ಉಡುಪಿ ಪತ್ರಕರ್ತ ಕಲ್ಮಾಡಿ ಜಯಕರ ಸುವರ್ಣ ನಿಧನ

Tuesday, August 6th, 2024
jayakara-suvarna

ಉಡುಪಿ : ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ, ಕಲ್ಮಾಡಿ ನಿವಾಸಿ ಜಯಕರ ಸುವರ್ಣ (67) ಹೃದಯಾಘಾತದಿಂದ ನಿಧನರಾಗಿದ್ದಾರೆ. ಮೃತರು ಪತ್ನಿ, ಓರ್ವ ಪುತ್ರ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಸೌತ್‌ ಕೆನರಾ ಫೋಟೋಗ್ರಾಫ‌ರ್ಸ್‌ ಅಸೋಸಿಯೇಶನ್‌ ಉಪಾಧ್ಯಕ್ಷರೂ ಆಗಿದ್ದ ಅವರು ಉಡುಪಿ ಜಿಲ್ಲೆ ದೂರದರ್ಶನ ವರದಿಗಾರರಾಗಿದ್ದರು ಹಾಗೂ ಹಲವಾರು ಸಂಘಟನೆಗಳಲ್ಲಿ ತೊಡಗಿಸಿಕೊಂಡಿದ್ದರು. ಕಲ್ಮಾಡಿ ಮನೆಯಲ್ಲಿ ಇವರ ಅಂತಿಮ ದರ್ಶನಕ್ಕೆ ವ್ಯವಸ್ಥೆ ನಡೆಯಲಿದ್ದು, ಇಂದೇ ಅಂತ್ಯಕ್ರಿಯೆ ನಡೆಯಲಿದೆ.

ಮಿಥುನ ಕೊಡೆತ್ತೂರ್‌ಗೆ ‘ಬ್ರ‍್ಯಾಂಡ್ ಮಂಗಳೂರು” ಪ್ರಶಸ್ತಿ

Tuesday, June 25th, 2024
Mithun-Kodethuru

ಮಂಗಳೂರು: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಸೌಹಾರ್ದ ಬಿಂಬಿಸುವ ವರದಿಗೆ ನೀಡಲಾಗುವ “ಬ್ರ‍್ಯಾಂಡ್ ಮಂಗಳೂರು” ಪ್ರಶಸ್ತಿಗೆ ಹೊಸದಿಗಂತ ದಿನಪತ್ರಿಕೆಯ ಮೂಲ್ಕಿ ವರದಿಗಾರ ಮಿಥುನ ಕೊಡೆತ್ತೂರ್‌ ಆಯ್ಕೆಯಾಗಿದ್ದಾರೆ. ಹೊಸದಿಗಂತ ಪತ್ರಿಕೆಯಲ್ಲಿ 2023 ನವೆಂಬರ್‌ 7ರಂದು ಪ್ರಕಟವಾದ ಮಿಥುನ್‌ ಅವರ “‌ಬಾರಾಡಿಯಲ್ಲಿ ಬೆಳೆದಿದೆ 840 ತಳಿ ಭತ್ತʼ’ ಎಂಬ ವರದಿಗೆ ಪ್ರಶಸ್ತಿ ಲಭಿಸಿದೆ. ಪ್ರಶಸ್ತಿಯು 5,001 ರು., ಪ್ರಶಸ್ತಿ ಪತ್ರ ಮತ್ತು ಸ್ಮರಣಿಕೆ ಒಳಗೊಂಡಿದೆ. ಡೆಕ್ಕನ್‌ ಹೆರಾಲ್ಡ್‌ ಪತ್ರಿಕೆಯ ಮಂಗಳೂರು ಸುದ್ದಿವಿಭಾಗ ಮುಖ್ಯಸ್ಥ ಹರ್ಷ ಮತ್ತು ಆಳ್ವಾಸ್‌ ಪತ್ರಿಕೋದ್ಯಮ ವಿಭಾಗದ […]

