ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿ ಕಾವೂರು ಪೊಲೀಸರಿಂದ ಬಂಧನ

Tuesday, March 3rd, 2020
mohammad

ಮಂಗಳೂರು : ತಾಲೂಕಿನ ಪಡುಶೆಡ್ಡೆ ಗ್ರಾಮದ ಮಂಜಲಪಾದೆ ಎಂಬಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಕಾವೂರು ಪೊಲೀಸರು ಬಂಧಿಸಿದ್ದಾರೆ. ಮೂಡುಶೆಡ್ಡೆಯ ಪಿಲಿಕುಳ ನಿವಾಸಿ ಮುಹಮ್ಮದ್ ಮುಸ್ತಫಾ (22) ಬಂಧಿತ ವ್ಯಕ್ತಿ. ಬಂಧಿತನಿಂದ 26 ಸಾವಿರ ರೂ. ಮೌಲ್ಯದ 1.1 ಕೆಜಿ ಗಾಂಜಾ ವಶಪಡಿಸಿಕೊಂಡಿದ್ದಾರೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಪೊಲೀಸ್ ಕಾರ್ಯಾಚರಣೆ ಸಂದರ್ಭ ಮತ್ತೋರ್ವ ಆರೋಪಿ ವಾಮಂಜೂರಿನ ಮಹಮ್ಮದ್ ರಾಯಿಫ್ ಎಂಬಾತ ಪರಾರಿಯಾಗಿದ್ದಾನೆ. ಬಂಧಿತ ಆರೋಪಿ ಮುಹಮ್ಮದ್ ಮುಸ್ತಫಾ ವಿರುದ್ಧ ಉಳ್ಳಾಲ ಮತ್ತು ಬರ್ಕೆ […]

ಬ್ಯಾಂಕುಗಳಲ್ಲಿ ಕನ್ನಡಿಗರಿಗೆ ಉದ್ಯೋಗ ನೀಡುವಂತೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರಿಂದ ಪ್ರತಿಭಟನೆ

Sunday, September 10th, 2017
KRV

ಮಂಗಳೂರು : ಐಬಿಪಿಎಸ್‌ ಪ್ರವೇಶ ಪರೀಕ್ಷಾ ಕೇಂದ್ರಕ್ಕೆ ಮುತ್ತಿಗೆ ಹಾಕಿದ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಕರ್ನಾಟಕ ಗ್ರಾಮೀಣ ವಿಕಾಸ ಬ್ಯಾಂಕುಗಳಲ್ಲಿ ಕನ್ನಡಿಗರಿಗೆ ಉದ್ಯೋಗ ನೀಡುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದರು. ಬೋಂದೆಲ್‌ನ ಬೆಸೆಂಟ್ ಕಾಲೇಜಿನಲ್ಲಿ  ನಡೆಯುತ್ತಿರುವ  ಐಬಿಪಿಎಸ್‌ ಪ್ರವೇಶ ಪರೀಕ್ಷಾ ಕೇಂದ್ರಕ್ಕೆ  ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದ ಈ ವೇಳೆ ಪರಿಸ್ಥಿತಿ ನಿಯಂತ್ರಿಸಲು ಕಾವೂರು ಪೊಲೀಸರು ಕಾರ್ಯಕರ್ತರನ್ನು ವಶಕ್ಕೆ ಪಡೆದರು. ಕರ್ನಾಟಕ ಗ್ರಾಮೀಣ ಬ್ಯಾಂಕುಗಳಲ್ಲಿ ಖಾಲಿ ಇರುವ ಸ್ಥಾನಗಳನ್ನು ತುಂಬಲು ಸೆ.9ರಿಂದ ಪ್ರವೇಶ ಪರೀಕ್ಷೆ ಆರಂಭಗೊಂಡಿದ್ದು, ಸೆ.24ರವರೆಗೆ […]

ಗಾಂಜಾ ಸೇವನೆ ಮಾಡುತ್ತಿದ್ದ ಇಬ್ಬರು ಯುವಕರ ಬಂಧನ

Thursday, February 2nd, 2017
Ganja

ಮಂಗಳೂರು: ಗಾಂಜಾ ಸೇವನೆ ಮಾಡುತ್ತಿದ್ದ ಇಬ್ಬರು ಯುವಕರನ್ನು ನಗರದ ಕೂಳೂರು ಬಳಿ ಕಾವೂರು ಪೊಲೀಸರು ಬಂಧಿಸಿದ್ದಾರೆ. ಕೋಡಿಕಲ್ ನಿವಾಸಿಗಳಾದ ಬಿ.ಸಿ.ರೋಡ್ ಟೋಲ್‌ಗೇಟ್‌ನಲ್ಲಿ ಕೆಲಸ ಮಾಡುವ ಕಾರ್ತಿಕ್‌ರಾಜ್ (21) ಹಾಗೂ ನಗರದ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿ ಪೃಥ್ವಿ (20) ಬಂಧಿತರು. ಗಾಂಜಾ ಸೇವನೆ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಕಾವೂರು ಠಾಣಾ ಪೊಲೀಸರು, ಕಾರ್ಯಾಚರಣೆ ನಡೆಸಿದ್ದಾರೆ. ವೈದ್ಯಕೀಯ ತಪಾಸಣೆಗೆ ಒಳಪಡಿಸಿದಾಗ ಗಾಂಜಾ ಸೇವನೆ ದೃಢಪಟ್ಟಿದೆ. ಆರೋಪಿಗಳ ವಿರುದ್ಧ ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ […]