ಜಯರಾಮ ಆಚಾರ್ಯ ಕುಟುಂಬಕ್ಕೆ ಆಧಾರಸ್ಥಂಭವಾಗಲು ಕಲಾ ಸಂಘಟನೆಗಳ ಘೋಷಣೆ

Saturday, October 26th, 2024
ಜಯರಾಮ ಆಚಾರ್ಯ ಕುಟುಂಬಕ್ಕೆ ಆಧಾರಸ್ಥಂಭವಾಗಲು ಕಲಾ ಸಂಘಟನೆಗಳ ಘೋಷಣೆ

ಮಂಗಳೂರು : ತನ್ನ ಕಲಾ ಶಿಸ್ತು ಹಾಗೂ ನೈಪುಣ್ಯತೆ ಮೂಲಕ ಬಂಟ್ವಾಳ ಜಯರಾಮ ಆಚಾರ್ಯ ಅವರು ಯಕ್ಷಗಾನದ ಹಾಸ್ಯ ಪಾತ್ರಕ್ಕೆ ಗೌರವ ತಂದವರು, ಸ್ವಾಭಿಮಾನಿಯಾಗಿದ್ದ ಜಯರಾಮ ಆಚಾರ್ಯ ಅವರ ಕುಟುಂಬದ ಜೊತೆಗೆ ಅಭಿಮಾನಿಗಳು ನಿಲ್ಲುವ ಅವಶ್ಯಕತೆ ಇದೆ ಎಂದು ಹಿರಿಯ ಯಕ್ಷಗಾನ ವಿಮರ್ಶಕ ಡಾ.ಪ್ರಭಾಕರ ಜೋಶಿ ಅವರು ಹೇಳಿದರು. ಅವರು ಮಂಗಳೂರಿನ ಉರ್ವಾಸ್ಟೋರ್ ನ ತುಳು ಅಕಾಡೆಮಿಯ ತುಳು ಭವನದಲ್ಲಿ ಆಯೋಜಿಸಲಾದ ಶ್ರದ್ಧಾಂಜಲಿ ಸಭೆಯಲ್ಲಿ ಮಾತನಾಡಿದರು. ಜಯರಾಮ ಆಚಾರ್ಯ ಅತ್ಯಂತ ಸೂಕ್ಷ್ಮ ಪ್ರಜ್ಞೆಯ ಪಾಂಡಿತ್ಯಪೂರ್ಣ ಕಲಾವಿದರಾಗಿದ್ದರು,ಹಿರಿಯ ಪರಂಪರೆಯ […]

ತುಳು ಭಾಷೆ ಉಳಿಸಿ ಬೆಳೆಸುವಲ್ಲಿ ಹೊರನಾಡ ತುಳುವರ ಕೊಡುಗೆ ಅನನ್ಯವಾದುದು : ತಾರಾನಾಥ್ ಗಟ್ಟಿ ಕಾಪಿಕಾಡ್

Saturday, June 29th, 2024
bhadravathi

ಮಂಗಳೂರು : ತುಳು ಭಾಷೆ ಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಹೊರನಾಡಿನ ತುಳುವರು ಗಣನೀಯ ಕೊಡುಗೆ ನೀಡಿದ್ದಾರೆ ಎಂದು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ್ ಗಟ್ಟಿ ಕಾಪಿಕಾಡ್ ಅವರು ಹೇಳಿದರು. ಅವರು ಭದ್ರಾವತಿಯ ಬಂಟರ ಭವನದಲ್ಲಿ ಶುಕ್ರವಾರ ಸಂಜೆ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಹಾಗೂ ತುಳು ಕೂಟ ಭದ್ರಾವತಿ ಆಯೋಜಿಸಿದ ತುಳು ಉತ್ಸವವನ್ನು ಉದ್ಘಾಟಿಸಿ ಮಾತನಾಡಿದರು. ತುಳು ಭಾಷೆ ಹಾಗೂ ಸಂಸ್ಕೃತಿ ಎಲ್ಲರನ್ನೂ ಜೊತೆಯಾಗಿ ಒಳಗೊಳ್ಳುವ ಗುಣಧರ್ಮವನ್ನು ಹೊಂದಿದೆ. ಈ ಕಾರಣದಿಂದಾಗಿ ಹೊರನಾಡಿನಲ್ಲಿ […]

