Blog Archive

ಕೊರೊನಾ ಸೋಂಕು : ದಕ್ಷಿಣ ಕನ್ನಡ ಜಿಲ್ಲೆ – 258, ಸಾವು 9, ಉಡುಪಿ ಜಿಲ್ಲೆ – 158, ಸಾವು 3, ಕಾಸರಗೋಡು -257

Sunday, October 4th, 2020
Corona

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು 258 ಮಂದಿಗೆ ಕೊರೊನಾ ದೃಢಪಟ್ಟಿದ್ದು 9 ಮಂದಿ ಸಾವನ್ನಪ್ಪಿದ್ದಾರೆ. ಈ ಮೂಲಕ ಮೃತರ ಸಂಖ್ಯೆ 566 ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 24,019 ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ ಇಂದು 344 ಮಂದಿ ಕೊರೊನಾ ಸೋಂಕಿತರು ಗುಣಮುಖರಾಗಿದ್ದಾರೆ. ಈವರೆಗೆ 17,709 ಮಂದಿ ಗುಣಮುಖರಾದಂತಾಗಿದೆ. ಜಿಲ್ಲೆಯಲ್ಲಿ 5,744 ಮಂದಿ ಕೊರೊನಾ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ ಒಟ್ಟು 4,361 ಮಾಸ್ಕ್ ಉಲ್ಲಂಘನೆ ಪ್ರಕರಣ ವರದಿಯಾಗಿದ್ದು, 5,30,885 ದಂಡ ವಸೂಲಿ […]

ಕೊರೋನ ಸೋಂಕು : ದಕ್ಷಿಣ ಕನ್ನಡ – 322, ಸಾವು 12, ಕಾಸರಗೋಡು – 476

Saturday, October 3rd, 2020
corona

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  ಶುಕ್ರವಾರ ಹೊಸದಾಗಿ 322 ಮಂದಿಗೆ ಕೊರೋನ ಸೋಂಕು ತಗುಲಿದೆ. ಸೋಂಕಿನಿಂದಾಗಿ ಮತ್ತೆ 12 ಮಂದಿ ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಕೊರೋನ ಸೋಂಕಿತರ ಸಂಖ್ಯೆ 23,761ಕ್ಕೆ ಏರಿಕೆ ಕಂಡಿದೆ. ಮೃತಪಟ್ಟವರ ಸಂಖ್ಯೆ ಇದೀಗ 557ಕ್ಕೆ ತಲುಪಿದ್ದು ಜಿಲ್ಲೆಯ ವಿವಿಧ ಆಸ್ಪತ್ರೆಗಳು, ಮನೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 277 ಮಂದಿಗೆ ಕೊರೋನ ಮುಕ್ತರಾಗಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕು ಮುಕ್ತರಾದವರ ಸಂಖ್ಯೆ 17,365ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ 5,839 ಸಕ್ರಿಯ ಪ್ರಕರಣಗಳಿವೆ. ಇಲ್ಲಿಯವರೆಗೆ 1,66,456 ಸ್ಯಾಂಪಲ್‌ಗಳನ್ನು ಪರೀಕ್ಷಿಸಲಾಗಿದೆ. ಈ ಪೈಕಿ 1,42,695 ಮಂದಿಯ […]

ಮುಸ್ಲಿಂ ಲೀಗ್ ಕಾರ್ಯಕರ್ತನ ಕೊಲೆ ಯತ್ನ ಆರೋಪಿ ಕೋವಿಡ್ ನಿಗಾ ಕೇಂದ್ರದಿಂದ ಪರಾರಿ

Wednesday, September 30th, 2020
Adam Khan

ಕಾಸರಗೋಡು : ಮುಸ್ಲಿಂ ಲೀಗ್ ಕಾರ್ಯಕರ್ತನ ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಂಧಿತನಾಗಿ ಕೋವಿಡ್ ನಿಗಾ ಕೇಂದ್ರದಲ್ಲಿದ್ದ ಆರೋಪಿ ಪರಾರಿಯಾದ ಘಟನೆ ಸೆ.29ರಂದು ರಾತ್ರಿ ನಡೆದಿದೆ. ಉಪ್ಪಳ ಕೈಕಂಬದ ಆದಂ ಖಾನ್ ( 24) ಪರಾರಿಯಾದ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ. ಪಡನ್ನಕ್ಕಾಡ್ ನಲ್ಲಿರುವ ಕೋವಿಡ್ ನಿಗಾ ಕೇಂದ್ರದಿಂದ ತಪ್ಪಿಸಿ ಪರಾರಿಯಾಗಿದ್ದಾನೆ. ಕೇಂದ್ರದ ಕಿಟಿಕಿ ಮುರಿದು ಈತ ಪರಾರಿಯಾಗಿದ್ದಾನೆ. ಮುಸ್ಲಿಂ ಲೀಗ್ ಕಾರ್ಯಕರ್ತ ಉಪ್ಪಳದ ಮುಸ್ತಫಾ ಎಂಬವರ ಕೊಲೆ ಯತ್ನ ಪ್ರಕರಣದ ಆರೋಪಿ ಎಂದು ಪೊಲೀಸರು ಮಾಹಿತಿ […]

