ಹೃದಯದ ಬಗ್ಗೆ ಆತಂಕ, ಭಯ ಬೇಡ- ಎಚ್ಚರಿಕೆ ಇರಲಿ : ಡಾ. ಮಂಜುನಾಥ್
Tuesday, November 2nd, 2021ಮಂಗಳೂರು: ಹೃದಯ ಸಂಬಂಧಿ ಕಾಯಿಲೆಗಳು ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿದ್ದು, ಹೃದ್ರೋಗ ತಜ್ಞರ ಬಳಿ ಬರುವವರ ಸಂಖ್ಯೆಯೂ ಭಾರೀ ಪ್ರಮಾಣದಲ್ಲಿ ಏರಿಕೆಯಾಗುತ್ತಿದೆ. ಈ ಕುರಿತು ಕೇಳಿ ಬರುತ್ತಿರುವ ಕೆಲವೊಂದು ಹೇಳಿಕೆ, ಸಲಹೆಗಳು ಜನಸಾಮಾನ್ಯರಲ್ಲಿ ಆತಂಕ, ಭಯಕ್ಕೆ ಕಾರಣವಾಗುತ್ತಿದೆ. ಹೃದಯಕ್ಕೆ ಸಂಬಂಧಿಸಿದ ರೋಗಗಳಿಗೆ ಬೇಕಿರುವುದು ಆತಂಕವಲ್ಲ. ಬದಲಿಗೆ ಆರೋಗ್ಯದ ಕುರಿತಂತೆ ಎಚ್ಚರಿಕೆಯ ಹೆಜ್ಜೆ. ಇದು ಮಂಗಳೂರು ಎಜೆ ಆಸ್ಪತ್ರೆಯ ಹೃದ್ರೋಗ ವಿಭಾಗದ ಮುಖ್ಯಸ್ಥ ಡಾ. ಮಂಜುನಾಥ್ ಅವರ ಸಲಹೆ. ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಪತ್ರಕರ್ತರ ಜತೆಗಿನ […]