ಬೈಕಿನ ಹಿಂಭಾಗಕ್ಕೆ ಢಿಕ್ಕಿ ಹೊಡೆದ ಬೊಲೆರೊ, ಓರ್ವ ಮೃತ್ಯು

Monday, February 8th, 2021
Kashi Matt Accident

ಬಂಟ್ವಾಳ : ಬೈಕ್ ಹಾಗೂ ಬೊಲೆರೊ ವಾಹನದ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ವಿಟ್ಲ ಸಮೀಪದ ಕಾಶಿಮಠ ಎಂಬಲ್ಲಿ ಸೋಮವಾರ ನಡೆದಿದೆ. ಮಾಣಿ ಬರಿಮಾರು ನಿವಾಸಿ ಬಾಲಕೃಷ್ಣ (55) ಮೃತರು ಎಂದು ಗುರುತಿಸಲಾಗಿದೆ. ಬೈಕ್ ಹಾಗೂ ಬೊಲೆರೊ ವಿಟ್ಲದಿಂದ ಉಕ್ಕುಡ ಮಾರ್ಗವಾಗಿ ತೆರಳುತ್ತಿದ್ದು, ಕಾಶಿಮಠ ಸಮೀಪ ಬೊಲೆರೊ ಬೈಕಿನ ಹಿಂಭಾಗಕ್ಕೆ ಢಿಕ್ಕಿಯಾಗಿದೆ. ಈ ವೇಳೆ ರಸ್ತೆಗೆಸೆಯಲ್ಪಟ್ಟ ಬೈಕ್ ಸವಾರ ಬಾಲಕೃಷ್ಣ ಅವರು ಸ್ಥಳದಲ್ಲೇ ಮೃತಪಟ್ಟರು ಎಂದು ಸ್ಥಳೀಯರು ತಿಳಿಸಿದ್ದಾರೆ. ಘಟನಾ ಸ್ಥಳಕ್ಕೆ ವಿಟ್ಲ […]

ವಿಟ್ಲ : ಕಾಶಿಮಠದಲ್ಲಿ ಯುವ ಸಮ್ಮಿಲನ ಸಾಂಸ್ಕೃತಿಕ ಹಬ್ಬ

Tuesday, October 22nd, 2019
yuva-sanmelana

ವಿಟ್ಲ : ಕಾಶಿಮಠದಲ್ಲಿ ಯುವ ಸಮ್ಮಿಲನ ಸಾಂಸ್ಕೃತಿಕ ಹಬ್ಬವು ಕರಾವಳಿ ಲೇಖಕಿಯರ-ವಾಚಕಿಯರ ಸಂಘ, ವಿಟ್ಲ ಕಾಶೀಮಠ ಶ್ರೀ ಕಾಶೀ ಮಹಿಳಾ ಮಂಡಲ ಹಾಗೂ ಶ್ರೀ ಕಾಶೀ ಯುವಕ ಮಂಡಲ ವತಿಯಿಂದ ಬೆಂಗಳೂರು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಕಾರದಲ್ಲಿ ಇತ್ತೀಚೆಗೆ ನಡೆಯಿತು. ಪುತ್ತೂರು ಕ್ಷೇತ್ರದ ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ಮಾತನಾಡಿ, ಹಳ್ಳಿಯ ಮಹಿಳೆಯರನ್ನು ಸೇರಿಸಿಕೊಂಡು ಇಂತಹ ಕಾರ್ಯಕ್ರಮ ಆಯೋಜಿಸಿವುದು ಶ್ಲಾಘನೀಯ. ಮಹಿಳೆಯರು ಬರೆಯುವ ಹವ್ಯಾಸ ಬೆಳೆಸಿಕೊಳ್ಳುವಂತೆ ಸಲಹೆ ನೀಡಿದರು. ತರಂಗ ವಾರಪತ್ರಿಕೆ ಮಾಜಿ ಸಂಪಾದಕಿ ಅನಿತಾ […]