Blog Archive

ಕೋವಿಡ್ ಸೋಂಕಿನಿಂದ ಮೃತಪಟ್ಟ ಮಹಿಳೆಯ ಪಿಪಿಇ ಕಿಟ್ ತೆರೆದು ಮುಖದರ್ಶನ ಪಡೆದ ಕಾಂಗ್ರೆಸ್ ಮುಖಂಡರು

Monday, July 27th, 2020
ivan

ಮಂಗಳೂರು: ವಿಧಾನ ಪರಿಷತ್ ಮಾಜಿ ಸದಸ್ಯ ಐವಾನ್ ಡಿಸೋಜಾ ಸೇರಿದಂತೆ,  ಶಾಸಕ ಯು.ಟಿ‌. ಖಾದರ್ ಮತ್ತು ಕೆಲವು  ಕಾಂಗ್ರೆಸ್ ನಾಯಕರು ಕೋವಿಡ್ ಸೋಂಕಿನಿಂದ ಮೃತಪಟ್ಟ ಮಹಿಳೆಯ ಅಂತ್ಯಸಂಸ್ಕಾರ ಜಾಗಕ್ಕೆ ತೆರೆಳಿ ಮೃತದೇಹದ ಪಿಪಿಇ ಕಿಟ್ ಅನ್ನು ಬಿಚ್ಚಿ ಅಂತಿಮ ದರ್ಶನ ಪಡೆಯುವ ಮೂಲಕ ಕೋವಿಡ್ ನಿಯಮಗಳನ್ನು ಉಲ್ಲಂಘಿಸಿದ  ಘಟನೆ ಬೋಳೂರಿನ ರುದ್ರಭೂಮಿಯಲ್ಲಿ ನಡೆದಿದೆ. ದ.ಕ. ಜಿಲ್ಲಾ ಕಾಂಗ್ರೆಸ್ ನಾಯಕರು ತೆರಳಿ ಮೃತರ ಅಂತಿಮ ದರ್ಶನ ಪಡೆಯುವ ಮೂಲಕ ಕೋವಿಡ್ ನಿಯಮಗಳನ್ನು ಉಲ್ಲಂಘಿಸಿರುವ ಫೋಟೋಗಳು ಹಾಗೂ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಈ ವೃದ್ಧೆ ಜು.24ರಂದು ಮೃತಪಟ್ಟಿದ್ದರು. ಅವರ ಅಂತ್ಯಸಂಸ್ಕಾರ ನಗರದ […]

ಕಾಂಗ್ರೆಸ್ ಬಿಜೆಪಿ ಮೈತ್ರಿ ಮಾಡಿಕೊಂಡು ಕಲಬುರಗಿಯಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದು ಹೀಗೆ !

Tuesday, July 14th, 2020
Rukmini-Bhimashankar

ಕಲಬುರಗಿ: ಕಾಂಗ್ರೆಸ್ ಬಿಜೆಪಿಗರ ಕಚ್ಚಾಟ ಪ್ರತಿದಿನ ಇದ್ದದೇ ಬಿಡಿ, ಆದರೆ ಇದೆಲ್ಲವನ್ನು ಮರೆತು ಇಬ್ಬರು ನಾಯಕರು ಪ್ರೀತಿಗೆ ಶಕ್ತಿ ರಾಜಕೀಯಕ್ಕಿಂತಲೂ ಹೆಚ್ಚಿನ ಶಕ್ತಿ ಇದೆ ಎಂದು ತೋರಿಸಿಕೊಟ್ಟಿದ್ದಾರೆ. ಅಫಜಲಪುರ ತಾಲೂಕು ಪಂಚಾಯತ್ ಅಧ್ಯಕ್ಷೆ ಮತ್ತು ಉಪಾಧ್ಯಕ್ಷ ತಮ್ಮ ರಾಜಕೀಯವನ್ನು ಮೀರಿ ಇಬ್ಬರೂ ಕೂಡಾ ವಿವಾಹ ಬಂಧನಕ್ಕೊಳಗಾಗಿದ್ದಾರೆ. ಜಿಲ್ಲೆಯ ಆಳಂದ ತಾಲೂಕಿನ ಜಿಡಗಾ ಮಠದಲ್ಲಿ ಇಂದು ನಡೆದ ಸರಳ ವಿವಾಹದಲ್ಲಿ ದಂಪತಿ ನೂತನ ಜೀವನಕ್ಕೆ ಕಾಲಿಟ್ಟಿದ್ದಾರೆ. ಅಫಜಲಪುರ ತಾಲೂಕು ಪಂಚಾಯತ್ ಅಧ್ಯಕ್ಷೆ ರುಕ್ಮಿಣಿ ಜಮಾದಾರ್ ಮತ್ತು ತಾಲೂಕು ಪಂಚಾಯತ್ ಉಪಾಧ್ಯಕ್ಷ ಭೀಮಾಶಂಕರ್ ಹೊನ್ನಿಕೇರಿ […]

ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆಯ ವಿರುದ್ಧ ಕಾಂಗ್ರೆಸ್ ವತಿಯಿಂದ ಸೈಕಲ್ ರ್‍ಯಾಲಿ

Monday, June 29th, 2020
Rally

ಮಂಗಳೂರು : ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆಯ ವಿರುದ್ಧ ದಕ್ಷಿಣ ಕನ್ನಡ ಕಾಂಗ್ರೆಸ್ ವತಿಯಿಂದ ಜೂನ್  29, ಸೋಮವಾರ ಬೃಹತ್ ಪ್ರತಿಭಟನೆ ಮಂಗಳೂರು ಪುರಭವನ ಮುಂದೆ ನಡೆಯಿತು. ನಗರದ ಜ್ಯೋತಿ ವೃತ್ತದಿಂದ ಯುವ ಕಾಂಗ್ರೆಸ್ ಮುಖಂಡ ಮಿಥುನ್ ರೈ ಅವರ ನೇತೃತ್ವದಲ್ಲಿ  ಸೈಕಲ್ ರ್‍ಯಾಲಿ ನಡೆಸಿ ಬೆಲೆ ಏರಿಕೆಯನ್ನು ಖಂಡಿಸಿ ಕೇಂದ್ರ ಸರಕಾರದ ವಿರುದ್ಧ ಧಿಕ್ಕಾರ ಕೂಗಿದರು. ನೂರಾರು ಕಾರ್ಯಕರ್ತರು ಇದೇ ವೇಳೆ ಬೆಲೆ ಏರಿಕೆ ವಿರೋಧಿಸಿ ಸಂಸದ ನಳಿನ್ ಕುಮಾರ್, ಶಾಸಕ ವೇದವ್ಯಾಸ್ ಕಾಮತ್ ಅವರ ಮುಖವಾಡ […]

ಶ್ರೀರಾಮನನ್ನು ಕಾಲ್ಪನಿಕವೆಂದು ಘೋಷಿಸಿ, ಹಿಂದೂ ದೇವಸ್ಥಾನಗಳಲ್ಲಿನ ಬಂಗಾರದ ಮೇಲೆ ಕಾಂಗ್ರೆಸ್ ಕಣ್ಣು

Thursday, May 14th, 2020
sri ram

ಮಂಗಳೂರು  : ಕಾಂಗ್ರೆಸ್ ನಾಯಕರು 70  ವರ್ಷಗಳಲ್ಲಿ ವಿವಿಧ ಹಗರಣಗಳಿಂದ ಕೊಳ್ಳೆ ಹೊಡೆದ ಜನರ 4 ಲಕ್ಷ 82 ಸಾವಿರ ಕೋಟಿ ರೂಪಾಯಿಯ ಲೆಕ್ಕವನ್ನು ನೀಡಬೇಕು ಎಂದು  ಹಿಂದೂ ಜನಜಾಗೃತಿ ಸಮಿತಿ ಒತ್ತಾಯಿಸಿದೆ. ಹಿಂದೂಗಳ ದೇವಸ್ಥಾನಗಳಲ್ಲಿನ ಬಂಗಾರವನ್ನು ತೆಗೆದುಕೊಳ್ಳಬೇಕೆಂದು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಪೃಥ್ವಿರಾಜ ಚವ್ಹಾಣ್‌ರು ಕಪಟತನದ ಕರೆ ನೀಡಿದ್ದಾರೆ. ಯಾವ ಕಾಂಗ್ರೆಸ್ ಪಕ್ಷ ಭಾರತವನ್ನು ಜಾತ್ಯತೀತ ಎಂದು ಘೋಷಿಸಿ ಅಲ್ಪಸಂಖ್ಯಾತರಿಗಾಗಿ ಯೋಜನೆ ಹಾಗೂ ಹಜ್ ಯಾತ್ರೆ, ಇಫ್ತಾರ, ಮೌಲ್ವಿಗಳ ವೇತನಗಳ ಮೇಲೆ ಸಾವಿರಾರು ಕೋಟಿ ರೂಪಾಯಿ ಖರ್ಚು ಮಾಡಿದ್ದರೆ ಯಾವುದೇ ದೇವಸ್ಥಾನಕ್ಕೆ […]

