ಕಾಂಗ್ರೆಸ್ ಪಕ್ಷವನ್ನು ವಿಸರ್ಜಿಸಿ ಎಂದು ಮಹಾತ್ಮ ಗಾಂಧೀಜಿ ಹೇಳಿದ್ದರು
Thursday, December 26th, 2024
ಬೆಂಗಳೂರು : ಸರ್ಕಾರದ ಹಣವನ್ನು ಬಳಸಿ ಬೆಳಗಾವಿಯಲ್ಲಿ ಕಾಂಗ್ರೆಸ್ ಸರ್ಕಾರ ತನ್ನ ಪಕ್ಷದ ಸಮಾವೇಶವನ್ನು ಮಾಡುತ್ತಿರುವುದು ಖಂಡನೀಯ. ಇದರ ವಿರುದ್ಧ ವಿಧಾನಸೌಧ ಮುಂಭಾಗ ಶುಕ್ರವಾರ ಪ್ರತಿಭಟಿಸಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ವಾತಂತ್ರ್ಯ ದೊರೆತ ನಂತರ ಕಾಂಗ್ರೆಸ್ ಪಕ್ಷವನ್ನು ವಿಸರ್ಜಿಸಿ ಎಂದು ಮಹಾತ್ಮ ಗಾಂಧೀಜಿ ಹೇಳಿದ್ದರು. ನಕಲಿ ಗಾಂಧಿಗಳು ಕಾಂಗ್ರೆಸ್ ಪಕ್ಷವನ್ನು ಮುನ್ನಡೆಸಿ ಈಗ ಬೆಳಗಾವಿಯಲ್ಲಿ ಸಮಾವೇಶ ಮಾಡುತ್ತಿದ್ದಾರೆ. ಗಾಂಧೀಜಿ ಬಹಳ ಸರಳವಾಗಿದ್ದರು. ಆದರೆ ಕಾಂಗ್ರೆಸ್ ನಾಯಕರು ಆಡಂಬರದ ಬದುಕು ನಡೆಸುತ್ತಿದ್ದಾರೆ. […]