ಬೆಳುವಾಯಿ ಆರೋಗ್ಯ ಕೇಂದ್ರಕ್ಕೆ ಮಾನವ ಹಕ್ಕು ಮತ್ತು ಭ್ರಷ್ಟಾಚಾರ ನಿರ್ಮೂಲನ ಸಂಘಟನೆಯ ಸದಸ್ಯರ ಭೇಟಿ
Wednesday, September 21st, 2016ಮಂಗಳೂರು: ಅವ್ಯವಸ್ಥೆ ಹಾಗೂ ಸಮಸ್ಯೆಗಳ ಆಗರವಾಗಿರುವ ಬೆಳುವಾಯಿ ಮತ್ತು ಕಲ್ಲಮುಂಡ್ಕೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಮಂಗಳೂರು ತಾಲೂಕು ಮಾನವ ಹಕ್ಕು ಮತ್ತು ಭ್ರಷ್ಟಾಚಾರ ನಿರ್ಮೂಲನ ಸಂಘಟನೆಯ ಸದಸ್ಯರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬೆಳುವಾಯಿ ಆರೋಗ್ಯ ಕೇಂದ್ರದಲ್ಲಿ ಕರ್ತವ್ಯ ನಿರತ ವೈದ್ಯರು ಇಲ್ಲ. ಆಸ್ಪತ್ರೆಗೆ ಬಂದ ಹಲವಾರು ರೋಗಿಗಳು ಚಿಕಿತ್ಸೆ ಇಲ್ಲದೆ ವಾಪಸ್ ತೆರಳುತ್ತಿರುವುದು ಇಲ್ಲಿ ಸಾಮಾನ್ಯದಂತಾಗಿತ್ತು. ಆಸ್ಪತ್ರೆಯಲ್ಲಿ ಸ್ವಚ್ಛತೆಯ ಕೊರತೆ ಹಾಗೂ ಆವರಣದಲ್ಲಿ ಗಿಡ ಗಂಟಿಗಳು ಬೆಳೆದು ನಿಂತಿವೆ. ಕಲ್ಲಮುಂಡ್ಕೂರು ಆಸ್ಪತ್ರೆಯ ವೈದ್ಯಾಧಿಕಾರಿ ತರಬೇತಿಗೆ ತೆರಳಿರುವ […]