ವೀಕೆಂಡ್‌ ಕರ್ಫ್ಯೂ ನಡುವೆಯೇ ವಿವಾಹ : ಪುಂಜಾಲಕಟ್ಟೆಯಲ್ಲಿ ಸಾಮೂಹಿಕ ವಿವಾಹಕ್ಕೆ ಪೊಲೀಸರ ಬೆಂಬಲ

Sunday, April 25th, 2021
Tungappa Bangera

ಬೆಳ್ತಂಗಡಿ :  ಬಿಜೆಪಿಯ ದಕ್ಷಿಣ ಕನ್ನಡ ಜಿಲ್ಲಾ ಮುಖಂಡ ಹಾಗೂ ಜಿಲ್ಲಾ ಪಂಚಾಯತ್ ಸದಸ್ಯ ತುಂಗಪ್ಪ ಬಂಗೇರ ಅವರ ನೇತೃತ್ವದಲ್ಲಿ ರಾಜ್ಯ ಸರ್ಕಾರ ಘೋಷಿಸಿದ ವೀಕೆಂಡ್‌ ಕರ್ಫ್ಯೂ ಮತ್ತು ಇತರ ಕೊರೊನಾ ನಿಯಮಗಳನ್ನು ಉಲ್ಲಂಘಿಸಿ ಪುಂಜಾಲಕಟ್ಟೆಯಲ್ಲಿ ಸಾಮೂಹಿಕ ವಿವಾಹ ಕಾರ್ಯಕ್ರಮ ಏಪ್ರಿಲ್ 25 ರ ಭಾನುವಾರ ಆಯೋಜಿಸಲಾಗಿದೆ. ಪುಂಜಾಲಕಟ್ಟೆಯ ಪೊಲೀಸ್‌ ಠಾಣೆಯ ಸಮೀಪದಲ್ಲೇ ಇನ್ನು ಈ ಕಾರ್ಯಕ್ರಮ ನಡೆಸಲಾಗಿದೆ. ನೂರಾರು ಜನರು ಸೇರಿ ಕೊರೊನಾ ಉಲ್ಲಂಘನೆ ಯಾಗುತ್ತಿದ್ದರೂ ಕೂಡಾ ಪೊಲೀಸರು ಮಧ್ಯಪ್ರವೇಶ ಮಾಡಿಲ್ಲ. ಸಾಮಾನ್ಯ ಜನರ ವಿರುದ್ದ ಪ್ರಕರಣ […]

ಯಾವುದೇ ಕಾರಣಕ್ಕೂ ಲಾಕ್ ಡೌನ್ ಮಾಡುವುದಿಲ್ಲವೆಂದು ಎಂದು ಹೇಳಿ, ಸರಕಾರ ಈಗ ಮಾಡುತ್ತಿರುವುದೇನು ?

Friday, April 23rd, 2021
Market Bundh

ಮಂಗಳೂರು : ಕೊರೋನಾ ಮಾರ್ಗ ಸೂಚಿ ಪ್ರಕಾರ ಸರಕಾರ ಕ್ಷಣಕ್ಕೊಂದು ನಿರ್ಧಾರ ತಳೆದು ಜನರನ್ನು ಸಂಪೂರ್ಣ ಗೊಂದಲ ಹಾಗೂ ಭಯಭೀತ ಗೊಳಿಸಿದ್ದು, ಸರಕಾರ ಯಾವುದೇ ಕಾರಣಕ್ಕೂ ಲಾಕ್ ಡೌನ್ ಮಾಡುವುದಿಲ್ಲವೆಂದು ಹೇಳಿದ್ದು, ಇದೀಗ ಹಿಂಬಾಗಿಲ ಮೂಲಕ ಸಾರ್ವಜನಿಕ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿಸಿ, ವೀಕೆಂಡ್ ಕರ್ಫ್ಯೂ ಹೆಸರಲ್ಲಿ ಅಘೋಷಿತ ಸಂಪೂರ್ಣ ಲಾಕ್ ಡೌನ್ ಸ್ಥಿತಿಗೆ ತಂದಿದೆ. ಕೊರೋನಾ ನಿಯಂತ್ರಣ ಇರುವ ಪ್ರದೇಶದಲ್ಲಿ ಕೂಡ ವ್ಯವಹಾರ ಮಳಿಗೆಗಳನ್ನು ಏಕಾಏಕಿ ಬಲವಂತ ಮುಚ್ಚಲು ಆರಂಭಿಸಿದೆ. ಸರಕಾರದ ಈ ಕ್ರಮ ಮುಂದಿನ […]