ಬೆಂಗಳೂರಿನ ರೆಸಾರ್ಟ್ ನಲ್ಲಿ ಕಾಂಗ್ರೆಸ್ ನಾಯಕರ ಹೈಡ್ರಾಮಾ : ದಿಗ್ವಿಜಯ್ ಸಿಂಗ್ ಪೊಲೀಸ್ ವಶಕ್ಕೆ

Wednesday, March 18th, 2020
congress

ಬೆಂಗಳೂರು : ಇಲ್ಲಿನ ರೆಸಾರ್ಟ್ ನಲ್ಲಿ ವಾಸ್ತವ್ಯವಿರುವ ಮಧ್ಯಪ್ರದೇಶ ಕೈ ನಾಯಕರ ಮನವೊಲಿಕೆಗೆ ಬಂದ ದಿಗ್ವಿಜಯ್ ಸಿಂಗ್ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಮೂಲಕ ಹಲವು ಪ್ರಹಸನಗಳಿಗೆ ಬುಧವಾರ ಬೆಳಿಗ್ಗೆ ಬೆಂಗಳೂರು ಸಾಕ್ಷಿಯಾಯಿತು. ಇಲ್ಲಿನ ಯಲಹಂಕ ಬಳಿಯ ರೆಸಾರ್ಟ್ ನಲ್ಲಿರುವ ಕಾಂಗ್ರೆಸ್ ಶಾಸಕರ ಮನವೊಲಿಕೆಗೆ ಮಧ್ಯಪ್ರದೇಶ ಮಾಜಿ ಮುಖ್ಯಮಂತ್ರಿ, ಹಿರಿಯ ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಸೇರಿದಂತೆ ಆಗಮಿಸಿದ್ದರು. ಆದರೆ ರೆಸಾರ್ಟ್ ಗೆ ಪೊಲೀಸ್ […]

ಮಧ್ಯಪ್ರದೇಶದ 22 ಕಾಂಗ್ರೆಸ್‌ ಶಾಸಕರಿಗೆ ಸ್ಪೀಕರ್‌ ನೋಟಿಸ್‌ ಜಾರಿ

Friday, March 13th, 2020
Congress

ಭೋಪಾಲ್ ‌: ಮಧ್ಯಪ್ರದೇಶ ವಿಧಾನ ಸಭೆಯ ಸದಸ್ಯತ್ವ ತೊರೆದಿರುವ ಕಾಂಗ್ರೆಸ್‌ನ 22 ಶಾಸಕರಿಗೆ ವಿಧಾನಸಭಾ ಸ್ಪೀಕರ್‌ ಎನ್‌.ಪಿ. ಪ್ರಜಾಪತಿ ನೋಟಿಸ್‌ ಜಾರಿಗೊಳಿಸಿದ್ದಾರೆ. ಮಧ್ಯಪ್ರದೇಶ ವಿಧಾನಸಭೆಯ ಪ್ರಧಾನ ಕಾರ್ಯದರ್ಶಿ ಎ.ಪಿ. ಸಿಂಗ್‌ ಈ ವಿಷಯ ತಿಳಿಸಿದ್ದಾರೆ. ‘ಶುಕ್ರವಾರ ಸ್ಪೀಕರ್‌ ಮುಂದೆ ವಿಚಾರಣೆಗೆ ಹಾಜರಾಗಲು ಸೂಚಿಸಲಾಗಿದೆ. ವಿಚಾರಣೆಯಲ್ಲಿ, ತಮ್ಮ ರಾಜೀನಾಮೆ ನಿರ್ಧಾರ ಸ್ವಯಂಪ್ರೇರಿತವೋ ಅಥವಾ ಒತ್ತಡದಿಂದ ಕೈಗೊಂಡ ನಿರ್ಧಾರವೋ ಎಂಬುದರ ಬಗ್ಗೆ ಸ್ಪಷ್ಟವಾಗಿ ವಿವರಿಸುವಂತೆ ನೋಟಿಸ್‌ನಲ್ಲಿ ತಿಳಿಸಲಾಗಿದೆ’ ಎಂದು ಅವರು ಹೇಳಿದ್ದಾರೆ. ವಿಶ್ವಾಸಮತಕ್ಕೆ ಮನವಿ: 22 ಶಾಸಕರ ರಾಜೀನಾಮೆ ಯಿಂದ […]

