Blog Archive

ಎರಡು ದಿನಗಳಲ್ಲಿ ಉಪಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ : ಸಿದ್ದರಾಮಯ್ಯ

Tuesday, September 24th, 2019
siddaramayya

ಹುಬ್ಬಳ್ಳಿ : ಉಪಚುನಾವಣೆಗೆ ನಾವು ಸಿದ್ಧರಾಗಿದ್ದು, ಮುಂದಿನ ಎರಡು ದಿನಗಳಲ್ಲಿ ಉಪಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುತ್ತೇವೆ ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು. ಪಕ್ಷಾಂತರಿಗಳನ್ನು ಮತದಾರರು ಯಾವತ್ತೂ ಕ್ಷಮಿಸುವುದಿಲ್ಲ. ಉಪಚುನಾವಣೆಯಲ್ಲಿ ನಾವು 15 ಕ್ಷೇತ್ರಗಳಲ್ಲೂ ಗೆಲ್ಲುತ್ತೇವೆ ಎಂದು ನಗರದ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸುತ್ತಾ ಮಾಜಿ ಸಿಎಂ ಸಿದ್ದರಾಮಯ್ಯ ಅಭಿಪ್ರಾಯಪಟ್ಟರು. ಕುಮಾರಸ್ವಾಮಿ ಏನು ಮಾತನಾಡುತ್ತಾರೆ ಎಂಬುದು ಅವರಿಗೆ ಗೊತ್ತಾಗುತ್ತಿಲ್ಲ. ಅವರು ಪ್ರಜ್ಞೆ ಇಟ್ಟುಕೊಂಡು ಮಾತನಾಡಬೇಕು. ಮೈಸೂರು, ಚಾಮರಾಜನಗರದಲ್ಲಿ ಬಿಜೆಪಿ ಅಭ್ಯರ್ಥಿಗೆ […]

ಉಪ ಚುನಾವಣೆಗೆ ಕಾಂಗ್ರೆಸ್ ಭರ್ಜರಿ ತಯಾರಿ

Saturday, September 21st, 2019
congress

ಬೆಂಗಳೂರು : ರಾಜ್ಯದ 17 ರ ಪೈಕಿ 15 ಅನರ್ಹ ಶಾಸಕರ ಕ್ಷೇತ್ರಗಳಿಗೆ ಚುನಾವಣೆ ಘೋಷಣೆಯಾಗಿದ್ದು, ರಾಜಕೀಯ ಪಕ್ಷಗಳಲ್ಲಿ ಅಭ್ಯರ್ಥಿಗಳ ಆಯ್ಕೆ ಬಿರುಸುಗೊಂಡಿದೆ. ಮಸ್ಕಿ ಹಾಗೂ ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರಗಳ ಹೊರತುಪಡಿಸಿ ಉಳಿದ 15 ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆಯಾಗಿದೆ. ಕಾಂಗ್ರೆಸ್ ಪಾಲಿಗೆ ಈ ಕ್ಷೇತ್ರಗಳ ಗೆಲುವು ಅತ್ಯಂತ ಪ್ರತಿಷ್ಠೆಯಾಗಿ ಪರಿಣಮಿಸಿದೆ. ಚುನಾವಣೆ ಘೋಷಣೆಗೆ ಮುನ್ನವೇ ಸಾಕಷ್ಟು ಸಿದ್ಧತೆ ನಡೆಸಿರುವ ರಾಜಕೀಯ ಪಕ್ಷಗಳು ಇದೀಗ ಚುನಾವಣಾ ದಿನಾಂಕ ಘೋಷಣೆಯಾದ ನಂತರ ಇನ್ನಷ್ಟು ಚುರುಕಾಗಿ ಕಾರ್ಯ ನಿರ್ವಹಣೆ ಆರಂಭಿಸಲಿವೆ. 17 […]

