ಮಹಿಳಾ ವಿದ್ಯಾರ್ಥಿಗಳಿಗೆ ಪತ್ರಿಕಾಲಯಗಳಲ್ಲಿ ತರಬೇತಿಗೆ ಅರ್ಜಿ ಆಹ್ವಾನ
Friday, August 9th, 2024ಮಂಗಳೂರು : ಕರ್ನಾಟಕ ಮಾಧ್ಯಮ ಅಕಾಡೆಮಿಯು ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಅಥವಾ ಪದವಿ ಪಡೆದಿರುವ ಮಹಿಳಾ ವಿದ್ಯಾರ್ಥಿಗಳಿಗೆ ಪತ್ರಿಕಾಲಯದಲ್ಲಿ ತರಬೇತಿ ಪಡೆಯಲು ಅರ್ಜಿ ಆಹ್ವಾನಿಸಿದೆ. ಪ್ರಸಕ್ತ ಸಾಲಿನಲ್ಲಿ 5 ಮಂದಿ ಮಹಿಳಾ ವಿದ್ಯಾರ್ಥಿಗಳಿಗೆ ಪ್ರಮುಖ ದಿನಪತ್ರಿಕೆಗಳ ಕಾರ್ಯಾಲಯಗಳಲ್ಲಿ 2 ತಿಂಗಳ ಕಾಲ ತರಬೇತಿ ಪಡೆಯಲು, ಮಾಸಿಕ ತಲಾ 20,000/- ರೂ ಗಳನ್ನು ಶಿಶ್ಯವೇತನ ನೀಡಲಾಗುವುದು. ಕರ್ನಾಟಕದ ಯಾವುದೇ ವಿಶ್ವವಿದ್ಯಾಲಯಗಳಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ/ಪದವಿಯಲ್ಲಿ ಅತಿ ಹೆಚ್ಚು ಅಂಕ ಗಳಿಸಿರುವ ವಿದ್ಯಾರ್ಥಿಗಳಿಗೆ ಆದ್ಯತೆ ನೀಡಲಾಗಿದೆ. ಮಹಿಳಾ ವಿದ್ಯಾರ್ಥಿಗಳು […]