ಕಾಂಗ್ರೆಸ್ ಅಭ್ಯರ್ಥಿ ರಾಜು ಪೂಜಾರಿ ಗೆಲುವು ನಿಶ್ಚಿತ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

Saturday, October 19th, 2024
Lakshmi-Hebbalkar

ಉಡುಪಿ : ದಕ್ಷಿಣ ಕನ್ನಡ – ಉಡುಪಿ ಸ್ಥಳೀಯ ಸಂಸ್ಥೆಗಳ ಕರ್ನಾಟಕ ವಿಧಾನ ಪರಿಷತ್ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಾಜು ಪೂಜಾರಿ ಗೆಲುವು ಶತಸಿದ್ಧ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ವಿಶ್ವಾಸ ವ್ಯಕ್ತಪಡಿಸಿದ್ಧಾರೆ. ಉಡುಪಿಯ ಕಾಂಗ್ರೆಸ್ ಭವನದಲ್ಲಿ ನಡೆದ ಚುನಾವಣಾ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಈ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷದ ಗೆಲುವು ನಿಶ್ಚಿತ. ಕರಾವಳಿಯಲ್ಲಿ ಪಕ್ಷದ ಅಭ್ಯರ್ಥಿ ರಾಜು ಪೂಜಾರಿ […]

ಮಾಜಿ ಸಿಎಂ ಡಿವಿ ಸದಾನಂದ ಗೌಡ ಕಾಂಗ್ರೆಸ್​ ಸೇರ್ಪಡೆ ಮುನ್ಸೂಚನೆ

Wednesday, March 13th, 2024
DVS congress

ಬೆಂಗಳೂರು : ಕಾಂಗ್ರೆಸ್​ ಅಭ್ಯರ್ಥಿಗಳ ಎರಡನೇ ಪಟ್ಟಿ 15 ಕ್ಕೆ ಬಿಡುಗಡೆಗೆ ಮುನ್ನವೇ ಬಿಜೆಪಿಯ ಹಲವಾರು ಕಾಂಗ್ರೆಸ್ ಪಕ್ಷಕ್ಕೆ ಸೇರುವ ಮುನ್ಸೂಚನೆಯನ್ನು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಮಾಜಿ ಸಿಎಂ ಡಿವಿ ಸದಾನಂದ ಗೌಡ ಅವರಿಗೆ ಒಂದೆಡೆ ಬಿಜೆಪಿಯಿಂದ ಲೋಕಸಭೆ ಚುನಾವಣೆಗೆ ಟಿಕೆಟ್ ದೊರೆಯುತ್ತದೆಯೇ ಎಂಬ ಅನುಮಾನ ಸೃಷ್ಟಿಯಾಗಿದೆ. ಈ ಮಧ್ಯೆ, ಅವರು ಕಾಂಗ್ರೆಸ್ ಸೇರುವ ಸಾಧ್ಯತೆಗಳೂ ಇವೆ ಎಂಬ ವದಂತಿಯೂ ಇದೆ. ಈ ಎಲ್ಲ ಬೆಳವಣಿಗೆಗಳ ಮಧ್ಯೆ ಸದಾನಂದ ಗೌಡ ವಿಚಾರವಾಗಿ ಡಿಸಿಎಂ ಡಿಕೆ ಶಿವಕುಮಾರ್ […]

ಕಾಂಗ್ರೆಸ್ ಅಭ್ಯರ್ಥಿ ಬೆಂಬಲಿಗನಿಂದ ಪಾಕ್ ಪರ ಘೋಷಣೆ, ಬಿಜೆಪಿ ಜಿಲ್ಲಾ ಯುವ ಮೋರ್ಚಾ ಪ್ರತಿಭಟನೆ

Wednesday, February 28th, 2024
BJP-gherao

ಮಂಗಳೂರು : ರಾಜ್ಯಸಭೆ ಚುನಾವಣೆ ಫಲಿತಾಂಶ ಪ್ರಕಟದ ಸಂದರ್ಭ ವಿಜೇತ ಕಾಂಗ್ರೆಸ್ ಅಭ್ಯರ್ಥಿ ಡಾ.ಸೈಯದ್ ನಾಸಿರ್ ಹುಸೇನ್ ಬೆಂಬಲಿಗರೊಬ್ಬರು ಪಾಕ್ ಪರ ಘೋಷಣೆ ಕೂಗಿದ್ದಾರೆಂಬ ಹಿನ್ನೆಲೆಯಲ್ಲಿ ಬುಧವಾರ ಬಿಜೆಪಿಯ ದ.ಕ. ಜಿಲ್ಲಾ ಯುವ ಮೋರ್ಚಾ ಕಾರ್ಯಕರ್ತರು ಮಂಗಳೂರಿನಲ್ಲಿ ಪ್ರತಿಭಟನೆ ನಡೆಸಿದರು. ಮೋರ್ಚಾ ಕಾರ್ಯಕರ್ತರು ಕಾಂಗ್ರೆಸ್ ವಿರುದ್ಧ ಘೋಷಣೆ ಕೂಗುತ್ತಾ ಮಲ್ಲಿಕಟ್ಟೆಯಲ್ಲಿರುವ ದ.ಕ. ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು. ಈ ವೇಳೆ ಪೊಲೀಸರು ಅವರನ್ನು ವಶಕ್ಕೆ ಪಡೆದು ವಾಹನಗಳಲ್ಲಿ ಕರೆದೊಯ್ದರು. ಇದೇ ವೇಳೆ ಕಾಂಗ್ರೆಸ್ ಕಾರ್ಯಕರ್ತರು […]