ಡಿಕೆಶಿ ಬಂಧನ : ಕೆಲವೆಡೆ ಪ್ರತಿಭಟನೆ, ಬಸ್‌ಗೆ ಬೆಂಕಿ

Wednesday, September 4th, 2019
bus

ರಾಮನಗರ : ಮಾಜಿ ಸಚಿವ, ಹಿರಿಯ ಕಾಂಗ್ರೆಸ್‌ ನಾಯಕ ಡಿ ಕೆ ಶಿವಕುಮಾರ್‌ ಅವರನ್ನು ಅಕ್ರಮ ಹಣ ಸಾಗಾಟ ಆರೋಪದ ಹಿನ್ನಲೆಯಲ್ಲಿ ಇಡಿ ಅಧಿಕಾರಿಗಳು ದೆಹಲಿಯಲ್ಲಿ ಬಂಧಿಸಿದ ಪ್ರಕರಣವನ್ನು ಖಂಡಿಸಿ ರಾಮನಗರ, ಕನಕಪುರ ಸೇರಿದಂತೆ ರಾಜ್ಯದ ಹಲವೆಡೆ ಪ್ರತಿಭಟನೆ ನಡೆಯುತ್ತಿದೆ. ಡಿ ಕೆ ಶಿವಕುಮಾರ್‌ ಅವರ ಅಭಿಮಾನಿಗಳು ಬುಧವಾರ ಬೆಳಿಗ್ಗೆ ರಸ್ತೆಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಕೇಂದ್ರ ಸರಕಾರ ಮತ್ತು ಬಿಜೆಪಿ ವಿರುದ್ದ ಘೋಷಣೆಗಳನ್ನು ಕೂಗುತ್ತಾ ಪ್ರತಿಭಟನೆ ನಡೆಯುತ್ತಿದೆ. ಮಾಜಿ ಸಚಿವ ಡಿ ಕೆ ಶಿವಕುಮಾರ್‌ ಅವರ ಬಂಧನವನ್ನು […]

ಸುರತ್ಕಲ್ ಟೋಲ್ ಗೇಟ್ ಸುಂಕ : ಕಾಂಗ್ರೆಸ್ ನಿಂದ ಬಿಜೆಪಿ ಪಕ್ಷದ ಶಾಸಕರಿಗೆ ಸಂಸದರಿಗೆ ಛೀಮಾರಿ

Tuesday, July 16th, 2019
Surathkal Toll

ಸುರತ್ಕಲ್ : ಸುರತ್ಕಲ್ ಟೋಲ್ ಗೇಟ್ ನಲ್ಲಿ ಸ್ಥಳೀಯ ಖಾಸಗಿ ವಾಹನಗಳಿಗೆ ಟೋಲ್ ವಿಧಿಸಿರುವುದನ್ನು ವಿರೋಧಿಸಿ ದ.ಕ ಜಿಲ್ಲಾ ಯುವ ಕಾಂಗ್ರೆಸ್ ಮಂಗಳವಾರ ಪ್ರತಿಭಟನೆ ನಡೆಸಿತು . ಸುರತ್ಕಲ್ ಟೋಲ್ ವಿರುದ್ಧ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಕೂಳೂರಿನಿಂದ ಸುರತ್ಕಲ್ ವರೆಗೆ ರಾಷ್ಟ್ರೀಯ ಹೆದ್ದಾರಿ ಹದಗೆಟ್ಟಿದೆ. ಸುಮಾರು 9 ತಿಂಗಳ ಮುಂಚಿತವಾಗಿ ಟೋಲ್ ಗೇಟ್ ನ ಬಗ್ಗೆ ಅಹೋರಾತ್ರಿ ಧರಣಿ ನಡೆಸಿದ್ದೇವೆ. ಆದರೆ ಬಿಜೆಪಿಯವರು ಈಗ ಪ್ರತಿಭಟನೆಯ ನೆಪದಲ್ಲಿ ಒಂದು ಕಣ್ಣಿಗೆ ಬೆಣ್ಣೆ, ಇನ್ನೊಂದು ಕಣ್ಣಿಗೆ ಸುಣ್ಣ ಹಚ್ಚುವ […]

