Blog Archive

ಕರ್ನಾಟಕದಿಂದ ಕಾಂಗ್ರೆಸ್ ಗೆಲುವಿನ ಇನ್ನಿಂಗ್ಸ್ ಆರಂಭ: ಸಿದ್ದರಾಮಯ್ಯ

Friday, December 22nd, 2017
siddaramaiah

ಬೆಳಗಾವಿ: 2018ರ ಕರ್ನಾಟಕ ವಿಧಾನಸಭೆ ಚುನಾವಣೆಯ ಗೆಲುವಿನೊಂದಿಗೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರಿಗೆ ಮೊದಲ ಗೆಲುವಿನ ಗಿಫ್ಟ್ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.ಗುರುವಾರ ಬೆಳಗಾವಿಯ ಹಾರೋಗೇರಿಯಲ್ಲಿ ಮಾತನಾಡಿದ ಅವರು, “ಬಿಜೆಪಿಯವರು ಕಾಂಗ್ರೆಸ್ ಮುಕ್ತ ಕರ್ನಾಟಕ ಮಾಡುತ್ತೇವೆ ಎಂದು ಹೇಳುತ್ತಾರೆ. ಇದು ಸಾಧ್ಯವಿಲ್ಲ. ಕಾಂಗ್ರೆಸ್ 132 ವರ್ಷಗಳ ಇತಿಹಾಸ ಇರುವ ಪಕ್ಷ. ಈ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಪಕ್ಷ,” ಎಂದು ಹೇಳಿದ್ದಾರೆ. 2018ರ ಕರ್ನಾಟಕ ಚುನಾವಣೆ : ಅಹಿಂದ V/S ಹಿಂದುತ್ವ! “ಇವತ್ತು ರಾಹುಲ್ ಗಾಂಧಿಯವರು ಕಾಂಗ್ರೆಸ್ ಅಧ್ಯಕ್ಷರಾಗಿದ್ದಾರೆ. […]

ಕಾಂಗ್ರೆಸ್ ದೇಶದ್ರೋಹಿ ಸಂಘಟನೆಯೊಂದಿಗೆ ಹೊಂದಾಣಿಕೆಗೆ ಮುಂದಾಗಿದೆ’

Friday, December 22nd, 2017
congrss

ಮಂಗಳೂರು: ಏಕಾಂಗಿಯಾಗಿ ಚುನಾವಣೆ ಎದುರಿಸಲಾಗದೆ ಕಾಂಗ್ರೆಸ್ ದೇಶದ್ರೋಹಿ ಸಂಘಟನೆಗಳಾದ ಎಸ್‌ಡಿಪಿಐ, ಪಿಎಫ್ಐ ಜತೆ ಹೊಂದಾಣಿಕೆಗೆ ಮುಂದಾಗಿದೆ ಎಂದು ದ.ಕ. ಜಿಲ್ಲಾ ಬಿಜೆಪಿ ಆರೋಪಿಸಿದೆ. ಪಕ್ಷದ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪಕ್ಷದ ಜಿಲ್ಲಾಧ್ಯಕ್ಷ ಸಂಜೀವ ಮಠಂದೂರು, ಶತಾಯಗತಾಯ ಅಧಿಕಾರಕ್ಕೆ ಬರಬೇಕೆನ್ನುವ ಉದ್ದೇಶದಿಂದ ಕಾಂಗ್ರೆಸ್ ತಾನು ಯಾವ ಮಟ್ಟಕ್ಕೂ ಇಳಿಯಲು ಸಿದ್ಧ ಎಂಬುದುದನ್ನು ತೋರಿಸಿದೆ. ಕೆಪಿಸಿಸಿ ಅಧ್ಯಕ್ಷ ಡಾ. ಜಿ.ಪರಮೇಶ್ವರ್‌ ಅವರು ಎಸ್‌ಡಿಪಿಐ ಮತ್ತು ಪಿಎಫ್ಐ ಜತೆಯಲ್ಲಿ ಮಾತುಕತೆ ಮಾಡಿರುವುದನ್ನು ರಾಷ್ಟ್ರೀಯ ಸುದ್ದಿ ವಾಹಿನಿಯೊಂದು ಬಿತ್ತರಿಸಿದೆ ಎಂದರು. ಎಸ್‌ಡಿಪಿಐ ಮತ್ತು […]

