Blog Archive

ಲೋಕಸಭೆ ಚುನಾವಣೆಯಲ್ಲಿ ಪೂಜಾರಿ ಎಂಟ್ರಿ !

Tuesday, December 11th, 2012
Janardhan Poojari & Vinaykumar Sorake

ಮಂಗಳೂರು :ಲೋಕಸಭಾ ಚುನಾವಣೆಯಲ್ಲಿ ನಾಲ್ಕು ಬಾರಿ ಸೋಲು ನಾಲ್ಕು ಬಾರಿ ಗೆಲುವು ದಾಖಲಿಸಿರುವ ಜನಾರ್ದನ ಪೂಜಾರಿ ಐದನೆಯ ದಾಖಲೆಗಾಗಿ ಕೊನೆಯ ಹೋರಾಟಕ್ಕೆ ಇಳಿದಿದ್ದಾರೆ. ತನ್ನನ್ನು ಬೆಂಬಲಿಸಿ ಎಂದು ಸ್ಥಳೀಯ ಕಾಂಗ್ರೆಸ್ ನಾಯಕರಿಗೆ ಕರೆ ಮಾಡುತ್ತಿದ್ದಾರೆ ಆಯ್ದ ಕೆಲವರೊಂದಿಗೆ ಆತ್ಮೀಯ ಸಭೆಯನ್ನು ನಡೆಸಿದ್ದಾರೆ. ಕಾರ್ಪೊರೇಟರ್ ಗಳಿಗೆ ತನ್ನನ್ನೇ ಬೆಂಬಲಿಸುವಂತೆ ಕೋರುವ ಆದೇಶವನ್ನೂ ನೀಡಿರುವುದು ಹೊಸ ಬೆಳವಣಿಗೆ. ತೀರಾ ಇತ್ತೀಚೆಗೆ ನಗರದ ಸರ್ಕ್ಯೂಟ್ ಹೌಸ್ ನಲ್ಲಿ ಕಾರ್ಪೊರೇಟರ್ ಗಳ ಗುಪ್ತ ಸಭೆ ಕರೆದು ತನಗೆ ಬೆಂಬಲಿಸುವವರ ಪಡೆಯನ್ನು ಪೂಜಾರಿ ಖಾತ್ರಿ […]

ಇದು ಕರಾವಳಿ “ಪೊಲಿ’ಟಿಕ್ಸ್”!

Tuesday, November 13th, 2012
Karavali Politics

ಮಂಗಳೂರು :2013ರಲ್ಲಿ ಕರ್ನಾಟಕ ರಾಜ್ಯ ವಿಧಾನ ಸಭಾ ಮತ್ತು 2014ರಲ್ಲಿ ಲೋಕಸಭಾ ಚುನಾವಣೆ ನಡೆಯಲಿದೆ. ಪ್ರಮುಖ ರಾಷ್ಟ್ರೀಯ ಪಕ್ಷವಾದ ಕಾಂಗ್ರೆಸ್ ಮತ್ತು ಬಿಜೆಪಿ ಹಾಗು ಪ್ರಾದೇಶಿಕ ಪಕ್ಷವಾದ ಜೆಡಿಎಸ್ ಈಗಾಗಲೆ ಮಂಗಳೂರಿನಲ್ಲಿ ತನ್ನ ಚುನಾವಣಾ ಕಸರತ್ತು ಆರಂಭಿಸಿದೆ. ಅಕ್ಟೋಬರ್ 18ರಂದು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಮಂಗಳೂರಿಗೆ ಆಗಮಿಸಿ ಸಾವಿರಾರು ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ್ದಾರೆ. ಪಕ್ಷದ ಕಾರ್ಯಕರ್ತರಲ್ಲಿ ಹುರುಪು ತುಂಬುವಂತೆ ಮಾಡಿದ್ದಾರೆ. ರಾಜ್ಯ ಬಿಜೆಪಿ ಸರಕಾರವನ್ನು ಕಿತ್ತೊಗೆಯುವಂತೆ ಕರೆ ನೀಡಿದ್ದಾರೆ. ಸೋನಿಯಾರ ಮಂಗಳೂರು ಭೇಟಿಯ ಸಂಪೂರ್ಣ ಹೊಣೆ […]