ವಿಪಕ್ಷೀಯರು ಭ್ರಷ್ಟಾಚಾರದ ಮೂಲಕ ದೇಶದ ಸಂಪತ್ತನ್ನು ಕೊಳ್ಳೆ ಹೊಡೆದರು

Monday, April 15th, 2019
Vijayasankalpa

ಮಂಗಳೂರು: ಕಾಂಗ್ರೆಸ್‌-ಜೆಡಿಎಸ್‌ ಮತ್ತಿತರ ಪಕ್ಷಗಳು ವಂಶೋದಯದ ಬಗ್ಗೆಯೇ ಗಮನವನ್ನು ಕೇಂದ್ರೀಕರಿಸಿವೆ. ಆದರೆ ಬಿಜೆಪಿಯು ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸಮಾ ನತೆಯ ಲಾಭ ದೊರೆಯಬೇಕೆಂಬ ಅಂತ್ಯೋದಯದ ತಣ್ತೀವನ್ನು ಹೊಂದಿದೆ. ವಂಶೋ ದಯದವರು ಅವರ ಕುಟುಂಬದ ಹಿತಾಸಕ್ತಿ ಯನ್ನೇ ನೋಡಿಕೊಳ್ಳುವರು. ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಮಂಗಳೂರಿನ ಕೇಂದ್ರ ಮೈದಾನದಲ್ಲಿ ಶನಿವಾರ ಬಿಜೆಪಿ ಚುನಾವಣ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌-ಜೆಡಿಎಸ್‌ ಅವರ ಕುಟುಂಬಿಕರನ್ನು ಮಾತ್ರ ಅಧಿಕಾರಕ್ಕೆ ತರಲು ಯತ್ನಿಸುವರು ಎಂದರು. ವಿಪಕ್ಷೀಯರು ಭ್ರಷ್ಟಾಚಾರದ ಮೂಲಕ ದೇಶದ ಸಂಪತ್ತನ್ನು ಕೊಳ್ಳೆ […]

ಕಾಂಗ್ರೆಸ್ ನಿಂದ  ಎಸ್ ಡಿಪಿಐ ಪಕ್ಷಕ್ಕೆ  ಹಾರಿದ ಇಸ್ಮಾಯಿಲ್ ಶಾಫಿ

Friday, March 22nd, 2019
safi babbukatte

  ಮಂಗಳೂರು : ಕರ್ನಾಟಕ ರಾಜ್ಯ ಟಿಪ್ಪು ಸುಲ್ತಾನ್ ಅಭಿಮಾನಿಗಳ ಮಹಾ ವೇದಿಕೆ (ರಿ) ದಕ್ಷಿಣ ಕನ್ನಡ ಜಿಲ್ಲೆಯ ಅಧ್ಯಕ್ಷ ಇಸ್ಮಾಯಿಲ್ ಶಾಫಿ ಬಬ್ಬುಕಟ್ಟೆ ಎಸ್ ಡಿಪಿಐ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ಈ ಹಿಂದಿನ ಚುನಾವಣೆ ವೇಳೆ ಸಚಿವ ಮಂಗಳೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷವನ್ನು ಸಂಘಟಿಸಿ, ಮುನ್ನೂರು ಗ್ರಾಮದ ಚುನಾವಣಾ ಉಸ್ತುವಾರಿಯಾಗಿ ಕಾರ್ಯನಿರ್ವಹಿಸಿ ಯುಟಿ ಖಾದರ್ ರ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಶಾಫಿ ಬಬ್ಬುಕಟ್ಟೆಯವರು ಉಳ್ಳಾಲ ಬ್ಲಾಕ್ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ್ದಾರೆ. ಇಷ್ಟೆಲ್ಲಾ ಅರ್ಹತೆ , ಸಾಮರ್ಥ್ಯ ಇದ್ದರೂ ಕಾಂಗ್ರೆಸ್ ಪಕ್ಷ […]