ದ.ಕ. ಮತ್ತು ಉಡುಪಿ ಜಿಲ್ಲೆ ವಿಧಾನ ಪರಿಷತ್‌ನ ಚುನಾವಣೆ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಮಂಜುನಾಥ ಭಂಡಾರಿಗೆ ಜಯ

Tuesday, December 14th, 2021
Manjunatha Bhandary SrinivasaPoojary

ಮಂಗಳೂರು : ದ.ಕ. ಮತ್ತು ಉಡುಪಿ ಜಿಲ್ಲೆಯನ್ನು ಒಳಗೊಂಡ ಸ್ಥಳೀಯಾಡಳಿತದ ವಿಧಾನ ಪರಿಷತ್‌ನ  ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ, ಹಾಲಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಮಂಜುನಾಥ ಭಂಡಾರಿ ಇಬ್ಬರೂ ಮೊದಲ ಪ್ರಾಶಸ್ತ್ಯದ ಮತಗಳಲ್ಲೇ ಜಯ ಗಳಿಸಿದ್ದಾರೆ. ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಖಾತೆ ಸಚಿವರಾಗಿರುವ ಕೋಟ ಶ್ರೀನಿವಾಸ 3,672 ಮತಗಳನ್ನು ಗಳಿಸಿ ಮತ್ತೊಮ್ಮೆ ರಾಜ್ಯ ಶಾಸಕಾಂಗದ ‘ಮೇಲ್ಮನೆ’ ಪ್ರವೇಶಿಸಿದ್ದಾರೆ. ಮಂಜುನಾಥ ಭಂಡಾರಿ 2,079 ಮತಗಳನ್ನು ಗಳಿಸಿ ಮೊದಲ ಬಾರಿ […]

ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ ಚುನಾವಣಾ ಪೂರ್ವ ಸಿದ್ಧತಾ ಸಭೆ

Monday, December 6th, 2021
Manjunath Bhandary

ಮಂಗಳೂರು  : ವಿಧಾನ ಪರಿಷತ್ತಿಗೆ ದ.ಕ. ಸ್ಥಳೀಯ ಪ್ರಾಧಿಕಾರ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ಮಂಜುನಾಥ ಭಂಡಾರಿ ಅವರ ಗೆಲುವಿಗೆ ಸಂಬಂಧಿಸಿ ಚುನಾವಣಾ ಪೂರ್ವ ಸಿದ್ಧತಾ ಸಭೆ ಸೋಮವಾರ ನಗರದ ಓಶಿಯನ್ ಪರ್ಲ್ ಹೊಟೇಲ್ ಸಭಾಂಗಣದಲ್ಲಿ ಜರಗಿತು. ಡಿ. 4 ರಂದು ನಡೆದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಎಲ್ಲಾ 13 ವಿಧಾನ ಸಭಾಕ್ಷೇತ್ರಗಳ ಎರಡೆರಡು ಬ್ಲಾಕ್‌ಗಳ ಅಧ್ಯಕ್ಷರು ಮತ್ತು ಪಕ್ಷದ ವೀಕ್ಷಕರ ಸಭೆಯಲ್ಲಿ ಕೈಗೊಂಡ ನಿರ್ಣಯದಂತೆ ಸೋಮವಾರದ ಈ ಸಭೆ ಜರಗಿದ್ದು, ಎಲ್ಲಾ 13 […]

ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ ಮಂಜುನಾಥ್ ಭಂಡಾರಿ ನಾಮಪತ್ರ ಸಲ್ಲಿಕೆ