ನಾಳೆ ರಾಜ್ಯದಲ್ಲಿ ಕರ್ಫ್ಯೂ ಇರಲ್ಲ, ಮದ್ಯದಂಗಡಿ ಕೂಡ ಓಪನ್‌ ಇರತ್ತೆ

Saturday, May 30th, 2020
bs-yedyurappa

ಹುಬ್ಬಳ್ಳಿ : ಕಳೆದ ಎರಡು ವಾರಗಳಿಂದ ಸ್ವಲ್ಪ ಸಡಿಲಗೊಂಡ ಲಾಕ್‌ ಡೌನ್‌ ಶನಿವಾರ ಸಂಜೆ 7 ರಿಂದ ಸೋಮವಾರ 7 ರವರೆಗೆ ಕರ್ಫ್ಯೂ ವಿಧಿಸಲಾಗುತ್ತಿತ್ತು. ಆದರೆ, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಾಗರಿಕರಿಗೆ ರವಿವಾರದಂದು ಕರ್ಫ್ಯೂ ಸಡಿಲಗೊಳಿಸಿ ಆದೇಶ ಹೊರಡಿಸಿದ್ದಾರೆ. ಇದರಿಂದ ವ್ಯಾಪಾರಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ. ಕೊರೊನಾ ಹಿನ್ನೆಲೆಯಲ್ಲಿ ಪ್ರತಿ ರವಿವಾರ ರಾಜ್ಯಾದ್ಯಂತ ಸಂಪೂರ್ಣ ಲಾಕ್‍ಡೌನ್ ಮಾಡಲಾಗಿತ್ತು. ಆದರೆ ರಾಜ್ಯ ಸರ್ಕಾರ ನಾಳೆ ಕರ್ಫ್ಯೂವನ್ನು ಸಡಿಲಗೊಳಿಸಿ ಆದೇಶ ಹೊರಡಿಸಿದೆ. ಎಂದಿನಂತೆ ಎಲ್ಲಾ ಚಟವಟಿಕೆಗಳು ಇರಲಿದೆ ಎಂದು ಸಿಎಂ ಕಚೇರಿಯಿಂದ ಅಧಿಕೃತವಾಗಿ ಘೋಷಣೆಯಾಗಿದೆ. ಬಸ್ […]

ಮಂಗಳೂರು ನಗರದಲ್ಲಿ ಡಿಸೆಂಬರ್ 20 ಶಾಲಾ ಕಾಲೇಜುಗಳಿಗೆ ರಜೆ, ಡಿಸೆಂಬರ್ 22ರ ಮಧ್ಯರಾತ್ರಿ ವರೆಗೆ ಕರ್ಫ್ಯೂ

Thursday, December 19th, 2019
lati Charge

ಮಂಗಳೂರು : ಮಂಗಳೂರು ನಗರದಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಶುಕ್ರವಾರದಂದು ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಮಂಗಳೂರಿನಲ್ಲಿ ಡಿಸೆಂಬರ್ 22ರ ಮಧ್ಯರಾತ್ರಿ ವರೆಗೆ ಕರ್ಫ್ಯೂ ಜಾರಿಮಾಡಲಾಗಿದೆ ಎಂದು ಮಂಗಳೂರು ಪೊಲೀಸ್ ಕಮಿಷನರೇಟ್ ತಿಳಿಸಿದೆ. ಡಿಸೆಂಬರ್ 19 ಗುರುವಾರದಂದು ಮಂಗಳೂರಲ್ಲಿ ಗುಂಪೊಂದು ಪೊಲೀಸರ ಮೇಲೆ ಹಿಂಸಾಚಾರ ನಡೆಸಿದ  ಹಿನ್ನಲೆಯಲ್ಲಿ ನಗರದಲ್ಲಿ ಇನ್ನಷ್ಟು ಗಲಭೆಗಳು ನಡೆಯದಂತೆ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.  ಕೇಂದ್ರ ಸರಕಾರ ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಕಾಯ್ದೆಗೆ  ಮಂಗಳೂರಿನಲ್ಲಿ ಈ ಕಾಯ್ದೆಗೆ ಕೆಲವು ಸಂಘಟನೆಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದವು. ಈ ನಡುವೆ ದಕ್ಷಿಣ ಕನ್ನಡ […]

