ತಾಲೂಕು ಪಂಚಾಯತ್ ಸದಸ್ಯನ ಮೇಲೆ ಬಂಟ್ವಾಳ ಏಎಸ್ ಐ ಯಿಂದ ಹಲ್ಲೆ

Friday, May 14th, 2021
Bantwala SI

ಬಂಟ್ವಾಳ : ಮೆಡಿಕಲ್ ಶಾಪ್ ಗೆ ಬಂದ ತಾಲೂಕು ಪಂಚಾಯತ್ ಸದಸ್ಯನ  ಮೇಲೆ ಕಲ್ಲಡ್ಕದಲ್ಲಿ ಬಂಟ್ವಾಳ ಏಎಸ್ ಐ ಹಲ್ಲೆ ನಡೆಸಿದ್ದು ಇದನ್ನು ಸಾರ್ವಜನಿಕರು ಪ್ರಶ್ನಿಸಿದದ ಘಟನೆ ಶುಕ್ರವಾರ ಬೆಳಗ್ಗೆ ಕಲ್ಲಡ್ಕದಲ್ಲಿ ನಡೆದಿದೆ. ಲಾಕ್ ಡೌನ್ ನಿಯಮಾವಳಿಯಂತೆ ಬೆಳಗ್ಗೆ 9 ಗಂಟೆಯ ಬಳಿಕ ಕಲ್ಲಡ್ಕದಲ್ಲಿ ಅಂಗಡಿಗಳನ್ನು ಮುಚ್ಚುವಂತೆ ಪೋಲೀಸರು ಸೂಚಿಸುತ್ತಿದ್ದರು. ಈ ವೇಳೆ ಕಾರು ನಿಲ್ಲಿಸಿ ಮೆಡಿಕಲ್ ಶಾಪ್ ಗೆ ಬರುತ್ತಿದ್ದ ಬಂಟ್ವಾಳ ತಾಲೂಕು ಪಂಚಾಯತ್ ಹಾಲಿ ಬಿಜೆಪಿ ಸದಸ್ಯ ಮಹಾಬಲ ಆಳ್ವ ಗೋಳ್ತಮಜಲು ಅವರ ಮೇಲೆ  ಬಂಟ್ವಾಳ ನಗರ […]

ಕಲ್ಲಡ್ಕದಲ್ಲಿ ಅನಿಲ ಟ್ಯಾಂಕರ್ ಮತ್ತು ಕಂಟೈನರ್ ಢಿಕ್ಕಿ

Thursday, February 4th, 2021
Gas Tanker

ಮಂಗಳೂರು  : ಅನಿಲ ಟ್ಯಾಂಕರ್ ಮತ್ತು ಕಂಟೈನರ್ ಪರಸ್ಪರ ಢಿಕ್ಕಿ ಹೊಡೆದ ಪರಿಣಾಮ ಕಲ್ಲಡ್ಕದಲ್ಲಿ ಬುಧವಾರ ರಾತ್ರಿ ನಡೆದಿದೆ. ಬೆಂಗಳೂರು ಕಡೆಯಿಂದ ಮಂಗಳೂರಿಗೆ ಬರುತ್ತಿದ್ದ ಖಾಲಿ ಗ್ಯಾಸ್ ಟ್ಯಾಂಕರ್ ಮತ್ತು ಬೆಂಗಳೂರು ಕಡೆ ಹೋಗುತ್ತಿದ್ದ ಕಂಟೈನರ್ ನಡುವೆ ಅಪಘಾತ ಸಂಭವಿಸಿದೆ. ಆದರೆ ಗ್ಯಾಸ್ ಟ್ಯಾಂಕರ್ ಖಾಲಿ ಇದ್ದ ಕಾರಣ ಯಾವುದೇ ಅಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ. ಬುಧವಾರ ರಾತ್ರಿ ಸುಮಾರು 9 ಗಂಟೆ ವೇಳೆಗೆ ಕಲ್ಲಡ್ಕ ಪೂರ್ಲಿಪ್ಪಾಡಿಯಲ್ಲಿ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸ್ಥಳಕ್ಕೆ ಬಂಟ್ವಾಳ ಟ್ರಾಫಿಕ್ […]