ಮಂಗಳೂರು ತಾಲೂಕು ಪಂಚಾಯತ್ ಅಧ್ಯಕ್ಷರಾಗಿ ಶ್ರೀಮತಿ ಭವ್ಯ ಪೂಜಾರ್ತಿ

Friday, February 11th, 2011
ಮಂಗಳೂರು ತಾಲೂಕು ಪಂಚಾಯತ್

ಮಂಗಳೂರು : ಮಂಗಳೂರು ತಾಲೂಕು ಪಂಚಾಯತ್ ಅಧ್ಯಕ್ಷರಾಗಿ ಶ್ರೀಮತಿ ಭವ್ಯ ಪೂಜಾರ್ತಿ ಯವರು ಆಯ್ಕೆಯಾಗಿರುತ್ತಾರೆ. ಇವರು ಕಲ್ಲಮುಂಡ್ಕೂರು ತಾಲೂಕು ಪಂಚಾಯತ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿದ್ದು, ಪದವೀಧರರಾಗಿದ್ದಾರೆ. ತಾಲೂಕುಪಂಚಾಯತ್ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ, ಭವ್ಯಾ ಪೂಜಾರ್ತಿಯವರು 19 ಮತಗಳನ್ನು ಪಡೆದು, ಕಾಂಗ್ರೆಸ್ನ ಸುರೇಖಾ ಚಂದ್ರಹಾಸ್ ರವರನ್ನು 1 ಮತದ ಅಂತರದಿಂದ ಸೋಲಿಸಿದರು. ಸುರೇಖಾ ಚಂದ್ರಹಾಸ್ರವರು 18 ಮತಗಳನ್ನು ಪಡೆದಿದ್ದರು. ಹಾಗೆಯೇ ಮಂಗಳೂರು ತಾಲೂಕು ಪಂಚಾಯತ್ ಉಪಾಧ್ಯಕ್ಷ ಸ್ಥಾನಕ್ಕೆ ಶ್ರೀಮತಿ ವಿಜಯಲಕ್ಷ್ಮಿ ಶೆಟ್ಟಿ ಆಯ್ಕೆಯಾಗಿರುತ್ತಾರೆ. ಇವರು […]

ರಾಜ್ಯದಲ್ಲಿ ಜಿಲ್ಲಾ ಮತ್ತು ತಾಲೂಕ ಪಂಚಾಯತ್ ಚುನಾವಣೆಗಳಲ್ಲಿ ಬಿಜೆಪಿಗೆ ಗೆಲುವು

Tuesday, January 4th, 2011
ಜಿಲ್ಲಾ ಮತ್ತು ತಾಲೂಕ ಪಂಚಾಯತ್ ಚುನಾವಣೆ ಫಲಿತಾಂಶ

ಬೆಂಗಳೂರು : ಎರಡು ಹಂತದಲ್ಲಿ ನಡೆದ ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿ ಚುನಾವಣಾ ಫಲಿತಾಂಶ ಘೋಷಣೆಯಾಗಿದ್ದು, ಭಾರತೀಯ ಜನತಾ ಪಕ್ಷ ಗೆಲುವು ಸಾಧಿಸುವ ಮೂಲಕ ಆಡಳಿತಾರೂಢ ಬಿಜೆಪಿಯ ಕಡೆ ಮತದಾರ ಒಲವು ತೋರಿಸಿದ್ದಾನೆ ಬಿಜೆಪಿಯ ಭದ್ರಕೋಟೆ  ಬಳ್ಳಾರಿಯಲ್ಲಿ ಮತ್ತು ಉತ್ತರ ಕನ್ನಡದಲ್ಲಿ ಬಿಜೆಪಿ ಬಹುತೇಕ ಹಿಂದೆ ಬಿದ್ದಿದೆ. ಮುಖ್ಯಮಂತ್ರಿಗಳ ತವರು ಕ್ಷೇತ್ರ ಶಿವಮೂಗ್ಗದಲ್ಲಿ ಬಿಜೆಪಿ ಮುನ್ನಡೆ ಸಾಧಿಸುವ ಮೂಲಕ ಯಡಿಯೂರಪ್ಪ ಮುಖಭಂಗವನ್ನು ತಪ್ಪಿಸಿಕೊಂಡಿದ್ದಾರೆ. ರಾಮನಗರ, ಹಾಸನ, ತುಮಕೂರು ಹಾಗೂ ಕೋಲಾರ ಜಿಲ್ಲೆಗಳಲ್ಲಿ ಜೆಡಿಎಸ್, ಬೆಂಗಳೂರು ಗ್ರಾಮಾಂತರ, ಬೆಂಗಳೂರು […]

