ಪಾಕ್ ಪರ ಘೋಷಣೆ ಕೂಗಿದವರ ವಿರುದ್ಧ ಕಠಿಣ ಕ್ರಮ : ಸಿ.ಟಿ ರವಿ
Monday, February 17th, 2020ಬೆಂಗಳೂರು : ಪಾಕಿಸ್ತಾನದ ಪರವಾಗಿ ಘೋಷಣೆ ಕೂಗಿದವರ ವಿರುದ್ಧ ಕಠಿಣ ಕಾನೂನು ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಸಚಿವ ಸಿ.ಟಿ ರವಿ ಎಚ್ಚರಿಕೆ ನೀಡಿದ್ದಾರೆ. ಸೋಮವಾರ ವಿಧಾನಸೌಧದಲ್ಲಿ ಮಾತನಾಡಿದ ಅವರು ದೇಶದ್ರೋಹಿ ಕೃತ್ಯವನ್ನು ಯಾವುದೇ ಕಾರಣಕ್ಕೂ ಸಹಿಸಲು ಸಾಧ್ಯವಿಲ್ಲ ಎಂದರು. ಹುಬ್ಬಳ್ಳಿಯ ಕೆ.ಎಲ್.ಇ ವಿದ್ಯಾಸಂಸ್ಥೆಯಲ್ಲಿ ಓದುತ್ತಿರುವ ಕಾಶ್ಮೀರಿ ಮೂಲದ ವಿದ್ಯಾರ್ಥಿಗಳು ಪಾಕಿಸ್ತಾನದ ಪರವಾಗಿ ಘೋಷಣೆ ಕೂಗಿದ್ದರು. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ವಿದ್ಯಾರ್ಥಿಗಳನ್ನು ಬಂಧಿಸಿದ್ದ ಪೊಲೀಸರು ಬಳಿಕ ಬಿಡುಗಡೆಗೊಳಿಸಿದ್ದರು. ಪೊಲೀಸರ ಈ ನಡೆಗೆ ವ್ಯಾಪಕ ವಿರೋಧ […]