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಯ ನೂತನ ಅಧ್ಯಕ್ಷರಾಗಿ ತಾರಾನಾಥ್ ಗಟ್ಟಿ ಅಧಿಕಾರ ವಹಿಸಿಕೊಂಡರು

Thursday, June 13th, 2024
Tharnatha-Gatty

ಮಂಗಳೂರು: ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಯ ನೂತನ ಅಧ್ಯಕ್ಷರಾಗಿ ತಾರಾನಾಥ್ ಗಟ್ಟಿ ಕಾಪಿಕಾಡ್ ಗುರುವಾರ ಅಧಿಕಾರ ಸ್ವೀಕರಿಸಿದರು. ನಗರದ ಉರ್ವಸ್ಟೋರ್ ನ ತುಳು ಭವನದಲ್ಲಿರುವ ತುಳು ಅಕಾಡೆಮಿ ಕಚೇರಿಯಲ್ಲಿ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ರಿಜಿಸ್ಟ್ರಾರ್ ಪೂರ್ಣಿಮಾ ಅಧಿಕಾರ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಬ್ಯಾರಿ ಸಾಹಿತ್ಯ ಅಕಾಡೆಮಿ ಯ ಅಧ್ಯಕ್ಷ ಉಮರ್ ಯು. ಎಚ್, ಕೊಂಕಣಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸ್ಟ್ಯಾನಿ ಅಲ್ವಾರಿಸ್, ಬ್ಯಾರಿ ಸಾಹಿತ್ಯ ಅಕಾಡೆಮಿ ರಿಜಿಸ್ಟ್ರಾರ್ ರಾಜೇಶ್ ಜಿ, ಶುಭೋದಯ ಅಳ್ವ, ಗಣೇಶ್ […]

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಗೆ ಸಚಿವ ವಿ. ಸುನಿಲ್‌ಕುಮಾರ್ ಭೇಟಿ

Wednesday, January 5th, 2022
Tulu-Academy

ಮಂಗಳೂರು : ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಇಂಧನ ಇಲಾಖೆಯ ರಾಜ್ಯ ಸಚಿವರಾದ ವಿ. ಸುನಿಲ್‌ಕುಮಾರ್ ಜ. 5ರಂದು ಭೇಟಿ ನೀಡಿ ತುಳು ಭವನದ ಅಪೂರ್ಣ ಕಾಮಗಾರಿ ಹಾಗೂ ವಿವಿಧ ಬೇಡಿಕೆಯ ಬಗ್ಗೆ ಪರಿಶೀಲನೆ ನಡೆಸಿದರು. ಅಕಾಡೆಮಿಯ ಅಧ್ಯಕ್ಷ ದಯಾನಂದ ಜಿ. ಕತ್ತಲ್‌ಸಾರ್ ಅವರು ಅಕಾಡೆಮಿಯ ಬಗ್ಗೆ ಮಾಹಿತಿ ನೀಡಿ, ತುಳು ಭವನ ಸಂಪೂರ್ಣಗೊಳ್ಳಲು ಮಂಜೂರಾಗಿರುವ ರೂ. 3.6 ಕೋಟಿ ಸಹಿತ ಹೆಚ್ಚುವರಿಯಾಗಿ 2 ಕೋ. ರೂ.ವಿನ ಅಗತ್ಯವಿದೆ. ಇದು ಸಂಪೂರ್ಣ […]

ಎಂಟನೇ ಜಿಲ್ಲಾ ಚುಟುಕು ಸಾಹಿತ್ಯ ಸಮ್ಮೇಳನದ ಲಾಂಛನದ ಬಿಡುಗಡೆ

Sunday, December 26th, 2021
chutuku Sahitya

ಮಂಗಳೂರು : ಜನವರಿ 30ರಂದು ಮಂಗಳೂರಿನ ತುಳು ಭವನದ ಸಿರಿ ಚಾವಡಿಯಲ್ಲಿ ಮಂಗಳೂರು ತಾಲೂಕು ಚುಟುಕು ಸಾಹಿತ್ಯ ಪರಿಷತ್ತು, ದಕ್ಷಿಣ ಕನ್ನಡ ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ತು, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮಂಗಳೂರು ಸಂಯುಕ್ತವಾಗಿ ಆಯೋಜಿಸುತ್ತಿರುವ ಚುಟುಕು ಸಾಹಿತ್ಯ ಪರಿಷತ್ತಿನ ದಕ್ಷಿಣ ಕನ್ನಡ ಎಂಟನೇ ಜಿಲ್ಲಾ ಚುಟುಕು ಸಾಹಿತ್ಯ ಸಮ್ಮೇಳನದ ಲಾಂಛನದ ಬಿಡುಗಡೆ ಸಮಾರಂಭ ಕೆನರಾ ಕಾಲೇಜಿನ ಸಭಾಂಗಣದಲ್ಲಿ  ಶನಿವಾರ ನಡೆಯಿತು. ಸಾಹಿತ್ಯ ಪೋಷಕ, ಸಂಘಟಕ ಗುರುಪ್ರಸಾದ್ ಕಡಂಬಾರ್ ಅವರು ಲಾಂಛನವನ್ನು […]

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ನೂತನ ಅಧ್ಯಕ್ಷ ದಯಾನಂದ ಕತ್ತಲ್ ಸಾರ್ ಪದಗ್ರಹಣ

Monday, November 25th, 2019
katalsar

ಮಂಗಳೂರು:   ಹಿಂದಿ ಭಾಷೆಯಲ್ಲಿ ಎಲ್ಲದರ ಧರ್ಮಸಂಸ್ಕೃತಿ ಜೀವನ ಮೌಲ್ಯಗಳು ಅದರಲ್ಲಿರುತ್ತವೆ. ಪ್ರಾದೇಶಿಕ ಭಾಷೆಗಳ ಮೇಲೆ ಹಿಂದಿ ಹೇರಿಕೆಯಾದರೆ ತೊಂದರೆಯಿಲ್ಲ ಆದರೆ ಇಂಗ್ಲಿಷ್ ಭಾರತಕ್ಕೆ ಆಗಮನವಾದದ್ದೇ ನಮ್ಮ ದೇಶಕ್ಕೆ ಸಮಸ್ಯೆಯಾಯಿತು ಎಂದು ಆರ್ ಎಸ್ಎಸ್ ಮುಖಂಡ ಡಾ‌.ಕಲ್ಲಡ್ಕ ಪ್ರಭಾಕರ ಭಟ್ ಹೇಳಿದ್ದಾರೆ. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ನೂತನ ಅಧ್ಯಕ್ಷ ದಯಾನಂದ ಕತ್ತಲ್ ಸಾರ್ ಅವರ ಪದಗ್ರಹಣ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ‌ ಮನೆಯಲ್ಲಿ ನಮ್ಮ ಮಾತೃಭಾಷೆಯನ್ನೇ ಮಾತನಾಡಿ. ನಮ್ಮ ಮಣ್ಣಿನ ಭಾಷೆ ತುಳು. ಹಾಗಾಗಿ ನಾವು ತುಳು […]

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾಗಿ ದಯಾನಂದ ಕತ್ತಲಸರ್

Tuesday, October 15th, 2019
dayananda-katalsar

ಮಂಗಳೂರು  : ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾಗಿ ದಯಾನಂದ ಕತ್ತಲಸರ್ ಅವರನ್ನು ನೇಮಕ ಮಾಡಲಾಗಿದೆ.  ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾಗಿ ರಹೀಂ ಉಚ್ಚಿಲ್ ಆಯ್ಕೆ ಗೊಂಡಿದ್ದಾರೆ. ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಗೆ ನೂತನ ಅಧ್ಯಕ್ಷರಾಗಿ ಡಾ. ಜಗದೀಶ್ ಪೈ ಅವರನ್ನು ನೇಮಕ ಮಾಡಲಾಗಿದೆ. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಗೆ ತುಳು ಸಾಹಿತ್ಯಕ್ಕೆ ಸಂಬಂಧಿಸಿದಂತೆ 11 ಮಂದಿ ಸದಸ್ಯರನ್ನು ಆಯ್ಕೆ ಮಾಡಲಾಗಿದೆ. ಬ್ಯಾರಿ ಸಾಹಿತ್ಯ ಅಕಾಡೆಮಿಗೆ ಏಳು ಮಂದಿ ಸದಸ್ಯರಿರುವ ಸಮಿತಿಯನ್ನು ರಚಿಸಿ ಸರಕಾರ ಆದೇಶ ಹೊರಡಿಸಿದೆ.  

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ವತಿಯಿಂದ ತುಳು ಸಾಹಿತ್ಯ ಸಮ್ಮೇಳನ-2018

Tuesday, October 23rd, 2018
putturu

ಪುತ್ತೂರು: ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ವತಿಯಿಂದ ಪುತ್ತೂರು ತಾಲೂಕು ತುಳು ಸಾಹಿತ್ಯ ಸಮ್ಮೇಳನ ಸಮಿತಿಯ ಸಹಕಾರದೊಂದಿಗೆ ನವೆಂಬರ್ 03 ರಂದು ಪುತ್ತೂರಿನ ಸುದಾನ ವಸತಿಯುತ ಶಾಲಾ ವಠಾರದಲ್ಲಿ ಆಕರ್ಷಕ ಮೆರವಣಿಗೆ, ವಸ್ತು ಪ್ರದರ್ಷನ, ಆಹಾರ ಮೇಳ,  ವಿವಿಧ ಸಾಹಿತ್ಯಿಕ ಗೋಷ್ಠಿಗಳು,   ಮತ್ತು ಸಾಂಸ್ಕೃತಿಕ ಮನರಂಜನೆ, ಸಾಧಕರಿಗೆ ಸನ್ಮಾನ ಮೊದಲಾದ ಕಾರ್ಯಕ್ರಮಗಳೊಂದಿಗೆ ಆಯೋಜಿಸಲಾಗುತ್ತಿರುವ ಪುತ್ತೂರು ತಾಲೂಕು ತುಳು ಸಾಹಿತ್ಯ ಸಮ್ಮೇಳನ –  ತುಳು ಪರ್ಬ-2018 ರ ಆಮಂತ್ರಣವನ್ನು ಸಮ್ಮೇಳನದ ಅಧ್ಯಕ್ಷರಾದ ಪ್ರೊ. ಬಿ.ಎ.ವಿವೇಕ ರೈ ಯವರಿಗೆ ಸಮ್ಮೇಳನ […]

