ಬೆಳ್ತಂಗಡಿ ಶಾಸಕ ರ ಕಾರು ಚಾಲಕನಿಗೆ ನಿಂದಿಸಿ, ತಲವಾರು ತೋರಿಸಿದ ಪ್ರಕರಣ ಸಿಐಡಿಗೆ
Tuesday, October 18th, 2022
ಮಂಗಳೂರು : ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಕಾರು ಬೆನ್ನತ್ತಿ ಅಡ್ಡಗಟ್ಟಿ ತಲವಾರು ಝಳಪಿಸಿದ ಪ್ರಕರಣವನ್ನು ಸರ್ಕಾರ ಸಿಐಡಿ ತನಿಖೆಗೆ ಒಪ್ಪಿಸಿದೆ. ಇದೀಗ ತತ್‌ಕ್ಷಣದಿಂದಲೇ ಅನ್ವಯವಾಗುವಂತೆ ಪ್ರಕರಣದ ತನಿಖೆಯನ್ನು ಸಿಐಡಿಗೆ ವರ್ಗಾಯಿಸಿ ಸರ್ಕಾರ ಆದೇಶಿಸಿದೆ. ಪ್ರಸ್ತುತ ಪ್ರಕರಣದ ತನಿಖೆ ನಡೆಸುತ್ತಿರುವ ಅಧಿಕಾರಿಯಲ್ಲಿರುವ ಎಲ್ಲಾ ದಾಖಲೆಗಳನ್ನು ಸಿಐಡಿ ಕಚೇರಿಗೆ ದ.ಕ. ಜಿಲ್ಲಾ ಪೊಲೀಸ್ ಅಧಿಕಾರಿಗಳು ಹಸ್ತಾಂತರ ಮಾಡಬೇಕು ಎಂದು ರಾಜ್ಯ ಡಿಜಿಪಿಯವರ ಪರವಾಗಿ ಆರ್. ಹಿತೇಂದ್ರ ಅವರು ಆದೇಶದಲ್ಲಿ ತಿಳಿಸಿದ್ದಾರೆ. ಪ್ರಕರಣದಲ್ಲಿ ಫಳ್ನೀರ್‌ನ ರಿಯಾಜ್ ಎಂಬಾತನನ್ನು ಪೊಲೀಸರು ಬಂಧಿಸಿದ್ದರು. […]