ನನ್ನಂತಹ ಸಾಮಾನ್ಯ ಕಾರ್ಯಕರ್ತನನ್ನು ಚುನಾಯಿಸಿದ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳಿಗೆ ಕೃತಜ್ಞತೆಗಳು : ಮಂಜುನಾಥ ಭಂಡಾರಿ

Tuesday, December 14th, 2021
Manjunatha-Bhandary

ಮಂಗಳೂರು : ನನ್ನಂತಹ ಸಾಮಾನ್ಯ ಕಾರ್ಯಕರ್ತನನ್ನು ಗುರುತಿಸಿ, ಕರ್ನಾಟಕ ವಿಧಾನ ಪರಿಷತ್ ಸದಸ್ಯನಾಗಿ ಆರಿಸಿದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳಿಗೆ ನನ್ನ ತುಂಬು ಹೃದಯದ ಧನ್ಯವಾದಗಳು. ನನ್ನ ಮೇಲೆ ಅಭಿಮಾನ ಮತ್ತು ನಂಬಿಕೆ ಇಟ್ಟು ದಕ್ಷಿಣ ಕನ್ನಡ ಮತ್ತು ಉಡುಪಿ ಸ್ಥಳೀಯ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಿ ನನ್ನ ಗೆಲುವಿಗೆ ಸಹಕರಿಸಿದ  ಪಕ್ಷದ ಎಲ್ಲಾ ನಾಯಕರುಗಳಿಗೆ ನಾನು ಆಭಾರಿಯಾಗಿದ್ದೇನೆ. ಪಕ್ಷದ ನಾಯಕರು ನನ್ನ ಮೇಲಿಟ್ಟ ನಂಬಿಕೆ ಮತ್ತು ಅಭಿಮಾನ […]

ಕರ್ನಾಟಕ ವಿಧಾನ ಪರಿಷತ್ ಚುನಾವಣೆ : ಗೆದ್ದವರ ವಿವರ ಇಲ್ಲಿದೆ

Tuesday, December 14th, 2021
MLC-election

ಬೆಂಗಳೂರು : ಕರ್ನಾಟಕ ವಿಧಾನ ಪರಿಷತ್ತಿನ 25 ಸ್ಥಾನಗಳಿಗೆ ಡಿಸೆಂಬರ್ 10 ರಂದು ನಡೆದ ಚುನಾವಣೆಯ ಫಲಿತಾಂಶ  ಇಂದು ಪ್ರಕಟವಾಗಲಿದೆ. 75 ಸದಸ್ಯರ ಮೇಲ್ಮನೆಯಲ್ಲಿ ಮೂರನೇ ಒಂದು ಭಾಗದಷ್ಟು ಸ್ಥಾನಗಳನ್ನು ಪಡೆದುಕೊಳ್ಳಲು ಈ ಚುನಾವಣೆಯಲ್ಲಿ ಅವಕಾಶವಿದೆ. 2023ರ ಕರ್ನಾಟಕ ವಿಧಾನಸಭಾ  ಹಿನ್ನೆಲೆಯಲ್ಲಿ ಈ ಚುನಾವಣೆ ಆಡಳಿತಾರೂಢ ಬಿಜೆಪಿ ಮತ್ತು ಪ್ರತಿಪಕ್ಷ ಕಾಂಗ್ರೆಸ್  ಎರಡಕ್ಕೂ ಚುನಾವಣೆಗಳು ಮಹತ್ವದ್ದಾಗಿವೆ. ಫಲಿತಾಂಶ ಪ್ರಕಟವಾದ ಬಳಿಕ ವಿಧಾನಪರಿಷತ್ ರಚನೆಯಲ್ಲಿ ಮಹತ್ವದ ಬದಲಾವಣೆಯಾಗಲಿದೆ. ಮೇಲ್ಮನೆಯಲ್ಲಿ 32 ಸ್ಥಾನಗಳನ್ನು ಹೊಂದಿರುವ ಬಿಜೆಪಿ, 12 ಸದಸ್ಯರನ್ನು ಹೊಂದಿರುವ ಜೆಡಿಎಸ್ […]

ವಿಧಾನ ಪರಿಷತ್ ಚುನಾವಣೆ: ಕಣದಲ್ಲಿ ಮೂವರು ಅಭ್ಯರ್ಥಿಗಳು-4 ಉಮೇದುವಾರಿಕೆ ವಾಪಸ್

Friday, November 26th, 2021
MLC-election

ಮಂಗಳೂರು  :  ಕರ್ನಾಟಕ ವಿಧಾನ ಪರಿಷತ್ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಮತಕ್ಷೇತ್ರದ ಚುನಾವಣೆಗೆ ಸ್ಪರ್ಧೆ ಬಯಸಿ ಉಮೇದುವಾರಿಕೆ ಸಲ್ಲಿಸಿದ್ದ 7 ಮಂದಿ ಅಭ್ಯರ್ಥಿಗಳಲ್ಲಿ ನಾಮಪತ್ರ ಹಿಂಪಡೆಯುವ ಕೊನೆಯ ದಿನವಾದ ನ.26ರ ಶುಕ್ರವಾರ ನಾಲ್ವರು ಅಭ್ಯರ್ಥಿಗಳು ತಮ್ಮ ಉಮೇದುವಾರಿಕೆಯನ್ನು ಹಿಂದಕ್ಕೆ ಪಡೆದಿದ್ದಾರೆ. ಪಕ್ಷೇತರ ಅಭ್ಯರ್ಥಿಗಳಾಗಿ ನಾಮಪತ್ರ ಸಲ್ಲಿಸಿದ್ದ ನಿತಿನ್ ಕುಮಾರ್, ಕೌಶಿಕ್ ಡಿ ಶೆಟ್ಟಿ, ನವೀನ್ ಕುಮಾರ್ ರೈ ಹಾಗೂ ಶಶಿಧರ್ ಎಂ. ಅವರು ಉಮೇದುವಾರಿಕೆ ಹಿಂಪಡೆದುಕೊಂಡಿದ್ದಾರೆ. ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಮಂಜುನಾಥ ಭಂಡಾರಿ, […]