ತುಳುನಾಡಿಗೆ ಮಾರಕವಾದ ಅವೈಜ್ಙಾನಿಕ ಬಜೆಟ್‌

Friday, March 4th, 2022
shailesh RJ

ಬೆಳ್ತಂಗಡಿ : ತುಳುನಾಡಿನ ಜೀವನಾಡಿಗೆ ಮಾರಕವಾದ ಅವೈಜ್ಙಾನಿಕ ಎತ್ತಿನಹೊಳೆ ಯೋಜನೆಗೆ ಕರ್ನಾಟಕ ರಾಜ್ಯ ಬಜೆಟ್‌ನಲ್ಲಿ 3000 ಕೋಟಿ ರೂಪಾಯಿ ಮೀಸಲಿರಿಸಿದ್ದು ಖಂಡನೀಯ. ಈ ಮೂಲಕ ತುಳುನಾಡನ್ನು ಬರಡು ಭೂಮಿಯಾಗಿಸುವ ವ್ಯವಸ್ಥಿತ ಷಡ್ಯಂತ್ರವನ್ನು ಮುಂದುವರಿಸಿದ್ದು ತುಳುವರಿಗೆ ಎಚ್ಚರಿಕೆ ಗಂಟೆಯಾಗಿದೆ. ತುಳುವರ ಎತ್ತಿನಹೊಳೆ ಯೋಜನೆ ವಿರೋಧಿ ಹೋರಾಟದಲ್ಲಿ ನುಸುಳಿ ನಾಟಕವಾಡಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಸಂಸದರು ಮತ್ತು ಶಾಸಕರು ಈ ಕೂಡಲೇ ತಮ್ಮ ಶಾಸಕ/ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿ ತಮ್ಮ ಬದ್ಧತೆಯನ್ನು ನಾಡಿನ ಜನಕ್ಕೆ ತೋರಿಸಬೇಕು. ನಿರಂತರವಾಗಿ ತುಳುನಾಡಿನ ನೆಲ, […]

ನಂ 1 ಕೈಗಾರಿಕಾ ಸ್ನೇಹೀ ರಾಜ್ಯವಾಗುವತ್ತ ದಾಪುಗಾಲು: ಕೈಗಾರಿಕಾ ಸಚಿವ ಜಗದೀಶ್‌ ಶೆಟ್ಟರ್‌

Friday, July 2nd, 2021
Jagadish Shettar

ಬೆಂಗಳೂರು : ಕರೋನಾ ಸಂಕಷ್ಟ ಕಾಲದಲ್ಲೂ ಕರ್ನಾಟಕ ರಾಜ್ಯ ಅತಿ ಹೆಚ್ಚು ಬಂಡವಾಳ ಹೂಡಿಕೆಯ ಪ್ರಸ್ತಾಪಗಳನ್ನು ಹಾಗೂ ವಿದೇಶಿ ನೇರ ಬಂಡವಾಳ ಹೂಡಿಕೆಯಲ್ಲಿ ಮೂರನೇ ಸ್ಥಾನವನ್ನು ಪಡೆದುಕೊಂಡಿದೆ. ಮುಖ್ಯಮಂತ್ರಿ ಅವರ ನೇತೃತ್ವದಲ್ಲಿ ರಾಜ್ಯ ಸರಕಾರ ಹೊರತಂದಿರುವ ಕ್ರಾಂತಿಕಾರಿ ಕಾನೂನುಗಳು ಹಾಗೂ ನೀತಿಗಳಿಂದ ಕರ್ನಾಟಕ ರಾಜ್ಯ ದೇಶದಲ್ಲಿ ನಂ 1 ಕೈಗಾರಿಕಾ ಸ್ನೇಹಿ ರಾಜ್ಯವಾಗುವತ್ತ ದಾಪುಗಾಲು ಇಡುತ್ತಿದೆ ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವರಾದ ಶ್ರೀ ಜಗದೀಶ್‌ ಶೆಟ್ಟರ್‌ ಹೇಳಿದರು. ಇಂದು ಬೆಂಗಳೂರು ನಗರದಲ್ಲಿ ಲಘು ಉದ್ಯೋಗ […]

