ಕರ್ನಾಟಕ ವಿಧಾನಸಭೆಯ ವಿರೋಧ ಪಕ್ಷದ ನಾಯಕನಾಗಿ ಆರ್ ಅಶೋಕ್ ಆಯ್ಕೆ

Friday, November 17th, 2023
R Ashok

ಬೆಂಗಳೂರು: ಕರ್ನಾಟಕ ವಿಧಾನಸಭೆಯ ವಿರೋಧ ಪಕ್ಷದ ನಾಯಕನಾಗಿ ಬೆಂಗಳೂರಿನ ಪದ್ಮನಾಭ ನಗರ ಕ್ಷೇತ್ರದ ಶಾಸಕ ಆರ್ ಅಶೋಕ್ ಆಯ್ಕೆಯಾಗಿದ್ದಾರೆ. ಅವರನ್ನು ಬಿಜೆಪಿ ಹೈಕಮಾಂಡ್ ಇಂದು ಸಂಜೆ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ಆಯ್ಕೆ ಮಾಡಿದೆ. ವೀಕ್ಷಕರಾಗಿ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ದುಶ್ಯಂತ್ ಕುಮಾರ್ ಗೌತಮ್ ಆಗಮಿಸಿದ್ದರು. ಶಾಸಕರ ಅಭಿಪ್ರಾಯಗಳನ್ನು ಆಲಿಸಿದ ವೀಕ್ಷಕರು ವಿರೋಧದ ನಡುವೆಯೂ ವಿಪಕ್ಷ ನಾಯಕನಾಗಿ ಆರ್ ಅಶೋಕ್ ಅವರನ್ನು ನೇಮಿಸಿದ್ದಾರೆ. ಇನ್ನು ಇದೇ ವೇಳೆ ಸಭೆಯನ್ನು […]

‘ಕೆಟ್ಟ ಆಡಳಿತಗಾರ’ ಸಿದ್ದರಾಮಯ್ಯ ಜತೆ ವೇದಿಕೆ ಹಂಚಿಕೊಳ್ಳಲ್ಲ: ದೇವೇಗೌಡ

Wednesday, January 24th, 2018
siddaramaih

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಜತೆ ವೇದಿಕೆ ಹಂಚಿಕೊಳ್ಳುವುದಿಲ್ಲ ಎಂದು ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರು ಹೇಳಿದ್ದಾರೆ. ಕರ್ನಾಟಕ ವಿಧಾನಸಭೆ ಚುನಾವಣೆ 2018ರ ಹಿನ್ನಲೆಯಲ್ಲಿ ಸಿಎಂ ವಿರುದ್ಧ ವಾಗ್ದಾಳಿ ನಡೆಸಿರುವ ದೇವೇಗೌಡರು, ಸಿದ್ದರಾಮಯ್ಯ ಸರಕಾರ ಅತ್ಯಂತ ಕೆಟ್ಟ ಸರಕಾರ ಎಂದು ಜರೆದಿದ್ದಾರೆ. ದೇವೇಗೌಡರ ಈ ನಡೆಯನ್ನು ಬಿಜೆಪಿಯೆಡೆಗಿನ ಜೆಡಿಎಸ್ ನ ಇನ್ನೊಂದು ಹೆಜ್ಜೆ ಎಂದು ನೋಡಲಾಗುತ್ತಿದೆ. ದೇವೇಗೌಡರು ಫೆಬ್ರವರಿ 7ರಂದು ಶ್ರವಣಬೆಳಗೊಳದ ಮಹಾಮಸ್ತಕಾಭಿಷೇಕದ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಜತೆ ವೇದಿಕೆ ಹಂಚಿಕೊಳ್ಳಬೇಕಾಗಿತ್ತು. ಈ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ […]

ಕಾಂಗ್ರೆಸ್ಸ್ ನಲ್ಲಿ 17 ಕ್ರಿಮಿನಲ್ ಶಾಸಕರು, ಸಿದ್ದರಾಮಯ್ಯ ಸರಕಾರಕ್ಕೆ ಬಹುಮತದ ಚಿಂತೆ

Thursday, July 11th, 2013
siddhramaiha

ಬೆಂಗಳೂರು : ಕ್ರಿಮಿನಲ್ ಕೇಸುಗಳನ್ನು ಎದುರಿಸುತ್ತಿರುವ ಶಾಸಕರ ಅಪರಾಧ ಸಾಬೀತಾಗಿ 2 ವರ್ಷಕ್ಕಿಂತ ಹೆಚ್ಚು ಅವಧಿಗೆ ಶಿಕ್ಷೆಗೆ ಗುರಿಯಾದ ಸಂಸದ ಮತ್ತು ಶಾಸಕ ತನ್ನ ಸದಸ್ಯತ್ವ ಕಳೆದುಕೊಳ್ಳುತ್ತಾನೆ ಎಂದು ಭಾರತದ ಸರ್ವೋಚ್ಚ ನ್ಯಾಯಾಲಯ ಜು.10ರಂದು ಐತಿಹಾಸಿಕ ತೀರ್ಪು ನೀಡಿದೆ. ಆಡಳಿತಾರೂಢ ಕಾಂಗ್ರೆಸ್ ಅತೀ ಹೆಚ್ಚು ಕ್ರಿಮಿನಲ್ ಶಾಸಕರನ್ನು ಹೊಂದಿದೆ. ಕಾಂಗ್ರೆಸ್ಸಿನ ಒಟ್ಟು 17 ಶಾಸಕರು ಕ್ರಿಮಿನಲ್ ಕೇಸುಗಳನ್ನು ಎದುರಿಸುತ್ತಿದ್ದಾರೆ, ಬಿಜೆಪಿಯಿಂದ 9 ಮತ್ತು ಜೆಡಿಎಸ್ ನಿಂದ 6 ಶಾಸಕರ ವಿರುದ್ದ  ಕ್ರಿಮಿನಲ್  ಮೊಕದ್ದಮೆ ಇದೆ. ಇವರ ಆರೋಪ ಸಾಬೀತಾಗಿ […]