ಮಂಚಿ ಗ್ರಾಪಂ ಉಪಚುನಾವಣೆ: ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗೆ ಜಯ

Wednesday, December 20th, 2017
panchayat

ಬಂಟ್ವಾಳ: ಮಂಚಿಯಲ್ಲಿ ಗ್ರಾಮ ಪಂಚಾಯತ್ ಸ್ಥಾನವೊಂದಕ್ಕೆ ನಡೆದ ಉಪಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಇಂದು ಬೆಳಿಗ್ಗೆ ಮಿನಿ ವಿಧಾನಸೌಧದಲ್ಲಿ ನಡೆಯಿತು. ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಮೊಯ್ದು ಕುಂಞಿ 463 ಮತ ಪಡೆದು ಜಯಶಾಲಿಯಾಗಿದ್ದಾರೆ. ಸಮೀಪದ ಪ್ರತಿಸ್ಪರ್ಧಿ ಪ್ರಭಾಕರ ಶೆಟ್ಟಿ 356 ಮತಗಳನ್ನು ಗಳಿಸಿದರು. 21 ಮತಗಳು ತಿರಸ್ಕೃತಗೊಂಡಿವೆ. ಚುನಾವಣಾಧಿಕಾರಿ ಆಹಾರ ಶಾಖೆ ಉಪತಹಶೀಲ್ದಾರ್ ವಾಸು ಶೆಟ್ಟಿ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಕೆ.ಮೋಹನ ಕುಮಾರ್ ನೇತೃತ್ವದಲ್ಲಿ ಚುನಾವಣಾ ಮತ ಎಣಿಕೆ ಪ್ರಕ್ರಿಯೆ ನಡೆಯಿತು. ವಿಜೇತ ಅಭ್ಯರ್ಥಿ […]

ಕರ್ನಾಟಕದಲ್ಲಿ ಕಾಂಗ್ರೆಸ್ ಅಂತ್ಯ ಸನ್ನಿಹಿತ: ಯಡಿಯೂರಪ್ಪ

Tuesday, December 19th, 2017
bjp-karnataka

ಕೊಪ್ಪಳ: ಕಾಂಗ್ರೆಸ್ ಮುಕ್ತ ಭಾರತದ ಕನಸು ದೂರವಿಲ್ಲ. ಈಗಾಗಲೇ ಗುಜರಾತ್ ಮತ್ತು ಹಿಮಾಚಲದ ಜನತೆ ವಿಕಾಸಕ್ಕೆ ಜನಾದೇಶ ನೀಡುವ ಮೂಲಕ ಬಿಜೆಪಿಯನ್ನು ಬೆಂಬಲಿಸಿದ್ದಾರೆ ರಾಜ್ಯದಲ್ಲೂ ಬಿಜೆಪಿ ಅಧಿಕಾರಕ್ಕೆ ಬರಲಿದ್ದು, ಕಾಂಗ್ರೆಸ್ ಅಂತ್ಯ ಸನ್ನಿಹಿತವಾಗುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ, ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ. ಕೊಪ್ಪಳ ಜಿಲ್ಲೆಯ ಯಲಬುರ್ಗಾ ಕ್ಷೇತ್ರದ ಕುಕನೂರಿನಲ್ಲಿಂದು ಪರಿವರ್ತನಾ ಯಾತ್ರೆಯನ್ನುದ್ದೇಶಿಸಿ ಅವರು ಮಾತನಾಡುತ್ತಿದ್ದರು. ಪಕ್ಷದ ಮುಖಂಡರಾದ ಜಗದೀಶ್ ಶೆಟ್ಟರ್, ಲಕ್ಷ್ಮಣ ಸವದಿ, ಮುರುಗೇಶ್ ನಿರಾಣಿ, ಶಿವಕುಮಾರ್ ಉದಾಸಿ, ರಾಜು ಗೌಡ ಮುಂತಾದವರು ಸಮಾವೇಶದಲ್ಲಿ […]

