ಎಂಟನೇ ಜಿಲ್ಲಾ ಚುಟುಕು ಸಾಹಿತ್ಯ ಸಮ್ಮೇಳನದ ಲಾಂಛನದ ಬಿಡುಗಡೆ

Sunday, December 26th, 2021
chutuku Sahitya

ಮಂಗಳೂರು : ಜನವರಿ 30ರಂದು ಮಂಗಳೂರಿನ ತುಳು ಭವನದ ಸಿರಿ ಚಾವಡಿಯಲ್ಲಿ ಮಂಗಳೂರು ತಾಲೂಕು ಚುಟುಕು ಸಾಹಿತ್ಯ ಪರಿಷತ್ತು, ದಕ್ಷಿಣ ಕನ್ನಡ ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ತು, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮಂಗಳೂರು ಸಂಯುಕ್ತವಾಗಿ ಆಯೋಜಿಸುತ್ತಿರುವ ಚುಟುಕು ಸಾಹಿತ್ಯ ಪರಿಷತ್ತಿನ ದಕ್ಷಿಣ ಕನ್ನಡ ಎಂಟನೇ ಜಿಲ್ಲಾ ಚುಟುಕು ಸಾಹಿತ್ಯ ಸಮ್ಮೇಳನದ ಲಾಂಛನದ ಬಿಡುಗಡೆ ಸಮಾರಂಭ ಕೆನರಾ ಕಾಲೇಜಿನ ಸಭಾಂಗಣದಲ್ಲಿ  ಶನಿವಾರ ನಡೆಯಿತು. ಸಾಹಿತ್ಯ ಪೋಷಕ, ಸಂಘಟಕ ಗುರುಪ್ರಸಾದ್ ಕಡಂಬಾರ್ ಅವರು ಲಾಂಛನವನ್ನು […]

ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ನೂತನ ಜಿಲ್ಲಾಧ್ಯಕ್ಷ ಡಾ.ಎಂ.ಪಿ.ಶ್ರೀನಾಥ್ ಅವರಿಗೆ ಅಭಿನಂದನೆ

Monday, December 13th, 2021
MP Ravindranath

ಮಂಗಳೂರು  : ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ನೂತನ ಜಿಲ್ಲಾಧ್ಯಕ್ಷರಾದ ಡಾ.ಎಂ.ಪಿ.ಶ್ರೀನಾಥ್ ಅವರನ್ನು ಮಂಗಳೂರು ತಾಲೂಕು ಚುಟುಕು ಸಾಹಿತ್ಯ ಪರಿಷತ್ತು ಮತ್ತು ದ.ಕ ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ತಿನ ಪರವಾಗಿ ಅವರ ಪದಗ್ರಹಣ ಸಮಾರಂಭದಲ್ಲಿ ಅಭಿನಂದಿಸಿ ಸನ್ಮಾನಿಸಿತು. ಈ ಸಂದರ್ಭ ದಕ್ಷಿಣ ಕನ್ನಡ ಚುಸಾಪ ಜಿಲ್ಲಾಧ್ಯಕ್ಷ ಹರೀಶ್ ಸುಲಾಯ ಒಡ್ಡಂಬೆಟ್ಟು, ಮಂಗಳೂರು ಚುಸಾಪ ಹಾಗೂ ಉಡುಪಿ ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಕಾ.ವೀ  ಕೃಷ್ಣದಾಸ್, ಉಪಾಧ್ಯಕ್ಷೆ ಅರುಣಾ ನಾಗರಾಜ್,ಮಾಲತಿ ಶೆಟ್ಟಿ ಮಾಣೂರು,ಗೋಪಾಲಕೃಷ್ಣ ಶಾಸ್ತ್ರಿ, […]