ಗ್ರಾಮೀಣ ಭಾಗದ ಮೂಲಭೂತ ಅಭಿವೃದ್ಧಿಗೆ ಸರಕಾರದ‌ ಆದ್ಯತೆ- ಸಚಿವ ಎಸ್.ಅಂಗಾರ

Tuesday, January 11th, 2022
madappady

  ಸುಳ್ಯ : ಸ್ವಾತಂತ್ರ್ಯ ಬಂದು 75 ವರ್ಷ ಕಳೆದರೂ ದೇಶದ ಗ್ರಾಮೀಣ‌ ಭಾಗದ ಅಭಿವೃದ್ಧಿ ಇನ್ನೂ ಆಗಿಲ್ಲ. ಗ್ರಾಮಗಳ ಅಭಿವೃದ್ಧಿ ಆಗಬೇಕು ಎಂಬ ಹಿನ್ನಲೆಯಲ್ಲಿ ಗ್ರಾಮೀಣ ಭಾಗದ ಅಭಿವೃದ್ಧಿಗೆ ಸರಕಾರವು ಇಚ್ಛಾಶಕ್ತಿಯಿಂದ ಕೆಲಸ ಮಾಡುತಿದೆ. ರಸ್ತೆ, ಸೇತುವೆಗಳು ಸೇರಿದಂತೆ ಗ್ರಾಮೀಣ ಭಾಗದ ಬೇಡಿಕೆಗಳನ್ನು ಆದ್ಯತೆಯ ಮೇರೆಗೆ ಪೂರ್ತಿ ಮಾಡಲಾಗುವುದು ಎಂದು ಬಂದರು ಮೀನುಗಾರಿಕೆ ಮತ್ತು ಒಳನಾಡು ಜಲ ಸಾರಿಗೆ ಸಚಿವ ಹಾಗು ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ ಹೇಳಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ […]

ಬಾಕಿ ಉಳಿದಿರುವವರಿಗೆ ಲಸಿಕೆ ಹಾಕಿಸುವುದು ಸವಾಲಿನ ಕೆಲಸ: ಡಿಸಿ

Friday, September 17th, 2021
Press Club Vaccination

ಮಂಗಳೂರು  : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇದುವರೆಗೆ ಶೇ.80ರಷ್ಟು ಮಂದಿಗೆ ಲಸಿಕೆ ಹಾಕಿಸಲಾಗಿದೆ. ಆದರೆ ಬಾಕಿ ಉಳಿದವರಿಗೆ ಲಸಿಕೆ ಹಾಕಿಸುವುದು ತುಂಬಾ ಸವಾಲಿನ ಕೆಲಸ ಆಗಲಿದೆ. ಅದಕ್ಕಾಗಿ ಸಾಕಷ್ಟು ಪೂರ್ವ ಸಿದ್ಧತೆ ಮಾಡಿಕೊಂಡು ಇಂದಿನ ಲಸಿಕಾ ಅಭಿಯಾನವನ್ನು ಮಾಡುತ್ತಿದ್ದೇವೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ತಿಳಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನಗರದ ಪ್ರೆಸ್‍ಕ್ಲಬ್‍ನಲ್ಲಿ ಏರ್ಪಡಿಸಲಾದ ಕೋವಿಡ್ 19 ಲಸಿಕಾ ಅಭಿಯಾನ ಉದ್ಘಾಟಿಸಿ ಅವರು ಮಾತನಾಡಿದರು. ಕಳೆದ ವಾರ ಲಕ್ಷ ಮಂದಿಗೆ […]

ಬಂಟ್ವಾಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ಪತ್ರಕರ್ತ ಪ್ರಶಾಂತ್ ಪುಂಜಾಲಕಟ್ಟೆ

Tuesday, September 14th, 2021
Prashanth Poonjalakatte

ಬಂಟ್ವಾಳ : ಬಂಟ್ವಾಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ಪತ್ರಕರ್ತ ಪ್ರಶಾಂತ್ ಪುಂಜಾಲಕಟ್ಟೆ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಮೌನೇಶ ವಿಶ್ವಕರ್ಮ ಆಯ್ಕೆಯಾಗಿದ್ದಾರೆ. ಬಂಟ್ವಾಳ ಪ್ರೆಸ್ ಕ್ಲಬ್ ನಲ್ಲಿ ಮಂಗಳವಾರ ಸಂಘದ ಅಧ್ಯಕ್ಷ ಹರೀಶ್ ಮಾಂಬಾಡಿ ಅಧ್ಯಕ್ಷತೆಯಲ್ಲಿ ನಡೆದ ಮಹಾ ಸಭೆಯಲ್ಲಿ ಈ ಆಯ್ಕೆ ಪ್ರಕ್ರಿಯೆ ನಡೆಯಿತು. ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ಆಯ್ಕೆ ಪ್ರಕ್ರಿಯೆಯನ್ನು ನಡೆಸಿದರು. ನೂತನ ಉಪಾಧ್ಯಕ್ಷರಾಗಿ ಯಾದವ್ ಅರ್ಗಬೈಲ್, ಜೊತೆ ಕಾರ್ಯದರ್ಶಿಯಾಗಿ ಇಮ್ತಿಯಾಝ್ […]