Tuesday, November 23rd, 2021
Manjunath Bhandary

ಮಂಗಳೂರು : ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಂಜುನಾಥ್ ಭಂಡಾರಿ ಮಂಗಳವಾರ ನಾಮಪತ್ರ ಸಲ್ಲಿಸಿದರು. ಕಳೆದ 40 ವರ್ಷದಿಂದ ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯನಾಗಿದ್ದೇನೆ. ಒಬ್ಬ ಸಾಮಾನ್ಯ ಕಾರ್ಯಕರ್ತನಾಗಿದ್ದ ನನ್ನನ್ನು ಹಿರಿಯ ನಾಯಕರು ಗುರುತಿಸಿ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ಕಲ್ಪಿಸಿದ್ದಾರೆ. ಈ ಚುನಾವಣೆಯಲ್ಲಿ ಗೆಲ್ಲುವ ವಿಶ್ವಾಸವಿದೆ ಎಂದು ಹೇಳಿದರು. ಈ ಸಂದರ್ಭ ಕಾಂಗ್ರೆಸ್ ದ.ಕ. ಜಿಲ್ಲಾಧ್ಯಕ್ಷ ಹರೀಶ್ ಕುಮಾರ್, ಮುಖಂಡರಾದ ಮಿಥುನ್ ರೈ ಮತ್ತಿತರರು ಉಪಸ್ಥಿತರಿದ್ದರು. ಬಂಟ್ವಾಳ ತಾಲೂಕಿನ ತೆಂಕಬೆಳ್ಳೂರು ಗ್ರಾಮದ ಕೆಮ್ಮಾಜೆಯ ಬಂಟ-ಕೃಷಿ ಕುಟುಂಬದಲ್ಲಿ ಜನಿಸಿದ ಮಂಜುನಾಥ್ ಭಂಡಾರಿ […]

ಮಂಗಳೂರು ಮಹಾನಗರ ಪಾಲಿಕೆ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

Wednesday, October 30th, 2019
congress List

ಮಂಗಳೂರು: ನವೆಂಬರ್  12 ರಂದು ಮಂಗಳೂರು ಮಹಾನಗರ ಪಾಲಿಕೆಗೆ ನಡೆಯುವ ಚುನಾವಣೆಗೆ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ದೃಢೀಕರಿಸಿದ ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿಗಳ ಪಟ್ಟಿಯನ್ನು ಜಿಲ್ಲಾಧ್ಯಕ್ಷ ಕೆ.ಹರೀಶ್ ಕುಮಾರ್ ಬುಧವಾರ ಬಿಡುಗಡೆಗೊಳಿಸಿದ್ದಾರೆ. ಕ್ರಮ ಸಂಖ್ಯೆ ವಾರ್ಡ್ ಹೆಸರು ಅಭ್ಯರ್ಥಿ ಹೆಸರು 1 ಸುರತ್ಕಲ್ ಪಶ್ಚಿಮ ಶಾಂತ ಎಸ್.ರಾವ್ 2 ಸುರತ್ಕಲ್ ಪೂರ್ವ ಇಂದಿರಾ 3 ಕಾಟಿಪಳ್ಳ ಪೂರ್ವ ಬಷೀರ್ ಅಹಮದ್ 4 ಕಾಟಿಪಳ್ಳ ಕೃಷ್ಣಾಪುರ ಸವಿತಾ ಶೆಟ್ಟಿ 5 ಕಾಟಿಪಳ್ಳ ಉತ್ತರ ಫಾತಿಮಾ ಬಿ. […]

ಕಾಸರಗೋಡು ಕಾಂಗ್ರೆಸ್ ಅಭ್ಯರ್ಥಿ ರಾಜ್ ಮೋಹನ್ ಉಣ್ಣಿತ್ತಾನ್ ಗೆಲುವು

Thursday, May 23rd, 2019
Rajmohan Unnithan

ಕಾಸರಗೋಡು :  ಕಾಸರಗೋಡು ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಾಜ್ ಮೋಹನ್ ಉಣ್ಣಿತ್ತಾನ್ ತಮ್ಮ ಪ್ರತಿಸ್ಪರ್ಧಿ ಸಿಪಿಎಂನ ಕೆ.ಪಿ ಸತೀಶ್ಚಂದ್ರನ್ ರನ್ನು40,438 ಮತಗಳ ಅಂತರದಿಂದ ಸೋಲಿಸಿದರು. ಸಿಪಿಎಂನ ಭದ್ರ ಕೋಟೆಯಾದ ಕಾಸರಗೋಡು ಮೂರು ದಶಕದ ಬಳಿಕ ಕಾಸರಗೋಡು ಲೋಕಸಭಾ ಕ್ಷೇತ್ರ ಕಾಂಗ್ರೆಸ್ ಪಾಲಾಗಿದೆ. ಕಾಂಗ್ರೆಸ್ ಅಭ್ಯರ್ಥಿ ರಾಜ್ ಮೋಹನ್ ಉಣ್ಣಿತ್ತಾನ್ ತಮ್ಮ ಪ್ರತಿಸ್ಪರ್ಧಿ ಸಿಪಿಎಂನ ಕೆ.ಪಿ ಸತೀಶ್ಚಂದ್ರನ್ ರನ್ನು ಸೋಲಿಸಿದರು. ಕಾಂಗ್ರೆಸ್ ಅಭ್ಯರ್ಥಿ ರಾಜ್ ಮೋಹನ್ ಉಣ್ಣಿ ತ್ತಾನ್ ಸಿಪಿಎಂನ ಕೆ. ಪಿ ಸತೀಷ್ಚಂದ್ರನ್ ವಿರುದ್ಧ ಸುಮಾರು 41, 648 ಅಂತರದಿಂದ ಗೆಲುವು ಸಾದಿಸಿದರು. […]

