ಕಾಸರಗೋಡು ಜಿಲ್ಲಾ ನ್ಯಾಯಾಲಯದೊಳಗೆ ನುಗ್ಗಿದ ಅಪರಚಿತ ವ್ಯಕ್ತಿ

Monday, August 5th, 2024
Kasaragod Jail

ಕಾಸರಗೋಡು : ಅಪರಚಿತ ವ್ಯಕ್ತಿಯೋರ್ವ ಜಿಲ್ಲಾ ನ್ಯಾಯಾಲಯ ಸಮುಚ್ಛಯದೊಳಗೆ ನುಗ್ಗಿದ ಘಟನೆ ಶನಿವಾರ ರಾತ್ರಿ ನಡೆದಿದೆ. ನ್ಯಾಯಾಲಯದ ಕಾವಲುಗಾರ ನನ್ನು ಕಂಡು ಈತ ಪರಾರಿಯಾಗಿದ್ದಾನೆ. ನ್ಯಾಯಾಲಯ ಕಟ್ಟಡದೊಳಗೆ ನುಗ್ಗಿದ ಈತ ಜಿಲ್ಲಾ ನ್ಯಾಯಾಧೀಶ ರವರ ಕಚೇರಿ ತನಕ ತೆರಳಿದ್ದು , ಈತನ ಬಳಿ ಕಬ್ಬಿಣದ ರಾಡ್ ಇತ್ತು ಎನ್ನಲಾಗಿದೆ. ಈತ ಕಳವಿಗಾಗಿ ಬಂದಿದ್ದನೇ ಅಥವಾ ಕಡತಗಳನ್ನು ಕೊಂಡೊಯ್ಯುವ ಉದ್ದೇಶದಿಂದ ಒಳನುಗ್ಗಿದ್ದನೇ ಎಂಬ ಬಗ್ಗೆ ಸ್ಪಷ್ಟ ಗೊಂಡಿಲ್ಲ . ವಿದ್ಯಾನಗರ ಠಾಣಾ ಪೊಲೀಸರು ಸ್ಥಳಕ್ಕಾಮಿಸಿ ತನಿಖೆ ಆರಂಭಿಸಿದ್ದಾರೆ. ಬೆರಳಚ್ಚು […]

ಕಾಸರಗೋಡು ಮೂಲದ ಮಹಿಳೆ ಪೋಲೆಂಡ್‌ನಲ್ಲಿ ಭಾರತೀಯ ರಾಯಭಾರಿ

Friday, September 17th, 2021
Nagma Mohammed

ಮಂಗಳೂರು : ಪ್ರಧಾನಿಗಳಾದ ಐ.ಕೆ. ಗುಜ್ರಾಲ್‌ ಮತ್ತು ಅಟಲ್ ಬಿಹಾರಿ ವಾಜಪೇಯಿ ಅವರ ಆಡಳಿತಾವಧಿಯಲ್ಲಿ  ಅಧಿಕಾರಿಯಾಗಿದ್ದ. ವಿದೇಶಾಂಗ ಇಲಾಖೆಯ ಶಿಷ್ಟಾಚಾರ ವಿಭಾಗದ ಉಪ ಮುಖ್ಯಸ್ಥೆಯಾಗಿದ್ದ ದೇಶದ ಪ್ರಪ್ರಥಮ ಮಹಿಳಾ ಅಧಿಕಾರಿ ಈಗ ಪೋಲೆಂಡ್‌ನ ಭಾರತೀಯ ರಾಯಭಾರಿಯಾಗಿ ನೇಮಕವಾಗಿದ್ದಾರೆ. ಕಾಸರಗೋಡಿನ ಮುಹಮ್ಮದ್ ಹಬೀಬುಲ್ಲಾ ಅವರ ಪುತ್ರಿ ನಗ್ಮಾ ಮುಹಮ್ಮದ್ ಮಲಿಕ್ ಪೋಲೆಂಡ್‌ನಲ್ಲಿ ಭಾರತೀಯ ರಾಯಭಾರಿಯಾಗಿ ನಿಯುಕ್ತಿಗೊಂಡಿದ್ದಾರೆ. ನಗ್ಮಾ ಮುಹಮ್ಮದ್ ಮಲಿಕ್, ಕಾಸರಗೋಡಿನ ಫೋರ್ಟ್ ರೋಡ್‌ನಲ್ಲಿ ವಾಸವಾಗಿದ್ದರು. ತಂದೆ ಹಬೀಬುಲ್ಲಾ ಅವರು ಕೇಂದ್ರ ಸರಕಾರದ ಸಾಗರೋತ್ತರ ಸಂವಹನ ಇಲಾಖೆಯಲ್ಲಿ ಕೆಲಸಕ್ಕೆ ನಿಯುಕ್ತಿಗೊಂಡ ಬಳಿಕ ಕುಟುಂಬ ಸಮೇತ ಕಾಸರಗೋಡಿ ನಿಂದ […]