ಕಾಂಗ್ರೆಸ್ ಹಿಂದೆಹಿಂದೆ, ಬಿಜೆಪಿ ಮುಂದೆಮುಂದೆ

Monday, December 18th, 2017
himachala

ಅಹ್ಮದಾಬಾದ್: ಈ ವರ್ಷದ ಕಟ್ಟಕಡೆಯ ಚುನಾವಣೆ ರಿಯಾಲಿಟಿ ಶೋಗೆ ಗುಜರಾತ್ ಅಣಿಯಾಗಿದೆ. ವಿಧಾನಸಭೆಗೆ ನಡೆದ ಚುನಾವಣೆಯ ಫಲಿತಾಂಶ ತಿಳಿಯಲು ಕ್ಷಣಗಣನೆ ಆರಂಭವಾಗಿದೆ. 22 ವರ್ಷಗಳ ಕಾಲ ಆಡಳಿತ ನಡೆಸಿರುವ ಭಾರತೀಯ ಜನತಾ ಪಕ್ಷ ಪ್ರಥಮ ಬಾರಿಗೆ ಕಾಂಗ್ರೆಸ್ಸಿನಿಂದ ಭಾರೀ ತುರುಸಿನ ಸ್ಪರ್ಧೆಯನ್ನು ಈ ಬಾರಿ ಎದುರಿಸಿದೆ. ತಕ್ಕಡಿ ಯಾವುದೇ ಬದಿಗೂ ತೂಗಬಹುದು ಎನ್ನುವಂಥ ಪರಿಸ್ಥಿತಿ ನಿರ್ಮಾಣವಾಗಿದೆ. LIVE : ಹಿಮಾಚಲ ಪ್ರದೇಶ ಚುನಾವಣೆ ಫಲಿತಾಂಶ 9.56 : ಬಿಜೆಪಿ ಮುಖ್ಯಮಂತ್ರಿ ವಿಜಯ್ ರೂಪಾನಿ ಅವರು ರಾಜಕೋಟ್ ಪಶ್ಚಿಮ […]

ನೋಟು ಅಮಾನ್ಯೀಕರಣಕ್ಕೆ ಒಂದು ವರ್ಷ, ಕರಾಳ ದಿನ ಆಚರಿಸಿದ ಕಾಂಗ್ರೆಸ್

Wednesday, November 8th, 2017
congress protest

ಮಂಗಳೂರು : ದ.ಕ ಜಿಲ್ಲಾ ಕಾಂಗ್ರೆಸ್ ಮತ್ತು ವಿವಿಧ ಸಂಘಟನೆಗಳು  ನೋಟು ಅಮಾನ್ಯೀಕರಣಕ್ಕೆ ವರ್ಷ ತುಂಬಿದ ಹಿನ್ನೆಲೆಯಲ್ಲಿ ‘ಕರಾಳ ದಿನ’ವನ್ನು  ಬುಧವಾರ ಆಚರಿಸಿದವು. ಮಂಗಳೂರಿನ ಕಾಂಗ್ರೆಸ್ ಕಚೇರಿ ಎದುರು ನಡೆದ ಕರಾಳ ದಿನ ಪ್ರತಿಭಟನೆಯಲ್ಲಿ ಮಾತನಾಡಿದ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ. ಖಾದರ್, ಬಂಡವಾಳ ಶಾಹಿಗಳ ಪರ ಮೋದಿ ಸರ್ಕಾರ ಕಾರ್ಯ ನಿರ್ವಹಿಸುತ್ತಿದೆ. ಜನಸಾಮಾನ್ಯರ ಕಷ್ಟ ಅವರ ಗಮನದಲ್ಲಿಲ್ಲ. ಪ್ರಪಂಚ ಸುತ್ತುವುದೇ ಅವರ ನಿತ್ಯದ ಕಾಯಕವಾಗಿದೆ. ಅದರಲ್ಲೇ ಕಾಲ ಕಳೆಯುತ್ತಿದ್ದಾರೆ ಎಂದು ದೂರಿದರು. ಶಾಸಕರಾದ ಜೆ. ಆರ್. […]

ಯಾವ ನಿರ್ಧಾರ ಕೈಗೊಳ್ಳಬೇಕೆಂಬ ಸ್ವಂತಿಕೆ ನನ್ನಲ್ಲಿದೆ :ಹರಿಕೃಷ್ಣ ಬಂಟ್ವಾಳ

Tuesday, October 31st, 2017
Harikrishna bantwal

ಮಂಗಳೂರು: ಕಾಂಗ್ರೆಸ್‌‌‌ನ‌ ಮಾಜಿ ಹಿರಿಯ ಮುಖಂಡ ಹರಿಕೃಷ್ಣ ಬಂಟ್ವಾಳ ಅವರು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್‌‌‌ಗೆ, ನಾನು ಭಾರತೀಯ ಬಿಲ್ಲವ. ಕಾಂಗ್ರೆಸ್‌ನ ಬಿಲ್ಲವ ಅಲ್ಲ. ಕಾಂಗ್ರೆಸ್‌ನ ದಾಸ ಬಿಲ್ಲವನೂ ಅಲ್ಲ. ಯಾವ ಪಕ್ಷ ಸೇರಬೇಕು ಎನ್ನುವ ಸ್ವಂತಿಕೆ, ನಿರ್ಧಾರ ನನಗೆ ಬಿಟ್ಟದ್ದು. ಆದರೆ ನೀವು ನನ್ನ ಸುದ್ದಿಗೆ ಬರಬೇಡಿ ಎಂದು ಟಾಂಗ್ ನೀಡಿದ್ದಾರೆ. ಹರಿಕೃಷ್ಣ ಬಂಟ್ವಾಳ ಬಿಜೆಪಿ ಸೇರುವ ವಿಚಾರಕ್ಕೆ ಸಂಬಂಧಿಸಿ ಇತ್ತೀಚೆಗೆ ಹರೀಶ್ ಕುಮಾರ್‌ ಮಾಧ್ಯಮಗೋಷ್ಠಿ ನಡೆಸಿ ಟೀಕಿಸಿದ್ದರು. ಆದರೆ, ಇದೀಗ ಹರೀಶ್ ಕುಮಾರ್‌ಗೆ ತಿರುಗೇಟು […]

ಶಾಸಕ ಜೆ.ಆರ್.ಲೋಬೊ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ

Monday, October 30th, 2017
JR lobo

ಮಂಗಳೂರು: ಶಾಸಕ ಜೆ.ಆರ್.ಲೋಬೊ ಅವರು ಜಪ್ಪಿನಮೊಗರು ವಾರ್ಡ್ ನಲ್ಲಿ ನಡೆದ ಮನೆ ಮನಗೆ ಕಾಂಗ್ರೆಸ್ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಈ ಸಂದರ್ಭದಲ್ಲಿ ಶಾಸಕರ ಅಭಿವೃದ್ಧಿ ಕಾಯಕ್ರಮಗಳ ಬಗ್ಗೆ ಯುವಕರು ಮೆಚ್ಚಿ ಸ್ಥಳೀಯ ಜನರ ಮತ್ತು ಶಾಸಕರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರಿಕೊಂಡರು ಅವರು ಮನೆ ಮನೆಗೆ ಕಾಂಗ್ರೆಸ್ ಪಕ್ಷ ಕಾರ್ಯಕ್ರಮದಲ್ಲಿ ಪಾಲ್ಗೊಂಡರು