ಮಿಥುನ್ ರೈ ಗೆಲ್ಲಿಸಿ, ಅಭಿವೃದ್ಧಿ ಮತ್ತು ಪಕ್ಷ ಸಂಘಟನೆಗೆ ಒತ್ತು ನೀಡಿ : ಡಿ.ಕೆ.ಶಿವಕುಮಾರ್

Monday, April 15th, 2019
Mithun-Rai

ಸುಳ್ಯ : ದಕ್ಷಿಣ ಕನ್ನಡ ಲೋಕಸಭಾ ಸದಸ್ಯನಾಗಿ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಎಂ.ರೈಯನ್ನು ಗೆಲ್ಲಿಸಿ, ನಾವೆಲ್ಲರೂ ಸೇರಿ ಸುಳ್ಯ ಪ್ರದೇಶವನ್ನು ಅಭಿವೃದ್ಧಿ ಮಾಡುವುದಲ್ಲದೆ ಕಾಂಗ್ರೆಸ್ ಪಕ್ಷವನ್ನು ಮತ್ತೊಮ್ಮೆ ಬಲಿಷ್ಠವಾಗಿ ಸಂಘಟಿಸೋಣ ಎಂದು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಹೇಳಿದರು. ಅವರು ಸುಳ್ಯ ತಾಲೂಕಿನ ಗುತ್ತಿಗಾರು ಪಟ್ಟಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಪರವಾಗಿ ಚುನಾವಣಾ ಪ್ರಚಾರ ನಡೆಸಿ ಮತದಾರರನ್ನು ಉದ್ದೇಶಿಸಿ ಮಾತನಾಡಿದರು. ಸುಳ್ಯ ಪ್ರದೇಶದ ಮೂಲಭೂತ ಸೌಕರ್ಯಗಳಿಂದ ವಂಚಿತವಾಗಿದೆ ಎಂಬುದು ತನ್ನ ಗಮನಕ್ಕೆ ಬಂದಿದ್ದು, ಈ ಬಾರಿ […]

ಸ್ವಯಂಪ್ರೇರಿತರಾಗಿ ಮಿಥುನ್ ರೈ ಪರ ಪ್ರಚಾರದಲ್ಲಿ ಯುವಕರು

Monday, April 8th, 2019
congress

ಮಂಗಳೂರು : ಕುಳೂರು ಪ್ರದೇಶದ ನೂರಕ್ಕೂ ಹೆಚ್ಚು ಯುವಕರು ಸ್ವಯಂ ಪ್ರೇರಿತರಾಗಿ ಭಾರತ ರಾಷ್ಟ್ರೀಯ ಕಾಂಗ್ರೆಸ್ ದಕ್ಷಿಣ ಕನ್ನಡ ಲೋಕಸಭಾ ಅಭ್ಯರ್ಥಿ ಮಿಥುನ್ ರೈ ಪರವಾಗಿ ಪ್ರಚಾರದಲ್ಲಿ ತೊಡಗಿದ್ದಾರೆ. ಕುಳೂರು ನಿವಾಸಿ ಅನಿಲ್ ಡೆವಿಡ್ ಅವರ ನೇತೃತ್ವದಲ್ಲಿ 120 ಮಂದಿ ಯುವಕರು ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಅವರ ಭಾವಚಿತ್ರ ಮತ್ತು ಚುನಾವಣಾ ಚಿಣ್ನೆ ಇರುವ ಟೀ ಶರ್ಟ್ ಮತ್ತು ಟೊಪ್ಪಿಗಳನ್ನು ಧರಿಸಿ ಚುನಾವಣಾ ಪ್ರಚಾರದಲ್ಲಿ ತೊಡಗಿದ್ದಾರೆ. ಮಿಥುನ್ ರೈ  ಅವರಂತಹ ಯುವಕ, ವಿದ್ಯಾವಂತ ನಮ್ಮ ಜಿಲ್ಲೆಗೆ ಸಂಸದನಾಗಿ […]