ಕಾವೇರಿ ನದಿ ನೀರು ಪ್ರಕರಣ ನಾಳೆ ವಿಚಾರಣೆ: ಅಹಿತಕರ ಘಟನೆ ನಡೆಯದಂತೆ ಮುಂಜಾಗೃತಾ ಕ್ರಮ

Thursday, September 29th, 2016
kaveri

ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದ ಸಂಬಂಧದ ಪ್ರಕರಣ ನಾಳೆ ಸುಪ್ರೀಂಕೋರ್ಟ್‌ನಲ್ಲಿ ವಿಚಾರಣೆಗೆ ಬರಲಿದ್ದು, ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಅಗತ್ಯ ಮುಂಜಾಗೃತಾ ಕ್ರಮ ಕೈಗೊಳ್ಳಲಾಗಿದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ತಿಳಿಸಿದ್ದಾರೆ. ಚಿತ್ರಕಲಾ ಪರಿಷತ್‌‌ನಲ್ಲಿ ಸುಧ್ದಿಗಾರರೊಂದಿಗೆ ಮಾತನಾಡಿದ ಪರಮೇಶ್ವರ್, ನಮಗೆ ಈ ಬಾರಿ ನ್ಯಾಯ ಸಿಗುವ ಭರವಸೆ ಇದೆ. ಕೇಂದ್ರ ಸರ್ಕಾರ ಕರೆದ ಸಭೆಯಲ್ಲಿ ಸಿಎಂ ಭಾಗವಹಿಸಿದ್ದಾರೆ. ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಮನವರಿಕೆ ಮಾಡಿಕೊಡುತ್ತದೆ. ಕೇಂದ್ರ ಸರ್ಕಾರಕ್ಕೂ ವಸ್ತು ಸ್ಥಿತಿ […]

ಬಂಗಾರಪ್ಪನವರು ಹಾಕಿಕೊಟ್ಟ ದಾರಿಯಲ್ಲಿ ನಡೆಯಿರಿ: ಜನಾರ್ದನ ಪೂಜಾರಿ

Tuesday, September 13th, 2016
janardhan-pujary

ಮಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಪಟ್ಟಂತೆ ಸುಪ್ರೀಂಕೋರ್ಟ್‌ ತೀರ್ಪಿನ ಬಳಿಕ ನಡೆದ ಸರ್ವಪಕ್ಷ ಸಭೆಯ ನಿರ್ಧಾರವನ್ನು ಪಾಲಿಸಲು ಮುಖ್ಯಮಂತ್ರಿಯವರು ಬದ್ಧತೆ ತೋರಿಸಿಲ್ಲ. 24 ಗಂಟೆಯೊಳಗೆ ತಮಿಳುನಾಡಿಗೆ ನೀರು ಹರಿಸುವುದನ್ನು ನಿಲ್ಲಿಸಬೇಕು. ರಾಜ್ಯದ ಜನರಿಗೆ ತಮ್ಮ ನಿರ್ಧಾರ ಸ್ಪಷ್ಟಪಡಿಸಬೇಕು. ಮಾಜಿ ಮುಖ್ಯಮಂತ್ರಿ ಬಂಗಾರಪ್ಪನವರು ಹಾಕಿಕೊಟ್ಟ ದಾರಿಯಲ್ಲಿ ನಡೆಯಿರಿ ಎಂದು ಮಾಜಿ ಕೇಂದ್ರ ಸಚಿವ, ಕಾಂಗ್ರೆಸ್ ಮುಖಂಡ ಜನಾರ್ದನ ಪೂಜಾರಿ ತಾಕೀತು ಮಾಡಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆಪಿಸಿಸಿ ಅಧ್ಯಕ್ಷರೂ ಈವರೆಗೆ ಮಾತಾಡಿಲ್ಲ. ರಾಜ್ಯದ ಜನರ ಭಾವನೆ […]