ಕಾಂಗ್ರೆಸ್​ಗೆ ಜ್ಯೋತಿರಾಧಿತ್ಯ ಸಿಂಧಿಯಾ ರಾಜೀನಾಮೆ, ಬಿಜೆಪಿ ಸೇರ್ಪಡೆ ಸಾಧ್ಯತೆ

Tuesday, March 10th, 2020
jyothiradhithya

ನವದೆಹಲಿ : ಕಳೆದೆರಡು ದಿನಗಳಿಂದ ಮಧ್ಯಪ್ರದೇಶ ರಾಜಕೀಯ ಬಿಕ್ಕಟ್ಟು ಕಾಂಗ್ರೆಸ್ಗೆ ತಲೆನೋವಾಗಿದ್ದು, ಕಮಲ್ನಾಥ್ ನೇತೃತ್ವದ ಸರ್ಕಾರ ಯಾವುದೇ ಕ್ಷಣದಲ್ಲೂ ಬೀಳುವ ಸಾಧ್ಯತೆಯಿದೆ. ಈ ಎಲ್ಲಾ ಬೆಳವಣಿಗೆಗಳ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್ ಶಾರನ್ನು ಭೇಟಿ ಮಾಡಿರುವ ಕಾಂಗ್ರೆಸ್ ನಾಯಕ ಜ್ಯೋತಿರಾಧಿತ್ಯ ಸಿಂಧಿಯಾ ಕಾಂಗ್ರೆಸ್ಗೆ ರಾಜೀನಾಮೆ ಸಲ್ಲಿಸಿದ್ದಾರೆ. ಈ ಮೂಲಕ ರಾಹುಲ್ ಗಾಂಧಿಯವರ ಆಪ್ತ ವಲಯದಲ್ಲಿದ್ದ ಮತ್ತೊಬ್ಬ ನಾಯಕ ಕಾಂಗ್ರೆಸ್ ತೊರೆದಿದ್ದಾರೆ. ಜತೆಗೆ ಬಿಜೆಪಿಯನ್ನು ಇಂದು ಸಂಜೆಯೇ ಸೇರುವ ಸಾಧ್ಯತೆಯೂ ಇದೆ ಎನ್ನಲಾಗಿದೆ. ಅಮಿತ್ ಶಾ […]

ಕಾಂಗ್ರೆಸ್ ನ ಶಾಸಕರು ಬಿಜೆಪಿಗೆ ಬರುತ್ತಾರೆ, ರಾಜ್ಯ ಬಿಜೆಪಿ ಸರಕಾರ ಸಂಪೂರ್ಣ ಸುಭದ್ರವಾಗಿದೆ : ಡಿಸಿಎಂ ಅಶ್ವಥ್ ನಾರಾಯಣ್

