ಕಾಂಗ್ರೆಸ್ ಸರ್ಕಾರದಿಂದ ಸಾವಿರಾರು ಅರ್ಹ ಬಿಪಿಎಲ್ ಕಾರ್ಡ್ ರದ್ದು :- ಶಾಸಕ ಕಾಮತ್ ಆಕ್ರೋಶ

Saturday, October 26th, 2024
Vedvyasa-Kamath

ಮಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ಮಂಗಳೂರು ಸೇರಿದಂತೆ ರಾಜ್ಯಾದ್ಯಂತ ಪಡಿತರ ಚೀಟಿ ತಿದ್ದುಪಡಿ ನಡೆಯುತ್ತಿದ್ದು ಅನೇಕ ಅರ್ಹ ಬಡವರ ಬಿಪಿಎಲ್‌ ಕಾರ್ಡ್‌ಗಳನ್ನು ರದ್ದು ಪಡಿಸಲಾಗುತ್ತಿದೆ. ಆ ಕಾರಣಕ್ಕೆ ಅನೇಕರಿಗೆ ಈ ತಿಂಗಳ ಪಡಿತರ ಅಕ್ಕಿಯನ್ನು ತಡೆಹಿಡಿಯಲಾಗಿದ್ದು ಬಡ ವರ್ಗದವರು ತೀವ್ರ ಸಂಕಷ್ಟಕ್ಕೀಡಾಗಿದ್ದಾರೆ ಎಂದು ಶಾಸಕ ವೇದವ್ಯಾಸ ಕಾಮತ್ ಅವರು ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು. ನಗರದಲ್ಲಿ ಏಕಾಏಕಿ ಸಾವಿರಾರು ಅರ್ಹ ಬಿಪಿಎಲ್‌ ಚೀಟಿಗಳು ರದ್ದಾಗಿರುವ ಬಗ್ಗೆ ನಾಗರಿಕರು ದಿನನಿತ್ಯ ಕರೆ ಮಾಡಿ ಅಳಲು ತೋಡಿಕೊಳ್ಳುತ್ತಿದ್ದು ಇನ್ನೂ […]

ಬಿಜೆಪಿ ಸರ್ಕಾರದ ಅವಧಿಯ ರೂ.75.00 ಕೋಟಿಗೂ ಅಧಿಕ ಮೊತ್ತದ ಬಾಕಿ ಅನುದಾನ ತಡೆದ ಕಾಂಗ್ರೆಸ್ : ವಿ ಸುನಿಲ್‌ ಕುಮಾರ್

Tuesday, August 13th, 2024
sunil-kumar

ಕಾರ್ಕಳ : ರಾಜ್ಯದ ನಿಕಟಪೂರ್ವ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ಬಿಜೆಪಿ ಸರ್ಕಾರದ ಅವಧಿಯ 2022-23ನೇ ಸಾಲಿನಲ್ಲಿ ಉಡುಪಿ ಜಿಲ್ಲೆಯ ಕಾರ್ಕಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಮಂಜೂರಾತಿ ನೀಡಿ ಬಿಡುಗಡೆ ಮಾಡಿದ್ದ ಸುಮಾರು ರೂ.75.00 ಕೋಟಿಗೂ ಅಧಿಕ ಮೊತ್ತದ ಅನುದಾನವನ್ನು ಈಗಿನ ಕಾಂಗ್ರೆಸ್‌ ಸರ್ಕಾರ ತಡೆ ಹಿಡಿದಿದ್ದು, ತಡೆ ಹಿಡಿದಿರುವ ಅನುದಾನವನ್ನು ಕೂಡಲೇ ಬಿಡುಗಡೆ ಮಾಡುವಂತೆ ಕಾರ್ಕಳ ಶಾಸಕರು ಹಾಗೂ ಮಾಜಿ ಸಚಿವರಾದ ವಿ ಸುನಿಲ್‌ ಕುಮಾರ್‌ರವರು ಮುಖ್ಯಮಂತ್ರಿಯವರನ್ನು ಆಗ್ರಹಿಸಿದ್ದಾರೆ. ಗ್ರಾಮೀಣಾಭಿವೃದ್ಧಿ […]

