ಕಾಳಿ ನದಿಯಿಂದ ಆಹಾರ ಅರಸಿ ಗ್ರಾಮಕ್ಕೆ ಬಂದ ಬೃಹತ್ ಮೊಸಳೆ

Friday, July 2nd, 2021
Crocodile

ಕಾರವಾರ: ದಾಂಡೇಲಿಯ ಕಾಳಿ ನದಿ ಪಕ್ಕದಲ್ಲೇ ಇರುವ ಕೊಗಿಲಬನ ಗ್ರಾಮಕ್ಕೆ ಆಹಾರ ಅರಸಿ ಮೊಸಳೆಯೊಂದು ನುಗ್ಗಿದ ಘಟನೆ ಗುರುವಾರ ನಡೆದಿದೆ. ಕಾಳಿ ನದಿಯಿಂದ ಆಹಾರ ಅರಸಿ ನದಿ ದಡಕ್ಕೆ ಬಂದ ಬೃಹದಾಕಾರದ ಮೊಸಳೆಯು ದಾಂಡೇಲಿಯ ರಸ್ತೆಯಲ್ಲಿ ಸಂಚರಿಸಿದೆ. ಮೊಸಳೆಯನ್ನು ನೋಡಿದ ಗ್ರಾಮದ ಜನರು ಬೆಚ್ಚಿ ಬಿದ್ದಿದ್ದು ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಆದರೆ ಗ್ರಾಮದ ರಸ್ತೆಯಲ್ಲಿ ವಾಕ್ ಮಾಡಿದ ಮೊಸಳೆ ಅರಣ್ಯಾಧಿಕಾರಿಗಳು ಬರುವುದರೊಳಗೆ ಗ್ರಾಮವನ್ನು ದಾಟಿ ಕಾಡಿನ ಹಾದಿ ಮೂಲಕ ಮತ್ತೆ ನದಿಗೆ ಸೇರಿಕೊಂಡಿದೆ. ದಾಂಡೇಲಿಯ ಕಾಳಿ ನದಿಯಲ್ಲಿ […]

ತೌಕ್ತೆ ಚಂಡಮಾರುತ ಅಬ್ಬರಕ್ಕೆ ಸಿಲುಕಿ ಕಾಳಿ ನದಿಯ ಹಿನ್ನೀರಿಲ್ಲಿಕೊಚ್ಚಿ ಹೋದ ವೃದ್ಧ ಬದುಕಿದ್ದು ಹೇಗೆ ಗೊತ್ತಾ ?

Wednesday, May 19th, 2021
Kataray

ಕಾರವಾರ : ಇಲ್ಲೊಬ್ಬ ವ್ಯಕ್ತಿ ಕಾಳಿ ನದಿಯ ಹಿನ್ನೀರಿಲ್ಲಿಕೊಚ್ಚಿ ಹೋಗಿ ಗಿಡ ಹಿಡಿದುಕೊಂಡು ಸತತ ಮೂರು ದಿನ ಸಾವು-ಬದುಕಿನ ಮಧ್ಯೆ ಹೋರಾಡಿ ಸಾವನ್ನೇ ಗೆದ್ದು ಬಂದ  ಘಟನೆ ಕಾರವಾರ ತಾಲೂಕಿನ ಹಣಕೋಣದಲ್ಲಿ ನಡೆದಿದೆ. ಮೇ 16ರಂದು ಜಾನುವಾರನ್ನು ಹುಡುಕಿಕೊಂಡು ಬರುವುದಾಗಿ ಕಟರಾಯ್ ಕೋಠಾರಕರ್ ಎಂಬ ವ್ಯಕ್ತಿ ಹೊರಹೋಗಿದ್ದರು. ಆ ವೇಳೆ ತೌಕ್ತೆ ಚಂಡಮಾರುತ ಅಬ್ಬರಿಸುತ್ತಲೇ ಇತ್ತು. ಅವರೂ ವಾಪಸ್ ಬಾರದಿದ್ದಾಗ ಭಯಗೊಂಡ ಮಗ ಎಲ್ಲೆಡೆ ಹುಡುಕಾಡಿದ್ದಾರೆ. ಗ್ರಾಮಸ್ಥರೊಂದಿಗೆ ಹಳ್ಳ, ಬಾವಿ ಎಲ್ಲೆಡೆ ಹುಡುಕಾಡಿದ್ದು, ಎರಡು ದಿನವಾದರೂ ಪತ್ತೆಯಾಗಿಲಿಲ್ಲ. ಮೂರನೇ ದಿನ ಕಾಳಿ ನದಿಯ ಹಿನ್ನೀರಿನಲ್ಲಿ ಗಿಡವೊಂದನ್ನು […]