ಜಾತಿಯನ್ನು ಮುಂದಿಟ್ಟು ಪಕ್ಷವನ್ನು ದೂರುವುದು ಶೋಭೆಯಲ್ಲ : ಹರೀಶ್ ಕುಮಾರ್

Saturday, October 28th, 2017
Harish Kumar

ಮಂಗಳೂರು :  ಜಾತಿಯನ್ನು ಮುಂದಿಟ್ಟು ಪಕ್ಷವನ್ನು ದೂರುವುದು ಶೋಭೆಯಲ್ಲ, ಬಿಲ್ಲವರಿಗೆ ಬಹಳಷ್ಟು ಸ್ಥಾನಗಳನ್ನು ಕಾಂಗ್ರೆಸ್ ನೀಡಿದ್ದರೂ ಕೂಡಾ ಬಿಲ್ಲವರಿಗೆ ಪಕ್ಷ ಏನೂ ಮಾಡಿಲ್ಲ ಎಂದು ಆರೋಪಿಸಿ ಕೆಲವರು ಪಕ್ಷ ತ್ಯಜಿಸಲು ಹೊರಟಿರುವುದರಲ್ಲಿ ಅರ್ಥವಿಲ್ಲ ಎಂದು ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಹೇಳಿದ್ದಾರೆ. ಪಕ್ಷದ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ಕಾಂಗ್ರೆಸ್ ಪಕ್ಷ ರಾಜಕೀಯವಾಗಿ, ಆರ್ಥಿಕವಾಗಿ, ಶೈಕ್ಷಣಿಕವಾಗಿ ಬಿಲ್ಲವರಿಗೆ ಬಹಳಷ್ಟು ಒತ್ತು ನೀಡಿದೆ, ಕಾಂಗ್ರೆಸ್ ಪಕ್ಷದಿಂದ ಬಹಳಷ್ಟು ಅವಕಾಶಗಳನ್ನು ಪಡೆದು ಸ್ವಾರ್ಥಕ್ಕಾಗಿ ಇದೀಗ ಜಾತಿಯನ್ನು ಮುಂದಿಟ್ಟು […]

ಕಾಪು: ಅಶಕ್ತ, ಅನಾಥ ಮಕ್ಕಳೊಂದಿಗೆ ಕಾಂಗ್ರೆಸ್ ದೀಪಾವಳಿ ಆಚರಣೆ

Thursday, October 19th, 2017
Diwali celebration

ಮಂಗಳೂರು:  ಕಾಪು ಕಾಂಗ್ರೆಸ್ ಹಿಂದುಳಿದ ವರ್ಗ ಕಟಪಾಡಿ ಬಳಿಯ ಶಂಕರ ಪುರ ವಿಶ್ವಾಸದ ಮನೆಯಲ್ಲಿ ಅಶಕ್ತ, ಅನಾಥ ಮಕ್ಕಳೊಂದಿಗೆ ಹಾಗೂ ವಯೋ ವೃದ್ಧರೊಂದಿಗೆ ದೀಪಾವಳಿ ಸಂಭ್ರವನ್ನು ಆಚರಿಸಿತು. ಇಲ್ಲಿಯ ಮಕ್ಕಳಿಗೆ ವಯೋವೃದ್ಧರಿಗೆ ಸಿಹಿ ತಿಂಡಿ ಹಾಗೂ ಬಟ್ಟೆ ಬರೆಗಳನ್ನು ಈ ಸಂದರ್ಭ ವಿತರಿಸಲಾಯಿತು. ಕಾಪು ಶಾಸಕ ವಿನಂ ಕುಮಾರ್ ಸೊರಕೆ ಮಾತನಾಡಿ, ದೀಪಾವಳಿ ಹಬ್ಬದ ಪ್ರಥಮ ದಿನವನ್ನು ಶಂಕರಪುರದ ಅನಾಥರ ವಿಶ್ವಾಸದ ಮನೆಯಲ್ಲಿ ಕಾಪು ಕಾಂಗ್ರೆಸ್ ಆಚರಿಸುತ್ತಿರುವುದು ಅತ್ಯಂತ ಸಂತಸ ತಂದಿದೆ. ವಿಶ್ವಾಸದ ಮನೆಗೆ ನಮ್ಮ ರಾಜ್ಯಕ್ಕೆ […]