ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಶ್ರೀ ಮಂಜುನಾಥ ಸ್ವಾಮಿಯ ಕಾರ್ತಿಕ ಲಕ್ಷ ದೀಪೋತ್ಸವವು ಇಂದಿನಿಂದ ಆರಂಭ
Thursday, November 24th, 2016ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಶ್ರೀ ಮಂಜುನಾಥ ಸ್ವಾಮಿಯ ಕಾರ್ತಿಕ ಲಕ್ಷ ದೀಪೋತ್ಸವವು ಇಂದಿನಿಂದ ಆರಂಭವಾಗಲಿದೆ. ಶ್ರೀ ಮಂಜುನಾಥ ಸ್ವಾಮಿಯ ಹೊಸಕಟ್ಟೆ ಉತ್ಸವದ ಮೂಲಕ ಲಕ್ಷ ದೀಪೋತ್ಸವ ಪ್ರಾರಂಭವಾಗಲಿದೆ. ಧರ್ಮಸ್ಥಳದಲ್ಲಿರುವ ಎಸ್‌ಡಿಎಂ ಪ್ರೌಢಶಾಲಾ ಕ್ರೀಡಾಂಗಣದಲ್ಲಿ 39ನೇ ವರ್ಷದ ರಾಜ್ಯಮಟ್ಟದ ವಸ್ತು ಪ್ರದರ್ಶನಕ್ಕೆ ಚಾಲನೆ ಸಿಗಲಿದೆ. ದ.ಕ. ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು ವಸ್ತು ಪ್ರದರ್ಶನ ಉದ್ಘಾಟಿಸಲಿದ್ದಾರೆ. ನಂತರ ನ. 27ರಂದು ನಡೆಯುವ ಸರ್ವಧರ್ಮ ಸಮ್ಮೇಳನದ 84ನೇ ಅಧಿವೇಶನವು ಶಿರಹಟ್ಟಿಯ ಫಕೀರ ಸಿದ್ದರಾಮ ಸ್ವಾಮೀಜಿ ಅಧ್ಯಕ್ಷತೆಯಲ್ಲಿ ನಡೆಯಲಿದೆ. […]