ಮೂಡ ಹಗರಣದ ಪ್ರತಿಭಟಗೆ ತೆರಳುತ್ತಿದ್ದ ಬಿಜೆಪಿ ನಾಯಕರನ್ನು ಬಂಧಿಸಿದ್ದು, ಸಿದ್ದರಾಮಯ್ಯ ಸರ್ಕಾರದ ಸರ್ವಾಧಿಕಾರ ಧೋರಣೆ

Friday, July 12th, 2024
vedayas-kamath

ಮಂಗಳೂರು : ನಾಲ್ಕು ಸಾವಿರ ಕೋಟಿಯ ಮೂಡ ಹಗರಣ ಖಂಡಿಸಿ ಮೈಸೂರಿನಲ್ಲಿ ಆಯೋಜಿಸಿದ್ದ ಪ್ರತಿಭಟನಾ ಸಭೆಗೆ ತೆರಳುತ್ತಿದ್ದ ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ.ವೈ ವಿಜಯೇಂದ್ರ, ವಿಪಕ್ಷ ನಾಯಕರಾದ ಆರ್.ಅಶೋಕ್ ಸಹಿತ ಹಲವು ನಾಯಕರನ್ನು ಬೆಂಗಳೂರಿನಲ್ಲಿಯೇ ಬಂಧಿಸಿದ ಕಾಂಗ್ರೆಸ್ ಸರ್ಕಾರದ ವಿರುದ್ಧ ದ.ಕ ಜಿಲ್ಲಾ ಬಿಜೆಪಿ ಕಚೇರಿ ಬಳಿ ಪ್ರತಿಭಟನೆ ನಡೆಯಿತು. ಪ್ರತಿಭಟನೆಯಲ್ಲಿ ಮಾತನಾಡಿದ ಶಾಸಕ ವೇದವ್ಯಾಸ್ ಕಾಮತ್ ಅವರು, ರಣಹೇಡಿ ಭ್ರಷ್ಟ ಕಾಂಗ್ರೆಸ್ ಸರ್ಕಾರ ವಿಪಕ್ಷಗಳ ಪ್ರತಿಭಟನಾ ಸ್ವಾತಂತ್ರ್ಯವನ್ನು ಹತ್ತಿಕ್ಕಿದೆ. ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಸರ್ವಾಧಿಕಾರ ಧೋರಣೆಯ ಮೂಲಕ […]

ಸೆಕ್ಯುಲರ್ ಮುಖವಾಡದ ಕಾಂಗ್ರೆಸ್ ಸರ್ಕಾರ ಶಿವಮೊಗ್ಗದ ಕೋಮುದಳ್ಳುರಿಗೆ ಕಾರಣ : ವೇದವ್ಯಾಸ್ ಕಾಮತ್

