ಕರ್ನಾಟಕ ಗಡಿನಾಡು ರಕ್ಷಣಾ ವೇದಿಕೆಯಿಂದ ಟೋಲ್ ಸಂಗ್ರಹಕ್ಕೆ ವಿರೋಧ
Tuesday, February 7th, 2017ಮಂಗಳೂರು: ರಾಷ್ಟ್ರೀಯ ಹೆದ್ದಾರಿ 66 ನಂತೂರು-ತಲಪಾಡಿ ಚತುಷ್ಪಥ ಅಗಲೀಕರಣ ಯೋಜನೆಯಲ್ಲಿ ರಸ್ತೆ ಕಾಮಗಾರಿ ಇನ್ನೂ ಪೂರ್ಣಗೊಳ್ಳದಿದ್ದರೂ ಟೋಲ್ ಶುಲ್ಕ ಸಂಗ್ರಹಕ್ಕೆ ಮಾತ್ರ ಮುಂದಾಗಿದ್ದು, ಸಾರ್ವಜನಿಕರು ಸಮರ್ಪಕವಾದ ರಸ್ತೆಯ ಪ್ರಯೋಜನ ಪಡೆಯದಿದ್ದರೂ ಟೋಲ್ ಸಂಗ್ರಹಿಸುವುದನ್ನು ಕರ್ನಾಟಕ ಗಡಿನಾಡು ರಕ್ಷಣಾ ವೇದಿಕೆ ವಿರೋಧಿಸಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವೇದಿಕೆಯ ಅಧ್ಯಕ್ಷ ಸಿದ್ದಿಕ್ ತಲಪಾಡಿ, ತಲಪಾಡಿ ವ್ಯಾಪ್ತಿಯಲ್ಲಿ ರಾಷ್ಟ್ರೀಯ ಹೆದ್ದಾರಿ ಇಕ್ಕೆಲಗಳಲ್ಲಿ ಸಾರ್ವಜನಿಕರು, ವಾಹನಗಳು, ತಳ್ಳುಗಾಡಿ, ಜಾನುವಾರು ಸಂಚರಿಸಲು ಸಮರ್ಪಕ ಸರ್ವಿಸ್ ರಸ್ತೆ ನಿರ್ಮಾಣವಾಗಬೇಕು. ಮಳೆ ನೀರು ಹರಿದು ಹೋಗಲು ರಸ್ತೆಯ ಇಕ್ಕೆಲಗಳಲ್ಲಿಯೂ […]