ಚೆನ್ನ ಫಾರೂಕ್ ಹತ್ಯೆ ಪ್ರಕರಣದ ಮತ್ತಿಬ್ಬರು ಆರೋಪಿಗಳ ಬಂಧನ

Saturday, November 7th, 2020
Chenne Farooq

ಬಂಟ್ವಾಳ :  ಚೆನ್ನ ಫಾರೂಕ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಾರಿಯಾಗಿದ್ದ ಇಬ್ಬರು ಆರೋಪಿಗಳನ್ನು ಬಂಟ್ವಾಳ ಎಸ್ ಐ ಅವಿನಾಶ್ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿ ತೊಕ್ಕೊಟ್ಟು ಸಮೀಪದಿಂದ ಬಂಧಿಸಿದ್ದಾರೆ. ತೊಕ್ಕೊಟ್ಟುವಿನಲ್ಲಿ ವಾಸವಾಗಿರುವ ಹಫೀಸ್ ಯಾನೆ ಅಪ್ಪಿ ಹಾಗೂ ಅಕ್ಕರಂಗಡಿ ನಿವಾಸಿ ಇರ್ಶಾದ್ ಬಂಧಿತ ಆರೋಪಿಗಳು. ಮೆಲ್ಕಾರ್ ಸಮೀಪ ಫಾರೂಕ್ ಯಾನೆ ಚೆನ್ನ ಫಾರೂಕ್ ಕಲ್ಲಡ್ಕ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಟ್ವಾಳ ಎಸ್.ಐ ಅವಿನಾಶ್ ನೇತೃತ್ವದ ತಂಡ ಗುರುವಾರ ಸಂಜೆ ಬಂಧಿಸಿದೆ. ಮೂಲತಃ ನಂದಾವರ ನಿವಾಸಿ […]

ಕೋವಿಡ್ ವೈರಸ್ ಗೆ ಕಲ್ಲಡ್ಕದ 45ವರ್ಷದ ವ್ಯಕ್ತಿ ಬಲಿ

Thursday, July 2nd, 2020
covid-death

ಬಂಟ್ವಾಳ: ಕೋವಿಡ್ ವೈರಸ್ ಗೆ ಬಂಟ್ವಾಳ ತಾಲೂಕಿನಲ್ಲಿ 5ನೇ ಬಲಿಯಾಗಿದ್ದು, ಕಲ್ಲಡ್ಕ ಭಾಗದ 45ವರ್ಷದ ವ್ಯಕ್ತಿಯೋರ್ವರು ಮೃತಪಟ್ಟಿದ್ದಾರೆ. ಮಂಗಳೂರು ಖಾಸಗಿ ಆಸ್ಪತ್ರೆಗೆ ಕಿಡ್ನಿ ಸಮಸ್ಯೆ ಯ ಚಿಕಿತ್ಸೆಗಾಗಿ ದಾಖಲಾಗಿದ್ದರು. ಆದಿತ್ಯವಾರ ವೈದ್ಯರ ಪರೀಕ್ಷೆಯ ಬಳಿಕ ಅವರಿಗೆ ಕೋವಿಡ್ ಸೊಂಕು ತಗಿಲಿರುವ ಬಗ್ಗೆ ಮಾಹಿತಿ ನೀಡಿದ್ದಾರೆ. ಆದರೆ ಇವರಿಗೆ ಸೊಂಕಿನ ಮೂಲ ಯಾವುದು ಎಂಬುದು ದೃಡವಾಗಿಲ್ಲ. ಇವರು ಪ್ರಥಮ ಚಿಕಿತ್ಸೆ ಪಡೆದ ಕಲ್ಲಡ್ಕ ದ ಖಾಸಗಿ ಆಸ್ಪತ್ರೆಯ ನ್ನು ಸೋಮವಾರದಿಂದ ಸೀಲ್ ಡೌನ್ ಮಾಡಲಾಗಿದೆ. ಮೃತ ವ್ಯಕ್ತಿಯ ಪುತ್ರ […]

ಶ್ರೀರಾಮ ವಿದ್ಯಾ ಕೇಂದ್ರ ಕಲ್ಲಡ್ಕ ನಡೆದ ಕ್ರೀಡೋತ್ಸವದ ಒಂದು ದೃಶ್ಯ

Tuesday, December 17th, 2019
RamaVidya

ಮಂಗಳೂರು: ಶ್ರೀರಾಮ ವಿದ್ಯಾ ಕೇಂದ್ರ ಕಲ್ಲಡ್ಕ ಇಲ್ಲಿ ಡಿಸೆಂಬರ್ 15 ರಂದು ನಡೆದ ಕ್ರೀಡೋತ್ಸವದ ಒಂದು ದೃಶ್ಯ

