಹೋದರೆ ಮಾತನಾಡಿಸುವವರು ಸಹ ಗತಿ ಇಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಮಂಗಳೂರಿನಲ್ಲಿ ಶಕ್ತಿ ಕೇಂದ್ರ ಪ್ರಮುಖರ ಸಮಾವೇಶದಲ್ಲಿ ಬುಧವಾರ ವ್ಯಂಗ್ಯವಾಡಿದರು. ಉತ್ತರಪ್ರದೇಶದಲ್ಲಿ ಬಿಜೆಪಿ ಮೂನ್ನೂರಾ ಇಪ್ಪತ್ತೈದು ಸ್ಥಾನ ಗೆಲ್ಲುತ್ತದೆ ಅಂತ ಯಾವ ಮಾಧ್ಯಮದ ಬಂಧುಗಳು ನಿರೀಕ್ಷೆ ಮಾಡಿರಲಿಲ್ಲ. ಉತ್ತರ ಪ್ರದೇಶದಲ್ಲಿ ಕ್ರಾಂತಿಯಾಯಿತು. ಕರ್ನಾಟಕದಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತಂದು, ರಾಹುಲ್ ಗಾಂಧಿಯವರು ಇಲ್ಲೂ ಕಾಲಿಡದಂತೆ ಮಾಡಬೇಕು ಎಂದರು. […]

ಕಂಬಳಕ್ಕೆ ಗ್ರೀನ್‌ ಸಿಗ್ನಲ್‌… ಗ್ರಾಮೀಣ ಕ್ರೀಡೆ ಪರ ನಿಂತ ವೀರೂ!

Tuesday, February 20th, 2018
sehwag

ಹೈದರಾಬಾದ್‌: ಕರ್ನಾಟಕ ಗ್ರಾಮೀಣ ಕ್ರೀಡೆ ಕಂಬಳದ ಬಗ್ಗೆ ಮಾಜಿ ಕ್ರಿಕೆಟಿಗ ವಿರೇಂದ್ರ ಸೆಹ್ವಾಗ್‌ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ. ಕರ್ನಾಟಕದ ಗ್ರಾಮೀಣ ಕ್ರೀಡೆ ಕಂಬಳಕ್ಕೆ ನಿನ್ನೆ ರಾಷ್ಟ್ರಪತಿ ರಾಮನಾಥ್‌ ಕೋವಿಂದರಿಂದ ಅಂಕಿತ ಬಿದ್ದ ವಿಷಯ ತಿಳಿದ ಸೆಹ್ವಾಗ್, ಕಂಬಳಕ್ಕೆ ಇದ್ದ ತಡೆ ನಿವಾರಣೆಯಾಗಿದ್ದು ಒಳ್ಳೆಯ ಸಂಗತಿ. ಗ್ರಾಮೀಣ ಕ್ರೀಡೆಗಳನ್ನು ಉಳಿಸಲೇಬೇಕಾಗಿದ. ರಾಷ್ಟ್ರಪತಿಗಳು ಕಂಬಳ ಬಿಲ್‌ ಪಾಸ್‌ ಮಾಡಿದ್ದು ನಿಜಕ್ಕೂ ಗ್ರೇಟ್‌. ಇನ್ಮುಂದೆ ಕಂಬಳ ಕರ್ನಾಟಕದಲ್ಲಿ ಕಾನೂನುಬದ್ಧ ಗ್ರಾಮೀಣ ಕ್ರೀಡೆಯಾಗಿದೆ. ಯುವಕರ ಚೈತನ್ಯವೃದ್ಧಿಸುವಂತಹ ಕ್ರೀಡೆಗಳನ್ನು ತಡೆಯಲು ಯತ್ನಿಸುತ್ತಿರುವ ಕೆಲ ಸಂಸ್ಥೆಗಳ ಯತ್ನವನ್ನು […]