ಸಹಜ ಸ್ಥಿತಿಗೆ ಮರಳಿದ ಮಹಾನಗರ: ಕರ್ಫ್ಯೂ ಹಿಂಪಡೆದ ಪೊಲೀಸರು

Wednesday, September 14th, 2016
bangalore-normalcy

ಬೆಂಗಳೂರು: ಕಾವೇರಿ ನೀರು ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಸೋಮವಾರ ನಗರದಲ್ಲಿ ನಡೆದ ಹಿಂಸಾಚಾರದ ಪರಿಣಾಮ ಕರ್ಫ್ಯೂ ಹೇರಲಾಗಿತ್ತು. ಆದ್ರೆ ಮಹಾನಗರ ಇಂದು ಯಥಾಸ್ಥಿತಿಗೆ ಮರಳುತ್ತಿರುವುದರಿಂದ ಕರ್ಫ್ಯೂವನ್ನ ಪೊಲೀಸರು ಹಿಂಪಡೆದಿದ್ದಾರೆ. ಇದರ ಜೊತೆಗೆ ಬೆಳಗ್ಗೆ 9 ಗಂಟೆಯಿಂದ ಕಂಡಲ್ಲಿ ಗುಂಡು ಆದೇಶವನ್ನೂ ಸಹ ವಾಪಸ್ ಪಡೆದಿದ್ದಾರೆ. ನಗರದ ಹದಿನಾರು ಪೊಲೀಸ್ ಠಾಣೆ ವ್ಯಾಪ್ತಿಗಳಲ್ಲಿ ಕರ್ಫ್ಯೂ ವಿಧಿಸಲಾಗಿತ್ತು, ಪರಿಸ್ಥಿತಿ ಸಹಜ ಸ್ಥಿತಿಗೆ ಬಂದ ಹಿನ್ನೆಲೆಯಲ್ಲಿ ಕರ್ಫ್ಯೂವನ್ನು ಪೊಲೀಸರು ಹಿಂಪಡೆದಿದ್ದಾರೆ. ಆದರೆ ಇನ್ನೂ ನಗರದಾದ್ಯಂತ ನಿಷೇಧಾಜ್ಞೆ ಮುಂದುವರೆಸಲಾಗಿದೆ. ಮುಂದಿನ ಪರಿಸ್ಥಿತಿ ನೋಡಿಕೊಂಡು […]

ಬೆಂಗಳೂರಿನ 16 ಬಡಾವಣೆಗಳಲ್ಲಿ ಸೆಪ್ಟೆಂಬರ್ 13ರಿಂದ 14ರವರೆಗೆ ಕರ್ಫ್ಯೂ ಜಾರಿ

Tuesday, September 13th, 2016
karpue

ಬೆಂಗಳೂರು: ಕಾವೇರಿ ನೀರು ಹಂಚಿಕೆಗೆ ಸಂಬಂಧಿಸಿದಂತೆ ಕರ್ನಾಟಕದ ವಿರುದ್ಧ ಸುಪ್ರೀಂಕೋರ್ಟ್ ಆದೇಶ ಬಂದ ನಂತರ ನಗರದಲ್ಲಿ ಹಿಂಸಾಚಾರ ಭುಗಿಲೆದ್ದ ಹಿನ್ನೆಲೆಯಲ್ಲಿ 16 ಬಡಾವಣೆಗಳಲ್ಲಿ ಸೆಪ್ಟೆಂಬರ್ 13ರಿಂದ 14ರವರೆಗೆ ಕರ್ಫ್ಯೂ ಜಾರಿ ಮಾಡಲಾಗಿದ್ದು, ಕಂಡಲ್ಲಿ ಗುಂಡಿಗೆ ಆದೇಶ ನೀಡಲಾಗಿದೆ. ರಾಜರಾಜೇಶ್ವರಿ ನಗರ, ಕೆಪಿ ಅಗ್ರಹಾರ, ಚಂದ್ರಾ ಲೇಔಟ್, ಯಶವಂತಪುರ, ಮಹಾಲಕ್ಷ್ಮೀ ಲೇಔಟ್, ಪೀಣ್ಯ, ಆರ್‌ಎಂಸಿ ಯಾರ್ಡ್, ನಂದಿನಿ ಲೇಔಟ್, ಜ್ಞಾನಭಾರತಿ ಪೊಲೀಸ್ ಠಾಣೆ ವ್ಯಾಪ್ತಿ, ರಾಜಗೋಪಾಲನಗರ, ಕಾಮಾಕ್ಷಿಪಾಳ್ಯ, ವಿಜಯನಗರ, ಬ್ಯಾಟರಾಯನಪುರ, ಕೆಂಗೇರಿ, ಮಾಗರಿ ರಸ್ತೆ ಮತ್ತು ರಾಜಾಜಿನಗರ. ಕರ್ಫ್ಯೂ […]