ಪತ್ರಕರ್ತರಿಗೆ ಕಾರ್ಮಿಕ ಇಲಾಖೆಯಿಂದ ಆಹಾರ ಕಿಟ್ ವಿತರಣೆ

Wednesday, September 8th, 2021
Kits

ಮಂಗಳೂರು : ಕಾರ್ಮಿಕ ಇಲಾಖೆ ವತಿಯಿಂದ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರಿಗೆ ಆಹಾರ ಕಿಟ್ ಬುಧವಾರ ಪತ್ರಿಕಾ ಭವನದಲ್ಲಿ ಶಾಸಕರಾದ ವೇದವ್ಯಾಸ ಕಾಮತ್ ಹಾಗು ಡಾ.ವೈ.ಭರತ್ ಶೆಟ್ಟಿ ವಿತರಿಸಿದರು. ಕರೊನಾ ಲಾಕ್‌ಡೌನ್ ಸಮಸ್ಯೆಯಿಂದ ಪತ್ರಕರ್ತರು ಕೂಡ ಸಂಕಷ್ಟಕ್ಕೆ ಸಿಲುಕಿದ್ದು, ಅವರಿಗೆ ಸರ್ಕಾರ ಕಾರ್ಮಿಕ ಇಲಾಖೆ ಮೂಲಕ ನೀಡಿದ ಆಹಾರ ಕಿಟ್ ಆತ್ಮಸ್ಥೈರ್ಯ ತುಂಬಲು ಸಹಕಾರಿಯಾಗಿದೆ ಎಂದು ವೇದವ್ಯಾಸ ಕಾಮತ್ ಹೇಳಿದರು. ಕರೊನಾದಿಂದಾಗಿ ಎಲ್ಲ ಕ್ಷೇತ್ರವೂ ಮುಗ್ಗರಿಸಿದ್ದು, ಸರ್ಕಾರ ಅಸ್ತಿತ್ವಕ್ಕೆ ಬಂದ ಆರಂಭದಿಂದ ನೆರೆ, […]

ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ಹಾಸನದಲ್ಲಿ ಅಭಿನಂದನಾ ಕಾರ್ಯಕ್ರಮ

Wednesday, August 4th, 2021
DK journalists

ಹಾಸನ: 35 ನೇ ಪತ್ರಕರ್ತರ ರಾಜ್ಯ ಸಮ್ಮೇಳನವನ್ನು ಮಂಗಳೂರಿನಲ್ಲಿ ಯಶಸ್ವಿಯಾಗಿ ನಡೆಸಿಕೊಟ್ಟ ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ಹಾಸನದಲ್ಲಿ ಅಭಿನಂದನಾ ಕಾರ್ಯಕ್ರಮ ಏರ್ಪಡಿಸಲಾಯಿತು. ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಪರವಾಗಿ ಹಾಸನ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಸನದ ಹೊಳೆನರಸೀಪುರ ರಸ್ತೆಯಲ್ಲಿರುವ ನಂದಗೋಕುಲ ಕನ್ವೆನ್ಷನ್ ಹಾಲ್ ನಲ್ಲಿ ಆಗಸ್ಟ್ 3 ರಂದು ಸಂಜೆ ನಡೆದ ಅಭಿನಂದನಾ ಸಮಾರಂಭದಲ್ಲಿ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಮತ್ತು ಪದಾಧಿಕಾರಿಗಳನ್ನು ಹಾಗೂ ಯಶಸ್ವಿ ಸಮ್ಮೇಳನದ […]

ಚೆಂಡುಕಳ – ಗದ್ದೆಗಿಳಿದು ಪತ್ರಕರ್ತರ ಸಾಮೂಹಿಕ ಭತ್ತ ನಾಟಿ

Thursday, July 29th, 2021
Nati

ಮಂಗಳೂರು : ನಶಿಸುತ್ತಿರುವ ಭತ್ತದ ಕೃಷಿಯ ಸಂರಕ್ಷಣೆ ಬಗ್ಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಭತ್ತದ ಕೃಷಿಕರೊಂದಿಗೆ ಪತ್ರಕರ್ತರ ಸಾಮೂಹಿಕ ಭತ್ತದ ನಾಟಿ ಕಾರ್ಯಕ್ರಮವನ್ನು ವಿಟ್ಲ ತಾಲೂಕಿನ ಅಳಿಕೆ ಗ್ರಾಮದ ಮಿತ್ತಳಿಕೆಯ (ಚೆಂಡುಕಳ) ಗದ್ದೆಯಲ್ಲಿ ಜು.29 ರಂದು ಗುರುವಾರ ಹಮ್ಮಿಕೊಳ್ಳಲಾಗಿತ್ತು. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಬಂಟ್ವಾಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಸಂಯುಕ್ತ ಆಶ್ರಯದ ಈ ಚಟುವಟಿಕೆಯಲ್ಲಿ ಪತ್ರಕರ್ತರು ಭತ್ತವನ್ನು ನಾಟಿ ಮಾಡಿದರು.