Monday, October 2nd, 2023
Vedavyasa-Kamath

ಮಂಗಳೂರು : ಶಿವಮೊಗ್ಗದ ರಾಗಿಗುಡ್ಡದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಜಿಹಾದಿ ಮನಸ್ಥಿತಿಯ ಕಿಡಿಗೇಡಿಗಳು ಪೊಲೀಸರೂ ಸೇರಿದಂತೆ ಹಲವು ಮನೆಗಳ ಮೇಲೆ ಕಲ್ಲು ತೂರಿರುವ ಘಟನೆ ನಡೆದಿದ್ದು ಹಿಂದೂಗಳು ಭಯದ ವಾತಾವರಣದಲ್ಲಿ ಬದುಕುವಂತಾಗಿದೆ. ಇದೇ ಶಿವಮೊಗ್ಗದಲ್ಲಿ ಕಳೆದ ವಾರ ಭಾರೀ ಸಂಖ್ಯೆಯೊಂದಿಗೆ ಯಾವ ಗಲಭೆಯೂ ಇಲ್ಲದೇ ಗಣೇಶ ವಿಸರ್ಜನೆ ಆಯಿತು.ಆದರೆ ಈದ್ ಮೆರವಣಿಗೆಯಲ್ಲಿ ಕೋಮುದಳ್ಳುರಿ ಹೊತ್ತಿಸಲಾಗಿದೆ. ಇದಕ್ಕೆಲ್ಲ ಕಾರಣ ಜಿಹಾದಿ ಮಾನಸಿಕತೆಯ ಕಿಡಿಗೇಡಿಗಳು ಹಾಗೂ ಸೆಕ್ಯುಲರ್ ಮುಖವಾಡದ ಕಾಂಗ್ರೆಸ್ ಸರ್ಕಾರ ಎಂದು ಶಾಸಕ ವೇದವ್ಯಾಸ್ ಕಾಮತ್ ಅವರು […]

ಯುನಿಟ್ ಗೆ 2 ಸಾವಿರ ರೂ.ನಂತೆ ಎಲ್ಲರಿಗೂ ಮರಳು ದೊರಕಲಿದೆ : ರಾಧಾಕೃಷ್ಣ

Monday, September 21st, 2020
Radhakrishana

ಮಂಗಳೂರು: ಮಾಜಿ ಸಚಿವ ರಮಾನಾಥ ರೈಯವರು ಎರಡು ಸಾವಿರಕ್ಕೆ ಮರಳು ಎಂದು ನಳಿನ್ ಕುಮಾರ್ ಕಟೀಲು ಹೇಳಿದ್ದನ್ನು ಟೀಕಿಸಿದ್ದರು ಆದರೆ ಯುನಿಟ್ ಗೆ 2 ಸಾವಿರ ರೂ.ನಂತೆ ಎಲ್ಲರಿಗೂ ಮರಳು ದೊರಕಲಿದೆ ಎಂದು ಬಿಜೆಪಿ ಜಿಲ್ಲಾ ವಕ್ತಾರ ರಾಧಾಕೃಷ್ಣ ಹೇಳಿದ್ದಾರೆ. ದ.ಕ.ಜಿಲ್ಲೆಯಲ್ಲಿ ಕಾಂಗ್ರೆಸ್ ಸರ್ಕಾರ ಇರುವಾಗ ಮರಳು ಮಾಫಿಯಾ ನಡೆಯುತ್ತಿತ್ತು ನಾವು 2 ಸಾವಿರ ರೂ.ಗೆ ಎಲ್ಲರಿಗೂ ಮರಳು ವಿತರಣೆ ಮಾಡುತ್ತೇವೆ ಎಂದು ನಳಿನ್ ಕುಮಾರ್ ಕಟೀಲು  ಹೇಳಿದ್ದರು. ಇದಕ್ಕೆ ಪರವಾಗಿ ನಗರದ ಬಿಜೆಪಿ ಕಚೇರಿಯಲ್ಲಿ ಸ್ಪಷ್ಟನೆ ನೀಡಿದ ಅವರು, ಜಿಲ್ಲೆಯಲ್ಲಿ ಮರಳು ಮಾಫಿಯಾ […]

ಮಧ್ಯಪ್ರದೇಶ ಕಮಲ್ ನಾಥ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಪತನದ ಭೀತಿಯಲ್ಲಿ

Monday, March 9th, 2020
Kamalanath

ಬೆಂಗಳೂರು: ಮಧ್ಯಪ್ರದೇಶದಲ್ಲಿ ಕಮಲ್ ನಾಥ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಬಿಜೆಪಿಯ ಆಪರೇಷನ್ ಕಮಲಕ್ಕೆ ಬಲಿಯಾಗುವ ಸಾಧ್ಯತೆ ಇದೆ. ಹಿರಿಯ ಕಾಂಗ್ರೆಸ್ ನಾಯಕ ಜ್ಯೋತಿರಾದಿತ್ಯ ಸಿಂಧಿಯಾ ನೇತೃತ್ವದಲ್ಲಿ 6 ಸಚಿವರು ಸೇರಿದಂತೆ 17 ಕಾಂಗ್ರೆಸ್ ಶಾಸಕರು ಬೆಂಗಳೂರಿಗೆ ಆಗಮಿಸಿದ್ದಾರೆ. 6 ಸಚಿವರು, 11 ಕಾಂಗ್ರೆಸ್ ಶಾಸಕರು ಬೆಂಗಳೂರಿಗೆ ಬಂದು, ಮಾರತಹಳ್ಳಿಯ ಖಾಸಗಿ ಹೋಟೆಲ್‍ನಲ್ಲಿ ವಾಸ್ತವ್ಯ ಹೂಡಿದ್ದಾರೆ. ಬೆಂಗಳೂರಿಗೆ ಬಂದ ಕೈ ನಾಯಕರು ಜ್ಯೋತಿರಾದಿತ್ಯ ಸಿಂಧಿಯಾ ಬೆಂಬಲಿಗರಾಗಿದ್ದು ವಿಶೇಷ ವಿಮಾನದಲ್ಲಿ ಬೆಂಗಳೂರಿಗೆ ಆಗಮಿಸಿದ್ದಾರೆ. ಈ ಎಲ್ಲ ನಾಯಕರ ಫೋನ್ ಸ್ವಿಚ್ […]

ರಾಜ್ಯಕ್ಕೆ ವ್ಯವಸ್ಥಿತವಾಗಿ ಬೆಂಕಿ ಹಚ್ಚುವ ಕೆಲಸವನ್ನು ಸಿದ್ದರಾಮಯ್ಯ ಸರ್ಕಾರ ಮಾಡುತ್ತಿದೆ: ಸತ್ಯಜಿತ್

Tuesday, January 3rd, 2017
Sathyajith

ಮಂಗಳೂರು: ರಾಜ್ಯಕ್ಕೆ ವ್ಯವಸ್ಥಿತವಾಗಿ ಬೆಂಕಿ ಹಚ್ಚುವ ಕೆಲಸವನ್ನು ಸಿದ್ದರಾಮಯ್ಯ ಸರ್ಕಾರ ಮಾಡುತ್ತಿದೆ ಎಂದು ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಜ್ಯ ಕಾರ್ಯದರ್ಶಿ ಸತ್ಯಜಿತ್ ಸುರತ್ಕಲ್ ಆರೋಪಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊಣಾಜೆಯ ಕಾರ್ತಿಕ್ ಹತ್ಯೆ ಪ್ರಕರಣದ ಆರೋಪಿಗಳ ಬಂಧನಕ್ಕೆ ಆಗ್ರಹಿಸಿ ನಡೆದ ಪ್ರತಿಭಟನೆಯಲ್ಲಿ ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲು ಭಾವೋದ್ವೇಗದಲ್ಲಿ ಆಡಿದ ಕೆಲವೊಂದು ಶಬ್ದಗಳನ್ನು ಹಿಡಿದುಕೊಂಡು ಕಾಂಗ್ರೆಸ್ ನಾಯಕರು ಬೊಬ್ಬೆ ಹೊಡೆಯುತ್ತಿರುವುದು ನೋಡಿದಾಗ `ದೆವ್ವದ ಬಾಯಿಯಲ್ಲಿ ಭಗವದ್ಗೀತೆ’ ಕೇಳಿದಂತ ಮಾತು ನೆನಪಾಗುತ್ತಿದೆ ಎಂದು ವ್ಯಂಗ್ಯವಾಡಿದ್ದಾರೆ. […]