ವಿಶ್ವ ಹಿಂದೂ ಪರಿಷತ್ ಕಾಸರಗೋಡು ಗ್ರಾಮಾಂತರ ಜಿಲ್ಲಾ ಅಧ್ಯಕ್ಷ ಅಂಗಾರ ಶ್ರೀಪಾದ ನಿಧನ

Monday, September 28th, 2020
Angara Sripada

ಕಾಸರಗೋಡು : ಉಪ್ಪಳ ಬಾಯಾರಿನ ಪೆರ್ವೋಡಿ ನಿವಾಸಿ ಅಂಗಾರ ಶ್ರೀಪಾದ (69) ಅಲ್ಪಕಾಲದ ಅಸೌಖ್ಯದಿಂದ ಸೋಮವಾರ ಬೆಳಗ್ಗೆ ಕಾಸರಗೋಡಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಬಾಯಾರು ಸಹಕಾರಿ ಬ್ಯಾಂಕ್ ನ ನಿರ್ದೇಶಕರೂ ಆಗಿದ್ದ ಇವರು ಈ ಹಿಂದೆ ಕಂದಾಯ ಇಲಾಖೆಯಲ್ಲಿ ಸೇವೆ ಸಲ್ಲಿಸಿದ್ದರು. ಕಳೆದ ಹತ್ತು ವರ್ಷಗಳಿಂದ ವಿಶ್ವ ಹಿಂದೂ ಪರಿಷತ್ ನ ಕಾಸರಗೋಡು ಜಿಲ್ಲಾಧ್ಯಕ್ಷರಾಗಿಯೂ ಸೇವೆ ಸಲ್ಲಿಸುತ್ತಿದ್ದರು. ಮೃತರು ಪತ್ನಿ, ಓರ್ವ ಪುತ್ರ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

ಕಾಸರಗೋಡು – ಮಂಗಳೂರು ಕೆ.ಎಸ್.ಆರ್.ಟಿ.ಸಿ ಅಂತರ್ ರಾಜ್ಯ ಬಸ್ ಸರ್ವಿಸ್ ಶೀಘ್ರ ಪ್ರಸ್ತಾಪಿಸುವಂತೆ ಆಗ್ರಹಿಸಿ ಮನವಿ

Saturday, September 26th, 2020
Manjeshwara Bjp

ಮಂಜೇಶ್ವರ:- ಕಾಸರಗೋಡು – ಮಂಗಳೂರು ಕೆ.ಎಸ್.ಆರ್.ಟಿ.ಸಿ ಅಂತರ್ ರಾಜ್ಯ ಬಸ್ ಸರ್ವಿಸ್ ಶೀಘ್ರ ಪುನಃ ಸ್ಥಾಪಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಕೆ.ಎಸ್.ಆರ್.ಟಿ.ಸಿ ಮೆನೇಜಿಂಗ್ ಡೈರೆಕ್ಟರ್ ರವರಿಗೆ ಬಿಜೆಪಿ ಮಂಜೇಶ್ವರದ ನಿಯೋಗದವರು ಭೇಟಿಯಾಗಿ ಮನವಿ ಸಲ್ಲಿಸಿದರು. ಓಬಿಸಿ ಮೋರ್ಚಾ ಕೇರಳ ರಾಜ್ಯ ಕೋಶಾಧಿಕಾರಿ ನ್ಯಾಯವಾದಿ ನವೀನ್ ರಾಜ್ ಕೆ.ಜೆ ಯವರು ಮನವಿ ಸಲ್ಲಿಸಿದರು. ಈ ವೇಳೆ ಬಿಜೆಪಿ ಮಂಜೇಶ್ವರ ಮಂಡಲ ಉಪಾಧ್ಯಕ್ಷ ಪದ್ಮನಾಭ ಕಡಪ್ಪರ, ಪ್ರಧಾನ ಕಾರ್ಯದರ್ಶಿ ಆದರ್ಶ್ ಬಿ.ಎಂ, ಓಬಿಸಿ ಮೋರ್ಚಾ ಮಂಜೇಶ್ವರ ಪಂಚಾಯತ್ ಸಮಿತಿ ಪ್ರಧಾನ […]

