ರಸ್ತೆ ಬದಿಯಲ್ಲಿ ಕಸ ಎಸೆಯುವವರನ್ನು ಕಾದು ಕುಳಿತು 5 ಸಾವಿರ ದಂಡ ಹಾಕಿದ ಪುತ್ತೂರು ನಗರಸಭೆ ಅಧಿಕಾರಿಗಳು
Saturday, August 22nd, 2020ಪುತ್ತೂರು: ಪುತ್ತೂರು ನಗರಸಭೆ ವ್ಯಾಪ್ತಿಯ ಮುಕ್ರಂಪಾಡಿಯಲ್ಲಿ ರಸ್ತೆ ಬದಿಯಲ್ಲೇ ತ್ಯಾಜ್ಯ ಕಸಗಳನ್ನು ಎಸೆದು ಹೋಗುತ್ತಿದ್ದ ಉಸ್ಮಾನ್ ಮತ್ತು ಅಶ್ರಫ್ ಎಂಬುವರಿಗೆ ತಲಾ ರೂ. 5 ಸಾವಿರ ದಂಡ ವಿಧಿಸಿ ಪುತ್ತೂರು ನಗರಸಭೆ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ. ಮನೆ ಮನೆ ತ್ಯಾಜ್ಯ ಸಂಗ್ರಹ ನಡೆಯುತ್ತಿದ್ದರೂ ಕೆಲವೊಂದು ಕಡೆ ರಸ್ತೆ ಬದಿಯಲ್ಲಿ ರಾಶಿ ರಾಶಿ ಕಸಗಳನ್ನು ಹಾಕಿ ಪರಿಸರ ಮಲೀನಗೊಳಿಸುತ್ತಿದ್ದರು. ನಗರಸಭೆ ಅಧಿಕಾರಿಗಳು, ಸಿಬ್ಬಂದಿ ಕಸದ ರಾಶಿ ಇರುವ ಸ್ಥಳಗಳ ಬಳಿ ಕಸ ಹಾಕುವವರನ್ನು ಹಿಡಿಯಲು ಕಾದು ಕುಳಿತಿದ್ದರು. ಸಂಪ್ಯ ಕಡೆಯಿಂದ ದ್ವಿಚಕ್ರ ವಾಹನಗಳಲ್ಲಿ ಬಂದಿದ್ದ ಇಬ್ಬರು […]