ಹುಣಸೋಡು ಕಲ್ಲು ಕ್ವಾರಿ ದುರಂತದಲ್ಲಿ 8 ಕ್ಕೂ ಹೆಚ್ಚು ಮಂದಿ ಸಾವು
Friday, January 22nd, 2021ಬೆಂಗಳೂರು : ಶಿವಮೊಗ್ಗ ತಾಲೂಕಿನ ಹುಣಸೋಡು ಗ್ರಾಮದಲ್ಲಿ ನಿನ್ನೆ ರಾತ್ರಿ ಭಾರೀ ಜಿಲೆಟಿನ್ ಸ್ಫೋಟವಾದ ದುರ್ಘಟನೆ ಸಂಭವಿಸಿದೆ. ಕಲ್ಲು ಕ್ವಾರಿಯೊಂದರ ಬಳಿ ರಾತ್ರಿ 10:30ಕ್ಕೆ ಸಂಭವಿಸಿದೆ ಈ ಅವಘಡದಲ್ಲಿ 8 ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿರುವುದು ತಿಳಿದುಬಂದಿದೆ. ಸ್ಫೋಟಗೊಂಡ ಜಿಲೆಟಿನ್ಗಳನ್ನ ಹೊತ್ತು ಸಾಗುತ್ತಿದ್ದ ಲಾರಿ ಸಂಪೂರ್ಣ ನಾಶವಾಗಿದೆ. ಕೆಲವರ ಪ್ರಕಾರ, ಲಾರಿಯಲ್ಲಿದ್ದ 50 ಬಾಕ್ಸ್ಗಳ ಡೈನಮೈಟ್ಗಳು ಒಂದಾದ ಒಂದರಂತೆ ಸ್ಫೋಟಗೊಂಡಿವೆ ಎನ್ನಲಾಗಿದೆ. ಜಿಲ್ಲಾಧಿಕಾರಿ, ಎಸ್ಪಿ ಸೇರಿದಂತೆ ಅಧಿಕಾರಿಗಳು ಮತ್ತು ರಕ್ಷಣಾ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದ್ದಾರೆ. ಆದರೆ, ಇನ್ನಷ್ಟು ಜಿಲೆಟಿನ್ […]