ಕುಶಾಲನಗರ ಕಾವೇರಿ ನದಿ ಪ್ರವಾಹ ಸಂತ್ರಸ್ತರ ವೇದಿಕೆಯಿಂದ ಮಾಹಿತಿ ಸಂಗ್ರಹ

Wednesday, February 5th, 2020
kushalnagara

ಮಡಿಕೇರಿ : ಕುಶಾಲನಗರ ಕಾವೇರಿ ನದಿ ಪ್ರವಾಹ ಸಂತ್ರಸ್ತರ ವೇದಿಕೆ ಪ್ರಮುಖರು ಕಾವೇರಿ ನದಿಯಲ್ಲಿ ತುಂಬಿರುವ ಮಣ್ಣಿನ ಹೂಳಿನ ಪ್ರಮಾಣ ಮತ್ತು ಜಿಪಿಎಸ್ ಆಧಾರಿತ ನಿರ್ದಿಷ್ಟ ಸ್ಥಳದ ಮಾಹಿತಿ ಸಂಗ್ರಹ ಕಾರ್ಯ ನಡೆಸಿದರು. ಕುಶಾಲನಗರ ಶ್ರೀ ಅಯ್ಯಪ್ಪಸ್ವಾಮಿ ದೇವಾಲಯ ಬಳಿಯಿಂದ ಕುಶಾಲನಗರ ಮಾರುಕಟ್ಟೆ ತನಕ ರ‍್ಯಾಫ್ಟರ್ ಮೂಲಕ ಕಾವೇರಿ ನದಿಯಲ್ಲಿ ಸಂಚರಿಸಿದ ವೇದಿಕೆ ಪ್ರಮುಖರು ನದಿಯ ಮಧ್ಯದಲ್ಲಿ ನಿರ್ಮಾಣಗೊಂಡಿರುವ ಮಣ್ಣಿನ ಬೃಹತ್ ನಡುಗಡ್ಡೆಗಳನ್ನು ಪತ್ತೆಹಚ್ಚುವುದರೊಂದಿಗೆ ಅಲ್ಲಲ್ಲಿ ನದಿಯ ಆಳವನ್ನು ಪರಿಶೀಲಿಸುತ್ತ ತೆರಳಿದ ವೇದಿಕೆ ಪ್ರಮುಖರಿಗೆ 10 ಕ್ಕೂ […]

ಕಾವೇರಿ ನದಿ ಹೂಳೆತ್ತಲು 130 ಕೋಟಿ ರೂ. : ಶಾಸಕ ಅಪ್ಪಚ್ಚುರಂಜನ್ ಭರವಸೆ

Tuesday, January 21st, 2020
ಕಾವೇರಿ ನದಿ ಹೂಳೆತ್ತಲು 130 ಕೋಟಿ ರೂ. : ಶಾಸಕ ಅಪ್ಪಚ್ಚುರಂಜನ್ ಭರವಸೆ

ಮಡಿಕೇರಿ : ಕಾವೇರಿ ನದಿ ಜಲಾನಯನ ಪ್ರದೇಶಗಳ ಹೂಳೆತ್ತಲು ಸರಕಾರದಿಂದ ಘೋಷಣೆಯಾಗಿರುವ ರೂ.130 ಕೋಟಿ ಹಣವನ್ನು ತಕ್ಷಣವೇ ಬಿಡುಗಡೆಗೊಳಿಸಲು ಮುಖ್ಯಮಂತ್ರಿಗಳ ಬಳಿ ಚರ್ಚಿಸಲಾಗುವುದು ಎಂದು ಮಡಿಕೇರಿ ಕ್ಷೇತ್ರ ಶಾಸಕ ಎಂ.ಪಿ.ಅಪ್ಪಚ್ಚುರಂಜನ್ ಭರವಸೆ ನೀಡಿದ್ದಾರೆ. ಕುಶಾಲನಗರದಲ್ಲಿ ನೂತನವಾಗಿ ಅಸ್ವಿತ್ವಕ್ಕೆ ಬಂದ ಕಾವೇರಿ ನದಿ ಪ್ರವಾಹ ಪೀಡಿತರ ರಕ್ಷಣಾ ವೇದಿಕೆ ಪ್ರತಿನಿಧಿಗಳು ಶಾಸಕರನ್ನು ಭೇಟಿ ಮಾಡಿ ಮುಂದಿನ ಸಾಲಿನಲ್ಲಿ ನೆರೆ ಮತ್ತೆ ಮರುಕಳಿಸದಂತೆ ಯೋಜನೆ ರೂಪಿಸಲು ಮನವಿ ಸಲ್ಲಿಸಿದ ಸಂದರ್ಭ ಅವರು ಪ್ರತಿಕ್ರಿಯಿಸಿದ್ದು, ಈಗಾಗಲೆ ಹಾರಂಗಿ-ಕಾವೇರಿ ನದಿಯ ಹೂಳೆತ್ತಲು ಸರಕಾರ […]

ಕಾವೇರಿ ನದಿಗೆ ಮಹಾ ಆರತಿ : ಅವೈಜ್ಞಾನಿಕ ಯೋಜನೆಗಳಿಂದ ಪ್ರಕೃತಿಯಲ್ಲಿ ಆತಂಕಕಾರಿ ಬೆಳವಣಿಗೆ; ಶ್ರೀಸದಾಶಿವ ಸ್ವಾಮೀಜಿ ಆತಂಕ

Wednesday, November 13th, 2019
Madikeri

ಮಡಿಕೇರಿ : ನವಪೀಳಿಗೆಗೆ ಪರಿಸರ ಸಂರಕ್ಷಣೆಯ ಪ್ರಜ್ಞೆ ಮೂಡಿಸುವ ಕೆಲಸವಾಗಬೇಕಿದೆ ಎಂದು ಅರೆಮಾದನಹಳ್ಳಿಯ ಶ್ರೀ ಶಿವ ಸುಜ್ಞಾನತೀರ್ಥ ಮಹಾಸ್ವಾಮಿಗಳು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಕಾವೇರಿ ಮಹಾ ಆರತಿ ಬಳಗ, ಕಾವೇರಿ ರಿವರ್ ಸೇವಾ ಟ್ರಸ್ಟ್, ಕಾವೇರಿ ನದಿ ಸ್ವಚ್ಚತಾ ಆಂದೋಲನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಂಯುಕ್ತಾಶ್ರಯದಲ್ಲಿ ಅಯ್ಯಪ್ಪಸ್ವಾಮಿ ದೇವಾಲಯ ಬಳಿ ಕಾವೇರಿ ನದಿಗೆ ನಡೆದ 100ನೇ ಮಹಾ ಆರತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಆಶೀರ್ವಚನ ನೀಡಿದ ಅವರು, ಪ್ರಕೃತಿಯ ಆರಾಧನೆ ನಿರಂತರವಾಗಿ ನಡೆಯಬೇಕು. ನದಿ, ಜಲಮೂಲಗಳನ್ನು ಸ್ವೇಚ್ಚಾಚಾರಕ್ಕೆ […]