ಆನ್‌ಲೈನ್‌ ಶಿಕ್ಷಣ ನಿಲ್ಲಿಸಲು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದಿಂದ ಸರ್ಕಾರಕ್ಕೆ ವರದಿ

Friday, July 10th, 2020
online education

ಮೈಸೂರು:  ವಿದ್ಯಾರ್ಥಿಗಳು-ಪೋಷಕರ ಅಭಿಪ್ರಾಯ ಸಂಗ್ರಹಿಸಿದ ಬಳಿಕ  ‘ಎಸ್ಸೆಸ್ಸೆಲ್ಸಿಯವರೆಗೂ ಆನ್‌ಲೈನ್‌ ಶಿಕ್ಷಣ ಬೇಡ’ ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಸರ್ಕಾರಕ್ಕೆ ವರದಿ ಸಲ್ಲಿಸಿದೆ. ಆನ್‌ಲೈನ್‌ ತರಗತಿ ಬಗ್ಗೆ ತಜ್ಞರ ಸಮಿತಿಯು ರಾಜ್ಯ ಸರ್ಕಾರಕ್ಕೆ ವರದಿ ನೀಡುವ ಮುನ್ನವೇ, ಆಯೋಗದ ಸದಸ್ಯರು ರಾಜ್ಯದ ವಿವಿಧೆಡೆ ಪ್ರವಾಸ ನಡೆಸಿ, ವಿದ್ಯಾರ್ಥಿಗಳು-ಪೋಷಕರ ಅಭಿಪ್ರಾಯ ಸಂಗ್ರಹಿಸಿದ್ದಾರೆ. ಈ ಸಂದರ್ಭ ಆನ್‌ಲೈನ್‌ ಶಿಕ್ಷಣಕ್ಕೆ ಅಡ್ಡಿಯಾಗುವ ಅಂಶಗಳನ್ನು ಗುರುತಿಸಿದ್ದು, ಅವುಗಳನ್ನು ತಮ್ಮ ವರದಿಯಲ್ಲಿ ಉಲ್ಲೇಖಿಸಿದ್ದಾರೆ. ‘ಅಂತರ್ಜಾಲ ಶಿಕ್ಷಣವು ಮಕ್ಕಳನ್ನು ಬೆಸೆಯುವ ಬದಲು, ಅವರಲ್ಲಿ […]

ಕೂಲಿ ಕಾರ್ಮಿಕರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ

Tuesday, July 24th, 2018
protest

ಧಾರವಾಡ: ರೈತರು, ಕೂಲಿ ಕಾರ್ಮಿಕರ ಬೇಡಿಕೆ ಹಾಗೂ ಬೆಳೆವಿಮೆ ಬಿಡುಗಡೆ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅಖಂಡ ಕರ್ನಾಟಕ ರಾಜ್ಯ ರೈತ ಸಂಘದ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ, ಮನವಿ ಸಲ್ಲಿಸಿದರು. ಬ್ಯಾಂಕ್ ಅಧಿಕಾರಿಗಳು ಬೆಳೆವಿಮೆ ಹಣವನ್ನು ರೈತರ ಸಾಲಕ್ಕೆ ಜಮಾ ಮಾಡುತ್ತಿದ್ದಾರೆ. ಅದನ್ನು ನೇರವಾಗಿ ರೈತರಿಗೆ ನೀಡಬೇಕು. ಸಣ್ಣ ,ಅತಿ ಸಣ್ಣ ರೈತ ಹಾಗೂ ಕೂಲಿ ಕಾರ್ಮಿಕರ ಮಕ್ಕಳಿಗೆ ಸರ್ಕಾರಿ ಉದ್ಯೋಗ ಮೀಸಲಾತಿ ನೀಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. ರೈತರ ಬೆಳೆಸಾಲ […]