ಕರ್ನಾಟಕದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ: ಅಮಿತ್ ಶಾ

Tuesday, February 20th, 2018
janata-party

ಸುಬ್ರಹ್ಮಣ್ಯ: ಕರ್ನಾಟಕದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ. ಈ ಗೆಲುವು ದಕ್ಷಿಣ ಭಾರತದಲ್ಲಿ ಪಕ್ಷದ ಗೆಲುವಿಗೆ ಹೆಬ್ಬಾಗಿಲು ಆಗಲಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಕುಕ್ಕೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದದಲ್ಲಿ ಬಿಜೆಪಿ ಸುಳ್ಯ ವಿಧಾನಸಭಾ ಕ್ಷೇತ್ರ ಸಮಿತಿಯ ಆಶ್ರಯದಲ್ಲಿ ಸೋಮವಾರ ಆಯೋಜಿಸಲಾಗಿರುವ ನವ ಕರ್ನಾಟಕ ನಿರ್ಮಾಣಕ್ಕಾಗಿ ‘ನವಶಕ್ತಿ ಸಮಾವೇಶ’ವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ರಾಜ್ಯ ಸರಕಾರದ ವಿರುದ್ಧ ಹರಿಹಾಯ್ದ ಅವರು, ಸಿದ್ದರಾಮಯ್ಯ ಸರಕಾರದಲ್ಲಿ ಭ್ರಷ್ಟಾಚಾರಿಗಳಿದ್ದಾರೆ ಎಂದು ಆರೋಪಿಸಿದರು. ಶಾಸಕ ಹಾರಿಸ್ ಪುತ್ರನ […]

ಮಂಗಳೂರಿನಲ್ಲಿ ಕರ್ನಾಟಕ ಹಕ್ಕಿ ಹಬ್ಬಕ್ಕೆ ಚಾಲನೆ

Friday, February 9th, 2018
hakki

ಮಂಗಳೂರು : ಕರ್ನಾಟಕ ಅರಣ್ಯ ಇಲಾಖೆ ಮಂಗಳೂರು ವೃತ್ತ ಹಾಗೂ ಕರ್ನಾಟಕ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿಯ ಸಹಯೋಗದಲ್ಲಿ ಮಂಗಳೂರಿನಲ್ಲಿ ರಾಜ್ಯ ಮಟ್ಟದ 3 ದಿನಗಳ 4ನೇ ಕರ್ನಾಟಕ ಹಕ್ಕಿ ಹಬ್ಬಕ್ಕೆ ಇಂದು ನಗರದ ಪುರಭವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಚಾಲನೆ ನೀಡಿದರು. ಈ ಸಂದರ್ಭ ಮಾತನಾಡಿದ ಅವರು, ನಾಲ್ಕು ವರ್ಷಗಳ ಹಿಂದೆ ರಂಗನತಿಟ್ಟಿನಲ್ಲಿ ಹಕ್ಕಿ ಹಬ್ಬ ಮಾಡಲಾಗಿತ್ತು. ಇದು ಪಕ್ಷಿ ವೀಕ್ಷಕರಿಗೆ ಅನುಕೂಲವಾಗಿದ್ದು, ಪಕ್ಷಿಗಳ ಬಗ್ಗೆ ತಿಳಿದುಕೊಳ್ಳಲು ಹಾಗೂ ಹವ್ಯಾಸಿಗಳಿಗೆ ಅನುಕೂಲವಾಗಿದೆ. ಹಕ್ಕಿಗಳಿಗಾಗಿ […]

ಕರ್ನಾಟಕದಲ್ಲಿ ಬಿಜೆಪಿಗೆ 156 ಸ್ಥಾನಗಳ ಸ್ಪಷ್ಟ ಬಹುಮತ: ಜಾವಡೇಕರ್‌

Wednesday, January 24th, 2018
nalin-kumar

ಮಂಗಳೂರು: ಮುಂದಿನ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಬಿಜೆಪಿ 156 ಸ್ಥಾನಗಳ ಸ್ಪಷ್ಟ ಬಹುಮತ ಪಡೆದು ಆಡಳಿತ ನಡೆಸಲಿದೆ ಎಂದು ಕೇಂದ್ರ ಮಾನವ ಸಂಪನ್ಮೂಲ ಖಾತೆ ಸಚಿವ ಪ್ರಕಾಶ್ ಜಾವಡೇಕರ್ ಹೇಳಿದ್ದಾರೆ. ಬಿಜೆಪಿ ಕಚೇರಿಯಲ್ಲಿ ನಡೆದ ಜಿಲ್ಲಾ ಪ್ರಮುಖರ ಸಭೆ ಉದ್ಘಾಟಿಸಿ ಮಾತನಾಡಿದ ಅವರು, ನೂರು ದಿನಗಳಲ್ಲಿ ದೇಶದಲ್ಲೇ ಕಾಂಗ್ರೆಸ್ ಹೋಗಿ ಬಿಜೆಪಿ ಬರಲಿದೆ. ದೇಶದಲ್ಲಿ ನಡೆಯುವ ಚುನಾವಣೆ ಎರಡು ರಾಜಕೀಯ ಪಕ್ಷಗಳ ಮಧ್ಯೆ ಅಲ್ಲ. ಎರಡು ರಾಜಕೀಯ ಸಂಸ್ಕೃತಿಯ ಮಧ್ಯೆ ನಡೆಯುತ್ತಿರುವ ಸ್ಪರ್ಧೆ ಎಂದು ಹೇಳಿದರು. ಕಾಂಗ್ರೆಸ್ ಜಾತಿ […]