ಕಾಂಗ್ರೆಸ್ ಶಾಸಕಾಂಗ ಪಕ್ಷದ ಕಾರ್ಯದರ್ಶಿಯಾಗಿ ಪಿ.ಆರ್. ರಮೇಶ್ ನೇಮಕ

Wednesday, December 26th, 2018
siddaramaih

ಬೆಂಗಳೂರು: ಕಾಂಗ್ರೆಸ್ ಶಾಸಕಾಂಗ ಪಕ್ಷದ ಕಾರ್ಯದರ್ಶಿಯಾಗಿ ವಿಧಾನ ಪರಿಷತ್ ಸದಸ್ಯ ಪಿ.ಆರ್. ರಮೇಶ್ ಅವರು ನೇಮಕಗೊಂಡಿದ್ದಾರೆ. ಶಾಸಕಾಂಗ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಇಂದು ರಮೇಶ್ ಅವರಿಗೆ ನೇಮಕ ಪತ್ರ ನೀಡಿದರು. 2017 ರ ಮೇ ತಿಂಗಳಲ್ಲಿ ಸಾಮಾಜಿಕ ಸೇವೆಯ ಅಡಿ ವಿಧಾನ ಪರಿಷತ್ಗೆ ನಾಮ ನಿರ್ದೇಶನಗೊಂಡಿದ್ದರು. ಮಾಜಿ ಸಿಎಂ ಸಿದ್ದರಾಮಯ್ಯ ಕಟ್ಟಾ ಬೆಂಬಲಿಗರಾಗಿರುವ ಅವರು, ಈ ಹಿಂದೆ ಬೆಂಗಳೂರು ಮೇಯರ್ ಆಗಿ ಕೂಡ ಕಾರ್ಯ ನಿರ್ವಹಿಸಿದ್ದರು. ಇದೀಗ ಪಕ್ಷದ ಪ್ರಮುಖ ಹುದ್ದೆ ಇವರಿಗೆ ಒಲಿದು ಬಂದಿದೆ.

ಉತ್ತರ ಕೊಡುವ ಧೈರ್ಯವಿದ್ದರೆ ಜಂಟಿ ಸಂಸತ್​​ ಸಮಿತಿ ರಚಿಸಲಿ: ಯು.ಟಿ.ಖಾದರ್

Wednesday, December 26th, 2018
u-t-khader

ಮಂಗಳೂರು: ರಫೇಲ್ ಒಪ್ಪಂದಕ್ಕೆ ಸಂಬಂಧಪಟ್ಟಂತೆ ಕೇಂದ್ರ ಸರ್ಕಾರ ಕಾಂಗ್ರೆಸ್ನ ಪ್ರಶ್ನೆಗೆ ಉತ್ತರ ಕೊಡುವ ಧೈರ್ಯವಿದ್ದರೆ ಜಂಟಿ ಸಂಸತ್ ಸಮಿತಿ ರಚಿಸಲಿ ಎಂದು ಸಚಿವ ಯು.ಟಿ.ಖಾದರ್ ಸವಾಲು ಹಾಕಿದರು. ಹೆಚ್ಎಎಲ್ನೊಂದಿಗೆ ಆದ ಒಪ್ಪಂದವನ್ನು‌ ಮುರಿದು ವಿದೇಶಿ ಕಂಪನಿಯೊಂದಿಗೆ ರಫೇಲ್‌ ಒಪ್ಪಂದಕ್ಕೆ ಸಹಿ ಹಾಕಿದ್ದು ಯಾಕೆ ಎಂದು ಇಂದು ದೇಶದ ಜನತೆ ಕೇಳುತ್ತಿದ್ದಾರೆ. ಇದಕ್ಕೆ ಕೇಂದ್ರ ಸರ್ಕಾರ ಉತ್ತರ ಕೊಡಲಿ ಎಂದು ಗುಡುಗಿದರು. ಒಂದು ಪ್ಲಾಸ್ಟಿಕ್ ವಿಮಾನವನ್ನು ತಯಾರಿಸದ ಅಂಬಾನಿಯ ಸಂಸ್ಥೆಗೆ ಯಾಕೆ ಇದನ್ನು ಕೊಡಬೇಕಿತ್ತು. ಐನೂರು ಕೋಟಿ ರೂ.ವರೆಗೆ […]