ತಮ್ಮನನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ ಅಣ್ಣ

Sunday, July 25th, 2021
Rafeeq

ಕಾಸರಗೋಡು : ಸೀತಾಂಗೋಳಿಯ ಮುಗು ಎಂಬಲ್ಲಿ ತಮ್ಮನನ್ನು ಅಣ್ಣ ಚಾಕುವಿನಿಂದ ಇರಿದು ಕೊಲೆಗೈದ ಘಟನೆ ಶನಿವಾರ ಮಧ್ಯಾಹ್ನ ನಡೆದಿದೆ. ಕೊಲೆಗೀಡಾದವರನ್ನು ಮುಗು ಉರ್ಮಿಯ ಅಬ್ದುಲ್ಲ ಮುಸ್ಲಿಯಾರ್ ರವರ ಪುತ್ರ ನಿಸಾರ್ (29) ಎಂದು ಗುರುತಿಸಲಾಗಿದೆ. ಸಹೋದರ ರಫೀಕ್ (31)ನನ್ನು ಬದಿಯಡ್ಕ ಠಾಣಾ ಪೊಲೀಸರು ಬಂಧಿಸಿದ್ದಾರೆ. ನಿಸಾರ್‌‌ನನ್ನು ಕೂಡಲೇ ಕುಂಬಳೆಯ ಆಸ್ಪತ್ರೆಗೆ ತಲಪಿಸಿದರೂ ಜೀವ ಉಳಿಸಲಾಗಲಿಲ್ಲ. ಬದಿಯಡ್ಕ ಠಾಣಾ ಪೊಲೀಸರು ಘಟನಾ ಸ್ಥಳಕ್ಕಾಮಿಸಿದ್ದು ತನಿಖೆ ನಡೆಸುತ್ತಿದ್ದಾರೆ.

ಕೊರೋನ ಸೋಂಕು ಮೇ 23 : ದ.ಕ. 860 – ಸಾವು 6, ಉಡುಪಿ 909 – ಸಾವು 4, ಕಾಸರಗೋಡು 555

Sunday, May 23rd, 2021
corona

ಮಂಗಳೂರು : ದ.ಕ. ಜಿಲ್ಲೆಯಲ್ಲಿ ಭಾನುವಾರ 860 ಮಂದಿಗೆ ಕೊರೋನ ಸೋಂಕು ದೃಢಪಟ್ಟಿವೆ. 873 ಮಂದಿ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಭಾನುವಾರ 6 ಮಂದಿ ಕೋವಿಡ್‌ಗೆ ಬಲಿಯಾಗಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಈವರೆಗೆ ಕೋವಿಡ್‌ಗೆ ಬಲಿಯಾದವರ ಸಂಖ್ಯೆ 861ಕ್ಕೇರಿದೆ. ಜಿಲ್ಲೆಯಲ್ಲಿ ಈವರಗೆ 8,27,671 ಮಂದಿಯ ದ್ರವ ಪರೀಕ್ಷೆ ಮಾಡಲಾಗಿದೆ. ಆ ಪೈಕಿ 7,57,332 ಮಂದಿಯ ವರದಿ ನೆಗೆಟಿವ್ ಬಂದಿದೆ. ಅಲ್ಲದೆ 70,339 ಮಂದಿ ಕೊರೋನ ಸೋಂಕಿಗೊಳಗಾಗಿದ್ದಾರೆ. ಈ ಪೈಕಿ 59,084 ಮಂದಿ ಗುಣಮುಖರಾಗಿದ್ದಾರೆ. ಸದ್ಯ 10,395 […]