ಕಾಸರಗೋಡು : ಮಳೆಯ ಅಬ್ಬರಕ್ಕೆ ಇಬ್ಬರು ಬಲಿ, 25ಕ್ಕೂ ಅಧಿಕ ಮನೆಗಳು ಹಾನಿ

Monday, September 21st, 2020
Kasaragod Rain

ಕಾಸರಗೋಡು : ಜಿಲ್ಲೆಯಲ್ಲಿ ಮಳೆಯ ಅಬ್ಬರಕ್ಕೆ ಇಬ್ಬರು ಬಲಿಯಾಗಿದ್ದಾರೆ. 25ಕ್ಕೂ ಅಧಿಕ ಮನೆಗಳು ಹಾನಿಗೊಂಡಿವೆ. 20ಕ್ಕೂ ಅಧಿಕ ಕುಟುಂಬಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ. ಮಳೆಗೆ ಆರ್ಭಟಕ್ಕೆ  ಮಧೂರು ಚೇನಕ್ಕೋಡು ಎಂಬಲ್ಲಿ ಬಯಲಿನಲ್ಲಿ ನೀರು ತುಂಬಿದ್ದ ಹೊಂಡಕ್ಕೆ ಬಿದ್ದು ಚೆಂದ್ರಶೇಖರ(37) ಹಾಗೂ ಚೆರ್ವತ್ತೂರು ಮಯ್ಯಚ್ಚಿ ಎಂಬಲ್ಲಿ ಸುಧಾಕರ(50) ಎಂಬವರು ನೀರಿನ ಹೊಂಡಕ್ಕೆ ಬಿದ್ದು ಮೃತಪಟ್ಟಿದ್ದಾರೆ. ಅಡ್ಕತ್ತಬೈಲ್ ಬೀಚ್ ಪರಿಸರದಲ್ಲಿ ಇಂದು ಬೆಳಗ್ಗೆ ಬೀಸಿದ ಸುಂಟರಗಾಳಿಗೆ 12ರಷ್ಟು ಮನೆಗಳು ಭಾಗಶಃ ಹಾನಿಗೀಡಾಗಿದೆ.  ಮಧೂರು ಪಟ್ಲದಿಂದ ಮೂರು ಹಾಗೂ ಮೊಗರು ಪರಿಸರದಿಂದ ಏಳು ಕುಟುಂಬಗಳನ್ನು ಸ್ಥಳಾಂತರಿಸಲಾಗಿದೆ. ಮಂಜೇಶ್ವರ ತಾಲೂಕಿನಲ್ಲಿ […]

ಕೊರೋನಾ ಸೋಂಕು : ದಕ್ಷಿಣ ಕನ್ನಡ – 380, ಉಡುಪಿ – 293, ಕಾಸರಗೋಡು – 208

Sunday, September 20th, 2020
Corona

ಮಂಗಳೂರು : ದ.ಕ. ಜಿಲ್ಲೆಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ರವಿವಾರದಂದು 380 ಏರಿಕೆಯಾಗಿದೆ . ಆ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 20 ಸಾವಿರ ದಾಟಿದೆ. ರವಿವಾರದಂದು ದ.ಕ. ಜಿಲ್ಲೆಯಲ್ಲಿ 127 ಮಂದಿಯಲ್ಲಿ ಪ್ರಾಥಮಿಕ  ಸಂಪರ್ಕದಿಂದ ಸೋಂಕು ದೃಢಪಟ್ಟಿದೆ. 139 ಮಂದಿಯಲ್ಲಿ ಐಎಲ್ ಐ ಕೇಸ್ ದೃಢಪಟ್ಟಿದೆ. 8 ಮಂದಿಯಲ್ಲಿ ಸಾರಿ ಕೇಸ್ ಪತ್ತೆಯಾಗಿದ್ದು, 106 ಮಂದಿಯ ಸೋಂಕಿನ ಮೂಲ ಪತ್ತೆ ಹಚ್ಚಲಾಗುತ್ತಿದೆ. ರವಿವಾರ ಉಡುಪಿ ಜಿಲ್ಲೆಯಲ್ಲಿ ಒಟ್ಟು 293 ಮಂದಿಯಲ್ಲಿ ಕೊರೋನಾ ಪಾಸಿಟಿವ್ ಪತ್ತೆಯಾಗಿದೆ. ಈ ಮೂಲಕ ಜಿಲ್ಲೆಯಲ್ಲಿ […]