ತಾಲೂಕು ಮತ್ತು ಜಿಲ್ಲಾ ಪಂಚಾಯತ್ ಚುನಾವಣೆಯಲ್ಲಿ ಬಿಜೆಪಿಗೆ ಜಯಭೇರಿ

Tuesday, January 4th, 2011
ದ.ಕ.ಜಿಲ್ಲಾ ಪಂಚಾಯತ್ ತಾಲೂಕು ಪಂಚಾಯತ್ ಚುನಾವಣೆ ಫಲಿತಾಂಶ

ಮಂಗಳೂರು : ಡಿ.31ರಂದು ನಡೆದ ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಪಂಚಾಯತ್ ಕ್ಷೇತ್ರಗಳ ಚುನಾವಣೆಯ ಚುನಾವಣಾ ಫಲಿತಾಂಶ ಹೊರಬಿದ್ದಿದ್ದು , ದಕ್ಷಿಣ ಕನ್ನಡ ಮತ್ತು ಉಡುಪಿಯ ಜಿ.ಪಂ., ತಾ.ಪಂ. ಕ್ಷೇತ್ರಗಳಲ್ಲಿ ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ ಮೇಲುಗೈ ಸಾಧಿಸಿದೆ ಇಂದು ಬೆಳಿಗ್ಗೆ ಮತ ಎಣಿಕೆ ಮುಗಿದಾಗ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಜೆಪಿ 24 ಸ್ಥಾನಗಳನ್ನು  ತನ್ನದಾಗಿಸಿಕೊಂಡಿದೆ, ಕಾಂಗ್ರೆಸ್ 11 ಸ್ಥಾನಗಳನ್ನು ಪಡೆಯಿತು. ಬಂಟ್ವಾಳದಲ್ಲಿ ಜಿ.ಪಂ. ಕ್ಷೇತ್ರದಲ್ಲಿ 6ಸ್ಥಾನಗಳಲ್ಲಿ ಬಿಜೆಪಿ ,ಕಾಂಗ್ರೆಸ್ 3 ಸ್ಥಾನಗಳನ್ನು ಗಳಿಸಿದೆ. ಗೋಳ್ತಮಜಲು ಕ್ಷೇತ್ರದಲ್ಲಿ […]

ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆಯಲ್ಲಿ ಮೈತ್ರಿ ಇಲ್ಲ: ದೇವೇಗೌಡ

Friday, December 10th, 2010
ದೇವೇಗೌಡ

ಬೆಂಗಳೂರು  : ಜಿಲ್ಲಾ ಪಂಚಾಯತಿ ಮತ್ತು ತಾಲೂಕು ಪಂಚಾಯಿತಿ ಚುನಾವಣೆಯಲ್ಲಿ ಯಾವುದೇ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳುವುದಿಲ್ಲ  ಎಂದು ಮಾಜಿ ಪ್ರಧಾನಮಂತ್ರಿ ದೇವೇಗೌಡ ತಿಳಿಸಿದ್ದಾರೆ. ಕಾಂಗ್ರೆಸ್ ಜತೆಗೆ ಮೈತ್ರಿಯ ಪ್ರಶ್ನೆಯೇ ಇಲ್ಲ ಜೆಡಿಎಸ್ ಏಕಾಂಗಿಯಾಗಿ ಸ್ಪರ್ಧಿಸಲಿದ್ದು ಎಲ್ಲಾ ಜಿಲ್ಲೆಗಳಲ್ಲೂ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಲಿದೆ ಎಂದು ದೇವೇಗೌಡ ತಿಳಿಸಿದ್ದಾರೆ. ರಾಜಕೀಯ ಪಕ್ಷವಾಗಿ ನೇರವಾಗಿ ಜನರ ಮುಂದೆ ಹೋಗುತ್ತೇವೆ. ಹೊಂದಾಣಿಕೆ ಮಾಡಿಕೊಳ್ಳದಿದ್ದರೆ ಜಾತ್ಯತೀತ ಮತ ವಿಭಜನೆಯಾಗಿ ಬಿಜೆಪಿಗೆ ಅನುಕೂಲವಾಗುತ್ತದೆ ಎಂಬ ಅಭಿಪ್ರಾಯವಿದೆ ಎಂದು ಪತ್ರಕರ್ತರಿಗೆ ತಿಳಿಸಿದರು. ಅಭಿವೃದ್ಧಿಯೇ ಮೂಲಮಂತ್ರ ಎಂದ ಬಿಜೆಪಿ […]

ರಾಜ್ಯಪಾಲರು, ಕಾಂಗ್ರೆಸ್, ಜೆಡಿಎಸ್ ನಾಯಕರ ವರ್ತನೆಗೆ ದ.ಕ ಜಿಲ್ಲಾ ಬಿಜೆಪಿ ಖಂಡನೆ.