ಕರ್ನಾಟಕ ತುಳು ಸಾಹಿತ್ಯ ಅಕಾಡಮಿಯ ನೂತನ ಅಧ್ಯಕ್ಷರಾಗಿ ಎ.ಸಿ. ಭಂಡಾರಿ ಅಧಿಕಾರ ಸ್ವೀಕಾರ

Sunday, August 20th, 2017
AC Bhandary

ಮಂಗಳೂರು : ಕರ್ನಾಟಕ ತುಳು ಸಾಹಿತ್ಯ ಅಕಾಡಮಿಯ 9ನೆ ಅವಧಿಯ ಅಧ್ಯಕ್ಷ ಎ.ಸಿ. ಭಂಡಾರಿ ಮತ್ತು ಸದಸ್ಯರು  ನಗರದ ಉರ್ವಸ್ಟೋರ್‌ನಲ್ಲಿರುವ ತುಳುಭವನದಲ್ಲಿ ಶನಿವಾರ ಅಧಿಕಾರ ಸ್ವೀಕರಿಸಿದರು. ಈ ಸಂದರ್ಭ ಮಾತನಾಡಿದ ಪ್ರೊ. ಬಿ.ಎ.ವಿವೇಕ ರೈ, ತುಳು ಭಾಷೆಯನ್ನು ಅಂತಾರಾಷ್ಟ್ರೀಯ ಮಟ್ಟಕ್ಕೇರಿಸುವ ಸಲುವಾಗಿ ಮತ್ತು ಭಾಷೆಯ ಬೆಳವಣಿಗೆಗೆ ಸಾಫ್ಟ್‌ವೇರ್ ಬಳಕೆ ಮಾಡಬೇಕಾಗಿದೆ ಎಂದು ಹೇಳಿದರು. ಅಂತರ್ಜಾಲದಲ್ಲೂ ಕೂಡ ತುಳು ಭಾಷೆಗಾಗಿ ಕೆಲಸ ಕಾರ್ಯ ನಡೆಯುತ್ತಿದೆ. ತುಳು ವಿಕಿಪೀಡಿಯಾ ಭಾಷೆಯ ಬೆಳವಣಿಗೆಗೆ ಸಹಕಾರಿಯಾಗಿದೆ. ಈ ನಿಟ್ಟಿನಲ್ಲಿ ಅಕಾಡಮಿಯು ನಾಟಕ, ಸಿನೆಮಾ, ಸಾಂಸ್ಕೃತಿಕ, ಅನುವಾದ, […]

ತುಳುವರಿಗೆ ಕಂಬಳವೂ ಬೇಕು. ಕೋಳಿ ಅಂಕವೂ ಬೇಕು. ಇದು ಸಾಂಪ್ರದಾಯಿಕ ಕ್ರೀಡೆ : ಆಸ್ಕರ್‌

Sunday, February 19th, 2017
Tulu sahitya academy

ಮಂಗಳೂರು : ಮಂಗಳೂರು: ತುಳು ಭಾಷೆ, ಪರಂಪರೆಯನ್ನು ಇನ್ನಷ್ಟು ಗಟ್ಟಿಗೊಳಿಸಲು ಪ್ರಾಮಾಣಿಕ ಪ್ರಯತ್ನಗಳು ಅನಿವಾರ್ಯವಾಗಿವೆೆ. ತುಳುವನ್ನು 8ನೇ ಪರಿಚ್ಛೇದಕ್ಕೆ ಸೇರಿಸುವ ಪ್ರಯತ್ನಕ್ಕೆ ಧರ್ಮಸ್ಥಳದ ಡಾ| ಹೆಗ್ಗಡೆ ಕೂಡ ಕೈಜೋಡಿಸಿದ್ದು, ಜತೆಗೆ ಪ್ರಶಸ್ತಿ ಪ್ರದಾನಗಳಂತಹ ಸಮಾರಂಭಗಳು ಪೂರಕವಾಗಲಿವೆ ಎಂದು ರಾಜ್ಯಸಭಾ ಸದಸ್ಯ ಆಸ್ಕರ್‌ ಫೆರ್ನಾಂಡಿಸ್‌ ಹೇಳಿದರು. ಕರ್ನಾಟಕ ತುಳು ಸಾಹಿತ್ಯ ಅಕಾಡಮಿ ವತಿಯಿಂದ ಶನಿವಾರ ಅಕಾಡಮಿಯ ಸಿರಿ ಚಾವಡಿಯಲ್ಲಿ ನಡೆದ ಗೌರವ ಪ್ರಶಸ್ತಿ ಪ್ರದಾನ ಹಾಗೂ ಪುಸ್ತಕ ಬಹುಮಾನ ಸಮಾರಂಭದಲ್ಲಿ ಅವರು ಮುಖ್ಯ ಅತಿಥಿಯಾಗಿ ಮಾತನಾಡಿದರು. ತುಳುವರಿಗೆ ಕಂಬಳವೂ […]