ಉಡುಪಿ ಚುಟುಕು ಸಾಹಿತ್ಯ ಪರಿಷತ್ತು ಜಿಲ್ಲಾಧ್ಯಕ್ಷರಾಗಿ ಕಾ.ವೀ.ಕೃಷ್ಣದಾಸ್ ನೇಮಕ

Tuesday, November 2nd, 2021
KaVi Krishnadas

ಮಂಗಳೂರು : ಕವಿ, ಸಂಘಟಕ ಕಾ.ವೀ.ಕೃಷ್ಣದಾಸ್ ಅವರನ್ನು ಉಡುಪಿ ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ತಿನ ಪ್ರಭಾರ ಜಿಲ್ಲಾಧ್ಯಕ್ಷರನ್ನಾಗಿ ನೇಮಕ ಮಾಡಿ ಮೈಸೂರಿನ ಚುಟುಕು ಸಾಹಿತ್ಯ ಪರಿಷತ್ತಿನ ಕೇಂದ್ರ ಸಮಿತಿ ರಾಜ್ಯಾಧ್ಯಕ್ಷರಾಗಿರುವ ಕರ್ನಾಟಕ ವಿಧಾನ ಪರಿಷತ್ ನ ಮಾಜಿ ಸದಸ್ಯ ತೋಂಟದಾರ್ಯ ಅವರು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ಆಕ್ಟೊಬರ್ 20ರಂದು ಮೈಸೂರಿನಲ್ಲಿ ನಡೆದ ಧರ್ಮದರ್ಶಿಗಳ ಸಭೆಯಲ್ಲಿ ಕೇಂದ್ರ ಸಮಿತಿ ಸಂಚಾಲಕರಾಗಿರುವ ಎಂ.ಜಿ.ಅರಸ್ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಚುಟುಕು ಸಾಅಹಿತ್ಯ ಪರಿಷತ್ತಿನ ಗೌರವಾಧ್ಯಕ್ಷ ಇರಾ ನೇಮು ಪೂಜಾರಿಯವರ […]

ಕ್ರಾಂತಿ ಎಂಬುದು ಅವ್ಯವಸ್ಥೆಯ ವಿರುದ್ಧವೇ ಹೊರತು ವ್ಯವಸ್ಥೆಯ ವಿರುದ್ಧವಲ್ಲ : ಮಹಮ್ಮದ್ ಬಡ್ಡೂರು

Sunday, August 29th, 2021
Badooru

ಮಂಗಳೂರು  : ‘ಕ್ರಾಂತಿ ನಮ್ಮಿಂದಲೇ ಆರಂಭವಾಗಬೇಕು.ಆಗ ಅದಕ್ಕಿಂದು ಮೌಲ್ಯ ಬರುತ್ತದೆ. ಸಾಹಿತಿಗಳಿಗೆ ತಮ್ಮ ಕಾವ್ಯವನ್ನು ಹೊರ ಹಾಕುವ ತುಡಿತ ಇದ್ದರೆ ಸಾಲದು ಸಾಹಿತ್ಯದ ಮೂಲ ಆಯಾಮಗಳನ್ನು ಕಲಿಯುವ ಮಿಡಿತಗಳೂ ಇರಬೇಕು. ಕ್ರಾಂತಿ ಎಂಬುದು ಅವ್ಯವಸ್ಥೆಯ ವಿರುದ್ಧವೇ ಹೊರತು ವ್ಯವಸ್ಥೆಯ ವಿರುದ್ಧವಲ್ಲ. ಮಾನವೀಯ ಮೌಲ್ಯ ಇರುವ, ಸಾಮಾಜಿಕ ಕಳಕಳಿಯಿರುವ ಎಲ್ಲಾ ಸಾಹಿತ್ಯಗಳಲ್ಲೂ ಕ್ರಾಂತಿಯ ಕಿಡಿ ಇದ್ದೇ ಇದೆ’ ಎಂದು ಹಿರಿಯ ಪಂಚಭಾಷಾ ಕವಿ ಮಹಮ್ಮದ್ ಬಡ್ಡೂರು ಅವರು ಹೇಳಿದರು. ಅವರು ಮಂಗಳೂರು ತಾಲೂಕು ಚುಟುಕು ಸಾಹಿತ್ಯ ಪರಿಷತ್ತು ಇವರು […]