ಪತ್ರಕರ್ತರು ಜನರ ಧ್ವನಿಯಾಗಿ ಕೆಲಸ ಮಾಡಬೇಕು:ಎಸ್ ಪಿ ಋಷಿಕೇಶ್ ಸೋನಾವಣೆ

Thursday, July 22nd, 2021
Brand Mangalore

ಮಂಗಳೂರು : ಪ್ರಜಾಪ್ರಭುತ್ವದ ಪ್ರಮುಖ ಅಂಗವಾಗಿರುವ ಪತ್ರಕರ್ತರು ಸಮಾಜದಲ್ಲಿ ಜನರ ಸಮಸ್ಯೆಗಳಿಗೆ ಧ್ವನಿಯಾಗಿ ಕೆಲಸ ಮಾಡಿದಾಗ ಅದಕ್ಕೆ ಪೂರಕವಾಗಿ ಇಲಾಖೆಯಿಂದಲೂ ಕೆಲಸ ಮಾಡಲು ಸಾಧ್ಯವಾಗುತ್ತದೆ ಎಂದು ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಸೋನಾವಣೆ ಅಭಿಪ್ರಾಯಪಟ್ಟಿದ್ದಾರೆ. ಅವರು ಇಂದು ಪ್ರೆಸ್‌ಕ್ಲಬ್‌ನಲ್ಲಿ ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಮಂಗಳೂರು ಪ್ರೆಸ್‌ಕ್ಲಬ್ ಹಾಗೂ ಪತ್ರಿಕಾ ಭವನ ಟ್ರಸ್ಟ್‌ನ ಸಹಕಾರದಲ್ಲಿ ಆಯೋಜಿಸಲಾದ ಪತ್ರಿಕಾ ದಿನಾಚರಣೆ ಹಾಗೂ ಬ್ರ್ಯಾಂಡ್ ಮಂಗಳೂರು ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಧನಾತ್ಮಕ ಪ್ರತಿಕ್ರಿಯೆಯ […]

ಪತ್ರಕರ್ತ ಡಾ.ಸಂದೀಪ್ ವಾಗ್ಲೆ ಅವರಿಗೆ ‘ಬ್ರ್ಯಾಂಡ್ ಮಂಗಳೂರು ಪ್ರಶಸ್ತಿ

Monday, July 19th, 2021
Sandeep Wagle

ಮಂಗಳೂರು: ಸೌಹಾರ್ದತೆ ಮತ್ತು ಮಾನವೀಯ ಮೌಲ್ಯವನ್ನು ಪ್ರತಿ ಬಿಂಬಿಸುವ ವರದಿಗೆ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ನೀಡಲಾಗುವ ಬ್ರ್ಯಾಂಡ್ ಮಂಗಳೂರು ಪ್ರಶಸ್ತಿಗೆ ಕನ್ನಡ ಪ್ರಭ ದಿನಪತ್ರಿಕೆಯ ವರದಿಗಾರ ಡಾ.ಸಂದೀಪ್ ವಾಗ್ಲೆ ಆಯ್ಕೆಯಾಗಿದ್ದಾರೆ. ಕನ್ನಡ ಪ್ರಭ ದಿನ ಪತ್ರಿಕೆಯಲ್ಲಿ 2020, ನವಂಬರ್ 25ರಂದು ಪ್ರಕಟಗೊಂಡ ಸಂದೀಪ್ ವಾಗ್ಲೆ ಅವರ ವರದಿ ‘ಕೋಮು ಸೌಹಾರ್ದತೆಗೆ ಸಾಕ್ಷಿ-ಸೇತುವಾದ ಯಕ್ಷಗಾನ’ ಎಂಬ ವರದಿಗೆ ಪ್ರಶಸ್ತಿ ಲಭಿಸಿದೆ. ಪ್ರಶಸ್ತಿಯು ರೂ. 5,001 ನಗದು, ಪ್ರಶಸ್ತಿ ಪತ್ರ ಮತ್ತು ಸ್ಮರಣಿಕೆಯನ್ನು ಒಳಗೊಂಡಿರುತ್ತವೆ ಎಂದು ದ.ಕ.ಜಿಲ್ಲಾ ಕಾರ್ಯನಿರತ […]