ರಾಜ್ಯಕ್ಕೆ ಬಂತು ವಿದೇಶಿ ಮರಳು… ಇಂದಿನಿಂದಲೇ ಮಾರಾಟ, ಟನ್‌ಗೆ__ರೂ

Monday, January 22nd, 2018
MSIL-Sand

ಬೆಂಗಳೂರು: ಎಂಎಸ್‍ಐಎಲ್ ವತಿಯಿಂದ ದೇಶದಲ್ಲಿಯೇ ಪ್ರಥಮ ಬಾರಿಗೆ ‘ಬ್ರಾಂಡೆಡ್ ನೈಸರ್ಗಿಕ ನದಿ ಮರಳನ್ನು’ ಚೀಲಗಳಲ್ಲಿ ಇಂದಿನಿಂದ ಮಾರಾಟ ಮಾಡಲಾಗುತ್ತಿದೆ. ಸುದ್ದಿಗೊಷ್ಠಿಯಲ್ಲಿ ಈ ವಿಷಯ ತಿಳಿಸಿದ ಎಂಎಸ್ಐಎಲ್ ವ್ಯವಸ್ಥಾಪಕ ನಿರ್ದೇಶಕ ಡಾ.ಜಿ.ಸಿ.ಪ್ರಕಾಶ್, ಬಿಡದಿಯಲ್ಲಿ ಯಾರ್ಡ್ ಮಾಡಲಾಗಿದ್ದು, ಅಲ್ಲಿ ಮರಳು ಮಾರಾಟಕ್ಕೆ ಲಭ್ಯವಿದೆ. ತದನಂತರ ಬೆಂಗಳೂರಿನ ಚನ್ನಸಂದ್ರ, ದೊಡ್ಡಬಳ್ಳಾಪುರ, ತುಮಕೂರಿನ ಕ್ಯಾತ್ಸಂದ್ರ, ಮಂಡ್ಯ, ಮೈಸೂರು, ಹುಬ್ಬಳ್ಳಿ ಸೇರಿ ರಾಜ್ಯಾದ್ಯಂತ ವಿಸ್ತರಿಸಲಾಗುವುದು ಎಂದು ಹೇಳಿದರು. ಎಎಂಎಸ್ಐಎಲ್ ವತಿಯಿಂದ ನಿಗದಿತ ದರದಲ್ಲೇ ಮಾರಾಟ ಮಾಡಲಾಗುತ್ತದೆ. 50 ಕೆಜಿ ಚೀಲ ಹಾಗೂ ಟನ್ ಲೆಕ್ಕದಲ್ಲಿ […]

ಕೇರಳ – ಕರ್ನಾಟಕ ಗಡಿಯಲ್ಲಿ ಬೃಹತ್ ಗಾಂಜಾ ಜಾಲ ಪತ್ತೆ

Thursday, January 18th, 2018
ganjaa

ಮಂಗಳೂರು: ಕರ್ನಾಟಕ – ಕೇರಳ ಗಡಿ ಪ್ರದೇಶ ನೆತ್ತಿಲಪದವು ಎಂಬಲ್ಲಿ ಗಾಂಜಾ ಮಾರಾಟ ಜಾಲವನ್ನು ಪತ್ತೆ ಹಚ್ಚುವಲ್ಲಿ ಮಂಗಳೂರು ದಕ್ಷಿಣ ರೌಡಿ ನಿಗ್ರಹದ ದಳದ ಪೊಲೀಸರು ಯಶಸ್ವಿಯಾಗಿದ್ದಾರೆ. ಆರೋಪಿಗಳಾದ ಬಂಟ್ವಾಳ ತೌಡುಗೋಳಿ ನರಿಂಗಾನದ ಮಹಮ್ಮದ್ ಅಜೀಜ್ ಯಾನೆ ಅಬ್ದುಲ್ ಅಜೀಜ್ (34), ತಲಪಾಡಿ ಮುಳ್ಳುಗುಡ್ಡೆಯ ಮಹ್ಮಮದ್ ಇಮ್ತಿಯಾಜ್ (26) ಪರಾರಿಯಾಗಿದ್ದಾರೆ. ಮಂಗಳೂರು ದಕ್ಷಿಣ ಉಪ ವಿಭಾಗದ ಸಹಾಯಕ ಪೊಲೀಸ್ ಆಯುಕ್ತರಿಗೆ ನೆತ್ತಿಲಪದವು ಎಂಬಲ್ಲಿ ಮಹಮ್ಮದ್ ಅಜೀಜ್ ಮತ್ತು ಇಮ್ತಿಯಾಜ್ ಆ್ಯಕ್ಟೀವಾ ಸ್ಕೂಟರ್‌ನಲ್ಲಿ ತಿರುಗಾಡುತ್ತಾ ಗಾಂಜಾ ಮಾರಾಟ ಮಾಡುತ್ತಿದ್ದಾರೆ […]