ಕೇರಳ ವಿಧಾನಸಭಾ ಚುನಾವಣೆ : ಕಾಸರಗೋಡು ಎಲ್‌‌ಡಿಎಫ್ -3 ಯುಡಿಎಫ್ -2 ಕ್ಷೇತ್ರಗಳಲ್ಲಿ ಗೆಲುವು

Sunday, May 2nd, 2021
Kasaragod

ಕಾಸರಗೋಡು : ಕೇರಳ  ವಿಧಾನಸಭಾ ಚುನಾವಣೆಯಲ್ಲಿ ಕಾಸರಗೋಡಿನ ಐದು ಕ್ಷೇತ್ರಗಳಲ್ಲಿ ಮೂರರಲ್ಲಿ ಸಿಪಿಎಂ ನೇತೃತ್ವದ ಎಲ್‌‌ಡಿಎಫ್ ಮತ್ತು ಕಾಂಗ್ರೆಸ್ ನೇತೃತ್ವದ ಯುಡಿಎಫ್  ಎರಡು  ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ. ತೀವ್ರ ಪೈಪೋಟಿ ಇದ್ದ ಮಂಜೇಶ್ವರದಲ್ಲಿ ಯುಡಿಎಫ್ ಕ್ಷೇತ್ರವನ್ನು ಉಳಿಸಿಕೊಂಡಿದ್ದು, ಕಾಸರಗೋಡು ಕ್ಷೇತ್ರದಲ್ಲಿ ಯುಡಿಎಫ್ ಅಧಿಪತ್ಯ ಮುಂದುವರಿಸಿದರೆ. ಉದುಮ, ಕಾಞ0ಗಾಡ್ ಮತ್ತು ತೃಕ್ಕರಿಪುರದಲ್ಲಿ ಎಲ್‌ಡಿಎಫ್ ಗೆಲುವು ಸಾಧಿಸಿದೆ. ಮಂಜೇಶ್ವರದಲ್ಲಿ ಬಿಜೆಪಿಯ ಕೆ.ಸುರೇಂದ್ರನ್ ಅವರನ್ನು 1,143 ಮತಗಳ ಅಂತರದಿಂದ ಸೋಲು ಅನುಭವಿಸಿದರು. ಎಣಿಕೆಯ ಎಲ್ಲಾ ಸುತ್ತುಗಳಲ್ಲೂ ಯುಡಿಎಫ್ ಅಭ್ಯರ್ಥಿ ಎ.ಕೆ.ಎಂ ಅಶ್ರಫ್ ಮುನ್ನಡೆ ಕಾಯ್ದುಕೊಂಡು ಬಂದಿದ್ದು, ಅಂತಿಮವಾಗಿ ಸಣ್ಣ […]

ವಿಶೇಷವಾಗಿ ವಿನ್ಯಾಸದ ಪಾದರಕ್ಷೆಯಲ್ಲಿ ಚಿನ್ನ ಸಾಗಾಟ, ಮಂಗಳೂರು ವಿಮಾನ ನಿಲ್ದಾಣದಲ್ಲಿ ಇಬ್ಬರ ಬಂಧನ

Monday, March 29th, 2021
Gold

ಮಂಗಳೂರು : ದುಬೈನಿಂದ  ಅಕ್ರಮವಾಗಿ ಚಿನ್ನ ಸಾಗಾಟ ಮಾಡುತ್ತಿದ್ದ ಇಬ್ಬರು ಪ್ರಯಾಣಿಕರನ್ನು ಮಂಗಳೂರು ಕಸ್ಟಮ್ಸ್‌ ಅಧಿಕಾರಿಗಳು ವಿಮಾನ ನಿಲ್ದಾಣದಲ್ಲಿ ಬಂಧಿಸಿದ್ದಾರೆ. ಕಾಸರಗೋಡು ನಿವಾಸಿ ಸುಕ್ಕುರ್ ಮೊಯಿದ್ದೀನ್ ಕುನ್ಹಿ (48) ಹಾಗೂ ಭಟ್ಕಳದ ಮಿಸ್ರಿ ನಸೀಮುಲ್ ಗನಿ (44) ಎಂಬವರು ವಿಶೇಷವಾಗಿ ವಿನ್ಯಾಸದ ಪಾದರಕ್ಷೆಯ ಒಳಗೆ ಚಿನ್ನವನ್ನಿಟ್ಟು ಸಾಗಾಟ ಮಾಡುತ್ತಿದ್ದರು. ಆರೋಪಿಗಳಿಂದ 18.75 ಲಕ್ಷ ರೂ ಮೌಲ್ಯದ 405 ಗ್ರಾಂ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದ್ದು, ತನಿಖೆ ಪ್ರಗತಿಯಲ್ಲಿದೆ. ಕಾರ್ಯಾಚರಣೆಯಲ್ಲಿ ಕಸ್ಟಮ್ಸ್ ವಿಭಾಗದ ಅಧಿಕಾರಿಗಳಾದ ಡಾ. ಕಪಿಲ್ ಗಡೆ, ರಾಕೇಶ್ ಕುಮಾರ್, ಸಂದೀಪ್ […]