ಜಿಎಸ್‌ಟಿ ಅನುಷ್ಠಾನದಿಂದ ಕರ್ನಾಟಕ ರಾಜ್ಯದ ಆದಾಯ ಹೆಚ್ಚಳ: ಮಧುಕರ್‌ ಹಿರೇಗಂಗೆ

Saturday, December 3rd, 2016
GST

ಮಂಗಳೂರು: ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಅನುಷ್ಠಾನದಿಂದ ಕರ್ನಾಟಕ ರಾಜ್ಯದ ಆದಾಯದಲ್ಲಿ ಸುಮಾರು 11,000 ಕೋ.ರೂ. ಹೆಚ್ಚಳವಾಗುವ ಸಾಧ್ಯತೆಗಳಿವೆ ಎಂದು ಇನ್‌ಸ್ಟಿಟ್ಯೂಟ್‌ ಆಫ್‌ ಚಾರ್ಟರ್ಡ್‌ ಆಕೌಂಟೆಂಟ್‌ ಆಫ್‌ ಇಂಡಿಯಾದ (ಐಸಿಎಐ) ಪರೋಕ್ಷ ತೆರಿಗೆಗಳ ಸಮಿತಿಯ ಅಧ್ಯಕ್ಷ ಮಧುಕರ್‌ ಹಿರೇಗಂಗೆ ಅವರು ಹೇಳಿದರು. ಪರೋಕ್ಷ ತೆರಿಗೆಗಳ ಸಮಿತಿಯು ಐಸಿಎಐಯ ದಕ್ಷಿಣ ಭಾರತ ವಲಯದ ಮಂಗಳೂರು ಶಾಖೆಯ ಸಹಯೋಗದೊಂದಿಗೆ ಜಿಎಸ್‌ಟಿ ಕುರಿತು ನಗರದಲ್ಲಿ ಆಯೋಜಿಸಿದ್ದ ಎರಡು ದಿನಗಳ ರಾಷ್ಟ್ರೀಯ ಸಮಾವೇಶದ ಉದ್ಘಾಟನ ಸಂದರ್ಭದಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಜಿಎಸ್‌ಟಿಯಿಂದ […]

ವಿವಿಧ ಬೇಡಿಕೆಗಳಿಗಾಗಿ ಕರ್ನಾಟಕ ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಅತಿಥಿ ಉಪನ್ಯಾಸಕರ ಧರಣಿ.

Monday, February 4th, 2013
Guest lecturer's Protest

ಮಂಗಳೂರು : ದಕ್ಷಿಣ ಕನ್ನಡ, ಉಡುಪಿ ಮತ್ತು ಕೊಡಗು ಜಿಲ್ಲಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರಿಗೆ ನ್ಯಾಯ ಒದಗಿಸುವ ಕುರಿತು ನೊಂದ ಅಧ್ಯಾಪಕರು ಜ್ಯೋತಿ ಸರ್ಕಲಿನ ಸರ್ಕಾರದ ಪದವಿಪೂರ್ವ ಕಾಲೇಜಿನಿಂದ ಡಿ.ಸಿ. ಆಫೀಸಿಗೆ ಪ್ರತಿಭಟನಾ ಮೆರವಣಿಗೆಯಿಂದ ಘೋಷಣೆ ಕೂಗುತ್ತಾ ಬಂದರು. ಪ್ರತಿಭಟನಾ ಸಮಾವೇಶದ ಉದ್ಘಾಟನೆಯನ್ನು ರಾಜ್ಯ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷರಾದ ಹರಿಕೃಷ್ಣ ಪುನರೂರು ರವರು ದಿI ರಾಷ್ಟ್ರಪತಿ ಡಾ. ರಾಧಕೃಷ್ಣ ರವರ ಭಾವ ಚಿತ್ರಕ್ಕೆ ಹೂ ಹಾರ ಹಾಕುವ ಮೂಲಕ […]