Monday, February 24th, 2020
DCM

ಕಲಬುರಗಿ : ಬಿಜೆಪಿಯ 32 ಶಾಸಕರು ಶೀಘ್ರ ರಾಜೀನಾಮೆ ಎನ್ನುವ ಸಿಎಂ ಇಬ್ರಾಹಿಂ ಹೇಳಿಕೆಗೆ  ಡಿಸಿಎಂ ಅಶ್ವಥ್ ನಾರಾಯಣ್ ಲೇವಡಿ ಮಾಡಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನ 32 ಶಾಸಕರು ಬಿಜೆಪಿಗೆ ಬರ್ತಾರೆ ಅಂತ ಸಿಎಂ ಇಬ್ರಾಹಿಂ ಹೇಳಿರಬೇಕು. ರಾಜ್ಯ ಬಿಜೆಪಿ ಸರಕಾರ ಸಂಪೂರ್ಣ ಸುಭದ್ರವಾಗಿದೆ. ಮೂರು ವರ್ಷ ಮೂರು ತಿಂಗಳು ಕಾಲ ಆಡಳಿತ ಪೂರ್ಣಗೊಳಿಸುತ್ತೇವೆ ಎಂದರು. ರಾಜ್ಯದಲ್ಲಿ ಮತ್ತೆ 2023ರಲ್ಲೂ ನಾವೇ ಅಧಿಕಾರಕ್ಕೆ ಬರುತ್ತೇವೆ. ಕುಮಾರಸ್ವಾಮಿ, ಸಿದ್ದರಾಮಯ್ಯ ಸೇರಿದಂತೆ ಎಲ್ಲರೂ ಸರಕಾರ ಅವಧಿ […]

ಮೀಸಲಾತಿ ಗೊಂದಲ : ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

Monday, February 17th, 2020
cog.pratibhatane

ಮಡಿಕೇರಿ : ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿ ನಡೆದುಕೊಳ್ಳುತ್ತಿರುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಇದೀಗ ಪರಿಶಿಷ್ಟ ಜಾತಿ, ಪಂಗಡ ಮತ್ತು ಹಿಂದುಳಿದ ವರ್ಗಗಳ ಅಭ್ಯುದಯಕ್ಕಾಗಿ ಇದ್ದ ಮೀಸಲಾತಿಯ ಹಕ್ಕನ್ನು ದುರ್ಬಲಗೊಳಿಸಲು ಹೊರಟಿದೆ ಎಂದು ಆರೋಪಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಿತು. ನಗರದ ಜನರಲ್ ತಿಮ್ಮಯ್ಯ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಮೀಸಲಾತಿ ಪ್ರತಿಪಾದನೆ ಕುರಿತು ಸರ್ಕಾರ ಮತ್ತೆ ಸುಪ್ರೀಂಕೋರ್ಟ್‌ನಲ್ಲಿ ಮರು ಪರಿಶೀಲನಾ ಅರ್ಜಿ […]

ಸಂಸದ ಅನಂತಕುಮಾರ್ ಹೆಗ್ಡೆ ವಿರುದ್ಧ ಮಡಿಕೇರಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ

Saturday, February 8th, 2020
congress-protest

ಮಡಿಕೇರಿ : ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರನ್ನು ಹಾಗೂ ಸ್ವಾತಂತ್ರ್ಯ ಹೋರಾಟಗಾರರನ್ನು ಸಂಸದ ಅನಂತ್ ಕುಮಾರ್ ಹೆಗ್ಡೆ ಅವರು ಅವಹೇಳನ ಮಾಡಿದ್ದಾರೆ ಎಂದು ಆರೋಪಿಸಿ ಮತ್ತು ಆಶ್ರಮಗಳಿಗೆ ನೀಡಲಾಗುತ್ತಿದ್ದ ದಾಸೋಹದ ಧಾನ್ಯಗಳನ್ನು ಬಿಜೆಪಿ ಸರ್ಕಾರ ಸ್ಥಗಿತಗೊಳಿಸಿದೆ ಎಂದು ಅಸಮಾಧಾನ ವ್ಯಕ್ತಪಡಿಸಿ ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿ ನಗರದಲ್ಲಿ ಪ್ರತಿಭಟನೆ ನಡೆಸಿತು. ನಗರದ ಜನರಲ್ ತಿಮ್ಮಯ್ಯ ವೃತ್ತದ ಬಳಿ ಜಮಾಯಿಸಿದ ಪ್ರತಿಭಟನಾಕಾರರು ಮಾನವ ಸರಪಳಿ ರಚಿಸಿ, ಅನಂತಕುಮಾರ್ ಹೆಗ್ಡೆ, ಸಚಿವೆ ಶಶಿಕಲಾ ಜೊಲ್ಲೆ ಹಾಗೂ ಬಿಜೆಪಿ ಸರ್ಕಾರದ ವಿರುದ್ಧ […]