ಕಾಸರಗೋಡು ನಗರಸಭೆ : ಎಲ್‌ಡಿಎಫ್ 21, ಬಿಜೆಪಿ 14 ಸ್ಥಾನಗಳಲ್ಲಿ ಜಯ

Thursday, December 17th, 2020
Kasaragod Election

ಕಾಸರಗೋಡು: ಜಿಲ್ಲೆಯಲ್ಲಿ ಭಾರೀ ಕುತೂಹಲ ಮೂಡಿಸಿದ್ದ ಕಾಸರಗೋಡು, ಕಾಂಞಂ ಗಾಡ್‌, ನೀಲೇಶ್ವರ ನಗರಸಭೆ ಚುನಾವಣೆ ಫ‌ಲಿತಾಂಶ ಹೊರಬಿದ್ದಿದೆ. ಕಾಸರಗೋಡು ನಗರಸಭೆಯು ಐಕ್ಯರಂಗದ ಪಾಲಾದರೆ, ಕಾಂಞಂಗಾಡ್‌, ನೀಲೇಶ್ವರ ನಗರ ಸಭೆಯಲ್ಲಿ ಮತ್ತೆ ಎಲ್‌ಡಿಎಫ್‌ ಅಧಿಕಾರಕ್ಕೇರಿದೆ. ಮಂಜೇಶ್ವರ ಬ್ಲಾಕ್ ಪಂಚಾಯತ್ ನ 15 ಸ್ಥಾನಗಳ ಪೈಕಿ  ಬಿಜೆಪಿ 6, ಯುಡಿಫ್ 6, ಎಲ್ ಡಿ ಎಫ್ 2 ಮತ್ತು ಎಲ್ ಡಿ ಎಫ್ ಬೆಂಬಲಿತ 1 ಅಭ್ಯರ್ಥಿ ಜಯಗಳಿಸಿದ್ದಾರೆ. ಮಂಜೇಶ್ವರ ಬ್ಲಾಕ್  ಸಂಭಂದಿಸಿದಂತೆ  ಜಿಲ್ಲಾ ಪಂಚಾಯತ್ ನ  4 ಸ್ಥಾನಗಳ ಪೈಕಿ, ಬಿಜೆಪಿ 1, ಯುಡಿಎಫ್ 3 ಅಭ್ಯರ್ಥಿಗಳು […]

ಹೈದಾರಾಬಾದ್‌ನಿಂದ ಮಂಗಳೂರು ನಗರಕ್ಕೆ ಸಾಗಾಟ ಮಾಡುತ್ತಿದ್ದ 24 ಕೆ.ಜಿ. ಗಾಂಜಾ ವಶ

Friday, November 27th, 2020
Ganja

ಮಂಗಳೂರು : ನಗರದ ಪಡೀಲ್‌ ಜಂಕ್ಷನ್‌ನಿಂದ ಬಿಕರ್ನಕಟ್ಟೆ ಬರುವ ರಸ್ತೆಯಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿ ಆಂಧ್ರ ಪ್ರದೇಶದ ಹೈದಾರಾಬಾದ್‌ನಿಂದ ಮಂಗಳೂರು ನಗರ ಹಾಗೂ ಕೇರಳ ರಾಜ್ಯಕ್ಕೆ ಸಾಗಾಟ ಮಾಡುತ್ತಿದ್ದ ಸುಮಾರು 24 ಕೆ.ಜಿ. ಗಾಂಜಾ ಸಮೇತ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತರನ್ನು ಕೇರಳದ ಕಾಸರಗೋಡು ನಿವಾಸಿಗಳಾದ ಇಬ್ರಾಹಿಂ ಮಡನ್ನೂರು ಹಾಗೂ ಅಬ್ದುಲ್‌ ನಿಜಾದ್‌ ಎಂದು ಗುರುತಿಸಲಾಗಿದೆ. ಆರೋಪಿತರಿಂದ 3,60,000 ರೂ. ಮೌಲ್ಯದ ಸುಮಾರು 24 ಕೆ.ಜಿ. ಗಾಂಜಾ ಹಾಗೂ 2 ಲಕ್ಷ ಮೌಲ್ಯದ ಟೂರಿಸ್ಟ್‌ ಕಾರು ಹಾಗೂ 23 […]