Wednesday, October 13th, 2010
ಬಿ.ಜೆಪಿಯ ಜಿಲ್ಲಾಧ್ಯಕ್ಷ ಪದ್ಮನಾಭ ಕೊಟ್ಟಾರಿ

ಮಂಗಳೂರು:  ಕಳೆದ ಒಂದು ವಾರದ ರಾಜ್ಯದ ರಾಜಕೀಯ ಬೆಳವಣಿಗೆಗಳನ್ನು ಗಮನಿಸಿದಾಗ ಈ ರಾಜ್ಯದಲ್ಲಿ ಜನಾದೇಶದೊಂದಿಗೆ ಜನಪರ ಆಡಳಿತ ನೀಡುವ  ಒಂದು ಸರಕಾರವನ್ನು ಅಧಿಕಾರದಿಂದ ಕೆಳಗಿಳಿಸಲು ಪ್ರತಿಪಕ್ಷಗಳು ಯಾವ ರೀತಿ ಕಾರ್ಯೋನ್ಮುಖವಾಗಿದೆ ಎನ್ನುವುದರ ಜ್ವಲಂತ ಸಾಕ್ಷಿಯಾಗಿದೆ. ರಾಜ ಭವನವನ್ನು ರಾಜಕೀಯ ಚಟುವಟಿಕೆಗಳ ಕೇಂದ್ರವಾಗಿರಿಸಿಕೊಂಡು ರಾಜ್ಯಪಾಲರನ್ನು ಪಕ್ಷದ ಏಜಂಟರಂತೆ ಉಪಯೋಗಿಸಿಕೊಂಡ ಕಾಂಗ್ರೆಸ್-ಜೆಡಿಎಸ್ನ ಕುತಂತ್ರ ಬಯಲಾಗಿದೆ ಎಂದು ಬಿ.ಜೆಪಿಯ ಜಿಲ್ಲಾಧ್ಯಕ್ಷ ಪದ್ಮನಾಭ ಕೊಟ್ಟಾರಿಯವರು ಇಂದು ಬಿಜೆಪಿ ಕಚೇರಿಯಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು. ಸರಕಾರದ ಭಾಗವಾಗಿ ಕಾರ್ಯನಿರ್ವಹಿಸಿದ ಸಚಿವರನ್ನು, ಶಾಸಕರನ್ನು ರೆಸಾರ್ಟ್ ಗಳಲ್ಲಿ […]

ರಾಜ್ಯಾದ್ಯಂತ ಕಬ್ಬಿಣ ಅದಿರು ರಪ್ತು ನಿಷೇಧ : ಯಡಿಯೂರಪ್ಪ

Saturday, August 21st, 2010
ರಾಜ್ಯಾದ್ಯಂತ ಕಬ್ಬಿಣ ಅದಿರು ರಪ್ತು ನಿಷೇಧ : ಯಡಿಯೂರಪ್ಪ

ಬೆಂಗಳೂರು : ಅಕ್ರಮ ಗಣಿಗಾರಿಕೆ ವಿರುದ್ಧ ಪ್ರತಿಪಕ್ಷ ಕಾಂಗ್ರೆಸ್ ಪಾದಯಾತ್ರೆ ನಡೆಸುತ್ತಿರುವ ಬೆನ್ನಲ್ಲೇ,  ರಾಜ್ಯಾದ್ಯಂತ ಕಬ್ಬಿಣ ಅದಿರು ರಫ್ತಿಗೆ ನಿಷೇಧ ಹೇರಲು ರಾಜ್ಯ ಸರಕಾರ ಮುಂದಾಗುವ ಮೂಲಕ ರೆಡ್ಡಿ ಸಹೋದರರಿಗೆ ದೊಡ್ಡ ಹೊಡೆತ ಬಿದ್ದಂತಾಗಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅದಿರು ಸಾಗಾಟ ರಫ್ತು ಪರ್ಮಿಟ್ ರದ್ದು ಮಾಡಿರುವುದಾಗಿ ತಿಳಿಸಿದ್ದು, ಅಕ್ರಮ ಗಣಿಗಾರಿಕೆ ಕುರಿತಂತೆ ಲೋಕಾಯುಕ್ತ ವರದಿ ಸಲ್ಲಿಕೆಯಾಗುವವರೆಗೂ ಈ ತಡೆಯಾಜ್ಞೆ ಮುಂದುವರಿಯಲಿದೆ. ಆ ನಿಟ್ಟಿನಲ್ಲಿ ರಾಜ್ಯಾದ್ಯಂತ ಕಬ್ಬಿಣ ಅದಿರು ರಫ್ತಿಗೆ ಸಂಪೂರ್ಣ ನಿಷೇಧ ಹೇರಿ ರಾಜ್ಯ […]