ಬೇಲ್ ಮೇಲೆ ಜೈಲಿನಿಂದ ಬಂದ ದಿನವೇ ಯುವಕನ ಮೇಲೆ ಅಟ್ಯಾಕ್‌… ಕಲ್ಲಡ್ಕದಲ್ಲಿ ಘಟನೆ

Tuesday, June 12th, 2018
assualt

ಮಂಗಳೂರು: ಯುವಕನೋರ್ವನ ಮೇಲೆ ತಂಡವೊಂದು ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಜಿಲ್ಲೆಯ ಬಂಟ್ವಾಳದ ಕಲ್ಲಡ್ಕದಲ್ಲಿ ನಡೆದಿದೆ. ಚೇತನ್ ಮೆಲ್ಕಾರ್ ಹಲ್ಲೆಗೊಳಗಾದ ಯುವಕ. ಕಿರಣ್ ಮೆಲ್ಕಾರ್, ಯೋಗೇಶ್, ಮೋಹನ್, ಕೀರ್ತನ್, ಲೋಕೇಶ್, ಪ್ರಕಾಶ್, ವಿದ್ಯಾಧರ್ ಎಂಬವರ ತಂಡ ಹಲ್ಲೆ ನಡೆಸಿದೆ ಎನ್ನಲಾಗಿದೆ. ಚೇತನ್ ಇಂದಷ್ಟೇ ಜಾಮೀನಿನ ಮೇಲೆ ಜೈಲಿನಿಂದ ಬಿಡುಗಡೆಯಾಗಿ ಬಂದಿದ್ದ. ಹಳೆಯ ದ್ವೇಷದಿಂದ ಹಲ್ಲೆ ನಡೆಸಲಾಗಿದೆ ಎಂದು ತಿಳಿದುಬಂದಿದೆ. ಗಾಯಾಳು ಚೇತನ್‌ನನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾನೆ.

ಕಲ್ಲಡ್ಕ ಶಾಲೆಗೆ ಬಿಸಿಯೂಟ ಪೂರೈಸಿದ ರಾಜ್ಯ ಸರ್ಕಾರ..!

Saturday, June 2nd, 2018
kalladka

ಮಂಗಳೂರು: ಕೊಲ್ಲೂರು ದೇವಾಲಯದಿಂದ ಸಿಗುತ್ತಿದ್ದ ಆರ್ಥಿಕ ನೆರವನ್ನು ನಿಲ್ಲಿಸಿದ ನಂತರ ಭಾರಿ ವಿವಾದಕ್ಕೀಡಾದ ಕಲ್ಲಡ್ಕ ಶ್ರೀ ರಾಮ ವಿದ್ಯಾಕೇಂದ್ರ ಮತ್ತು ಪುಣಚ ಅನುದಾನಿತ ಪ್ರೌಢ ಶಾಲೆ ಬಳಿಕ ಅರ್ಜಿ ಸಲ್ಲಿಸಿದ ಹಿನ್ನೆಲೆಯಲ್ಲಿ ಬಿಸಿಯೂಟಕ್ಕಾಗಿ ಸರ್ಕಾರದಿಂದ ಅಕ್ಕಿ ಪೂರೈಕೆ ಮಾಡಲಾಗಿದೆ. ಸರ್ಕಾರದ ಬಿಸಿಯೂಟ ವ್ಯವಸ್ಥೆಯಿದ್ದರೂ ಕಲ್ಲಡ್ಕ ಮತ್ತು ಪುಣಚ ಶಾಲೆಗೆ ಕೊಲ್ಲೂರು ದೇವಾಲಯದಿಂದ ಬಿಸಿಯೂಟಕ್ಕೆ ಆರ್ಥಿಕ ನೆರವನ್ನು ನೀಡಲಾಗುತ್ತಿತ್ತು. ಆದರೆ ಇದನ್ನು ಸರ್ಕಾರ ರದ್ದು ಪಡಿಸಿತ್ತು. ಈ ವಿಚಾರ ವಿವಾದಕ್ಕೆ ಕಾರಣವಾಗಿತ್ತು. ಇದೀಗ ಈ ಸಂಸ್ಥೆಗಳಿಂದ ಮಧ್ಯಾಹ್ನದ ಬಿಸಿಯೂಟಕ್ಕಾಗಿ […]