ಜಾರಕಿಹೊಳಿ ಯಾವಾಗ ಪಕ್ಷಕ್ಕೆ ರಾಜೀನಾಮೆ ಕೊಡುತ್ತಾರೋ ಆಗ ಮಾತ್ರ ಮಾತುಕತೆ: ಶೋಭಾ ಕರಂದ್ಲಾಜೆ

Monday, December 24th, 2018
shobha-karandlaje

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸೇರಿದಂತೆ ಯಾವೊಬ್ಬ ಶಾಸಕರಾದರೂ ತಮ್ಮ ಪಕ್ಷ ತೊರೆದರೆ ಮಾತ್ರ ಅವರೊಂದಿಗೆ ಮಾತುಕತೆ ನಡೆಸುತ್ತೇವೆ ಎಂದು ಎಂದು ಸಂಸದೆ ಶೋಭಾ ಕರಂದ್ಲಾಜೆ ಸ್ಪಷ್ಟಪಡಿಸಿದ್ದಾರೆ. ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ನಾವು ಮಾಜಿ ಸಚಿವ ರಮೇಶ್ ಕುಮಾರ್ ಅವರನ್ನು ಸಂಪರ್ಕಿಸಿಲ್ಲ, ಪಕ್ಷಕ್ಕೆ ಆಹ್ವಾನವನ್ನೂನೀಡಿಲ್ಲ, ಯಾವಾಗ ಅವರು ತಮ್ಮ ಪಕ್ಷಕ್ಕೆ ರಾಜೀನಾಮೆ ಕೊಡುತ್ತಾರೋ ಆಗ ಮಾತ್ರ ನಾವು ಮಾತನಾಡಿಸುತ್ತೇವೆ ಎಂದರು. ರಮೇಶ್ ಜಾರಕಿಹೊಳಿ ನೋವಿನ ಮಾತುಗಳು ಕಾಂಗ್ರೆಸ್ ಆಂತರಿಕ ಭಾವನೆ. ಕಾಂಗ್ರೆಸ್ – ಜೆಡಿಎಸ್ […]

ಮಧ್ಯಪ್ರದೇಶದ 18ನೇ ಮುಖ್ಯಮಂತ್ರಿಯಾಗಿ ಕಮಲನಾಥ್ ಪ್ರಮಾಣವಚನ ಸ್ವೀಕಾರ

Monday, December 17th, 2018
kamalnath

ಭೋಪಾಲ್: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಧ್ವಜ ನೆಟ್ಟು, ಗೆಲುವಿನ ನಗೆ ಬೀರಿದ ಕಮಲನಾಥ್ ಅವರು ಇಂದು ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ನ್ಯಾಷನಲ್ ಕಾನ್ಫರೆನ್ಸ್ನ ಅಧ್ಯಕ್ಷ ಫರೂಕ್ ಅಬ್ದುಲ್ಲಾ, ಕಾಂಗ್ರೆಸ್ ನಾಯಕ ದಿಗ್ವಿಜಯ ಸಿಂಗ್, ಮಲ್ಲಿಕಾರ್ಜು ಖರ್ಗೆ, ಆಂಧ್ರಪ್ರದೇಶ ಸಿಎಂ ಎನ್. ಚಂದ್ರಬಾಬು ನಾಯ್ಡು, ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್ , ಜೆಡಿಯು ನಿರ್ಮಿತ ನಾಯಕ ಶರದ್ ಯಾದವ್, ರಾಜಸ್ಥಾನದ ಸಿಎಂ ಅಶೋಕ್ ಗೆಹ್ಲೋಟ್ ಹಾಗೂ ಡಿಸಿಎಂ ಸಚಿನ್ ಪೈಲಟ್, ನವಜೋತ್ ಸಿಂಗ್ ಸಿಧು, […]