ಕರ್ನಾಟಕ ಚುನಾವಣೆ: ದಿಲ್ಲಿಯಲ್ಲಿಂದು ಮೋದಿ, ಅಮಿತ್‌ ಶಾ ಭೇಟಿ

Thursday, January 11th, 2018
narendra-modi

ಹೊಸದಿಲ್ಲಿ : ಕರ್ನಾಟಕ ವಿಧಾನಸಭೆಗೆ ನಡೆಯಲಿರುವ ಚುನಾವಣೆಯನ್ನು ಲಕ್ಷಿಸಿ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಗುರುವಾರ ಸಂಜೆ ರಾಷ್ಟ್ರ ರಾಜಧಾನಿಯಲ್ಲಿ ಬಿಜೆಪಿ ಅಧ್ಯಕ್ಷ ಅಮಿತ್‌ ಶಾ, ಪಕ್ಷದ ಪ್ರಧಾನ ಕಾರ್ಯದರ್ಶಿಗಳು ಮತ್ತು ಹಿರಿಯ ನಾಯಕರುಗಳನ್ನು ಭೇಟಿಯಾಗಲಿದ್ದಾರೆ. ಪ್ರಧಾನಿ ಮೋದಿ ಅವರು ಸಹೋದ್ಯೋಗಿಗಳಿಗೆ ಭೋಜನ ಕೂಟವೊಂದನ್ನು ಏರ್ಪಡಿಸಲಿದ್ದಾರೆ. ಕರ್ನಾಟಕ ಮಾತ್ರವಲ್ಲದೆ ಈ ವರ್ಷ ಮೇಘಾಲಯ, ನಾಗಾಲ್ಯಾಂಡ್‌, ಮಿಜೋರಾ,, ಮಧ್ಯ ಪ್ರದೇಶ, ರಾಜಸ್ಥಾನ, ತ್ರಿಪುರ ಮತ್ತು ಛತ್ತೀಸ್‌ಗಢ ವಿಧಾನಸಭೆಗಳಿಗೂ ಚುನಾವಣೆ ನಡೆಯಲಿದೆ. ಅದಕ್ಕೆ ಈಗಲೇ ಕಾರ್ಯ ತಂತ್ರ ರೂಪಿಸುವ […]

ವಲಸೆ ಕಾರ್ಮಿಕರಿಗೆ ಅಕ್ಕಿ: ಸಚಿವ ಆಗ್ರಹ

Wednesday, January 10th, 2018
U-T-Kader

ಮಂಗಳೂರು: ದೇಶದ ವಿವಿಧ ಭಾಗ ಗಳಿಂದ ದುಡಿಮೆಗಾಗಿ ಕರ್ನಾಟಕಕ್ಕೆ ವಲಸೆ ಬರುವ ಕಾರ್ಮಿಕರಿಗೆ ಉಚಿತ ವಾಗಿ ಅಥವಾ ರಿಯಾಯಿತಿ ದರದಲ್ಲಿ ಅಕ್ಕಿ ವಿತರಣೆ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯುವುದಾಗಿ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ. ಖಾದರ್‌ ಹೇಳಿದರು. ಅವರು ಮಂಗಳವಾರ ಸುದ್ದಿಗೋಷ್ಠಿ ಯಲ್ಲಿ ಮಾತನಾಡಿ, ‘ಕಾರ್ಮಿಕ ವರ್ಗದ ಬಗ್ಗೆ ಕೇಂದ್ರ ಸರ್ಕಾರಕ್ಕೆ ನಿಜವಾದ ಕಾಳಜಿ ಇದ್ದರೆ, ಉತ್ತರ ಪ್ರದೇಶ, ಅಸ್ಸಾಂ, ಬಿಹಾರ, ಒಡಿಶಾ ಮುಂತಾದ ರಾಜ್ಯಗಳಿಂದ ಕೆಲಸಕ್ಕಾಗಿ ಕರ್ನಾಟಕಕ್ಕೆ ಬರುವ ಕಾರ್ಮಿಕರಿಗೆ ರಿಯಾಯಿತಿ […]