ಕೊರೋನ ಸೋಂಕು : ದಕ್ಷಿಣ ಕನ್ನಡ 316, ಐವರು ಮೃತ, ಕಾಸರಗೋಡು 172

Tuesday, September 15th, 2020
DK-corona

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಂಗಳವಾರ ಹೊಸದಾಗಿ 316 ಮಂದಿಗೆ ಕೊರೋನ ಸೋಂಕು ದೃಢಪಟ್ಟಿದೆ.  ಮಂಗಳವಾರ ಮತ್ತೆ ಐವರು ಕೊರೋನ ಸೋಂಕಿಗೆ ಮೃತಪಟ್ಟಿದ್ದಾರೆ. ಮೃತರಲ್ಲಿ ಮಂಗಳೂರು ತಾಲೂಕಿನ ಮೂವರು, ಬಂಟ್ವಾಳ ಹಾಗೂ ಪುತ್ತೂರು ತಾಲೂಕಿನ ತಲಾ ಓರ್ವರು ಇದ್ದಾರೆ. ಮೃತರು ವಿವಿಧ ರೋಗಗಳಿಂದ ಬಳಲುತ್ತಿದ್ದರು. ಜೊತೆಗೆ ಕೊರೋನ ಸೋಂಕೂ ತಗುಲಿತ್ತು. ಜಿಲ್ಲೆಯಲ್ಲಿ ಮೃತರ ಸಂಖ್ಯೆ 452ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ತಿಳಿಸಿದ್ದಾರೆ. 316 ಮಂದಿಗೆ ಸೋಂಕು: ಜಿಲ್ಲೆಯಲ್ಲಿ ಕೊರೋನ ಸೋಂಕು ಹಿಡಿತಕ್ಕೆ ಬಾರದೇ ಜಿಲ್ಲಾಡಳಿತಕ್ಕೆ ತಲೆನೋವಾಗಿ […]

ಕೊರೊನಾ ಸೋಂಕು : ದಕ್ಷಿಣ ಕನ್ನಡ 310, ಉಡುಪಿ 258, ಕಾಸರಗೋಡು 270

Wednesday, September 9th, 2020
CORONA

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ 310 ಮಂದಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ, ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 15,762 ಕ್ಕೆ ಏರಿಕೆಯಾಗಿದೆ. ಇಂದಿನ ಪ್ರಕರಣಗಳ ಪೈಕಿ  ಮಂಗಳೂರಿನಲ್ಲಿ 188, ಬಂಟ್ವಾಳದಲ್ಲಿ 27, ಪುತ್ತೂರಿನಲ್ಲಿ 25, ಸುಳ್ಯದಲ್ಲಿ 25, ಬೆಳ್ತಂಗಡಿಯಲ್ಲಿ 26 ಜನರಿಗೆ ಸೋಂಕು ದೃಢಪಟ್ಟಿದ್ದು ಇದನ್ನು ಹೊರತುಪಡಿಸಿ ಇತರೆ ಜಿಲ್ಲೆಯ 19 ಮಂದಿಗೆ ಪಾಸಿಟಿವ್‌ ಆಗಿದೆ. ಬುಧವಾರ ಜಿಲ್ಲೆಯಲ್ಲಿ ಆರು ಮಂದಿ ಸೋಂಕಿತರು ಸಾವನ್ನಪ್ಪಿದ್ದು ಈ ಪೈಕಿ ಐವರು ಮಂಗಳೂರಿನವರಾದರೆ ಒಬ್ಬರು ಇತರೆ ಜಿಲ್ಲೆಯವರಾಗಿದ್ದಾರೆ. ಈವರೆಗೆ […]

ಕೊರೋನಾ ಪಾಸಿಟಿವ್ : ದಕ್ಷಿಣ ಕನ್ನಡ 326, ಉಡುಪಿ 216, ಕಾಸರಗೋಡು 218

Sunday, September 6th, 2020
corona virus

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರವಿವಾರ 326 ಮಂದಿಯಲ್ಲಿ ಕೊರೋನಾ  ಪಾಸಿಟಿವ್ ದೃಢಪಟ್ಟಿದೆ. ಓರ್ವ ಸೋಂಕಿತ ಮೃತಪಟ್ಟಿದ್ದು, 202 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 118 ಪುರುಷರು ಹಾಗೂ 74 ಮಹಿಳೆಯರು ಸೇರಿದಂತೆ 192 ಮಂದಿಯಲ್ಲಿ ಸೋಂಕಿನ ಲಕ್ಷಣಗಳು ಕಂಡುಬಂದಿವೆ. 81 ಪುರುಷರು ಹಾಗೂ 53 ಮಹಿಳೆಯರು ಸಹಿತ 134 ಮಂದಿಯಲ್ಲಿ ಯಾವುದೇ ಸೋಂಕಿನ ಲಕ್ಷಣಗಳು ಕಂಡುಬಂದಿಲ್ಲ. ಓರ್ವ ಸೋಂಕಿತ ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ. ಇದರೊಂದಿಗೆ ಮೃತಪಟ್ಟವರ ಸಂಖ್ಯೆ 401ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ 168 ಮಂದಿಯಲ್ಲಿ ಸಾಮಾನ್ಯ ಶೀತ ಲಕ್ಷಣ […]