ಕಲ್ಲಡ್ಕ ಬಳಿ ಭೀಕರ ಸರಣಿ ಅಪಘಾತ: ಕಾರಿನಲ್ಲಿದ್ದವರು ಪವಾಡಸದೃಶ ಪಾರು

Friday, March 2nd, 2018
accident

ಮಂಗಳೂರು: ಕಲ್ಲಡ್ಕ ಬಳಿ ಭೀಕರ ಸರಣಿ ಅಪಘಾತ ನಡೆದಿದ್ದು, ಕಾರಿನಲ್ಲಿದ್ದ ನಾಲ್ಕು ಮಂದಿ ಪ್ರಯಾಣಿಕರು ಪವಾಡ ಸದೃಶವಾಗಿ ಪಾರಾಗಿದ್ದಾರೆ. ಬಂಟ್ವಾಳ ತಾಲೂಕಿನ ಕಲ್ಲಡ್ಕದಲ್ಲಿ ಈ ಘಟನೆ ನಡೆದಿದೆ. ಬಸ್‌ ಹಾಗೂ ಕಾರಿಗೆ ಡಿಕ್ಕಿಯಾದ ಟಿಪ್ಪರ್ ಲಾರಿ ಕಾರಿನ ಮೇಲೇರಿದೆ. ಅದಾಗ್ಯೂ ಕಾರಿನಲ್ಲಿದ್ದವರು ಸಣ್ಣಪುಟ್ಟ ಗಾಯಗಳಿಂದ ಪವಾಡ ಸದೃಶವೆಂಬಂತೆ ಪಾರಾಗಿದ್ದಾರೆ. 6 ಮಂದಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

‘ಕಲ್ಲಡ್ಕ ಶಾಲೆಗೆ ಅನುದಾನ ನಿಲ್ಲಿಸಿದ್ದಕ್ಕೆ ಮೂಕಾಂಬಿಕೆ ಕೃಪೆಯಿದೆ’

Wednesday, February 28th, 2018
ramanath-rai

ಮಂಗಳೂರು: ಕಲ್ಲಡ್ಕದ ಶಾಲೆಗೆ ಕೊಲ್ಲೂರು ದೇವಸ್ಥಾನದಿಂದ ಬರುತ್ತಿದ್ದ ಬಿಸಿಯೂಟದ ಅನುದಾನ ಕಡಿತಗೊಳಿಸಿದ್ದು ನಾನೇ. ಆ ಕೆಲಸ ಮಾಡಿದ್ದಕ್ಕೆ ನನಗೆ ಕೊಲ್ಲೂರು ಮೂಕಾಂಬಿಕೆಯ ಕೃಪೆಯಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಸಮರ್ತನೆ ಮಾಡಿಕೊಂಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಬಿ.ಸಿ. ರೋಡ್ ನಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿ, ಕಲ್ಲಡ್ಕ ಶಾಲೆಗಳಿಗೆ ಅನುದಾನ ಕಡಿತಗೊಳಿಸಿದ ವಿಚಾರವನ್ನು ಸಮರ್ಥಿಸಿಕೊಂಡರು ರಮಾನಾಥ ರೈ. ದೇವಸ್ಥಾನದ ಹುಂಡಿಗೆ ಭಕ್ತರು ಹಾಕುತ್ತಿದ್ದ ಹಣ ಕೇವಲ ಎರಡು ಶಾಲೆಗೆ […]

‘ಕಲ್ಲಡ್ಕ ಕೆಟಿ’ಯಿಂದಲೇ ರಾಹುಲ್‌ ಯಾತ್ರೆ ಶುರು

Monday, February 19th, 2018
rahul-gandhi

ಮಂಗಳೂರು: ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ಅವರ ಮೂರನೇ ಹಂತದ ಜನಾಶೀರ್ವಾದ ಯಾತ್ರೆ ಕರಾವಳಿ ಭಾಗದಲ್ಲಿ ಮಾರ್ಚ್‌ ಮೊದಲ ವಾರದಲ್ಲಿ ಆರಂಭವಾಗಲಿದ್ದು, ಬಂಟ್ವಾಳ ವಿಧಾನಸಭಾ ಕ್ಷೇತ್ರದ ‘ಕಲ್ಲಡ್ಕ ಕೆಟಿ’ಯಿಂದಲೇ ಶುರುವಾಗುವುದು ಬಹುತೇಕ ನಿಶ್ಚಿತವಾಗಿದೆ. ಈಗಾಗಲೇ ಹೈದರಾಬಾದ್ ಕರ್ನಾ ಟಕದಲ್ಲಿ ಜನಾಶೀರ್ವಾದ ಯಾತ್ರೆಯ ಯಶಸ್ಸಿನಿಂದ ಬೀಗುತ್ತಿರುವ ರಾಜ್ಯ ಕಾಂಗ್ರೆಸ್‌ ನಾಯಕರು, ಕರಾವಳಿ ಭಾಗದಲ್ಲಿಯೂ ಅದೇ ರೀತಿಯ ಯಾತ್ರೆ ಆಯೋಜಿಸಲು ಭರದ ಸಿದ್ಧತೆ ನಡೆಸಿದ್ದಾರೆ. ಇತ್ತೀಚಿನ ದಿನಗಳಲ್ಲಿ ಹೆಚ್ಚು ಗಮನ ಸೆಳೆದಿದ್ದ ಕಲ್ಲಡ್ಕದಿಂದಲೇ ರಾಹುಲ್‌ ಯಾತ್ರೆ ಆರಂಭಿಸಲು ಕಾಂಗ್ರೆಸ್‌ ನಾಯಕರು […]