ಎಸ್ ಸಿಡಿಸಿಸಿ ಬ್ಯಾಂಕ್ ಕಲ್ಲಡ್ಕ ಶಾಖೆ ವಿನೂತನ ಸೌಲಭ್ಯದೊಂದಿಗೆ ಲೋಕಾರ್ಪಣೆ
Tuesday, January 7th, 2025ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಇದರ ಕಲ್ಲಡ್ಕ ಶಾಖೆಯು ಹಲವು ವಿನೂತನ ಸೌಲಭ್ಯದೊಂದಿಗೆ ಮುಖ್ಯರಸ್ತೆಯಲ್ಲಿರುವ ಕಾವೇರಿ ಸಂಕೀರ್ಣದ ನೆಲ ಅಂತಸ್ತಿಗೆ ಸೋಮವಾರ ಸ್ಥಳಾಂತರಗೊಂಡಿತು. ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಅವರು ದೀಪ ಬೆಳಗಿಸುವ ಮೂಲಕ ಶಾಖೆಯನ್ನು ಉದ್ಘಾಟಿಸಿದರು. ಬಳಿಕ ಮಾತಾಡಿದ ಅವರು, “ಅವಿಭಜಿತ ಜಿಲ್ಲೆಯಲ್ಲಿ ರಾಜಕೀಯ ರಹಿತವಾಗಿ ಬೆಳೆದಿರುವ ಏಕೈಕ ಬ್ಯಾಂಕ್ ಏನಾದರೂ ಇದ್ದರೆ ಅದು ಎಸ್ ಸಿಡಿಸಿಸಿ ಬ್ಯಾಂಕ್ ಮಾತ್ರ. ನಮ್ಮ ಜಿಲ್ಲೆ ಸಹಕಾರಿ ಕ್ಷೇತ್ರದಲ್ಲಿ ಹೆಚ್ಚಿನ ಸಾಧನೆ ಮಾಡಿರುವ […]