ಕಾಸರಗೋಡು ಜಿಲ್ಲೆಯಲ್ಲಿ ಅಕ್ಟೋಬರ್ 31ರ ವರೆಗೆ ನಿಷೇಧಾಜ್ಞೆ ವಿಸ್ತರಣೆ

Friday, October 23rd, 2020
Kasaragodu DC

ಕಾಸರಗೋಡು : ಕೊರೋನ ಸೋಂಕು ಹರಡುತ್ತಿರುವ ಹಿನ್ನಲೆಯಲ್ಲಿ ಕಾಸರಗೋಡು ಜಿಲ್ಲೆಯಲ್ಲಿ ಹಂತಹಂತವಾಗಿ ಜಾರಿಗೆ ತರಲಾಗಿದ್ದ ನಿಷೇಧಾಜ್ಞೆಯನ್ನು ಅಕ್ಟೋಬರ್ 31ರ ತನಕ ವಿಸ್ತರಿಸಿ ಜಿಲ್ಲಾಧಿಕಾರಿ ಡಾ.ಸಜಿತ್ ಬಾಬು ಆದೇಶ ಹೊರಡಿಸಿದ್ದಾರೆ. ಸೋಂಕು ನಿಯಂತ್ರಣದ ದ್ರಷ್ಟಿಯಿಂದ ಅಕ್ಟೋಬರ್ 3ರಿಂದ ಸೆಕ್ಷನ್ 144ರಂತೆ ನಿಷೇಧಾಜ್ಞೆಯನ್ನು ಕೇರಳದಲ್ಲಿ ಜಾರಿಗೆ ತರಲಾಗಿತ್ತು. ಆದರೆ ಕಾಸರಗೋಡು ಜಿಲ್ಲೆಯಲ್ಲಿ ಹಂತಹಂತವಾಗಿ ನಿಷೇದಾಜ್ಞೆ ಜಾರಿಗೆ ತರಲಾಗಿತ್ತು. ಮಂಜೇಶ್ವರ, ಕುಂಬಳೆ, ಬದಿಯಡ್ಕ, ಕಾಸರಗೋಡು, ವಿದ್ಯಾನಗರ, ಮೇಲ್ಪರಂಬ, ಬೇಕಲ, ಹೊಸದುರ್ಗ, ನೀಲೇಶ್ವರ, ಚಂದೇರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪರಪ್ಪ, ಒಡೆಯಂಚಾಲ್, ಪನತ್ತಡಿ ಪೇಟೆ […]

ಕೊರೋನ ಸೋಂಕು : ದಕ್ಷಿಣ ಕನ್ನಡ ಜಿಲ್ಲೆ- 303, ನಾಲ್ಕು ಸಾವು, ಉಡುಪಿ – 319, ಕಾಸರಗೋಡು – 295

Monday, October 12th, 2020
corona

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೋಮವಾರ 303 ಮಂದಿಗೆ ಕೊರೋನ ಸೋಂಕು ತಗುಲಿದ್ದು4 ಮಂದಿ ಮೃತಪಟ್ಟಿದ್ದಾರೆ. 194 ಮಂದಿ ಗುಣಮುಖ ರಾಗಿದ್ದಾರೆ. ಉಡುಪಿಯಲ್ಲಿ ಮತ್ತೆ 319 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಈವರೆಗಿನ ಅಂಕಿ ಅಂಶಗಳ ಪ್ರಕಾರ ಜಿಲ್ಲೆಯಲ್ಲಿ 1,99,759 ಮಂದಿಯ ಪರೀಕ್ಷೆ ಮಾಡಿಸಲಾಗಿದೆ. ಆ ಪೈಕಿ 1,72,927 ಮಂದಿಯ ವರದಿ ನೆಗೆಟಿವ್ ಮತ್ತು 26,832 ಮಂದಿಯ ವರದಿ ಪಾಸಿಟಿವ್ ಬಂದಿದೆ. ಅಲ್ಲದೆ ಒಟ್ಟು 609 ಮಂದಿ ಸಾವಿಗೀಡಾಗಿದ್ದಾರೆ. 21,938 ಮಂದಿ ಕೊರೋನ ಸೋಂಕಿನಿಂದ ಗುಣಮುಖರಾಗಿದ್ದಾರೆ. ಸದ್ಯ 4,285 ಸಕ್ರಿಯ ಪ್ರಕರಣಗಳಿವೆ. […]