ಕಲೆ ಮತ್ತು ಸಾಹಿತ್ಯಗಳೆರಡರ ಕೌಶಲ ಪ್ರಕಾಶಕ್ಕೆ ಗಮಕ ಕಲೆ ಅವಕಾಶ ನೀಡುತ್ತದೆ

Friday, September 16th, 2016
kumbale

ಕುಂಬಳೆ: ನಾಡಿನ ಸಾಂಪ್ರದಾಯಿಕ ಕಲೆಯಾದ ಗಮಕ ಪ್ರಕಾರವನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಯುವ ಸಮೂಹ ಸ್ವ ಆಸಕ್ತಿಯಿಂದ ಮಾಡಬೇಕು. ಕಲೆ ಮತ್ತು ಸಾಹಿತ್ಯಗಳೆರಡರ ಕೌಶಲ ಪ್ರಕಾಶಕ್ಕೆ ಗಮಕ ಕಲೆ ಅವಕಾಶ ನೀಡುತ್ತದೆಯೆಂದು ಖ್ಯಾತ ಕಲಾವಿದ ಎಸ್ ಎನ್ ಪಂಜಾಜೆ ಅಭಿಪ್ರಾಯ ವ್ಯಕ್ತಪಡಿಸಿದರು. ಕರ್ನಾಟಕ ಗಮಕ ಕಲಾ ಪರಿಷತ್ತು ಕೇರಳ ಗಡಿನಾಡ ಘಟಕದ ಆಶ್ರಯದಲ್ಲಿ ಕಾಸರಗೋಡಿನ ಹವ್ಯಕ ಭವನದಲ್ಲಿ ಇತ್ತೀಚೆಗೆ ನಡೆದ ೩ ದಿನಗಳ ಗಮಕ ಕಲಾ ತರಬೇತಿ ಕಾರ್ಯಾಗಾರದ ಸಮಾರೋಪ ಸಮಾರಂಭದ ಮುಖ್ಯ ಅತಿಥಿಗಳಾಗಿ ಮಾತನಾಡುತ್ತಿದ್ದರು. ಗಮಕ […]

ಕಲಾಸೇವೆಯ ಬಹು ವರ್ಷಗಳ ಸೇವೆಯನ್ನು ಮನ್ನಿಸಿ ಹಬ್ಬದಂತೆ ಸಂಭ್ರಮಿಸುವುದು ಯಕ್ಷಗಾನದ ಯಶಸ್ವಿ ಕಾರ್ಯಕ್ರಮ: ಜಯರಾಮ ಮಂಜತ್ತಾಯ

Monday, August 22nd, 2016
Kalaseve

ಬದಿಯಡ್ಕ: ಪ್ರಬುದ್ದ ಕಲಾವಿದರನ್ನು ಪ್ರೋತ್ಸಾಹಿಸಿ ಅವರನ್ನು ಬೆಳೆಸುವ ನಿಟ್ಟಿನಲ್ಲಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದು ಕಲೆ,ಸಂಸ್ಕೃತಿಗಳ ಪುನರುತ್ಥಾನಕ್ಕೆ ಬಲ ನೀಡಿದಂತಾಗುತ್ತದೆ.ಈ ಹಿನ್ನೆಲೆಯಲ್ಲಿ ಕಲಾವಿದರ ಕಲಾಸೇವೆಯ ಬಹು ವರ್ಷಗಳ ಸೇವೆಯನ್ನು ಮನ್ನಿಸಿ ಹಬ್ಬದಂತೆ ಸಂಭ್ರಮಿಸುವುದು ಯಕ್ಷಗಾನದ ಮಟ್ಟಿಗೆ ಯಶಸ್ವಿ ಕಾರ್ಯಕ್ರಮವೆಂದು ಪಾರ್ತಿಸುಬ್ಬ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಜಯರಾಮ ಮಂಜತ್ತಾಯ ಎಡನೀರು ಅಭಿಪ್ರಾಯ ವ್ಯಕ್ತಪಡಿಸಿದರು. ಹಿರಿಯ ಯಕ್ಷಗಾನ ಕಲಾವಿದ ಮಾನ್ಯ ಸಂತೋಷ್ ಕುಮಾರ್ ರವರ ರಜತ ಸಂಭ್ರಮ ಅಭಿನಂದನಾ ಸಮಿತಿ ಭಾನುವಾರ ಮಾನ್ಯ ಜ್ಞಾನೋದಯ ಶಾಲಾ ವಠಾರದಲ್ಲಿ ಆಯೋಜಿಸಿದ್ದ ವಿಜ್ಞಾಪನಾ ಪತ್ರ […]